Posts

20 ಸಚಿವರ ಡಿಕೆಶಿ ಸಂಪುಟ: ಯಾವ ಸಮುದಾಯಕ್ಕೆ ಎಷ್ಟು ಪ್ರಾತಿನಿಧ್ಯ?

Image
 ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಹೊಸದಾಗಿ 19 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ಗ್ಲಾಸ್ ಹೌಸ್‌ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. ಈ ಮೂಲಕ ಮುಖ್ಯಮಂತ್ರಿ ಸೇರಿ ಸಂಪುಟದ ಒಟ್ಟು ಸದಸ್ಯರ ಸಂಖ್ಯೆ ಗರಿಷ್ಠ ಮಿತಿ 33ಕ್ಕೆ ತಲುಪಿದೆ. ಪ್ರಾದೇಶಿಕ ಸಮತೋಲನ ಹಾಗೂ ಜಾತಿವಾರು ಸಮೀಕರಣವನ್ನು ಗಮನದಲ್ಲಿಟ್ಟುಕೊಂಡು ಹೊಸ ಸಂಪುಟವನ್ನು ರಚಿಸಲಾಗಿದೆ. ನೂತನ ಸಂಪುಟದ ಜಾತಿ ಪ್ರಾತಿನಿಧ್ಯದ ವಿವರ ಇಲ್ಲಿದೆ. ಸಂಪುಟದಲ್ಲಿ ಲಿಂಗಾಯತ ಹಾಗೂ ಪರಿಶಿಷ್ಟ ಜಾತಿ ಸಮುದಾಯಕ್ಕೆ ತಲಾ 7 ಸ್ಥಾನ ಸಿಕ್ಕಿದ್ದರೆ, ಒಕ್ಕಲಿಗ ಮತ್ತು ಹಿಂದುಳಿದ ವರ್ಗಕ್ಕೆ ತಲಾ 5 ಹಾಗೂ 7 ಸ್ಥಾನ ನೀಡಲಾಗಿದೆ. ಉಳಿದಂತೆ ಅಲ್ಪಸಂಖ್ಯಾತರಿಗೆ 4, ಪರಿಶಿಷ್ಟ ಪಂಗಡಕ್ಕೆ 3 ಸ್ಥಾನಗಳನ್ನು ಹಂಚಿಕೆ ಮಾಡಲಾಗಿದೆ. ಜಾತಿವಾರು ಸಚಿವರ ವಿವರ ಲಿಂಗಾಯತ ಸಮುದಾಯ ಎಂ. ಬಿ. ಪಾಟೀಲ್ ಈಶ್ವರ್ ಖಂಡ್ರೆ ಬಸವರಾಜ್ ರಾಯರೆಡ್ಡಿ ವಿಜಯಾನಂದ ಕಾಶಪ್ಪನವರ ಲಕ್ಷ್ಮಣ ಸವದಿ ಡಾ. ಶರಣ ಪ್ರಕಾಶ್ ಪಾಟೀಲ್ ಎಸ್. ಎಸ್. ಮಲ್ಲಿಕಾರ್ಜುನ ಒಕ್ಕಲಿಗ ಸಮುದಾಯ ಡಿ.ಕೆ. ಶಿವಕುಮಾರ್ (ಮುಖ್ಯಮಂತ್ರಿ) ಕೃಷ್ಣ ಬೈರೇಗೌಡ ಎನ್. ಚೆಲುವರಾಯಸ್ವಾಮಿ ಎಚ್. ಸಿ. ಬಾಲಕೃಷ್ಣ ಕೆ. ಎಂ. ಶಿವಲ...

11 ತಿಂಗಳ ಕಂದಮ್ಮ ಸಾವು; ಅವಧಿ ಮೀರಿದ ಔಷಧ ನೀಡಿದ ಆರೋಪದಡಿ ಖಾಸಗಿ ಆಸ್ಪತ್ರೆ ವಿರುದ್ಧ ಪೋಷಕರ ಆಕ್ರೋಶ..!

Image
 ದಾವಣಗೆರೆ: ದಾವಣಗೆರೆ ಜಿಲ್ಲೆಯ Honnali (ಹೊನ್ನಾಳಿ) ತಾಲೂಕಿನ ಹನುಮನಹಳ್ಳಿ ಗ್ರಾಮದಲ್ಲಿ 11 ತಿಂಗಳ ಹೆಣ್ಣು ಮಗು ಚಿಕಿತ್ಸೆ ವೇಳೆ ಮೃತಪಟ್ಟಿದ್ದು, ಖಾಸಗಿ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಮಗುವಿಗೆ ಅವಧಿ ಮುಗಿದ ಔಷಧ ನೀಡಿದ ಪರಿಣಾಮವೇ ಸಾವಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಮೃತ ಮಗುವನ್ನು ಹನುಮನಹಳ್ಳಿ ಗ್ರಾಮದ ವಸುಂಧರ ಹಾಗೂ ಲೋಕೇಶ್ ದಂಪತಿಯ 11 ತಿಂಗಳ ಪುತ್ರಿ ಪೂರ್ವಿಕ ಎಂದು ಗುರುತಿಸಲಾಗಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಮಗುವನ್ನು ಹೊನ್ನಾಳಿ ಸಮೀಪದ ಸಾಸ್ವೆಹಳ್ಳಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ವೇಳೆ ವೈದ್ಯರು ನೀಡಿದ ಔಷಧವನ್ನು ಹಾಕಿದ ತಕ್ಷಣ ಮಗುವಿನ ಆರೋಗ್ಯದಲ್ಲಿ ತೀವ್ರ ಏರುಪೇರಾಗಿದ್ದು, ಕೆಲವೇ ಕ್ಷಣಗಳಲ್ಲಿ ಮಗು ಮೃತಪಟ್ಟಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಆಸ್ಪತ್ರೆಯಲ್ಲಿ ಅವಧಿ ಮೀರಿದ ಔಷಧವನ್ನು ಬಳಸಲಾಗಿದೆ ಎಂಬ ಗಂಭೀರ ಆರೋಪವನ್ನು ಪೋಷಕರು ಮಾಡಿದ್ದು, ಘಟನೆಯ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪುತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸಂಬಂಧಿತ ಅಧಿಕಾರಿಗಳು ಹಾಗೂ ಪೊಲೀಸರು ಪ್ರಕರಣದ ಕುರಿತು ಪರಿಶೀಲನೆ ನಡೆಸುತ್ತಿದ್ದು, ತನಿಖೆಯ ನಂತರ ಸಾವಿನ ನಿಖರ ಕಾರಣ ಬಹಿರಂಗವಾಗುವ ನಿರೀಕ್ಷೆಯಿದೆ.

ಶೀರ್ಷಿಕೆ: "ಮತದಾನ ನಮ್ಮ ಹಕ್ಕು, ಮತದಾನ ನಮ್ಮ ಭವಿಷ್ಯ" – ದಾವಣಗೆರೆಯಲ್ಲಿ SIR ಮತದಾರರ ಜಾಗೃತಿ ಅಭಿಯಾನ ಯಶಸ್ವಿ!

Image
 ದಾವಣಗೆರೆ: "ಮತದಾನ ನಮ್ಮ ಹಕ್ಕು, ಮತದಾನ ನಮ್ಮ ಭವಿಷ್ಯ" ಹಾಗೂ "ನನ್ನ ಮತ - ನನ್ನ ಹಕ್ಕು" ಎಂಬ ಸದುದ್ದೇಶದೊಂದಿಗೆ ದಾವಣಗೆರೆಯಲ್ಲಿ ಮಹಾನಗರ ಪಾಲಿಕೆ ವತಿಯಿಂದ SIR (ಮತದಾರರ ಜಾಗೃತಿ) ಅಭಿಯಾನವನ್ನು ಅತ್ಯಂತ ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು. ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬದಲ್ಲಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಮತ್ತು ಮತದಾನದ ಮಹತ್ವವನ್ನು ಅರಿಯಬೇಕು ಎಂಬ ಉದ್ದೇಶದಿಂದ ಈ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು. ನೇತೃತ್ವ ಹಾಗೂ ಗಣ್ಯರ ಉಪಸ್ಥಿತಿ: ಈ ಬೃಹತ್ ಜಾಗೃತಿ ಅಭಿಯಾನಕ್ಕೆ ಮಹಾನಗರ ಪಾಲಿಕೆ ಆಯುಕ್ತರಾದ ಡಾ. ಮಹಾತೇಶ್ ಅವರು ನೇತೃತ್ವ ವಹಿಸಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಟ್ಟಿಗೊಳಿಸುವಲ್ಲಿ ಪ್ರತಿಯೊಂದು ಮತದ ಮಹತ್ವವನ್ನು ಸಾರಿದರು. ಕಾರ್ಯಕ್ರಮದಲ್ಲಿ AERo ಪ್ರಭು ಸರ್ ಹಾಗೂ ರಶ್ಮಿ ಮೇಡಂ ಅವರು ವಿಶೇಷವಾಗಿ ಉಪಸ್ಥಿತರಿದ್ದು, ಅಭಿಯಾನದ ಯಶಸ್ಸಿಗೆ ಮಾರ್ಗದರ್ಶನ ನೀಡಿದರು. ಕ್ಷೇತ್ರ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಶ್ರಮ: ಕ್ಷೇತ್ರ ಮಟ್ಟದಲ್ಲಿ ಸಾರ್ವಜನಿಕರನ್ನು ತಲುಪುವಲ್ಲಿ ಪ್ರಮುಖ ಪಾತ್ರ ವಹಿಸಿರುವ BLA ಹಾಗೂ BLO ಗಳ ತಂಡವು ಈ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಿತು. ಪ್ರಮುಖರಾದ ಟಿ. ಹುಚ್ಚಪ್ಪ ಸರ್ (T. Huchappa Sir) ಹಾಗೂ ಎಲ್ಲಾ BLO ಗಳು ಒಟ್ಟಾಗಿ ಸೇರಿಕೊಂಡು, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಮೂಲಕ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸ...

ಜಂತರ್ ಮಂತರ್‌ನಲ್ಲಿ ಆಹಾರ ನೀಡುತ್ತಿದ್ದ ಜುನೇದ್ ಮನೆ ಮೇಲೆ ಯುಪಿ ಪೊಲೀಸ್ ದಾಳಿ: CJP ಆಕ್ರೋಶ

Image
 ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಜನರಿಗೆ ಆಹಾರ ಮತ್ತು ಕುಡಿಯುವ ನೀರು ಪೂರೈಸುತ್ತಿದ್ದ ಸಾಮಾಜಿಕ ಸ್ವಯಂಸೇವಕ ಮೊಹಮ್ಮದ್ ಜುನೇದ್ ಅವರ ಕುಟುಂಬಸ್ಥರ ಮೇಲೆ ಉತ್ತರ ಪ್ರದೇಶ ಪೊಲೀಸರು ದಾಳಿ ನಡೆಸಿ, ಕಿರುಕುಳ ನೀಡುತ್ತಿದ್ದಾರೆ ಎಂದು ಕಾಕ್ರೋಜ್‌ ಜನತಾ ಪಾರ್ಟಿ ಗಂಭೀರ ಆರೋಪ ಮಾಡಿದೆ. ಅಪರಾಧಿಗಳನ್ನ ಬಂಧಿಸುವ ಬದಲು, ಸಮಾಜಸೇವೆ ಮಾಡುತ್ತಿರುವ ಸ್ವಯಂಸೇವಕರನ್ನ ಹಾಗೂ ಅವರ ಕುಟುಂಬದವರ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಸಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ (ಟ್ವಿಟರ್) ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ಸಿಜೆಪಿ, 'ಉತ್ತರ ಪ್ರದೇಶ ಪೊಲೀಸರು ಕ್ರಿಮಿನಲ್‌ಗಳನ್ನ ಹಿಡಿಯುವ ಬದಲು, ಜಂತರ್ ಮಂತರ್‌ನಲ್ಲಿ ಜನರಿಗೆ ಉಚಿತವಾಗಿ ಆಹಾರ ಮತ್ತು ನೀರು ವಿತರಿಸುತ್ತಿದ್ದ ನಮ್ಮ ಸ್ವಯಂಸೇವಕ ಮೊಹಮ್ಮದ್ ಜುನೇದ್ ಅವರ ಹಿಂದೆ ಬಿದ್ದು ಸಮಯ ವ್ಯರ್ಥ ಮಾಡಿಕೊಳ್ಳುತ್ತಿದ್ದಾರೆ. ಜುನೇದ್ ಅವರ ಕುಟುಂಬಕ್ಕೆ ಪೊಲೀಸರು ತೀವ್ರ ಕಿರುಕುಳ ನೀಡುತ್ತಿದ್ದು, ಈ ಸಮಯದಲ್ಲಿ ನಾವು ಅವರ ಜೊತೆಗೆ ನಿಲ್ಲುತ್ತೇವೆ' ಎಂದು ಸ್ಪಷ್ಟಪಡಿಸಿದೆ. ಮಾಹಿತಿಗಳ ಪ್ರಕಾರ, ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಧರಣಿ ಹಾಗೂ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದ ಜನರಿಗೆ ಮೊಹಮ್ಮದ್ ಜುನೇದ್ ಪ್ರತಿ ದಿನ ಉಚಿತ ಆಹಾರ ಮತ್ತು ನೀರು ಪೂರೈಸುವ ಕೆಲಸ ಮಾಡುತ್ತ...

ನೀಟ್ ವಿಚಾರಕ್ಕೆ ಸುಪ್ರೀಂ ಕೋರ್ಟ್‌ ಎಂಟ್ರಿ! ಕೇಂದ್ರ ಸರ್ಕಾರಕ್ಕೆ ಚಾಟಿ - ಗಮನಿಸುತ್ತಿದ್ದೇವೆ, ಇದೇ ರೀತಿ ಮುಂದುವರಿಯಲು ಬಿಡಲಾಗದು

Image
 ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದು, ಆನ್‌ಲೈನ್ ಪರೀಕ್ಷಾ ವ್ಯವಸ್ಥೆಯತ್ತ ಗಮನಹರಿಸಲು ಸೂಚಿಸಿದೆ. ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಂಡಿದ್ದು, ಹೋರಾಟಗಾರ ಸೋನಮ್ ವಾಂಗ್ಚುಕ್ ತಮ್ಮ ಉಪವಾಸ ಅಂತ್ಯಗೊಳಿಸಿದ್ದಾರೆ. ಈ ಬೆನ್ನಲ್ಲೇ, ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕಲು ಕಠಿಣ ಕಾನೂನು ಜಾರಿಗೆ ತರಲು ಕೇಂದ್ರ ಸರ್ಕಾರ ಸಜ್ಜಾಗಿದೆ. ಹೊಸದಿಲ್ಲಿ: ದೇಶಾದ್ಯಂತ ಭಾರೀ ವಿವಾದಕ್ಕೆ ಕಾರಣವಾಗಿರುವ ನೀಟ್ ಪರೀಕ್ಷಾ ಅಕ್ರಮ ಮತ್ತು ಲೋಪದೋಷಗಳ ಸರಣಿಗೆ ತಕ್ಷಣವೇ ಬ್ರೇಕ್ ಹಾಕುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಅಲ್ಲದೆ, ಮುಂಬರುವ ದಿನಗಳಲ್ಲಿ ಪರೀಕ್ಷಾ ವ್ಯವಸ್ಥೆಯನ್ನು ಸಂಪೂರ್ಣವಾಗಿ ಕಂಪ್ಯೂಟರ್ ಆಧಾರಿತ ವ್ಯವಸ್ಥೆಯತ್ತ ಕೊಂಡೊಯ್ಯುವ ಬಗ್ಗೆ ಸರ್ಕಾರದ ಯೋಜನೆಗಳೇನು ಎಂಬುದರ ಕುರಿತು ವರದಿ ನೀಡುವಂತೆ ನಿರ್ದೇಶಿಸಿದೆ. ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಅಲೋಕ್ ಆರಾಧೆ ಅವರನ್ನೊಳಗೊಂಡ ವಿಭಾಗೀಯ ಪೀಠವು ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆ ನಡೆಸಿತು. ಈ ವೇಳೆ ಕೇಂದ್ರ ಸರ್ಕಾರದ ಕಾರ್ಯವೈಖರಿಯನ್ನು ಪ್ರಶ್ನಿಸಿದ ಪೀಠವು, "ಈ ಪರಿಸ್ಥಿತಿ ಹೀಗೆಯೇ ಮುಂದುವರಿಯಲು ನಾವು ಬಿಡುವುದಿಲ್ಲ. ಈ ಪ್ರಕರಣದ ಪ್ರತಿಯೊಂದು ಬೆಳವಣಿಗೆಯನ್ನು ನಾ...

ನ್ಯಾಯಕ್ಕಾಗಿ ಸಮಾಧಿ ಅಗೆದು ತಾಯಿಯ ಕೊಳೆತ ಶವವನ್ನೇ ಬೈಕ್ನಲ್ಲಿ ತಂದ ಮಕ್ಕಳು: ಬೆಚ್ಚಿಬಿದ್ದ ದಾವಣಗೆರೆ!

Image
 ದಾವಣಗೆರೆ: ಮೂರು ತಿಂಗಳ ಹಿಂದೆ ಹತ್ಯೆಯಾಗಿದ್ದ ತಮ್ಮ ತಾಯಿಯ ಸಾವಿಗೆ ನ್ಯಾಯಕ್ಕಾಗಿ ಆಗ್ರಹಿಸಿದ ಮಕ್ಕಳು, ಹೂತಿಟ್ಟಿದ್ದ ತಾಯಿಯ ಕೊಳೆತ ಶವವನ್ನು ಸಮಾಧಿಯಿಂದ ಹೊರತೆಗೆದು, ಬಟ್ಟೆಯಲ್ಲಿ ಸುತ್ತಿಕೊಂಡು ರಾತ್ರೋರಾತ್ರಿ ಬೈಕ್ ಮೇಲೆ ಆಸ್ಪತ್ರೆಗೆ ಹೊತ್ತೊಯ್ದ ಆಘಾತಕಾರಿ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಅದಾಪುರ ಗ್ರಾಮದಲ್ಲಿ ನಡೆದಿದೆ. ತಮ್ಮ ತಾಯಿಯ ಸಾವು ಸಹಜವಲ್ಲ, ಅದೊಂದು ಕೊಲೆ ಎಂದು ಆರೋಪಿಸಿರುವ ಮಕ್ಕಳು, ಪೊಲೀಸರು ಪ್ರಕರಣವನ್ನು ಮುಚ್ಚಿ ಹಾಕುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊನೆಗೆ ನ್ಯಾಯಕ್ಕಾಗಿ ಆಗ್ರಿಸಿದ ಮಕ್ಕಳು ಇಡೀ ದಾವಣಗೆರೆ ಜಿಲ್ಲೆಯನ್ನೇ ಬೆಚ್ಚಿಬೀಳಿಸುವಂತಹ ಕೆಲಸ ಮಾಡಿದ್ದಾರೆ. ಮೂರು ತಿಂಗಳ ಹಿಂದೆ ಅಂತ್ಯಕ್ರಿಯೆ ಮಾಡಿದ್ದ ತಾಯಿಯ ಶವವನ್ನು ಸಮಾಧಿಯಿಂದ ಹೊರತೆಗೆದು ಬೈಕ್‌ನಲ್ಲಿ ಹೊತ್ತುಕೊಂಡು ಜಿಲ್ಲಾಸ್ಪತ್ರೆಗೆ ಬಂದಿರುವ ಘೋರ ಘಟನೆ ನಡೆದಿದೆ. ಆದಾಪುರ ಗ್ರಾಮದ ಈರಮ್ಮ ಎಂಬುವವರು ಏಪ್ರಿಲ್ 29ರಂದು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಆರಂಭದಲ್ಲಿ ವೈದ್ಯರು ಇದೊಂದು ಆತ್ಮಹತ್ಯೆ ಎಂದು ಹೇಳಲಾಗಿತ್ತು. ಆದರೆ ಇದನ್ನು ಒಪ್ಪದ ಮಕ್ಕಳು, ತಾಯಿಯ ಸಾವಿಗೆ ಅಕ್ಕಪಕ್ಕದ ಮನೆಯವರೇ ಕಾರಣ ಎಂದು ಮಗ ಮಂಜುನಾಥ್ ಆರೋಪಿಸಿದ್ದರು. ಈ ಸಂಬಂಧ 11 ಜನರ ವಿರುದ್ಧ ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಮಲೆಬೆನ್ನೂರು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ನಂ...

BREAKING : 20 ದಿನಗಳ ಉಪವಾಸ ಅಂತ್ಯ ! ಜಂತರ್ ಮಂತರ್‌ನಿಂದ ‘ಸೋನಂ ವಾಂಗ್ಚುಕ್’ ಆಸ್ಪತ್ರೆಗೆ ದಾಖಲು |

Image
 ನವದೆಹಲಿ: ಕಳೆದ 20 ದಿನಗಳಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಹವಾಮಾನ ಹೋರಾಟಗಾರ ಸೋನಂ ವಾಂಗ್ಚುಕ್ ಅವರನ್ನು ಶನಿವಾರ ಮುಂಜಾನೆ ಪೊಲೀಸರು ಪ್ರತಿಭಟನಾ ಸ್ಥಳದಿಂದ ತೆರವುಗೊಳಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಶನಿವಾರ ಬೆಳಗಿನ ಜಾವ ಜಂತರ್ ಮಂತರ್‌ಗೆ ಬಂದ ಪೊಲೀಸರು, ಪ್ರತಿಭಟನಾಕಾರರ ಘೋಷಣೆ ಹಾಗೂ ವಿರೋಧದ ನಡುವೆ ವಾಂಗ್ಚುಕ್ ಅವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ದರು. ಈ ವೇಳೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಕಾಕ್ರೋಚ್ ಜನತಾ ಪಾರ್ಟಿ (CJP) ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.ದೆಹಲಿ ಪೊಲೀಸರು ಪ್ರಕಟಣೆ ಹೊರಡಿಸಿ, ದೆಹಲಿ ಹೈಕೋರ್ಟ್‌ನ ಆದೇಶ ಮತ್ತು ವೈದ್ಯಕೀಯ ತಜ್ಞರ ಸಲಹೆಯಂತೆ, ಸೋನಂ ವಾಂಗ್ಚುಕ್ ಅವರ ಆರೋಗ್ಯ ಹದಗೆಟ್ಟಿರುವ ಕಾರಣ ಅವರನ್ನು ಅಗತ್ಯ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಇದೇ ವೇಳೆ, ಜಂತರ್ ಮಂತರ್‌ನಲ್ಲಿ ಇರುವ ಪ್ರತಿಭಟನಾಕಾರರು ಶಾಂತಿಯುತವಾಗಿ ಸ್ಥಳವನ್ನು ಖಾಲಿ ಮಾಡುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಪೊಲೀಸರ ಪ್ರಕಾರ, ಹೈಕೋರ್ಟ್ ಆದೇಶ ಜಾರಿಗೊಳಿಸುವ ವೇಳೆ ಕೆಲ ಪ್ರತಿಭಟನಾಕಾರರು ಅಡ್ಡಿಪಡಿಸಲು ಯತ್ನಿಸಿದ್ದು, ಸ್ವಲ್ಪ ಗೊಂದಲ ಉಂಟಾಯಿತು. ಆದರೆ ಪೊಲೀಸರು ಅತ್ಯಂತ ಸಂಯಮದಿಂದ ಪರಿಸ್ಥಿತಿಯನ್ನು ನಿಭಾಯಿಸಿ ಕಾರ್ಯಾಚರಣೆಯನ್ನು ಸುರಕ್ಷಿತವಾಗಿ ಪೂರ್ಣಗೊಳಿಸಿದರು...

ರಾಮ ಮಂದಿರ ದೇಣಿಗೆ ಲೂಟಿ: ಲೋಪ ಒಪ್ಪಿಕೊಂಡರೂ ಖಜಾಂಚಿ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ - ಗೋವಿಂದ ದೇವ್ ಗಿರಿ

Image
 ಅಯೋಧ್ಯೆಯ ದೇಣಿಗೆ ಮೇಲ್ವಿಚಾರಣೆಯಲ್ಲಿ ಲೋಪಗಳಾಗಿವೆ ಎಂದು ಒಪ್ಪಿಕೊಂಡರೂ, ದೇಣಿಗೆ ಲೂಟಿ ಆರೋಪದ ಮೇಲೆ ನಾನು ರಾಜೀನಾಮೆ ನೀಡುವುದಿಲ್ಲ ಎಂದು ಗೋವಿಂದ ದೇವ್ ಗಿರಿ ಮಹಾರಾಜ್ ಅವರು ಮಂಗಳವಾರ ಹೇಳಿದ್ದಾರೆ. ಅಯೋಧ್ಯೆ: ರಾಮ ಮಂದಿರದ ದೇಣಿಗೆ ಲೂಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಹಲವರು ರಾಜೀನಾಮೆ ನೀಡಿದ್ದು, ಖಜಾಂಚಿ ಗೋವಿಂದ ದೇವ್ ಗಿರಿ ಮಹಾರಾಜ್ ಅವರೂ ರಾಜೀನಾಮೆಗೆ ಒತ್ತಡ ಹೆಚ್ಚುತ್ತಿದೆ. ಅಯೋಧ್ಯೆಯ ದೇಣಿಗೆ ಮೇಲ್ವಿಚಾರಣೆಯಲ್ಲಿ ಲೋಪಗಳಾಗಿವೆ ಎಂದು ಒಪ್ಪಿಕೊಂಡರೂ, ದೇಣಿಗೆ ಲೂಟಿ ಆರೋಪದ ಮೇಲೆ ನಾನು ರಾಜೀನಾಮೆ ನೀಡುವುದಿಲ್ಲ ಎಂದು ಗೋವಿಂದ ದೇವ್ ಗಿರಿ ಮಹಾರಾಜ್ ಅವರು ಮಂಗಳವಾರ ಹೇಳಿದ್ದಾರೆ. ಪ್ರಕರಣದಲ್ಲಿ ಬಂಧಿಸಲ್ಪಟ್ಟವರೆಲ್ಲರೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಉದ್ಯೋಗಿಗಳಾಗಿದ್ದು, ಬ್ಯಾಂಕ್ ಅಧಿಕಾರಿಗಳು ಅವರ ಅರ್ಹತೆಗಳನ್ನು ಪರಿಶೀಲಿಸಬೇಕಾಗಿತ್ತು ಮತ್ತು ಹೆಚ್ಚು ಜಾಗರೂಕರಾಗಿರಬೇಕು ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಹಿಂದೂ ಮಹಿಳೆಯರೇ ಟಾರ್ಗೆಟ್ – ಜಿಮ್ ಟ್ರೇನರ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ

Image
 ದಾವಣಗೆರೆ: ಇಲ್ಲಿನ ಸರಸ್ವತಿ ನಗರದಲ್ಲಿರುವ ಫಿಟ್‌ನೆಸ್ ಕ್ಲಬ್‌ವೊಂದು ಇದೀಗ ವಿವಾದದ ಕೇಂದ್ರಬಿಂದುವಾಗಿದ್ದು, ಜಿಮ್ ಟ್ರೇನರ್ (Gym Trainer) ಜಿಮ್‌ಗೆ ಬರುವ ಹಿಂದೂ ಹೆಣ್ಣುಮಕ್ಕಳನ್ನೇ ಟಾರ್ಗೆಟ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಜಿಮ್ ಟ್ರೇನರ್‌ನನ್ನು ಇಸ್ಮಾಯಿಲ್ ಎಂದು ಗುರುತಿಸಲಾಗಿದೆ. ಪ್ರೊಫೆಸರ್‌ಗಳು, ಅಧಿಕಾರಿಗಳು, ವೈದ್ಯರು, ಇಂಜಿನಿಯರ್‌ಗಳು ಹಾಗೂ ಪ್ರತಿಷ್ಠಿತ ಮನೆತನದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಪುಸಲಾಯಿಸಿ ಲೈಂಗಿಕವಾಗಿ ಬಳಸಿಕೊಳ್ಳಲಾಗಿದೆ ಎಂಬ ಆರೋಪ ಕೇಳಿಬಂದಿದೆ. ರೀಲ್ಸ್ ಮಾಡಿ ಬುಟ್ಟಿಗೆ ಬೀಳಿಸಿಕೊಳ್ಳೋದು, ಡ್ರೆಸ್ಸಿಂಗ್ ರೂಮ್‌ಗಳಲ್ಲಿ ಸೀಕ್ರೆಟ್ ಕ್ಯಾಮೆರಾ ಅಳವಡಿಸಿ ಖಾಸಗಿ ವಿಡಿಯೋ ಹಾಗೂ ಫೋಟೋ ಸೆರೆಹಿಡಿದು ಬ್ಲ್ಯಾಕ್‌ಮೇಲ್ ಮಾಡಲಾಗಿದೆ ಎಂಬ ಆಘಾತಕಾರಿ ಮಾಹಿತಿ ಹಿಂದೂ ಸಂಘಟನೆಗಳ ಮುಖಂಡರು ಹೊರಹಾಕಿದ್ದಾರೆ. ಈ ಕೃತ್ಯದ ಕೆಲವು ದೃಶ್ಯಗಳು ಸಿಸಿಟಿವಿಯಲ್ಲಿಯೂ ಸೆರೆಯಾಗಿವೆ ಎನ್ನಲಾಗಿದ್ದು, ಕೆಲ ಫೋಟೋಗಳು ಸಹ ವೈರಲ್ ಆಗಿವೆ. ಬ್ಲ್ಯಾಕ್‌ಮೇಲ್‌ಗೆ ಹೆದರಿ ಪ್ರತಿಷ್ಠಿತ ಕುಟುಂಬದ ಮಹಿಳೆಯೋರ್ವರು ಆತ್ಮಹತ್ಯೆಗೂ ಯತ್ನಿಸಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಜಿಮ್ ಟ್ರೇನರ್ ಇಸ್ಮಾಯಿಲ್‌ನನ್ನು ಗಡಿಪಾರು ಮಾಡುವಂತೆ ಹಿಂದೂ ಮುಖಂಡರು ಆಗ್ರಹಿಸಿದ್ದಾರೆ. ನೈತಿಕ ಪೊಲೀಸ್‌ಗಿರಿ ಮಾಡಿದ್ರೆ ನಿಮ್ಮ ಮೇಲೂ ಕ್ರಮ ಅಂತ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಿಂದೂ ಮುಖಂಡರಿಗೆ ...

ಎಸ್ ಜಾನಕಿ ಇನ್ನಿಲ್ಲ: ಮೈಸೂರಿನಲ್ಲಿ ಗಾಯನ ನಿಲ್ಲಿಸಿದ ದಕ್ಷಿಣ ಭಾರತದ ಗಾನ ಕೋಗಿಲೆ!

Image
 ಅನಾರೋಗ್ಯದಿಂದ ಹಿನ್ನೆಲೆಯಲ್ಲಿ ಮೈಸೂರಿನ ಅಪೊಲೋ ಆಸ್ಪತ್ರೆಯಲ್ಲಿ ದಾಖಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಅವರು ಮೃತಪಟ್ಟಿರುವುದಾಗಿ ಮೂಲಗಳಿಂದ ತಿಳಿದುಂದಿದೆ. ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ತನ್ನ ಗಾಯನ ನಿಲ್ಲಿಸಿದೆ. ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಹಿನ್ನೆಲೆಯಲ್ಲಿ ಮೈಸೂರಿನ ಅಪೊಲೋ ಆಸ್ಪತ್ರೆಯಲ್ಲಿ ದಾಖಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಅವರು ಮೃತಪಟ್ಟಿರುವುದಾಗಿ ಮೂಲಗಳಿಂದ ತಿಳಿದುಂದಿದೆ. 1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೇ ಎಂಬ ಗ್ರಾಮದಲ್ಲಿ ಜನಿಸಿದ ಎಸ್. ಜಾನಕಿ, ತಮ್ಮ ಮೂರನೆಯ ವಯಸ್ಸಿನಲ್ಲೇ ನಾದಸ್ವರ ವಿದ್ವಾನ್ ಶ್ರೀ ಪೈದಿಸ್ವಾಮಿ ಎಂಬವರಲ್ಲಿ ಸಂಗೀತಾಭ್ಯಾಸವನ್ನು ಪ್ರಾರಂಭಿಸಿದರು. ಬಳಿಕ ತೆಲುಗು, ತಮಿಳು, ಕನ್ನಡ, ಮಲಯಾಳಂ ಸೇರಿದಂತೆ 20 ಕ್ಕೂ ಹೆಚ್ಚು ಭಾಷೆಗಳಲ್ಲಿ 48,000 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡುವ ಮೂಲಕ ಸಿನಿರಸಿಕರನ್ನು ರಂಜಿಸಿದ್ದಾರೆ.

ಕೊಟ್ಟೂರಿನ ಹಿರಿಯ ನಾಯಕ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಎಂ.ಎಂ.ಜೆ. ಹರ್ಷವರ್ಧನ್ ನಿಧನ

Image
 ಕೊಟ್ಟೂರು: ಕೊಟ್ಟೂರಿನ ಹಮ್ಮೆಯ ನಾಯಕ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು ಹಾಗೂ ಉಜ್ಜಯಿನಿ ಪೀಠದ ಕಾರ್ಯದರ್ಶಿಯಾಗಿದ್ದ ಶ್ರೀ ಎಂ.ಎಂ.ಜೆ. ಹರ್ಷವರ್ಧನ್ ಅವರು ಇಂದು ನಿಧನರಾಗಿದ್ದಾರೆ. ಸಮಾಜ ಸೇವೆಯಲ್ಲಿ ಸಕ್ರಿಯ: ದಿವಂಗತ ಎಂ.ಎಂ.ಜೆ. ಹರ್ಷವರ್ಧನ್ ಅವರು ತಮ್ಮ ಸಮಾಜ ಸೇವೆ, ಧಾರ್ಮಿಕ ಕಾರ್ಯಗಳು ಹಾಗೂ ಜನಪರ ಕಾಳಜಿಯ ಮೂಲಕ ಜನಮಾನಸದಲ್ಲಿ ಅಚ್ಚಳಿಯದ ನೆನಪನ್ನು ಉಳಿಸಿದ್ದಾರೆ. ಅವರ ಅಗಲಿಕೆಯಿಂದ ಕೊಟ್ಟೂರು ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ. ಗಣ್ಯರ ಸಂತಾಪ: ಅವರ ನಿಧನಕ್ಕೆ ಅಪಾರ ಅಭಿಮಾನಿಗಳು ಮತ್ತು ಹಿತೈಷಿಗಳು ಕಂಬನಿ ಮಿಡಿದಿದ್ದಾರೆ. ಅವರ ಆತ್ಮಕ್ಕೆ ಭಗವಂತನು ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬವರ್ಗಕ್ಕೆ ಮತ್ತು ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇವೆ. ಓಂ ಶಾಂತಿ. ಮುಖ್ಯ ವರದಿಗಾರರು : ಸಿ ಜಿ  ವಸಂತ್ ಕುಮಾರ್ ಟಿವಿ ನ್ಯೂಸ್ ಕನ್ನಡ ಏಷ್ಯನ್ ನೆಟ್ವರ್ಕ್ 

ದಾವಣಗೆರೆಯಲ್ಲಿ ಗಗನಚುಂಬಿ ಕಟ್ಟಡಕ್ಕೆ ಅನುಮತಿ; ದೂಡಾ ಹೊಸ ಲೇಔಟ್‌ಗಳ ನಿರ್ಮಾಣಕ್ಕೆ ಯತೀಂದ್ರ ಸಿದ್ದರಾಮಯ್ಯ ಸೂಚನೆ

Image
 ದಾವಣಗೆರೆ ನಗರದಲ್ಲಿ ಹೈರೈಸ್ ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ನೀಡುವ ಮೂಲಕ ಟೈರ್-2 ನಗರಗಳನ್ನು ಅಭಿವೃದ್ಧಿಪಡಿಸಲು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಎಫ್‌ಎಆರ್‌ ಹೆಚ್ಚಳದಿಂದ ಪಾಲಿಕೆಗೆ ಆದಾಯ ಬರುತ್ತದೆ ಎಂದರು. ಅಲ್ಲದೆ, ಕುಂದುವಾಡದಲ್ಲಿ ರೈತರ ವಿರೋಧವಿದ್ದಲ್ಲಿ ಬಡಾವಣೆ ನಿರ್ಮಿಸದೆ, ಬಾತಿಯಂತಹ ಲೇಔಟ್‌ಗೆ ಸಿದ್ಧವಿರುವ ಕಡೆ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಮತ್ತು ಕುಡಿಯುವ ನೀರು, ಇ-ಸ್ವತ್ತು ಸೇವೆಗಳಲ್ಲಿ ಲೋಪವಾಗದಂತೆ ನೋಡಿಕೊಳ್ಳಲು ಸೂಚಿಸಿದರು. ದಾವಣಗೆರೆ: ದಾವಣಗೆರೆ ನಗರದ ವ್ಯಾಪ್ತಿಯಲ್ಲಿ ಹೈರೈಸ್‌ ಬಿಲ್ಡಿಂಗ್‌ಗಳ (ಗಗನಚುಂಬಿ ಕಟ್ಟಡ) ನಿರ್ಮಾಣಕ್ಕೆ ಅನುಮತಿ ನೀಡಿ, ಇದರಿಂದ ದಾವಣಗೆರೆ ರೀತಿಯ ಎರಡನೇ ಹಂತದ ನಗರಗಳು ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ,'' ಎಂದು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಸಲಹೆ ನೀಡಿದರು. ಇಲ್ಲಿನ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಶುಕ್ರವಾರ ನಡೆದ ದಾವಣಗೆರೆ - ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ಮಹಾನಗರ ಪಾಲಿಕೆ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ''ಎರಡನೇ ಹಂತದ ನಗರಗಳು (ಟೈರ್‌-2 ಸಿಟಿ) ತ್ವರಿತವಾಗಿ ಅಭಿವೃದ್ಧಿ ಸಾಧಿಸಬೇಕೆಂದರೆ ಇಲ್ಲಿದೊಡ್ಡ ಬಹುಮಹಡಿ ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ನೀಡುವುದು ಅನಿವಾರ್ಯ'' ಎಂದರು. ಬಹುಮಹಡಿ ಕಟ್ಟಡಗಳ ನಿರ್ಮಾಣಕ್ಕೆ ಪೂರಕವಾಗಿ ಫ್ಲೋರ್‌ ಏರಿಯಾ ರೇಷಿ...

BREAKING : ಮೌಲ್ವಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ ; ಹಿಂದೂ ಕಾರ್ಯಕರ್ತ ‘ಪುನೀತ್ ಕೆರೆಹಳ್ಳಿ’ ಅರೆಸ್ಟ್.!

Image
 ಬೆಂಗಳೂರು: ಮೌಲ್ವಿಗಳ ವಿರುದ್ಧ ಅವಹೇಳನಕಾರಿ ಹಾಗೂ ನಿಂದನಾತ್ಮಕ ಹೇಳಿಕೆ ನೀಡಿದ ಆರೋಪದಡಿ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ರಜಾಕ್ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ತನಿಖೆಯ ಭಾಗವಾಗಿ ಪುನೀತ್ ಕೆರೆಹಳ್ಳಿಯನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ. ಕುಮಾರಸ್ವಾಮಿ ಲೇಔಟ್ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮೌಲ್ವಿಗಳಿಗೆ ನಿಂದಿಸಿದ ಆರೋಪದ ಮೇರೆಗೆ ಅಬ್ದುಲ್ ರಜಾಕ್ ಎಂಬುವವರು ದೂರು ನೀಡಿದ್ದರು.ದೂರಿನಲ್ಲಿ, ಪುನೀತ್ ಕೆರೆಹಳ್ಳಿ ಸಾಮಾಜಿಕ ಜಾಲತಾಣ ಹಾಗೂ ಸಾರ್ವಜನಿಕ ಹೇಳಿಕೆಗಳ ಮೂಲಕ ಮೌಲ್ವಿಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ರೀತಿಯಲ್ಲಿ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ದೂರಿನ ಆಧಾರದಲ್ಲಿ ಪೊಲೀಸರು ಸಂಬಂಧಿತ ಕಾನೂನು ವಿಧಿಗಳಡಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ

ದಾವಣಗೆರೆ: ಚಿಗಟೇರಿ ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ಸ್ಫೋಟ; ಭಾರೀ ಅನಾಹುತ ತಪ್ಪಿತು

Image
 ದಾವಣಗೆರೆ: ನಗರದ ಚಿಗಟೇರಿ ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ಅಳವಡಿಸಲಾಗಿದ್ದ ಅನೆಸ್ಥೆಸಿಯಾ ವರ್ಕ್‌ಸ್ಟೇಷನ್‌ನಲ್ಲಿ ಮಂಗಳವಾರ ಸಂಭವಿಸಿದ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿರುವ ಘಟನೆ ನಡೆದಿದೆ. ಘಟನೆಯ ವಿವರ: ಆಸ್ಪತ್ರೆಯ ಆಪರೇಷನ್ ಥಿಯೇಟರ್-5 ಮತ್ತು 6ರ ಕಣ್ಣಿನ ಶಸ್ತ್ರಚಿಕಿತ್ಸಾ ವಿಭಾಗದಲ್ಲಿ ರೋಗಿಯೊಬ್ಬರಿಗೆ ಶಸ್ತ್ರಚಿಕಿತ್ಸೆ ನಡೆಸಲು ಸಿದ್ಧತೆ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಅನೆಸ್ಥೆಸಿಯಾ ವರ್ಕ್‌ಸ್ಟೇಷನ್‌ನಲ್ಲಿ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ. ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ: ಘಟನೆ ನಡೆದ ಸಮಯದಲ್ಲಿ 10ಕ್ಕೂ ಹೆಚ್ಚು ಸಿಬ್ಬಂದಿ ಕರ್ತವ್ಯದಲ್ಲಿದ್ದರು. ಸಿಬ್ಬಂದಿಯ ಸಮಯಪ್ರಜ್ಞೆಯಿಂದಾಗಿ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ತಪ್ಪಿದೆ. ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ. ಹಾನಿಗೊಳಗಾದ ಉಪಕರಣಗಳು: ಸ್ಫೋಟದ ಪರಿಣಾಮವಾಗಿ ಆಪರೇಷನ್ ಥಿಯೇಟರ್‌ನಲ್ಲಿದ್ದ ಅನೆಸ್ಥೆಸಿಯಾ ಯಂತ್ರ ಸೇರಿದಂತೆ ಹಲವು ವೈದ್ಯಕೀಯ ಉಪಕರಣಗಳು ಬೆಂಕಿಗಾಹುತಿಯಾಗಿವೆ. ಘಟನೆಯ ನಂತರ ಆಸ್ಪತ್ರೆಯ ಸಿಬ್ಬಂದಿ ಹಾಗೂ ಸಂಬಂಧಿತ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ತನಿಖೆ ಆರಂಭ: ಸ್ಫೋಟಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ತಾಂತ್ರಿಕ ದೋಷವೇ ಅಥವಾ ಇತರ ಕಾರಣಗಳಿಂದಾಗಿ ಈ ಘಟನೆ ಸಂಭವಿಸಿದೆಯೇ ಎಂಬುದರ ಕು...

ಮೂಗಿನ ಡ್ರಾಪ್ಸ್‌ ಕಣ್ಣಿಗೆ ಹಾಕಿದ ವೈದ್ಯ: ಶಾಶ್ವತವಾಗಿ ದೃಷ್ಟಿ ಕಳೆದುಕೊಡ 19 ತಿಂಗಳ ಕಂದಮ್ಮ

Image
 ಭೋಪಾಲ್: ವೈದ್ಯರ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯಕ್ಕೆ 19 ತಿಂಗಳ ಕಂದಮ್ಮನೊಬ್ಬ ತನ್ನ ಎರಡು ಕಣ್ಣುಗಳ ದೃಷ್ಟಿಯನ್ನು ಶಾಶ್ವತವಾಗಿ ಕಳೆದುಕೊಂಡಿರುವ ದಾರುಣ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ನಡೆದಿದೆ. ಸಾಗರ್ ಜಿಲ್ಲೆಯ ಭೂಸಾ ಕಮಲಪುರ ಗ್ರಾಮದ ಇಂದ್ರಜ್ ವಿಶ್ವಕರ್ಮ ಎಂಬುವವರ 19 ತಿಂಗಳ ಗಂಡು ಮಗು ವಿನಯ್‌ಗೆ ಮೇ 29 ರಂದು ತೀವ್ರ ಕೆಮ್ಮು, ನೆಗಡಿಯಾಗಿ, ಕಣ್ಣುಗಳು ಸ್ವಲ್ಪ ಕೆಂಪಾಗಾಗಿದ್ದವು. ತಕ್ಷಣ ಪೋಷಕರು ಮಗುವನ್ನು ಸಾಗರ್ ಜಿಲ್ಲೆಯ ಬಂದಾ ಸಿವಿಲ್ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಈ ವೇಳೆ ಕರ್ತವ್ಯದಲ್ಲಿದ್ದ ಮಕ್ಕಳ ವೈದ್ಯರು ಮಗುವನ್ನು ಪರೀಕ್ಷಿಸಿದ ಬಳಿಕ ಮೂಗಿಗೆ ಬಳಸಬೇಕಿದ್ದ ಸಲೈನ್ ಡ್ರಾಪ್ಸ್ ಅನ್ನು ಕಣ್ಣಿಗೆ ಹಾಕಿದ್ದಾರೆ. ಜೊತೆಗೆ ಪ್ಯಾರಾಸಿಟಮಾಲ್ ಸಿರಪ್, ಇಂಜೆಕ್ಷನ್ ಹಾಗೂ ಇತರ ಔಷಧಿಗಳನ್ನು ಕೂಡ ನೀಡಿದ್ದಾರೆ. ಚಿಕಿತ್ಸೆ ಪಡೆದ ಕೆಲವೇ ಗಂಟೆಗಳಲ್ಲಿ ಮಗುವಿನ ಆರೋಗ್ಯ ಮತ್ತಷ್ಟು ಹದಗೆಟ್ಟಿದೆ. ಹಲವು ಗಂಟೆಗಳ ಕಾಲ ಸಿವಿಲ್ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಿದರೂ ಯಾವುದೇ ಸುಧಾರಣೆ ಕಾಣದ ಹಿನ್ನೆಲೆಯಲ್ಲಿ ವೈದ್ಯರು ಮಗುವನ್ನು ಸಾಗರ್ ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದಾರೆ. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಭೋಪಾಲ್‌ನ ಏಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಭೋಪಾಲ್ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆದ ವೇಳೆ, ಮಗುವಿನ ದೃಷ್ಟಿ ಶಾಶ್ವತವಾಗಿ ಕಳೆದುಹೋಗಿದೆ ಎಂದು ವೈದ್ಯರು ತಿಳಿಸಿರುವುದಾಗಿ ಕುಟು...

ರಾಯಚೂರು: ಜಮೀನಿನ ಖಾತೆ ನೀಡಲು 1.5 ಲಕ್ಷ ರೂ. ಲಂಚ ಪಡೆದಿದ್ದ ಬಿಜನಗೇರಾ ಪಿಡಿಒ ಲಕ್ಷ್ಮೀ ಲೋಕಾಯುಕ್ತ ಬಲೆಗೆ!

Image
 ಜಮೀನಿನ ಖಾತಾ ಉತಾರ ನೀಡಲು ವ್ಯಕ್ತಿಯೊಬ್ಬರಿಂದ 1.5 ಲಕ್ಷ ಲಂಚ ಪಡೆದಿದ್ದ ಬಿಜನಗೇರಾ ಗ್ರಾಮದ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ರಾಯಚೂರು: ಜಮೀನಿನ ಖಾತಾ ಉತಾರ ನೀಡಲು ವ್ಯಕ್ತಿಯೊಬ್ಬರಿಂದ 1.5 ಲಕ್ಷ ಲಂಚ ಪಡೆದಿದ್ದ ಬಿಜನಗೇರಾ ಗ್ರಾಮದ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೇಔಟ್ ನಿರ್ಮಾಣಕ್ಕಾಗಿ ಎರಡು ಎಕರೆ ಜಮೀನಿನ ಖಾತಾ ಉತಾರಕ್ಕಾಗಿ ಬಿಜನಗೇರಾದ ಮೆಹಬೂಬ್ ಅಲಿ ಎಂಬುವರು ಮನವಿ ಮಾಡಿದ್ದರು. ಉತಾರ ಕೊಡಲು ಪಿಡಿಒ ಅವರು 2 ಲಕ್ಷ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಮೆಹಬೂಬ್ ಅಲಿ ಲೋಕಾಯುಕ್ತರಿಗೆ ದೂರು ನೀಡಿದ್ದರು. ಇಂದು ಲಕ್ಷ್ಮೀ ಪ್ಯಾಟಿ ತನ್ನ ಪತಿ ಖಾತೆಗೆ ಫೋನ್ ಪೇ ಮೂಲಕ 1.50 ಲಕ್ಷ ರೂಪಾಯಿ ವರ್ಗಾವಣೆ ಮಾಡಿಸಿಕೊಂಡ ಬೆನ್ನಲ್ಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಲಕ್ಷ್ಮೀಯನ್ನು ವಶಕ್ಕೆ ತೆಗೆದುಕೊಂಡರು.

ದಾವಣಗೆರೆ: ಕುಡಿದು ವಾಹನ ಚಾಲನೆ ಮಾಡಿ ಪೊಲೀಸರೊಂದಿಗೆ ಯುವತಿಯ ರಂಪಾಟ!

Image
 ದಾವಣಗೆರೆಯ ಶಾಮನೂರು ರಸ್ತೆಯಲ್ಲಿ ಗುರುವಾರ ರಾತ್ರಿ ನಡೆದ ಘಟನೆಯೊಂದರಲ್ಲಿ, ಯುವತಿಯೊಬ್ಬಳು ಮದ್ಯಪಾನ ಮಾಡಿ ಏಕಮುಖ ರಸ್ತೆಯಲ್ಲಿ (ಒನ್-ವೇ) ವಿರುದ್ಧ ದಿಕ್ಕಿನಲ್ಲಿ ಥಾರ್ ಜೀಪ್ ಚಾಲನೆ ಮಾಡಿದ್ದಾಳೆ. ವಾಹನವನ್ನು ತಡೆದ ಪೊಲೀಸರೊಂದಿಗೆ ಆಕೆ ವಾಗ್ವಾದಕ್ಕಿಳಿದು ರಂಪಾಟ ನಡೆಸಿದ್ದಾಳೆ. ಘಟನೆಯ ವಿವರ: ಪ್ರೀತಿ ಎಂಬ ಹೆಸರಿನ ಯುವತಿ ಮದ್ಯಪಾನ ಮಾಡಿ ಥಾರ್ ಜೀಪ್‌ನಲ್ಲಿ ಒನ್-ವೇ ರಸ್ತೆಯಲ್ಲಿ ಅಜಾಗರೂಕತೆಯಿಂದ ಚಾಲನೆ ಮಾಡುತ್ತಿದ್ದಳು. ಪೊಲೀಸರು ಆಕೆಯ ವಾಹನವನ್ನು ತಡೆದಾಗ, ಆಕೆ ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದಾಳೆ. ಅಲ್ಲದೆ, ನಶೆಯಲ್ಲಿದ್ದ ಯುವತಿ ಮಹಿಳಾ ಪಿಎಸ್ಐ ಅವರಿಗೆ ಕಾಲಿನಿಂದ ಒದೆಯುವ ರೀತಿಯಲ್ಲಿ ವರ್ತಿಸಿ, "ನಾನು ಯಾರು ಗೊತ್ತೇನೋ, ನಿಮ್ಮನ್ನು ಸುಮ್ಮನೆ ಬಿಡಲ್ಲ" ಎಂದು ಪೊಲೀಸರಿಗೆ ಅವಾಜ್ ಹಾಕಿದ್ದಾಳೆ. ಈ ಯುವತಿ ದಾವಣಗೆರೆಯ ಪ್ರತಿಷ್ಠಿತ ವ್ಯಕ್ತಿಯೊಬ್ಬರ ಪುತ್ರಿ ಎಂದು ಹೇಳಲಾಗುತ್ತಿದ್ದು, ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕರ್ತವ್ಯಕ್ಕೆ ಅಡ್ಡಿಪಡಿಸಿದ ಯುವತಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

ದಾವಣಗೆರೆ: ಶಂಕಿತ ಉಗ್ರ ಗ್ಯಾಂಗ್‌ ಅನ್ನ ಬಂಧಿಸಿದ್ದೇ ರೋಚಕ, ಮನೆ ಮಾಲೀಕರು ಫುಲ್ ಶಾಕ್

Image
 ದಾವಣಗೆರೆ, ಜೂನ್ 25: ಅಯೋಧ್ಯೆಯ ಶ್ರೀರಾಮ ಮಂದಿರದ ಮೇಲೆ ದಾಳಿ ನಡೆಸಲು ಹೊಂಚು ಹಾಕುತ್ತಿದ್ದರು ಎನ್ನಲಾದ ಉಗ್ರರ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಜಿಲ್ಲೆಯ ಹರಿಹರ ತಾಲ್ಲೂಕಿನ ಬನ್ನಿಕೋಡು ಗ್ರಾಮದಲ್ಲಿ ಅಡಗಿದ್ದ ಶಂಕಿತ ಉಗ್ರ ಸುಹೇಲ್ ಮತ್ತು ಆತನ ಸಹಚರರನ್ನು ಬಂಧಿಸಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಶಂಕಿತರಿಗೆ ಮನೆ ಬಾಡಿಗೆ ಕೊಟ್ಟಿದ್ದ ಮಾಲೀಕರು ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ. ಶಂಕಿತ ಉಗ್ರ ಸುಹೇಲ್‌ಗೆ ಬಾಡಿಗೆ ಮನೆ ನೀಡಿದ್ದ ಬನ್ನಿಕೋಡು ಗ್ರಾಮದ ರೇಣುಕಮ್ಮ ಮತ್ತು ಗುತ್ಯಪ್ಪ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಆತನ ಚಟುವಟಿಕೆಗಳ ವಿವರ ಹಾಗೂ ಪೊಲೀಸರು ದಾಳಿ ಮಾಡಿದ ರೋಚಕ ಕ್ಷಣಗಳನ್ನು ಹಂಚಿಕೊಂಡಿದ್ದಾರೆ. ಮನೆ ಮಾಲೀಕರು ನೀಡಿರುವ ಮಾಹಿತಿಯ ಪ್ರಕಾರ, ಸುಮಾರು 15 ದಿನಗಳ ಹಿಂದೆಯಷ್ಟೇ ಸುಹೇಲ್ ಈ ಮನೆಗೆ ಬಾಡಿಗೆಗೆ ಬಂದಿದ್ದ. ಆತ ಒಬ್ಬನೇ ಇರದೆ, ಆತನ ಜೊತೆಯಲ್ಲಿ ಇನ್ನೂ 10 ಜನರು ಬಂದಿದ್ದರು. ತಿಂಗಳಿಗೆ 6,000 ರೂಪಾಯಿ ಬಾಡಿಗೆ ನೀಡುವುದಾಗಿ ಒಪ್ಪಂದ ಮಾಡಿಕೊಂಡಿದ್ದರು. 'ಅವರೆಲ್ಲರೂ ಸದಾ ತಮ್ಮತಮ್ಮಲ್ಲೇ ಹಿಂದಿ ಭಾಷೆಯಲ್ಲಿ ಮಾತನಾಡಿಕೊಳ್ಳುತ್ತಿದ್ದರು. ನಮ್ಮ ಬಳಿ ದಿನನಿತ್ಯ ಹಾಲು ಮತ್ತು ಮಜ್ಜಿಗೆಯನ್ನು ಪಡೆಯುತ್ತಿದ್ದರು. ಯಾರೊಂದಿಗೂ ಅಷ್ಟಾಗಿ ಬೆರೆಯದೆ, ತಾವು ಆಯಿತು ತಮ್ಮ ಕೆಲಸವಾಯಿತು ಎನ್ನುವಂತೆ ಇರುತ್ತಿದ್ದರು,' ಎಂದು ಮಾಲೀಕರು ತಿಳಿಸಿದ್ದಾರೆ. ಸುಹೇಲ್ ಗ್ಯಾಂಗ್‌ಗೆ ಗಾಳ ಹಾಕಿದ ಪೊಲೀಸರು...

ಮಂಗಳೂರು: ಲಾಡ್ಜ್ ನಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ; 35.53 ಗ್ರಾಂ ಎಂ.ಡಿ.ಎಂ.ಎ. ವಶ

Image
 ಮಂಗಳೂರು: ನಗರದ ಬೆಂದೂರ್‌ ನಲ್ಲಿರುವ ಲಾಡ್ಜ್ ಒಂದರಲ್ಲಿ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಬಗ್ಗೆ ಮಂಗಳೂರು ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬಂದಿ ಮಾಹಿತಿ ಸಂಗ್ರಹಿಸಿ ದಾಳಿ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿ 35.53 ಗ್ರಾಂ ಎಂ.ಡಿ.ಎಂ.ಎ. ಮತ್ತು 7 ಸಾವಿರದ 30 ರೂಪಾಯಿ ನಗದು ಹಣ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನ ಹಲಸೂರು ನಿವಾಸಿ ಮೊಹಮ್ಮದ್ ನದೀಂ (27), ಉಳ್ಳಾಲ ತಾಲೂಕು ಸೋಮೇಶ್ವರ ಉಚ್ಚಿಲದ ಪೆರಿಬೈಲ್ ನಿವಾಸಿ ಉಮರುಲ್ ಫಾರೂಕ್ (30) ಮತ್ತು ಉಳ್ಳಾಲ ತಾಲೂಕಿನ ಕೆ.ಸಿ. ರೋಡ್ ಕಿನ್ಯಾ ನಿವಾಸಿ ಇಮ್ತಿಯಾಜ್ ಇಸ್ಮಾಯಿಲ್ (41) ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳನ್ನು ಮತ್ತು ಸೊತ್ತುಗಳನ್ನು ಮುಂದಿನ ತನಿಖೆಗಾಗಿ ಕದ್ರಿ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದು, ಕದ್ರಿ ಪೊಲೀಸರು ಎನ್.ಡಿ.ಪಿ.ಎಸ್. ಕಾಯ್ದೆಯಡಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ದಾವಣಗೆರೆಯ ನಿವೃತ್ತ ಶಿಕ್ಷಕಿಯಿಂದ ಯೋಧರ ನಿಧಿಗೆ 10 ಲಕ್ಷ ರೂ. ದೇಣಿಗೆ

Image
 ದಾವಣಗೆರೆಯ 86 ವರ್ಷದ ನಿವೃತ್ತ ಶಿಕ್ಷಕಿ ಎಚ್.ಬಿ. ಕರಿಬಸಮ್ಮ ಅವರು, ಕ್ಯಾನ್ಸರ್ ಸೇರಿದಂತೆ ಗಂಭೀರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರೂ, ದೇಶ ಕಾಯುವ ಯೋಧರ ಮೇಲಿನ ಗೌರವದಿಂದ 10 ಲಕ್ಷ ರೂಪಾಯಿಗಳನ್ನು 'ಭಾರತ್ ಕೀ ವೀರ್' (Bharat Ke Veer) ನಿಧಿಗೆ ದೇಣಿಗೆ ನೀಡಿದ್ದಾರೆ. ಪ್ರಮುಖ ಅಂಶಗಳು: ದೇಶಪ್ರೇಮದ ಸಂಕಲ್ಪ: ದಾವಣಗೆರೆಯ ಎಂಸಿಸಿ 'ಬಿ' ಬ್ಲಾಕ್‌ನ ವೃದ್ಧಾಶ್ರಮದಲ್ಲಿ ವಾಸಿಸುತ್ತಿರುವ ಕರಿಬಸಮ್ಮ ಅವರು, ಯೋಧರಿಗೆ ಏನಾದರೂ ಕೊಡುಗೆ ನೀಡಬೇಕೆಂಬ ದೀರ್ಘಕಾಲದ ಕನಸನ್ನು ಹೊಂದಿದ್ದರು. ತಮ್ಮ ಸ್ವಂತ ಮನೆ ಮಾರಾಟ ಮಾಡಿದ ಹಣ ಮತ್ತು ಪಿಂಚಣಿಯ ಉಳಿತಾಯವನ್ನು ಸೇರಿಸಿ ಅವರು ಈ ಮೊತ್ತವನ್ನು ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಮೂಲಕ ಹಸ್ತಾಂತರ: ಅವರು ದಾವಣಗೆರೆ ಜಿಲ್ಲಾಧಿಕಾರಿ ಡಾ. ಜಿ.ಎಂ. ಗಂಗಾಧರಸ್ವಾಮಿ ಅವರನ್ನು ಭೇಟಿಯಾಗಿ 10 ಲಕ್ಷ ರೂಪಾಯಿಯ ಚೆಕ್ ಅನ್ನು ಸೈನಿಕರ ಕಲ್ಯಾಣ ನಿಧಿಗೆ ಹಸ್ತಾಂತರಿಸಿದರು. ಹಿನ್ನೆಲೆ: ಕರಿಬಸಮ್ಮ ಅವರು ದಯಾಮರಣದ (Right to Die with Dignity) ಪರವಾಗಿ ಹಲವು ವರ್ಷಗಳಿಂದ ಹೋರಾಟ ನಡೆಸುತ್ತಾ ಬಂದಿದ್ದಾರೆ. ವೈಯಕ್ತಿಕ ಆರೋಗ್ಯ ಸಮಸ್ಯೆಗಳ ನಡುವೆಯೂ ಅವರು ತೋರಿದ ಈ ದೇಶಪ್ರೇಮದ ನಡೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಇದು ಅವರ ದೇಶಪ್ರೇಮ ಮತ್ತು ತ್ಯಾಗಮನೋಭಾವಕ್ಕೆ ಸಾಕ್ಷಿಯಾಗಿದೆ.

ದಾವಣಗೆರೆಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ವಕೀಲರ ಆಗ್ರಹ

Image
 ದಾವಣಗೆರೆ: ದಾವಣಗೆರೆಯಲ್ಲಿ ಹೈಕೋರ್ಟ್ ಸಂಚಾರಿ ಪೀಠವನ್ನು ಸ್ಥಾಪಿಸಬೇಕು ಎಂದು ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಬಲವಾಗಿ ಆಗ್ರಹಿಸಿದ್ದಾರೆ. ವಕೀಲರ ಸಂಘದ ಪ್ರಮುಖ ಬೇಡಿಕೆಗಳು: ಪ್ರಯಾಣದ ಅನುಕೂಲ: ದಾವಣಗೆರೆ ಜಿಲ್ಲೆಯು ಚಿತ್ರದುರ್ಗ, ವಿಜಯನಗರ, ಬಳ್ಳಾರಿ, ಹಾವೇರಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಕೇಂದ್ರ ಬಿಂದುವಾಗಿದೆ. ಸಂಚಾರಿ ಪೀಠ ಸ್ಥಾಪನೆಯಾದರೆ ಈ ಎಲ್ಲಾ ಜಿಲ್ಲೆಗಳ ವಕೀಲರು ಮತ್ತು ಕಕ್ಷಿದಾರರಿಗೆ ಪ್ರಯಾಣದ ದೃಷ್ಟಿಯಿಂದ ಅತ್ಯಂತ ಅನುಕೂಲವಾಗುತ್ತದೆ. ಕೆಲಸದ ಒತ್ತಡ ನಿರ್ವಹಣೆ: ಸಂಚಾರಿ ಪೀಠವು ಇಲ್ಲಿ ಕಾರ್ಯನಿರ್ವಹಿಸುವುದರಿಂದ ಹೈಕೋರ್ಟ್‌ನ ಮೇಲಿರುವ ಕೆಲಸದೊತ್ತಡವನ್ನು ಗಮನಾರ್ಹವಾಗಿ ಕಡಿಮೆ ಮಾಡಬಹುದು. ಕಟ್ಟಡ ಕಾಮಗಾರಿಯ ಕುರಿತು ಅಸಮಾಧಾನ: ನಿರ್ಮಾಣ ಹಂತದಲ್ಲಿರುವ ನ್ಯಾಯಾಲಯದ ಸಂಕೀರ್ಣದ ವಿನ್ಯಾಸ (ನೀಲಿ ನಕ್ಷೆ) ಸರಿಯಾಗಿಲ್ಲ ಎಂದು ವಕೀಲರ ಸಂಘವು ಈಗಾಗಲೇ ಮನವಿ ಸಲ್ಲಿಸಿದೆ. ಆದರೂ, ಆಕ್ಷೇಪಣೆಗಳನ್ನು ಪರಿಗಣಿಸದೆ ಕಾಮಗಾರಿ ಮುಂದುವರಿಸುತ್ತಿರುವುದಕ್ಕೆ ವಕೀಲರ ಸಂಘ ಅಸಮಾಧಾನ ವ್ಯಕ್ತಪಡಿಸಿದೆ. ವಕೀಲರ ಸಲಹೆ: ದಾವಣಗೆರೆ ನಗರದ ಮಧ್ಯಭಾಗದಲ್ಲಿರುವ ಎಪಿಎಂಸಿ ಸಮೀಪದ ಹಳೇ ಪಿ.ಬಿ. ರಸ್ತೆಯ ಪಕ್ಕದಲ್ಲಿ ನ್ಯಾಯಾಲಯದ ಸಂಕೀರ್ಣವನ್ನು ನಿರ್ಮಿಸಬೇಕು ಎಂದು ವಕೀಲರು ಈ ಮೊದಲೇ ಪ್ರಸ್ತಾವನೆ ಸಲ್ಲಿಸಿದ್ದರು. ಪ್ರಸ್ತುತ ನಿರ್ಮಾಣ ಹಂತದಲ್ಲಿರುವ ಸಂಕೀರ್ಣವು ಹೆದ್ದಾರಿಗೆ ಹತ್ತಿರವಿದ್ದರೂ, ಮೂಲ ಯೋ...

ಬೆಳಗಾವಿ: 2 ಕೋಟಿ ವಿಮೆ ಹಣಕ್ಕಾಗಿ ಪ್ರಿಯಕರನ ಜತೆ ಸೇರಿ ಗಂಡನನ್ನೇ ಕೊಂದ ಮಗಳು; ಮರ್ಯಾದೆಗೆ ಅಂಜಿ ತಾಯಿ ಆತ್ಮಹತ್ಯೆ!

Image
 ಬೆಳಗಾವಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಘೋಡಗೇರಿ ಗ್ರಾಮದಲ್ಲಿ ಎರಡು ಕೋಟಿ ರೂಪಾಯಿ ವಿಮೆ ಹಣಕ್ಕಾಗಿ ಪ್ರಿಯಕರನ ಜೊತೆ ಸೇರಿ ತನ್ನ ಪತಿ, ಮಾಜಿ ಸೈನಿಕನ ಕೊಲೆ ಮಾಡಿದ್ದ ಸುಮಾ ಮಂಜರಗಿ ಸೇರಿದಂತೆ 9 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಸುಮಾ ಮಂಜರಗಿ ಬಂಧನಕ್ಕೊಳಗಾಗುತ್ತಿದ್ದಂತೆ, ಅತ್ತ ಅವರ ತಾಯಿ, ಮಗಳ ಕೃತ್ಯದಿಂದ ಆಘಾತಗೊಂಡಿದ್ದಾರೆ ಮತ್ತು ಮರ್ಯಾದೆಗೆ ಅಂಜಿ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಜಿ ಸೈನಿಕ ಸಂದೀಪ್ ಮಂಜರಗಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾದ ಸುಮಾ ಮಂಜರಗಿ ಅವರ ತಾಯಿ ಮಹಾದೇವಿ ಬದಾಮಿ(57) ಅವರು ಇಂದು ನೇಣಿಗೆ ಶರಣಾಗಿದ್ದಾರೆ.

ಬಳ್ಳಾರಿ: ತಹಶೀಲ್ದಾರ್ ಕಚೇರಿಯಲ್ಲಿ ತಾಯಿ-ಮಗನ ಲಂಚದ ಆಟ! ರೆಡ್‌ ಹ್ಯಾಂಡ್‌ ಆಗಿ ಲೋಕಾಯುಕ್ತ ಬಲೆಗೆ

Image
 ಬಳ್ಳಾರಿಯ ಸಿರುಗುಪ್ಪ ತಹಶೀಲ್ದಾರ್ ಕಚೇರಿಯಲ್ಲಿ, ಜಮೀನಿನ ಪಟ್ಟಾ ಬದಲಾವಣೆಗೆ ಪ್ರಥಮ ದರ್ಜೆ ಸಹಾಯಕಿ (FDA) ಸುವರ್ಣ ಮತ್ತು ಆಕೆಯ ಮಗ ದೀಪಕ್ ₹1,10,000 ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ದೂರುದಾರರ ದೂರಿನ ಮೇರೆಗೆ, ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ತಾಯಿ-ಮಗ ಇಬ್ಬರನ್ನೂ ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಬಳ್ಳಾರಿ: ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಯಾವ ಮಟ್ಟಕ್ಕೆ ಇಳಿದಿದೆ ಎಂಬುದಕ್ಕೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ಜಮೀನಿನ ಇನಾಮು ರದ್ದುಪಡಿಸಿ 'ಪಟ್ಟಾ' ಎಂದು ಬದಲಾಯಿಸಿಕೊಡಲು ಭಾರಿ ಮೊತ್ತದ ಲಂಚಕ್ಕೆ ಬೇಡಿಕೆಯಿಟ್ಟಿದ್ದ ತಹಶೀಲ್ದಾರ್ ಕಚೇರಿಯ ಪ್ರಥಮ ದರ್ಜೆ ಸಹಾಯಕಿ (FDA) ಮತ್ತು ಆಕೆಯ ಮಗ ಇಬ್ಬರೂ ಒಟ್ಟಿಗೇ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಸಿರುಗುಪ್ಪ ತಾಲ್ಲೂಕು ತಹಶೀಲ್ದಾರ್ ಕಚೇರಿಯ ಎಫ್‌ಡಿಎ ಸುವರ್ಣ ಮತ್ತು ಆಕೆಯ ಮಗ ದೀಪಕ್ ಲೋಕಾಯುಕ್ತ ದಾಳಿಗೆ ಸಿಲುಕಿ ಬಂಧಿತರಾದ ಭ್ರಷ್ಟರು. 7 ಎಕರೆ ಜಮೀನಿನ ಪಟ್ಟಾ ಬದಲಾವಣೆಗೆ ಲಂಚದ ಬೇಡಿಕೆ ವರದಿ ಪ್ರಕಾರ, ಸಿರುಗುಪ್ಪ ತಾಲ್ಲೂಕಿನ ಬೈರಾಪುರ ಗ್ರಾಮದ ನಿವಾಸಿಯಾದ ಗೋವಿಂದ ಎಂಬುವವರು ಈ ಪ್ರಕರಣದ ದೂರುದಾರರಾಗಿದ್ದಾರೆ. ಗೋವಿಂದ ಅವರಿಗೆ ಸೇರಿದ ಸರ್ವೇ ನಂಬರ್ 57/4/ಡಿ ನಲ್ಲಿರುವ 7 ಎಕರೆ 68 ಸೆಂಟ್ಸ್ ವಿಸ್ತೀರ್ಣದ ಜಮೀನಿನ ಪಹಣಿಯಲ್ಲಿ (RTC) 'ಇನಾಮ್' ಎಂದು ದಾಖಲಾಗಿತ್ತು. ಇದನ್ನು ರದ್ದುಪಡಿಸಿ, ನ...

ದಾವಣಗೆರೆ: ಮಾಜಿ ಸಚಿವ, ದಿವಂಗತ ಶಾಮನೂರು ಶಿವಶಂಕರಪ್ಪ ಅವರ 96ನೇ ಜನ್ಮದಿನದ ಅಂಗವಾಗಿ ನಗರದ ಎಂಬಿಎ ಕಾಲೇಜು ಮೈದಾನದಲ್ಲಿ ಬುಧವಾರ ಏರ್ಪಡಿಸಿದ್ದ ಸರ್ವಧರ್ಮ ಸಾಮೂಹಿಕ ವಿವಾಹದಲ್ಲಿ 60 ಜೋಡಿ ವಧು–ವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

Image
 ದಾವಣಗೆರೆಯ ಎಂಬಿಎ ಕಾಲೇಜು ಮೈದಾನದಲ್ಲಿ ಬುಧವಾರ ಏರ್ಪಡಿಸಿದ್ದ ಸರ್ವಧರ್ಮ ಸಾಮೂಹಿಕ ವಿವಾಹದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಧು–ವರರಿಗೆ ಸಂಸದೆ ಡಾ.ಪ್ರಭಾ ಹಾಗೂ ಶಾಸಕ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಶುಭ ಹಾರೈಸಿದರು    ದಾವಣಗೆರೆ: ಮಾಜಿ ಸಚಿವ, ದಿವಂಗತ ಶಾಮನೂರು ಶಿವಶಂಕರಪ್ಪ ಅವರ 96ನೇ ಜನ್ಮದಿನದ ಅಂಗವಾಗಿ ನಗರದ ಎಂಬಿಎ ಕಾಲೇಜು ಮೈದಾನದಲ್ಲಿ ಬುಧವಾರ ಏರ್ಪಡಿಸಿದ್ದ ಸರ್ವಧರ್ಮ ಸಾಮೂಹಿಕ ವಿವಾಹದಲ್ಲಿ 60 ಜೋಡಿ ವಧು–ವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಎಸ್‌.ಎಸ್‌. ಮಲ್ಲಿಕಾರ್ಜುನ್‌ ಅಭಿಮಾನಿ ಬಳಗ ಸಾಮೂಹಿಕ ವಿವಾಹ ಮಹೋತ್ಸವ ಆಯೋಜಿಸಿತ್ತು. ವಧು–ವರರ ಕುಟುಂಬದ ಸದಸ್ಯರು, ಸಂಬಂಧಿಕರು ಆಗಮಿಸಿದ್ದರಿಂದಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಶಾಸಕ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಹಾಗೂ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌ ನವ ದಂಪತಿಗಳನ್ನು ಹರಸಿದರು. ಮದುವೆಗೆ ಆಗಮಿಸಿದ್ದ ಸಂಬಂಧಿಕರಿಗೆ ಬೆಳಿಗ್ಗೆ ಉಪಾಹಾರ ಹಾಗೂ ಮಧ್ಯಾಹ್ನದ ಭೋಜನದ ವ್ಯವಸ್ಥೆ ಮಾಡಲಾಗಿತ್ತು. ವಧು–ವರರಿಗೆ ಕಾಲುಂಗರ, ಮಾಂಗಲ್ಯ, ಅಲ್ಮೇರಾ ಹಾಗೂ ಬಟ್ಟೆಗಳನ್ನು ಉಚಿತವಾಗಿ ನೀಡಲಾಯಿತು. ವಿಧಾನಪರಿಷತ್‌ ಚುನಾವಣೆಯ ಅಂಗವಾಗಿ ಬೆಂಗಳೂರಿನಲ್ಲಿ ಕರೆದಿರುವ ಶಾಸಕಾಂಗ ಪಕ್ಷದ ಸಭೆಯ ಮಧ್ಯೆಯೇ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಮುಖ್ಯಮಂತ್ರಿ ಅನುಮತಿ ಪಡೆದು ಬಂದಿದ್ದ ಅವರು ‘ಸಂಸಾರದಲ್ಲಿ ಪತಿ–ಪತ್ನಿಯ ನಡುವೆ ಹ...

ದಾವಣಗೆರೆ: ಜಿಮ್ ಮುಗಿಸಿ ಮನೆಗೆ ಬಂದ ಬಾಡಿ ಬಿಲ್ಡರ್ ಕುಸಿದು ಬಿದ್ದು ಸಾವು!

Image
 ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಮಾರ್ಗ ಮಧ್ಯದಲ್ಲೇ ಸುಶೀಲ್ ಸಾವನ್ನಪ್ಪಿದ್ದಾನೆ. ಲೋ ಬಿಪಿಯಾಗಿ ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಎಂದು ಹೇಳಲಾಗುತ್ತಿದೆ. ದಾವಣಗೆರೆ: ಜಿಮ್ ಮುಗಿಸಿ ಮನೆಗೆ ಮರಳಿದ್ದ ಬಾಡಿ ಬಿಲ್ಡರ್‌ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕೆಟಿಜೆ ನಗರದ ನಿವಾಸಿ ಸುಶೀಲಕುಮಾರ್ (26) ಮೃತ ಯುವಕ. ಬಾಡಿ ಬಿಲ್ಡಿಂಗ್‌‌ ಪಟುವಾಗಿದ್ದ ಇವರು ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಗಳಿಸಿದ್ದರು. ಅಂತರರಾಷ್ಟ್ರೀಯ ಮಟ್ಟದ ಬಾಡಿ ಬಿಲ್ಡಂಗ್ ಕಾಂಪಿಟೇಷನ್‌ಗೆ ರೆಡಿಯಾಗುತ್ತಿದ್ದರು.ರಾತ್ರಿ 8:30 ರ ಸುಮಾರಿಗೆ ಜಿಮ್ ಮುಗಿಸಿಕೊಂಡು ಮನೆಗೆ ಬಂದಿದ್ದ. ತಲೆ ಸುತ್ತುವುದಾಗಿ ಹೇಳಿ, ಕೆಲ ಕ್ಷಣದಲ್ಲೇ ಕುಸಿದು ಬಿದ್ದಿದ್ದಾ‌ನೆ. ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಮಾರ್ಗ ಮಧ್ಯದಲ್ಲೇ ಸುಶೀಲ್ ಸಾವನ್ನಪ್ಪಿದ್ದಾನೆ. ಲೋ ಬಿಪಿಯಾಗಿ ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಎಂದು ಹೇಳಲಾಗುತ್ತಿದೆ. ಮಂಗಳವಾರ ರಾತ್ರಿ ಜಿಮ್ ಮುಗಿಸಿ ಮನೆಗೆ ಬಂದ ಸುಶೀಲ ಕುಮಾರ್ ಊಟ ಮಾಡಿದ ಕೆಲ ಕ್ಷಣದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ

ದಾವಣಗೆರೆ: ಸಹಶಿಕ್ಷಕರು ಹಾಗೂ ಅಡುಗೆ ಸಿಬ್ಬಂದಿ ನಡುವಿನ ವಿವಾದ; ಮನನೊಂದು ಆತ್ಮಹತ್ಯೆಗೆ ಶರಣಾದ ಮುಖ್ಯ ಶಿಕ್ಷಕ ಜಯಪ್ಪ

Image
 ದಾವಣಗೆರೆ: ಹರಿಹರ ತಾಲೂಕಿನ ಕೊಕ್ಕನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಜಯಪ್ಪ (55) ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಶಾಲೆಯ ಸಹಶಿಕ್ಷಕರು ಹಾಗೂ ಅಡುಗೆ ಸಿಬ್ಬಂದಿ ನಡುವಿನ ನಿರಂತರ ಭಿನ್ನಾಭಿಪ್ರಾಯ ಮತ್ತು ವಿವಾದದಿಂದ ಮನನೊಂದು ಅವರು ಈ ನಿರ್ಧಾರ ಕೈಗೊಂಡಿದ್ದರು. ಘಟನೆಯ ಹಿನ್ನೆಲೆ ಕಳೆದ ಕೆಲ ದಿನಗಳಿಂದ ಶಾಲೆಯಲ್ಲಿ ಮುಖ್ಯ ಶಿಕ್ಷಕ ಜಯಪ್ಪ, ಸಹಶಿಕ್ಷಕರು ಮತ್ತು ಅಡುಗೆ ಸಿಬ್ಬಂದಿ ನಡುವೆ ಕೆಲಸದ ವಿಚಾರವಾಗಿ ಪದೇ ಪದೇ ಜಗಳಗಳು ನಡೆಯುತ್ತಿದ್ದವು. ಈ ಸಮಸ್ಯೆಯನ್ನು ಬಗೆಹರಿಸಲು ಸೋಮವಾರ ಶಾಲಾಭಿವೃದ್ಧಿ ಸಮಿತಿ (SDMC) ಸದಸ್ಯರು ಮತ್ತು ಗ್ರಾಮದ ಮುಖಂಡರ ನೇತೃತ್ವದಲ್ಲಿ ರಾಜೀ ಸಂಧಾನ ಸಭೆ ನಡೆಸಲಾಗಿತ್ತು. ಆದರೆ, ಸಮಸ್ಯೆ ಸಂಪೂರ್ಣವಾಗಿ ಬಗೆಹರಿಯದ ಹಿನ್ನೆಲೆಯಲ್ಲಿ, ಮಂಗಳವಾರ ಮತ್ತೊಮ್ಮೆ ಬಿಆರ್‌ಸಿ (BRC) ನೇತೃತ್ವದಲ್ಲಿ ಸಭೆ ಆಯೋಜಿಸಲಾಗಿತ್ತು. ಸಭೆ ನಡೆಯುತ್ತಿದ್ದ ಸಂದರ್ಭದಲ್ಲಿ, ಮಾನಸಿಕವಾಗಿ ನೊಂದಿದ್ದ ಮುಖ್ಯ ಶಿಕ್ಷಕ ಜಯಪ್ಪ ಅವರು ಶೌಚಾಲಯಕ್ಕೆ ತೆರಳಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ವಿಷ ಸೇವಿಸಿ ಅಸ್ವಸ್ಥರಾಗಿದ್ದ ಜಯಪ್ಪ ಅವರನ್ನು ಸ್ಥಳೀಯರು ಮತ್ತು ಶಿಕ್ಷಕರು ತಕ್ಷಣವೇ ದಾವಣಗೆರೆಯ ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ, ಚ...

ದಾವಣಗೆರೆಯಲ್ಲಿ 18 ಸಿಲಿಂಡರ್‌ಗಳ ಸ್ಫೋಟ: ಇಬ್ಬರಿಗೆ ಗಾಯ, ಅನಿಲ್ ಎಂಬಾತನ ಸ್ಥಿತಿ ಚಿಂತಾಜನಕ!

Image
 ಕಲ್ಪನಹಳ್ಳಿ ಗ್ರಾಮದ ಹೊರ ವಲಯದಲ್ಲಿರುವ ಸಿಲಿಂಡರ್‌ ಗೋದಾಮಿನಲ್ಲಿ 18ಕ್ಕೂ ಹೆಚ್ಚು ಸಿಲಿಂಡರ್ ಗಳು ಸ್ಫೋಟಗೊಂಡಿವೆ. ಈ ದುರ್ಘಟನೆಯಲ್ಲಿ ಗೋದಾಮಿನಲ್ಲಿದ್ದ ಅನಿಲ್‌ ಹಾಗೂ ಸಿಲಿಂಡರ್ ಏಜೆನ್ಸಿಯ ಸಿಬ್ಬಂದಿಗೆ ಗಂಭೀರ ಗಾಯಗಳಾಗಿವೆ. ದಾವಣಗೆರೆ: ಕಲ್ಪನಹಳ್ಳಿ ಗ್ರಾಮದ ಹೊರ ವಲಯದಲ್ಲಿರುವ ಸಿಲಿಂಡರ್‌ ಗೋದಾಮಿನಲ್ಲಿ 18ಕ್ಕೂ ಹೆಚ್ಚು ಸಿಲಿಂಡರ್ ಗಳು ಸ್ಫೋಟಗೊಂಡಿವೆ. ಈ ದುರ್ಘಟನೆಯಲ್ಲಿ ಗೋದಾಮಿನಲ್ಲಿದ್ದ ಅನಿಲ್‌ ಹಾಗೂ ಸಿಲಿಂಡರ್ ಏಜೆನ್ಸಿಯ ಸಿಬ್ಬಂದಿಗೆ ಗಂಭೀರ ಗಾಯಗಳಾಗಿವೆ. ಅನಿಲ್ ಸ್ಥಿತಿ ಚಿಂತಾಜನಕವಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಒಂದರ ನಂತರ ಒಂದರಂತೆ 18ಕ್ಕೂ ಹೆಚ್ಚು ಸಿಲಿಂಡರ್ ಗಳು ಸ್ಫೋಟಗೊಂಡಿವೆ. ಸ್ಫೋಟದ ರಭಸಕ್ಕೆ ಸಿಲಿಂಡರ್‌ಗಳು ನೂರಾರು ಅಡಿ ಎತ್ತರಕ್ಕೆ ಚಿಮ್ಮಿದ್ದವು. ದೊಗ್ಗಳ್ಳಿ ಶಿವಕುಮಾ‌ರ್ ಎಂಬುವರಿಗೆ ಸೇರಿದ ಗೋದಾಮಿನಲ್ಲಿ ಅನಿಲ್ ಸಿಲಿಂಡರ್ ಸಂಗ್ರಹಿಸಿ ವಿತರಿಸುತ್ತಿದ್ದರು ಎನ್ನಲಾಗಿದೆ. ಘಟನೆ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದರು. ಎಸ್ ಪಿ ಶೇಖರ್ ಸೇರಿದಂತೆ ಇತರ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೆಳಗಾವಿ | ವೇಶ್ಯಾವಾಟಿಕೆ ಮಹಿಳೆ ಬಂಧನ: ಯುವತಿ ರಕ್ಷಣೆ

Image
 ಬೆಳಗಾವಿ ನಗರದ ಟಿಳಕವಾಡಿ ಪ್ರದೇಶದ ನೆಹರು ರಸ್ತೆಯಲ್ಲಿರುವ ಬಹುಮಹಡಿ ಅಪಾರ್ಟ್‌ಮೆಂಟ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಯ ಮೇಲೆ ಟಿಳಕವಾಡಿ ಠಾಣೆ ಪೊಲೀಸರು ದಾಳಿ ನಡೆಸಿ, ತೆಲಂಗಾಣ ಮೂಲದ ಯುವತಿಯನ್ನು ರಕ್ಷಿಸಿ, ದಂಧೆ ನಡೆಸುತ್ತಿದ್ದ ಮಹಿಳೆಯನ್ನು ಬಂಧಿಸಿದ್ದಾರೆ. ಬಂಧಿತೆಯನ್ನು ಆಯೇಶಾ ಶಬ್ಬಿರ್ ಶೇಖ್ ಅಲಿಯಾಸ್ ರೇಷ್ಮಾ ಅಂಕಲೆವಾಲೆ (31) ಎಂದು ಗುರುತಿಸಲಾಗಿದೆ. ಆರೋಪಿತೆ ಬಾಡಿಗೆ ಮನೆಯಲ್ಲಿ ಯುವತಿಯನ್ನು ಇರಿಸಿಕೊಂಡು ಗಿರಾಕಿಗಳನ್ನು ಕರೆಸಿ ಅನೈತಿಕ ಚಟುವಟಿಕೆ ನಡೆಸುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಸಿಪಿಐ ಪರಶುರಾಮ ಪೂಜೇರಿ ನೇತೃತ್ವದಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿ ಒಳಗೊಂಡ ವಿಶೇಷ ತಂಡ ದಾಳಿ ನಡೆಸಿತು. ಕಾರ್ಯಾಚರಣೆಯ ವೇಳೆ ಯುವತಿಯನ್ನು ಸುರಕ್ಷಿತವಾಗಿ ರಕ್ಷಿಸಿ ಆರೋಪಿತೆಯನ್ನು ವಶಕ್ಕೆ ಪಡೆಯಲಾಯಿತು. ಈ ಕುರಿತು ಟಿಳಕವಾಡಿ ಪೊಲೀಸ್‌ ಠಾಣೆಯಲ್ಲಿ ಅನೈತಿಕ ಮಾನವ ಸಾಗಣೆ ತಡೆ ಕಾಯ್ದೆ 1956ರ ಕಲಂ 3, 4 ಮತ್ತು 5ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ.

ದಾವಣಗೆರೆ: ಕಳೆದುಹೋಗಿದ್ದ 50 ಗ್ರಾಂ ಚಿನ್ನದ ಪರ್ಸ್ ಪತ್ತೆ ಹಚ್ಚಿದ ಬಸವನಗರ ಪೊಲೀಸರು

Image
 ದಾವಣಗೆರೆ: ನಗರದ ಬಸವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದುಹೋಗಿದ್ದ ಸುಮಾರು 50 ಗ್ರಾಂ ಚಿನ್ನದ ಆಭರಣಗಳಿದ್ದ ಪರ್ಸ್ ಅನ್ನು ಪೊಲೀಸರು ಅತ್ಯಂತ ಚುರುಕಾಗಿ ಪತ್ತೆ ಹಚ್ಚಿ, ಅದರ ನಿಜವಾದ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಘಟನೆಯ ಹಿನ್ನೆಲೆ ಜಾಲಿನಗರದಿಂದ ರೈಲ್ವೆ ನಿಲ್ದಾಣದ ಕಡೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಮಹಿಳೆಯೊಬ್ಬರ ಪರ್ಸ್ ಕಳೆದುಹೋಗಿತ್ತು. ಈ ಕುರಿತು ಅವರು ಪೊಲೀಸರಿಗೆ ದೂರು ನೀಡಿದ್ದರು. ದೂರು ಸ್ವೀಕರಿಸಿದ ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು, ಆ ಮಾರ್ಗದ ಸಿಸಿಟಿವಿ ಕ್ಯಾಮೆರಾಗಳನ್ನು ಕೂಲಂಕುಷವಾಗಿ ಪರಿಶೀಲಿಸಿದರು. ಕಾರ್ಯಾಚರಣೆ ಪರಿಶೀಲನೆಯ ವೇಳೆ, ಶಿವಾಜಿ ಸರ್ಕಲ್ ಬಳಿ ಪರ್ಸ್ ಬಿದ್ದಿರುವುದು ಪತ್ತೆಯಾಗಿದೆ. ಸ್ಥಳೀಯ ಅಂಗಡಿ ಮಾಲೀಕರೊಬ್ಬರ ಸಹಾಯದಿಂದ ಪೊಲೀಸರು ಪರ್ಸ್ ಅನ್ನು ವಶಕ್ಕೆ ಪಡೆದುಕೊಂಡು, ಅದನ್ನು ಪರಿಶೀಲಿಸಿ ಸುರಕ್ಷಿತವಾಗಿ ಅದರ ಮಾಲೀಕರಿಗೆ ಹಿಂದಿರುಗಿಸಿದ್ದಾರೆ. ಕಳೆದುಕೊಂಡಿದ್ದ ಬೆಲೆಬಾಳುವ ವಸ್ತುಗಳನ್ನು ಮರಳಿ ಪಡೆದ ವಾರಸುದಾರರು ಪೊಲೀಸರ ಕಾರ್ಯಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.

ದಾವಣಗೆರೆ: ವಿದ್ಯಾನಗರ ಪೊಲೀಸರ ಕಾರ್ಯಾಚರಣೆ; 42 ಲಕ್ಷ ರೂ. ಮೌಲ್ಯದ ಕಳವು ಸ್ವತ್ತು ವಶ

Image
 ದಾವಣಗೆರೆ: ನಗರದ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ವಿವಿಧ ಅಪರಾಧ ಪ್ರಕರಣಗಳನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಸುಮಾರು 42 ಲಕ್ಷ ರೂಪಾಯಿ ಮೌಲ್ಯದ ಕಳವು ಸ್ವತ್ತನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯ ವಿವರ ನಗರದಲ್ಲಿ ಇತ್ತೀಚೆಗೆ ನಡೆದಿದ್ದ ಕಳ್ಳತನ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳ ಬಗ್ಗೆ ದೂರುಗಳು ದಾಖಲಾಗಿದ್ದವು. ಈ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಶೇಖರ್ ಅವರು, ಆರೋಪಿಗಳನ್ನು ಪತ್ತೆ ಹಚ್ಚಲು ವಿಶೇಷ ತಂಡಗಳನ್ನು ರಚಿಸಿದ್ದರು. ತೀವ್ರ ತನಿಖೆ ನಡೆಸಿದ ಪೊಲೀಸ್ ತಂಡವು ಯಶಸ್ವಿಯಾಗಿ ಆರೋಪಿಗಳನ್ನು ಪತ್ತೆ ಹಚ್ಚಿದ್ದು, ಅವರಿಂದ ದೊಡ್ಡ ಮೊತ್ತದ ಸೊತ್ತನ್ನು ವಶಪಡಿಸಿಕೊಳ್ಳುವಲ್ಲಿ ಸಫಲವಾಗಿದೆ. ಈ ಕಾರ್ಯಾಚರಣೆಯ ಕುರಿತು ಸ್ವತಃ ಎಸ್ಪಿ ಶೇಖರ್ ಅವರು ಮಾಹಿತಿ ನೀಡಿದ್ದು, ಪೊಲೀಸರ ಕಾರ್ಯವೈಖರಿಯನ್ನು ಶ್ಲಾಘಿಸಿದ್ದಾರೆ.

ಸಾರ್ವಜನಿಕರೇ ಭಯಬೇಡ, ನಾವಿದ್ದೇವೆ.ರಾತ್ರಿಪೂರ ಓಣಿ ಓಣಿ ಗಸ್ತು ತಿರುಗಿದ ಪೊಲೀಸ್ ಅಧಿಕಾರಿಗಳು

Image
 ಕೂಡ್ಲಿಗಿ.ಜೂ. 8 :- ಪಟ್ಟಣದಲ್ಲಿ ಮುಸುಕುಧರಿಸಿದ ಕಳ್ಳರು ಓಡಾಡುತ್ತಿದ್ದಾರೆ ಎನ್ನುವ ವಿಡಿಯೋ ವೈರಲ್ ಆಗಿದ್ದರಿಂದ ಸಾರ್ವಜನಿಕರಲ್ಲಿ ಭಯಹುಟ್ಟಿಸಿದ ವಾತಾವರಣ ನಿರ್ಮಾಣವಾಗಿದ್ದು ಇದನ್ನರಿತ ಕೂಡ್ಲಿಗಿ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ ಸೇರಿದಂತೆ ಉಪವಿಭಾಗದ ಸಿಪಿಐ ಹಾಗೂ ಪಿಎಸ್ಐಗಳು ರಾತ್ರಿಪೂರ ಓಣಿ ಓಣಿಗಳಲ್ಲಿ ನಡೆದುಕೊಂಡು ರಾತ್ರಿಪೂರ ಗಸ್ತು ನಡೆಸಿದರು. ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾನಾಮಡುಗಿನಲ್ಲಿ ಎರಡು -ಮೂರು ಮನೆಗಳು ಕಳ್ಳತನವಾಗಿವೆ ಎನ್ನುವ ಸುದ್ದಿ ಹರಡಿತ್ತು ಆದರೆ ಇದರ ಕುರಿತಂತೆ ಯಾವುದೇ ಪ್ರಕರಣ ದಾಖಲಾಗಿರಲಿಲ್ಲ ಈ ಸುದ್ದಿಯ ಬೆನ್ನಲ್ಲೇ ಕೂಡ್ಲಿಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಮನೆಗಳ ಹತ್ತಿರ ಮುಖಕ್ಕೆ ಮುಸುಕು ಧರಿಸಿಕೊಂಡ ವ್ಯಕ್ತಿಗಳು ಸುತ್ತಾಡುತ್ತಿದ್ದಾರೆ ಎನ್ನುವ ಕೆಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಪಟ್ಟಣದಲ್ಲಿ ವಿಂಡ್ ಫ್ಯಾನ್ ಹಾಗೂ ಸೋಲಾರ್ ಕಂಪನಿಯಲ್ಲಿ ಕೆಲಸ ಮಾಡುವ ಅಂತಾರಾಜ್ಯ ಕೂಲಿ ಕಾರ್ಮಿಕರಿರಬಹುದು ಎಂದು ಪೊಲೀಸರು ಅಂದಾಜಿಸುವ ಮೂಲಕ ಕಳ್ಳ ಕಾಕರರ ಭಯ ಹೆಚ್ಚಾಗುತ್ತಿದ್ದಂತೆ ಕಂಡು ಬರುತ್ತಿರುವುದನ್ನ ಕಂಡ ಪೊಲೀಸರು ಕೂಡ್ಲಿಗಿ ಡಿವೈಎಸ್ಪಿ ಮಲ್ಲೇಶ ದೊಡ್ಡಮನಿ ನೇತೃತ್ವದಲ್ಲಿಕೂಡ್ಲಿಗಿ, ಕೊಟ್ಟೂರು ಹಾಗೂ ಹಗರಿಬೊಮ್ಮನಹಳ್ಳಿ ಸಿಪಿಐಗಳು ಮತ್ತು ಕೂಡ್ಲಿಗಿ, ಗುಡೇಕೋಟೆ, ಹೊಸಹಳ್ಳಿ, ಕೊಟ್ಟೂರು, ಹಗರಿಬೊಮ್ಮನಹಳ್ಳಿ ಹಾಗೂ ಮರಿಯಮ್ಮನಹಳ...

ಶಾಲೆ ಫೀಸ್‌ ಕಟ್ಟಿ ಓದಿಸಿದ್ದ ಶಿಕ್ಷಕನಿಗೆ ಹೊಸ ಕಾರು ಗಿಫ್ಟ್‌ ಕೊಟ್ಟ ಶಿಷ್ಯ! ಮೂಕವಿಸ್ಮಿತನಾದೆ ಎಂದ ವಸ್ತ್ರದ್ ಸರ್‌

Image
 ಹಾವೇರಿ ಜಿಲ್ಲೆಯ ಹಾನಗಲ್‌ನ ಕುಮಾರೇಶ್ವರ ಹೈಸ್ಕೂಲ್‌ನ ನಿವೃತ್ತ ಶಿಕ್ಷಕ ಸಿ.ಎಸ್. ವಸ್ತ್ರದ್ ಅವರಿಗೆ ಹಳೆಯ ವಿದ್ಯಾರ್ಥಿ ನವೀನ್ ಹೊಸ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ಬಾಲ್ಯದಲ್ಲಿ ತಂದೆಯನ್ನು ಕಳೆದುಕೊಂಡು ಬಡತನದಲ್ಲಿದ್ದ ನವೀನ್‌ಗೆ ವಸ್ತ್ರದ್ ಸರ್ ತಂದೆಯಂತೆ ಆಸರೆಯಾಗಿ ಶಿಕ್ಷಣ ಕೊಡಿಸಿದ್ದರು. ಇದೀಗ ಉನ್ನತ ಹುದ್ದೆಯಲ್ಲಿರುವ ನವೀನ್, ಗುರುವಿನ ಬೀಳ್ಕೊಡುಗೆ ಸಮಾರಂಭದಲ್ಲಿ ಕಾರು ನೀಡುವ ಮೂಲಕ ಭಾವನಾತ್ಮಕವಾಗಿ ಋಣ ಸಂದಾಯ ಮಾಡಿ ಆದರ್ಶ ಮೆರೆದಿದ್ದಾರೆ ಹಾವೇರಿ (ಹಾನಗಲ್): ಶಿಕ್ಷಕ ವೃತ್ತಿ ಕೇವಲ ನಾಲ್ಕು ಗೋಡೆಗಳ ನಡುವೆ ಪಾಠ ಹೇಳುವುದಕ್ಕಷ್ಟೇ ಸೀಮಿತವಲ್ಲ. ಅದು ನಿಸ್ವಾರ್ಥತೆಯಿಂದ ವಿದ್ಯಾರ್ಥಿಗಳ ಬದುಕನ್ನು ರೂಪಿಸುವ ತಪಸ್ಸು. ಹಾವೇರಿ ಜಿಲ್ಲೆಯ ಹಾನಗಲ್‌ನ ಕುಮಾರೇಶ್ವರ ಹೈಸ್ಕೂಲ್‌ನ ನಿವೃತ್ತ ಶಿಕ್ಷಕ ಸಿ.ಎಸ್. ವಸ್ತ್ರದ್ ಅವರ ಬೀಳ್ಕೊಡುಗೆ ಸಮಾರಂಭ ಈ ಮಾತಿಗೆ ಜೀವಂತ ಸಾಕ್ಷಿಯಾಯಿತು. ಕಣ್ಣೀರು ತರಿಸುವ ಹಿನ್ನೆಲೆ 2007ನೇ ಸಾಲಿನ ಎಸ್‌ಎಸ್‌ಎಲ್‌ಸಿ ಬ್ಯಾಚ್‌ನ ವಿದ್ಯಾರ್ಥಿ ನವೀನ್ ಹುಲಿಹಳ್ಳಿ ಅವರು ತಮ್ಮ ಗುರುವಿಗೆ ಕೃತಜ್ಞತೆಯ ಕಾಣಿಕೆಯಾಗಿ 'ಮಾರುತಿ ಸುಜುಕಿ ಸ್ವಿಫ್ಟ್' ಕಾರನ್ನು ಉಡುಗೊರೆಯಾಗಿ ನೀಡಿದರು. ಈ ಉಡುಗೊರೆಯ ಹಿಂದಿರುವ ಕಥೆ ಎಂಥವರ ಕಣ್ಣಲ್ಲೂ ನೀರು ತರಿಸುತ್ತದೆ. ಸದ್ಯ ಬೆಂಗಳೂರಿನ ಪ್ರತಿಷ್ಠಿತ ಎಂಎನ್‌ಸಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿರುವ ನವೀನ್, ಬಾಲ್ಯದಲ್ಲೇ ತಂದೆಯನ್ನು ಕಳೆದುಕೊಂಡು ಬ...

SHOCKING : ದಾವಣಗೆರೆಯಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್ ಶಂಕೆ ; 10 ಮಂದಿ ಯುವಕರು ಅರೆಸ್ಟ್ .!

Image
 ಕೂಲ್ ಡ್ರಿಂಕ್ಸ್‌ನಲ್ಲಿ ಮದ್ಯ ಬೆರೆಸಿ ಅತ್ಯಾಚಾರ, 10 ಮಂದಿ ಅರೆಸ್ಟ್ ದಾವಣಗೆರೆ: ಪತಿಯೊಂದಿಗೆ ಜಗಳವಾಡಿ ತವರಿಗೆ ತೆರಳುತ್ತಿದ್ದ ಮಹಿಳೆಯ ಮೇಲೆ ದುರುಳರು ಸಾಮೂಹಿಕ ಅತ್ಯಾಚಾರವೆಸಗಿದ (Gang Rape) ಘಟನೆ ದಾವಣಗೆರೆ (Davanagere) ಜಿಲ್ಲೆಯ ಚನ್ನಗಿರಿ (Channagiri) ತಾಲೂಕಿನ ಬಸವಾ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 41 ವರ್ಷದ ಮಹಿಳೆಯ ಮೇಲೆ ದುರುಳರು ಅತ್ಯಾಚಾರವೆಸಗಿದ್ದಾರೆ. ಜೂನ್ 3ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಇಂದು ದೂರು ದಾಖಲಿಸಲಾಗಿದೆ. ಮಹಿಳೆ ಪತಿ ಜೊತೆ ಜಗಳವಾಡಿ ತವರಿಗೆ ಹೊರಟ್ಟಿದ್ದರು. ಈ ವೇಳೆ ಹಂದಿ ಬೇಟೆಗೆ ತೆರಳಿದ್ದ ಯುವಕರು ಮಹಿಳೆಯನ್ನು ಗಮನಿಸಿ, ಸುಸ್ತಾಗಿದಿಯಾ ಕೂಲ್ ಡ್ರಿಂಕ್ಸ್ ಕುಡಿ ಅಕ್ಕ ಎಂದು ಕೂಲ್ ಡ್ರಿಂಕ್ಸ್ನಲ್ಲಿ ಮದ್ಯ ಬೆರೆಸಿ ಕುಡಿಸಿದ್ದರು. ಬಳಿಕ ತೋಟಕ್ಕೆ ಕರೆದುಕೊಂಡು ಹೋಗಿ ಹತ್ತು ಜನ ಯುವಕರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ರಾತ್ರಿಯಿಂದ ಮುಂಜಾನೆಯವರೆಗೂ ಯುವಕರ ಗುಂಪು ವಿಕೃತಿ ಮೆರೆದಿತ್ತು. ಬಳಿಕ ಬೆತ್ತಲೆ ಫೋಟೋ, ವೀಡಿಯೋ ಮಾಡಿಕೊಂಡು ಆರೋಪಿಗಳು ವಿಕೃತ ಸಂತೋಷಪಟ್ಟಿದ್ದರು. ಅಲ್ಲದೇ ಫೋಟೋ ಹಾಗೂ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಘಟನೆ ಬಳಿಕ ಗ್ರಾಮದಲ್ಲಿ ಗುಸುಗುಸು ಚರ್ಚೆ ಆರಂಭವಾಗಿ, ಪ್ರಕರಣ ಗಂಭೀರವಾಗುತ್ತಿದ್ದಂತೆ ಆರೋಪಿಗಳು ವೀಡಿಯೋ ಡಿಲೀಟ್ ಮಾಡಿದ್ದಾರೆ. ಇತ್ತ ಘಟನೆ ಸಂಬಂಧ ಸಂತ್ರಸ್ತೆ ಬಸವ...

ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸ್‌ಗೆ ಸಿಕ್ಕಿ ಬಿದ್ದ ಅಧಿಕಾರಿಗಳು

Image
 ವಿಜಯಪುರ ಜಿಲ್ಲೆಯ ಸಾಲೋಟಗಿಯಲ್ಲಿ ಲಂಚ ಪಡೆಯುತ್ತಿದ್ದಾಗಲೇ ಇಬ್ಬರು ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಅಧಿಕಾರಿಗಳು ಕೆಬಿಜೆಎನ್‌ಎಲ್ ಕೆನಾಲ್‌ನ 3,71,419 ರೂ. ಬಿಲ್ ಪಾವತಿಗಾಗಿ 18 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ. ಕೆಬಿಜೆಎನ್‌ಎಲ್ ಉಪವಿಭಾಗ ನಂಬರ್ ಒಂದರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಸೇವುಲಾಲ್ ಚವ್ಹಾಣ 10 ಸಾವಿರ ರೂ.ಗೆ ಹಾಗೂ ಇನ್ನೊಂದು ಉಪವಿಭಾಗದ ಕಿರಿಯ ಅಭಿಯಂತರ ಸಾತಲಿಂಗಪ್ಪ ರೂಡಗಿ 8 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ನಾನಾಸಾಹೇಬ್ ರೂಡಗಿ ದೂರು ನೀಡಿದ್ದರು. ದೂರು ಆಧರಿಸಿ ಕಾರ್ಯಪ್ರವೃತ್ತರಾದ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಇಬ್ಬರು ಲಂಚಕೋರ ಅಧಿಕಾರಿಗಳನ್ನು ಲಂಚದ ಹಣ ಸಮೇತ ಬಂಧಿಸಿದ್ದಾರೆ. ಸಂಬಂಧ ವಿಜಯಪುರ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ವಿಜಯನಗರ: ಬೀಗ ಹಾಕಿದ ಮನೆಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಅಂತಾರಾಜ್ಯ ಕಳ್ಳರ ಬಂಧನ; 6 ಲಕ್ಷ ಮೌಲ್ಯದ ಚಿನ್ನ ಜಪ್ತಿ

Image
 ಕೊಟ್ಟೂರು: ವಿಜಯನಗರ ಜಿಲ್ಲೆಯ ಕೊಟ್ಟೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೀಗ ಹಾಕಿದ ಮನೆಗಳನ್ನೇ ಗುರಿಯಾಗಿಸಿಕೊಂಡು ಸರಣಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಕಳ್ಳರ ತಂಡವನ್ನು ಕೊಟ್ಟೂರು ಪೊಲೀಸರು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕಾರ್ಯಾಚರಣೆಯ ವಿವರ ಆರೋಪಿಗಳಿಂದ ಅಂದಾಜು 6 ಲಕ್ಷ ರೂಪಾಯಿ ಮೌಲ್ಯದ ಒಟ್ಟು 50 ಗ್ರಾಂ ಚಿನ್ನದ ಆಭರಣಗಳು ಮತ್ತು 20 ಸಾವಿರ ರೂಪಾಯಿ ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳು ಬಂಧಿತರು ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಭಾಗ್ಯನಗರ ಗುಂತಕಲ್ಲು ಪಟ್ಟಣದವರಾಗಿದ್ದು, ಅವರ ವಿವರ ಹೀಗಿದೆ: ಶಿಕಾರಿ ಮದ್ದಲಟ್ಟಿ @ ಮದನ್ (30 ವರ್ಷ) ಗಣೇಶ (20 ವರ್ಷ) ಬಾಲಚಂದ್ರ (20 ವರ್ಷ) ಪಗಲಿ @ ಅಶೋಕ್ (30 ವರ್ಷ) ದಿನಾಂಕ: 21-05-2026 ರಂದು ಕೊಟ್ಟೂರು ಪಟ್ಟಣದ ರೇಣುಕಾ ಬಡಾವಣೆಯಲ್ಲಿ ಆರೋಪಿಗಳು ಕಳ್ಳತನ ನಡೆಸಿದ್ದರು. ತನಿಖಾ ತಂಡ ಈ ಯಶಸ್ವಿ ಕಾರ್ಯಾಚರಣೆಯನ್ನು ಕೂಡ್ಲಿಗಿ ಡಿ.ವೈ.ಎಸ್.ಪಿ ಶ್ರೀ ಮಲ್ಲೇಶ ದೊಡ್ಮನಿ ಅವರ ಮಾರ್ಗದರ್ಶನದಲ್ಲಿ, ಕೊಟ್ಟೂರು ವೃತ್ತದ ಸಿ.ಪಿ.ಐ ಶ್ರೀ ಡಿ.ದುರುಗಪ್ಪ ಅವರ ನೇತೃತ್ವದಲ್ಲಿ, ಪಿ.ಎಸ್.ಐ (ಕಾ&ಸು) ಶ್ರೀಮತಿ ಗೀತಾಂಜಲಿ.ಸಿಂಧೆ ಮತ್ತು ಕೊಟ್ಟೂರು ಪೊಲೀಸ್ ಠಾಣೆಯ ಸಿಬ್ಬಂದಿಗಳು ನಿರ್ವಹಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ತಂಡ...

ಇನ್ಮುಂದೆ ಎಲ್ಲಾ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ 10 ಗಂಟೆಯೊಳಗೆ ಕಚೇರಿಯಲ್ಲಿಬೇಕು: CM ಡಿಕೆಶಿ ಖಡಕ್ ಸೂಚನೆ

Image
 ಮುಖ್ಯಮಂತ್ರಿಗಳ ಸೂಚನೆ ಮೇರೆಗೆ, ಪ್ರತಿಯೊಬ್ಬ ಸರ್ಕಾರಿ ಅಧಿಕಾರಿ, ಸಿಬ್ಬಂದಿ ಇನ್ಮುಂದೆ ಬೆಳಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಗೆ ಹಾಜರಾಗಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಬೆಂಗಳೂರು: ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಮಾರನೇ ದಿನವೇ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ್ದು, ಇನ್ಮುಂದೆ ಎಲ್ಲಾ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಬೆಳಗ್ಗೆ 10 ಗಂಟೆಯೊಳಗೆ ಕಚೇರಿಯಲ್ಲಿಬೇಕು ಎಂದು ಖಡಕ್ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಸೂಚನೆ ಮೇರೆಗೆ, ಪ್ರತಿಯೊಬ್ಬ ಸರ್ಕಾರಿ ಅಧಿಕಾರಿ, ಸಿಬ್ಬಂದಿ ಇನ್ಮುಂದೆ ಬೆಳಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಗೆ ಹಾಜರಾಗಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ. ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕ ಆಡಳಿತ ತರುವ ಉದ್ದೇಶದೊಂದಿಗೆ ಬಯೋಮೆಟ್ರಿಕ್‌ ವ್ಯವಸ್ಥೆ ಬದಲಾಗಿ ಕೃತಕ ಬುದ್ಧಿಮತ್ತೆ(AI) ಮತ್ತು ಜಿಪಿಎಸ್‌ ಆಧರಿತ ಹಾಜರಾತಿಯನ್ನ ಕಡ್ಡಾಯಗೊಳಿಸಿದೆ. ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್‌ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ. ಆದೇಶದಲ್ಲಿ ಏನಿದೆ? ಮುಖ್ಯಮಂತ್ರಿಗಳು ಜೂನ್‌ 4 ರಂದು ನಡೆದ ಸಭೆಯಲ್ಲಿ, ರಾಜ್ಯ ಸರ್ಕಾರದ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂ...

ದಾವಣಗೆರೆಯಲ್ಲಿ ಶಂಕಿತ ಉಗ್ರನ ಬಂಧನ: ಉಗ್ರರ ಜೊತೆ ನಿರಂತರ ಸಂಪರ್ಕ, ಗುಪ್ತಚರ ಇಲಾಖೆ ಮಾಹಿತಿ

Image
 ದೇಶದಲ್ಲಿ ಭಯೋತ್ಪಾದಕ ಸಂಚು ರೂಪಿಸುತ್ತಿದ್ದ ದಾವಣಗೆರೆಯ ವ್ಯಕ್ತಿಯನ್ನು ತುಮಕೂರು ಪೊಲೀಸರು ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ನಿರಂತರವಾಗಿ ಉಗ್ರರ ಸಂಪರ್ಕದಲ್ಲಿದ್ದ, ಅಲ್ಲದೆ ದೇಶದಲ್ಲಿ ಸಂಚು ನಡೆಸಲು ತುಮಕೂರಿನ ಬಂಧಿತ ವ್ಯಕ್ತಿ, ಶಂಕಿತ ಉಗ್ರ ಅಲ್ಲಾ ಭಕ್ಷ್ ಜೊತೆಗೆ ಸಂಪರ್ಕದಲ್ಲಿದ್ದು, ಇದೀಗ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ: ಭಾರತದಲ್ಲಿ ವಿದ್ವಂಸಕ ಕೃತ್ಯ ನಡೆಸಲು ಸಜ್ಜಾಗಿದ್ದ ಶಂಕಿತ ಭಯೋತ್ಪಾದಕನೊಬ್ಬನನ್ನು ತುಮಕೂರು ಪೊಲೀಸರು ದಾವಣಗೆರೆಯ ರೈಲ್ವೆ ನಿಲ್ದಾಣದಲ್ಲಿ ಗುರುವಾರ ಬಂಧಿಸಿ ತಮಕೂರಿಗೆ ಕರೆದೊಯ್ದು ವಿಚಾರಣೆ ಆರಂಭಿಸಿದ್ದಾರೆ. ದಾವಣಗೆರೆಯ ಬಿಡಿ ಲೇಔಟ್‌ನ ಜಮೀರ್ ಖಾನ್ (22) ಬಂಧಿತ ಶಂಕಿತ ಉಗ್ರನಾಗಿದ್ದಾನೆ. ಈತ ಐಎಸ್‌ಎಸ್ ಫಂಡಿಂಗ್ ಮಾಡುತ್ತಿದ್ದ ಉಗ್ರರಾದ ಶಾಬಾಸ್ ಭುಟ್ಟಿ ಹಾಗೂ ರಾಣಾ ಉನೇನ್ ಜೊತೆ ನಿರಂತರ ಸಂಪರ್ಕದಲ್ಲಿದ್ದ. ಈ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. ಇದನ್ನಾಧರಿಸಿ ತುಮಕೂರು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ವಾಟ್ಸಾಪ್, ಇನ್ಸ್ಟಾಗ್ರಾಂ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ನಿರಂತರವಾಗಿ ಉಗ್ರರ ಸಂಪರ್ಕದಲ್ಲಿದ್ದ. ದೇಶದಲ್ಲಿ ಸಂಚು ನಡೆಸಲು ಭಾರತದ ಮುಸ್ಲಿಂ ಯುವಕರನ್ನು ಬಳಕೆ ಮಾಡಿಕೊಂಡು ಐಎಸ್‌ಎಸ್ ಭಯೋತ್ಪಾದಕ ಸಂಘಟನೆ ವಿಸ್ತರಿಸಲು ಸಂಚು ರೂಪಿಸಿದ್ದ. ಈತ ಹಾಗೂ ತಮಕೂರಿನಲ್ಲಿ ಬಂಧಿತನಾಗಿರುವ ಶಂಕಿತ ಉಗ್ರ ಅಲ್ಲಾಭಕ್ಷ್ ಗೆ ಉಗ್ರರು ಮುಂ...

ಕರ್ನಾಟಕದಲ್ಲಿ ಸದ್ದಿಲ್ಲದೆ ನಡೀತಿದೆಯಾ ಅಕ್ರಮ ಲೇಔಟ್ ದಂಧೆ? RERA ನಿಯಮ ಗಾಳಿಗೆ ತೂರಿದ ಬಿಲ್ಡರ್ಸ್; ಗ್ರಾಹಕರೇ ಎಚ್ಚರ!

Image
  ಬೆಂಗಳೂರು: ರಾಜ್ಯಾದ್ಯಂತ ಇತ್ತೀಚಿನ ದಿನಗಳಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ಗಗನಕ್ಕೇರಿದೆ. ಆದರೆ ಇದೇ ತರಾತುರಿಯಲ್ಲಿ ಸಾರ್ವಜನಿಕರನ್ನು ವಂಚಿಸಲು ಕೆಲವು ಬಿಲ್ಡರ್‌ಗಳು ಮತ್ತು ಪ್ರವರ್ತಕರು (Promoters) ಅಡ್ಡಹಾದಿ ಹಿಡಿದಿರುವುದು ಮಾಧ್ಯಮದ ತನಿಖೆಯಿಂದ ಬೆಳಕಿಗೆ ಬಂದಿದೆ. ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (RERA) ಕಡ್ಡಾಯವಾಗಿ ಜಾರಿಯಲ್ಲಿದ್ದರೂ, ರಾಜ್ಯದ ಹಲವು ಜಿಲ್ಲೆಗಳಲ್ಲಿ RERA ನಿಯಮಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಿ ಬಡಾವಣೆಗಳನ್ನು (Layouts) ನಿರ್ಮಿಸಲಾಗುತ್ತಿದೆ. RERA ಅರ್ಜಿ ತಿರಸ್ಕೃತಗೊಂಡರೂ ಸೈಟ್ ಮಾರಾಟ! ಯಾವುದೇ ಹೊಸ ಲೇಔಟ್ ಅಥವಾ ಅಪಾರ್ಟ್‌ಮೆಂಟ್ ನಿರ್ಮಾಣ ಮಾಡಬೇಕಾದರೆ RERA ಪ್ರಾಧಿಕಾರದಿಂದ ಅಧಿಕೃತ ನೋಂದಣಿ ಸಂಖ್ಯೆ (RERA Registration Number) ಪಡೆಯುವುದು ಕಾನೂನುಬದ್ಧವಾಗಿ ಕಡ್ಡಾಯವಾಗಿದೆ. ಆದರೆ ಕರ್ನಾಟಕದ ಕೆಲವು ಪ್ರಮುಖ ಬಿಲ್ಡರ್‌ಗಳು ಸಲ್ಲಿಸಿದ್ದ ಅರ್ಜಿಗಳನ್ನು تಾಂತ್ರಿಕ ಲೋಪದೋಷ ಅಥವಾ ಸೂಕ್ತ ದಾಖಲೆಗಳಿಲ್ಲದ ಕಾರಣಕ್ಕಾಗಿ RERA ಪ್ರಾಧಿಕಾರವು ಈಗಾಗಲೇ ತಿರಸ್ಕರಿಸಿದೆ (Rejected) . ಆದರೆ, ಈ ಕಹಿ ಸತ್ಯವನ್ನು ಸಾರ್ವಜನಿಕರಿಂದ ಮುಚ್ಚಿಟ್ಟು, "ನಮ್ಮದು ಪಕ್ಕಾ ಅಪ್ರೂವ್ಡ್ ಲೇಔಟ್" ಎಂದು ಸುಳ್ಳು ನುಡಿದು ಕೋಟ್ಯಂತರ ರೂಪಾಯಿಗಳಿಗೆ ಸೈಟ್‌ಗಳನ್ನು ಬುಕಿಂಗ್ ಮಾಡಿಕೊಳ್ಳಲಾಗುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ರೇರಾ ಬಗ್ಗೆ ಬಿಲ್ಡ...

KPME ಕಾಯ್ದೆ ಉಲ್ಲಂಘಿಸುವ ಕ್ಲಿನಿಕ್, ಆಸ್ಪತ್ರೆಗಳಿಗೆ ಗಂಡಾಂತರ; ನಿಯಮ ಮೀರಿದರೆ ಗರಿಷ್ಠ ₹5 ಲಕ್ಷ ದಂಡ ಹಾಗೂ 3 ವರ್ಷ ಜೈಲು ಶಿಕ್ಷೆ!

Image
  KPME ಕಾಯ್ದೆ ಉಲ್ಲಂಘಿಸುವ ಕ್ಲಿನಿಕ್, ಆಸ್ಪತ್ರೆಗಳಿಗೆ ಗಂಡಾಂತರ; ನಿಯಮ ಮೀರಿದರೆ ಗರಿಷ್ಠ ₹5 ಲಕ್ಷ ದಂಡ ಹಾಗೂ 3 ವರ್ಷ ಜೈಲು ಶಿಕ್ಷೆ! ರಾಜ್ಯಾದ್ಯಂತ ಇತ್ತೀಚಿನ ದಿನಗಳಲ್ಲಿ ಖಾಸಗಿ ಕ್ಲಿನಿಕ್‌ಗಳು, ಡಯಾಗ್ನೋಸ್ಟಿಕ್ ಸೆಂಟರ್‌ಗಳು ಹಾಗೂ ಆಸ್ಪತ್ರೆಗಳ ಹಾವಳಿ ಹೆಚ್ಚಾಗುತ್ತಿದೆ. ಆದರೆ, ಸಾರ್ವಜನಿಕರ ಜೀವದ ಜೊತೆ ಆಟವಾಡುವ ಇಂತಹ ವೈದ್ಯಕೀಯ ಸಂಸ್ಥೆಗಳು ಕಡ್ಡಾಯವಾಗಿ KPME (Karnataka Private Medical Establishments Act) ಕಾಯ್ದೆಯಡಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಒಂದು ವೇಳೆ ಈ ನಿಯಮವನ್ನು ಉಲ್ಲಂಘಿಸಿದರೆ ಕಾನೂನಿನ ಅಡಿಯಲ್ಲಿ ಅತ್ಯಂತ ಕಠಿಣ ಶಿಕ್ಷೆ ಮತ್ತು ಭಾರಿ ದಂಡ ವಿಧಿಸಲು ಕಾಯ್ದೆಯಲ್ಲಿ ಗಟ್ಟಿಯಾದ ಅವಕಾಶವಿದೆ. ಏನಿದು KPME ಕಾಯ್ದೆ? ಕರ್ನಾಟಕದಲ್ಲಿ ಸಾರ್ವಜನಿಕರಿಗೆ ಗುಣಮಟ್ಟದ ವೈದ್ಯಕೀಯ sevi ಸಿಗಬೇಕು ಮತ್ತು ಖಾಸಗಿ ಆಸ್ಪತ್ರೆಗಳ ಲೂಟಿಗೆ ಬ್ರೇಕ್ ಹಾಕಬೇಕು ಎಂಬ ಉದ್ದೇಶದಿಂದ ಸರ್ಕಾರ 'ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆ' (KPME) ಯನ್ನು ಜಾರಿಗೆ ತಂದಿದೆ. ರಾಜ್ಯದಲ್ಲಿ ಪ್ರಾಕ್ಟಿಸ್ ಮಾಡುವ ಪ್ರತಿಯೊಬ್ಬ ಖಾಸಗಿ ವೈದ್ಯರು, ಕ್ಲಿನಿಕ್, ನರ್ಸಿಂಗ್ ಹೋಮ್ ಅಥವಾ ಲ್ಯಾಬ್‌ಗಳು ಈ ಕಾಯ್ದೆಯಡಿ ಆರೋಗ್ಯ ಇಲಾಖೆಯಲ್ಲಿ ಕಡ್ಡಾಯವಾಗಿ ನೋಂದಣಿ (Registration) ಮಾಡಿಕೊಳ್ಳಬೇಕು ಮತ್ತು ಪ್ರತಿ ಐದು ವರ್ಷಕ್ಕೊಮ್ಮೆ ಅದನ್ನು ನವೀಕರಣ (Renewal) ಮಾಡಿಸುವುದು ಕಡ್ಡಾಯ .ಪ್ರಸ್ತುತ ಜಾರಿ...

ಕಾಮಗಾರಿ ನಡೆಸದೇ ಐದು ಕೋಟಿ ರೂಪಾಯಿ ಗುಳುಂ!: ಲೋಕಾಯುಕ್ತ ಪೊಲೀಸರ ತನಿಖೆಯಲ್ಲಿ ಬಯಲು

Image
 Lokayukta Case-ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ (ಕೆಆರ್‌ಐಡಿಎಲ್‌) 100 ಕೋಟಿ ರೂ.ಗಳಿಗೂ ಅಧಿಕ ಮೊತ್ತದ ಹಗರಣದ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಪೊಲೀಸರು, ಕಾಮಗಾರಿ ನಡೆಸದೆಯೇ ನಕಲಿ ದಾಖಲೆ ಸೃಷ್ಟಿಸಿ 5 ಕೋಟಿ ರೂ. ಅನುದಾನ ಬಿಡುಗಡೆ ಮಾಡಿರುವುದನ್ನು ಪತ್ತೆ ಹಚ್ಚಿದ್ದಾರೆ. ಪ್ರಕರಣದಲ್ಲಿ ಅಬ್ದುಲ್ ರಹೀಮ್ ಸೇರಿದಂತೆ ನಾಲ್ವರು ಅಧಿಕಾರಿಗಳನ್ನು ಆರೋಪಿಗಳನ್ನಾಗಿ ಪರಿಗಣಿಸಲಾಗಿದ್ದು, ಅಕ್ರಮದಲ್ಲಿ ಭಾಗಿಯಾದ ಗುತ್ತಿಗೆದಾರರಿಗೂ ನೋಟಿಸ್ ನೀಡಲಾಗಿದೆ. ಕಮಿಷನ್ ವ್ಯವಹಾರದ ಶಂಕೆಯಿದ್ದು, ತನಿಖೆ ಚುರುಕಾಗುತ್ತಿದ್ದಂತೆ ಗುತ್ತಿಗೆದಾರ ವೈ.ಜಿ. ನಾಗರಾಜು ನ್ಯಾಯಾಲಯದಿಂದ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ. ಬೆಂಗಳೂರು: ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ(ಕೆಆರ್‌ಐಡಿಎಲ್‌) ಕೆಲ ಎಂಜಿನಿಯರ್‌ಗಳು ಹಾಗೂ ಗುತ್ತಿಗೆದಾರರು ಶಾಮೀಲಾಗಿ ಲೂಟಿ ಮಾಡಿದ ಕೋಟ್ಯಾಂತರ ಹಗರಣದ ತನಿಖೆಯನ್ನು ಲೋಕಾಯುಕ್ತ ಪೊಲೀಸರು ಚುರುಕುಗೊಳಿಸಿದ್ದಾರೆ. ಈ ಬೆನ್ನಲ್ಲೇ ನಾಲ್ವರು ಎಂಜಿನಿಯರ್‌ಗಳು ನಕಲಿ ದಾಖಲೆ ಪಡೆದು ಐದು ಕೋಟಿ ರೂ.ಅನುದಾನ ಬಿಡುಗಡೆ ಮಾಡಿರುವುದನ್ನು ಪತ್ತೆ ಹಚ್ಚಿದ್ದಾರೆ. ಬೆಂಗಳೂರು ಉತ್ತರ ತಾಲೂಕು ಹಾಗೂ ಮಂಡ್ಯದ ಕೆಲ ಗ್ರಾಮಗಳಲ್ಲಿ ಕಾಮಗಾರಿಯನ್ನೇ ನಡೆಸದೆ ಅನುದಾನ ಬಿಡುಗಡೆ ಮಾಡಿದ್ದ ಅಕ್ರಮದಲ್ಲಿ ನಾಲ್ವರು ಅಧಿಕಾರಿಗಳನ್ನು ಆರೋಪಿಗಳನ್ನಾಗಿ ತನಿಖಾ ತಂಡ ಪರಿಗಣಿಸಿದೆ. ಕೆಆರ್‌ಐಡಿಎಲ್‌ ಹಿಂದಿನ ಎಕ್ಸಿಕ...