ಭ್ರಷ್ಟ ಅಧಿಕಾರಿಗಳ ನಿದ್ದೆಗೆಡಿಸಿದ ಲೋಕಾಯುಕ್ತ ಸಂಸ್ಥೆ: 3 ವರ್ಷಗಳಲ್ಲಿ 255 ಮಂದಿ ಬಲೆಗೆ, ಕೋಟ್ಯಂತರ ಆಸ್ತಿ ಜಪ್ತಿ
ಕಳೆದ ಮೂರು ವರ್ಷಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು 255 ದಾಳಿಗಳನ್ನು ನಡೆಸಿ, ಹಲವು ಭ್ರಷ್ಟ ಸರ್ಕಾರಿ ನೌಕರರು ಮತ್ತು ಅಧಿಕಾರಿಗಳ ಬಣ್ಣ ಬಯಲು ಮಾಡಿದ್ದಾರೆ. ಈ ದಾಳಿಗಳಲ್ಲಿ ಅಪಾರ ಪ್ರಮಾಣದ ನಗದು, ಚಿನ್ನಾಭರಣ ಮತ್ತು ಆಸ್ತಿ ವಶಪಡಿಸಿಕೊಳ್ಳಲಾಗಿದೆ. ಆರೋಪಿತರ ವಿರುದ್ಧ ಭ್ರಷ್ಟಾಚಾರ ತಡೆ ಅಧಿನಿಯಮದಡಿ ಕ್ರಮ ಕೈಗೊಳ್ಳಲಾಗುತ್ತಿದೆ. ಹಾಗಾದ್ರೆ 3 ವರ್ಷಗಳಲ್ಲಿ ಯಾವೆಲ್ಲಾ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ ಎಂಬ ವಿವರ ಇಲ್ಲಿದೆ..
ಹೈಲೈಟ್ಸ್:
ರಾಜ್ಯದಲ್ಲಿ ಲೋಕಾಯುಕ್ತ ಸಂಸ್ಥೆಯ ಬಲೆಗೆ ಬಿದ್ದ ಭ್ರಷ್ಟ ಅಧಿಕಾರಿಗಳು
3 ವರ್ಷದಲ್ಲಿ 255 ಮಂದಿ ಭ್ರಷ್ಟ ಅಧಿಕಾರಿಗಳ ಬೇಟೆ, ಕೋಟ್ಯಾಂತರ ಆಸ್ತಿ ವಶ
3 ವರ್ಷಗಳಲ್ಲಿ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದ ಪ್ರಮುಖರು ಯಾರು? ಯಾರ ವಿರುದ್ದ ಕ್ರಮವೇನು?
ಬೆಂಗಳೂರು: ಕೆಲವು ದಿನಗಳ ಹಿಂದೆಯಷ್ಟೇ ಪೊಲೀಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು. ಬೆಂಗಳೂರಿನ ಕೆಪಿ ಅಗ್ರಹಾರ ಠಾಣೆ ಇನ್ಸ್ ಪೆಕ್ಟರ್ ಗೋವಿಂದರಾಜು ಅವರು ಲಂಚ ಸ್ವೀಕಾರ ಮಾಡುವ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಅಪರಾಧ ಪ್ರಕರಣದಲ್ಲಿ ಆರೋಪಿಗೆ ಸಹಾಯ ಮಾಡಲು 4 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಸಿಕ್ಕಿ ಬಿದ್ದಿದ್ದರು.
ಇದೊಂದು ಘಟನೆಯಷ್ಟೇ, ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಹಲವು ಭ್ರಷ್ಟ ಸರ್ಕಾರಿ ನೌಕರರು, ಅಧಿಕಾರಿಗಳ ವಿರುದ್ಧ ದಾಳಿ ನಡೆಸಿದ್ದಾರೆ. ಬೆಂಗಳೂರು ನಗರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಾಹಿತಿ ಆಧರಿಸಿ ನಡೆಸಿದ ದಾಳಿಯಲ್ಲಿ ಭ್ರಷ್ಟರ ಬಣ್ಣ ಬಯಲುಗೊಳಿಸಿದ್ದಾರೆ.

Comments
Post a Comment