₹4 ಲಕ್ಷ ಲಂಚ ಪಡೆಯುವಾಗ ರೆಡ್‌ಹ್ಯಾಂಡ್: ಲೋಕಾಯುಕ್ತ ಬಲೆಗೆ ಬಿದ್ದ ಕೆ.ಪಿ.ಅಗ್ರಹಾರ ಇನ್ಸ್‌ಪೆಕ್ಟರ್ – ಮೈದಾನದಲ್ಲೇ ಹೈಡ್ರಾಮಾ!

 ಬೆಂಗಳೂರು: ಭ್ರಷ್ಟಾಚಾರದ ವಿರುದ್ಧ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳ ದಾಳಿ ಮುಂದುವರಿದಿದ್ದು, ₹5 ಲಕ್ಷ ಲಂಚ ಬೇಡಿಕೆಯ ಪ್ರಕರಣದಲ್ಲಿ ₹4 ಲಕ್ಷ ಸ್ವೀಕರಿಸುವಾಗ ಕೆ.ಪಿ.ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಚಾಮರಾಜಪೇಟೆಯ ಸಿಎಆರ್ (CAR) ಮೈದಾನದಲ್ಲಿ ನಡೆದ ಈ ಟ್ರ್ಯಾಪ್ ವೇಳೆ ಇನ್ಸ್‌ಪೆಕ್ಟರ್ ಗೋವಿಂದರಾಜು ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ಬಂಧನದ ಸಂದರ್ಭದಲ್ಲೇ ಲೋಕಾಯುಕ್ತ ಪೊಲೀಸರ ವಿರುದ್ಧ ಕೂಗಾಡಿ ಹೈಡ್ರಾಮಾ ನಡೆಸಿದ ಘಟನೆ ನಡೆದಿದೆ.

ಹಣ ಹೂಡಿಕೆ ವಂಚನೆ ಪ್ರಕರಣವೊಂದರಲ್ಲಿ ಆರೋಪಿಗಳನ್ನು ಬಂಧಿಸದೇ ಕೇಸ್‌ನಿಂದ ಬಿಡಿಸುವುದಾಗಿ ಬೆದರಿಸಿ ಇನ್ಸ್‌ಪೆಕ್ಟರ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.


ಬಂಧನದ ವೇಳೆ ಇನ್ಸ್‌ಪೆಕ್ಟರ್ ಗೋವಿಂದರಾಜು, “ನಾನು ನಿಮ್ಮ ಕರ್ತವ್ಯಕ್ಕೆ ಅಡ್ಡಿಪಡಿಸಿಲ್ಲ ಸರ್” ಎಂದು ಕೂಗಾಡಿ ರಂಪಾಟ ನಡೆಸಿದರು. ಆದರೂ ಲೋಕಾಯುಕ್ತ ಪೊಲೀಸರು ಅವರನ್ನು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಲೋಕಾಯುಕ್ತ ಎಸ್‌ಪಿ ಶಿವಪ್ರಕಾಶ್ ದೇವರಾಜು,

“ಪ್ರಿವೆನ್ಷನ್ ಆಫ್ ಕರಪ್ಷನ್ ಆ್ಯಕ್ಟ್ ಅಡಿಯಲ್ಲಿ ಟ್ರ್ಯಾಪ್ ಮಾಡಲಾಗಿದೆ. ಇನ್ಸ್‌ಪೆಕ್ಟರ್ ₹5 ಲಕ್ಷ ಲಂಚ ಡಿಮ್ಯಾಂಡ್ ಮಾಡಿದ್ದು, ಉಳಿದ ₹4 ಲಕ್ಷ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದಾರೆ. ಪ್ರಕರಣದಲ್ಲಿ ಇನ್ನಿತರ ಅಧಿಕಾರಿಗಳ ಪಾತ್ರವಿದೆಯೇ ಎಂಬುದನ್ನು ತನಿಖೆ ಮಾಡಲಾಗುತ್ತಿದೆ” ಎಂದು ತಿಳಿಸಿದ್ದಾರೆ



Comments

Popular posts from this blog

ಚಾರ್ವಿಕ ಟೂರ್ಸ್ ಅಂಡ್ ಟ್ರಾವೆಲ್ಸ್‌ನಿಂದ ಪ್ರಥಮ ವರ್ಷದ ವಾರ್ಷಿಕೋತ್ಸವದ ಧಮಾಕಾ ಆಫರ್; ಕೇವಲ ₹2,100 ರಲ್ಲಿ 4 ವರ್ಷಗಳ ಸುದೀರ್ಘ ಪ್ರವಾಸ ಯೋಜನೆ!

ದಾವಣಗೆರೆ ಕಾರ್ಗಿಲ್​ ಕಾರ್ಖಾನೆಯಲ್ಲಿ ಉತ್ಪಾದನೆ ಸ್ಥಗಿತ: ನ್ಯಾಯಕ್ಕಾಗಿ ಕಾರ್ಮಿಕರು ಹೋರಾಟ

ತಂದೆ-ತಾಯಿಯ 13 ವರ್ಷಗಳ ಕನಸು ನನಸು ಮಾಡಿದ ಮಗ: ಕಟ್ಟಿಗೆಹಳ್ಳಿಯಲ್ಲಿ ಅದ್ದೂರಿ ಗೃಹಪ್ರವೇಶ!