ಶಿಕಾರಿಪುರ | 1 ಲಕ್ಷ ರೂ. ಲಂಚ ಪಡೆಯುವಾಗ ʻ ಲೋಕಾಯುಕ್ತʼ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ

 ಶಿವಮೊಗ್ಗ: ಜಮೀನು ಖಾತೆ ಬದಲಾವಣೆಗೆ 4ಲಕ್ಷ ರೂ. ಲಂಚಕ್ಕೆ (Bribe) ಬೇಡಿಕೆ ಇಟ್ಟು, 1 ಲಕ್ಷ ರೂ. ಹಣ ಮುಂಗಡವಾಗಿ ಪಡೆಯುವಾಗ ಚಿಕ್ಕಜಂಬೂರು (Chikkajamburu) ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಗ್ರಾಮ ಲೆಕ್ಕಾಧಿಕಾರಿಯನ್ನು ವಿಠಲ ಎಂದು ಗುರುತಿಸಲಾಗಿದೆ. ಶಿಕಾರಿಪುರ (Shikaripur) ಪಟ್ಟಣದ ಸರ್ಕಾರಿ ನೌಕರರ ಕ್ಯಾಂಟೀನ್‌ನಲ್ಲಿ 1ಲಕ್ಷ ರೂ. ಲಂಚದ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರು ಇವರನ್ನು ವಶಕ್ಕೆ ಪಡೆದಿದ್ದರು. ಜಂಬೂರಿನ ಜಿಕ್ರಿಯಾ ಬೇಗ್ ಎಂಬವರು ತಮ್ಮ ತಂದೆಯ ವಿಲ್‌ಪತ್ರದಂತೆ ಜಮೀನಿನ ಖಾತೆ ಬದಲಾವಣೆ ಅರ್ಜಿ ಸಲ್ಲಿಸಿದ್ದರು. ಖಾತೆ ಬದಲಾವಣೆಗೆ ಗ್ರಾಮ ಲೆಕ್ಕಾಧಿಕಾರಿ 4 ಲಕ್ಷ ರೂ. ಬೇಡಿಕೆ ಇಟ್ಟಿದ್ದರು. ಇದನ್ನೂ ಓದಿ: 40,000 ರೂ. ಲಂಚ ಪಡೆಯುವಾಗ ರೆಡ್‌ಹ್ಯಾಂಡಾಗಿ ‘ಲೋಕಾ’ ಬಲೆಗೆ ಬಿದ್ದ ಪಿಎಸ್‌ಐ

ಇದರಲ್ಲಿ 1 ಲಕ್ಷ ರೂ. ಹಣ ಪಡೆಯುವಾಗ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಲೋಕಾಯುಕ್ತ ಡಿವೈಎಸ್‌ಪಿ ಚಂದ್ರಶೇಖರ್ ನೇತೃತ್ವದಲ್ಲಿ ಇನ್ಸ್‌ಪೆಕ್ಟರ್ ಮೈಲಾರ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.


Comments

Popular posts from this blog

ಚಾರ್ವಿಕ ಟೂರ್ಸ್ ಅಂಡ್ ಟ್ರಾವೆಲ್ಸ್‌ನಿಂದ ಪ್ರಥಮ ವರ್ಷದ ವಾರ್ಷಿಕೋತ್ಸವದ ಧಮಾಕಾ ಆಫರ್; ಕೇವಲ ₹2,100 ರಲ್ಲಿ 4 ವರ್ಷಗಳ ಸುದೀರ್ಘ ಪ್ರವಾಸ ಯೋಜನೆ!

ದಾವಣಗೆರೆ ಕಾರ್ಗಿಲ್​ ಕಾರ್ಖಾನೆಯಲ್ಲಿ ಉತ್ಪಾದನೆ ಸ್ಥಗಿತ: ನ್ಯಾಯಕ್ಕಾಗಿ ಕಾರ್ಮಿಕರು ಹೋರಾಟ

ತಂದೆ-ತಾಯಿಯ 13 ವರ್ಷಗಳ ಕನಸು ನನಸು ಮಾಡಿದ ಮಗ: ಕಟ್ಟಿಗೆಹಳ್ಳಿಯಲ್ಲಿ ಅದ್ದೂರಿ ಗೃಹಪ್ರವೇಶ!