ದಾವಣಗೆರೆ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಇ-ಮೇಲ್
ದಾವಣಗೆರೆ: ನಗರದ ಜಿಲ್ಲಾ ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ವಕೀಲರು ಹಾಗೂ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ. ದಾವಣಗೆರೆ ಮಾತ್ರವಲ್ಲದೆ ಮಡಿಕೇರಿ ಜಿಲ್ಲಾ ನ್ಯಾಯಾಲಯ ಹಾಗೂ ಹೈಕೋರ್ಟ್‌ನ ಧಾರವಾಡ ಪೀಠಕ್ಕೂ ಇದೇ ರೀತಿಯ ಬೆದರಿಕೆ ಸಂದೇಶಗಳು ಬಂದಿವೆ.
ಪೊಲೀಸ್ ಕಾರ್ಯಾಚರಣೆ:ವಿಷಯ ತಿಳಿಯುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ದೌಡಾಯಿಸಿ ಪರೀಕ್ಷೆ ನಡೆಸಿದರು. ಇದು ಹುಸಿ ಬೆದರಿಕೆಯಾದರೂ, ನ್ಯಾಯಾಂಗ ಸಂಸ್ಥೆಗಳನ್ನು ಗುರಿಯಾಗಿಸಿರುವ ಕಿಡಿಗೇಡಿಗಳನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳುವಂತೆ ವಕೀಲರ ಸಂಘ ಮತ್ತು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ನ್ಯಾಯಾಲಯದ ಆವರಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

Comments
Post a Comment