Posts

Showing posts from March, 2026

ಹುಬ್ಬಳ್ಳಿ: 6 ಲಕ್ಷ ರೂ ಲಂಚ ಸ್ವೀಕರಿಸುತ್ತಿದ್ದ ವಾಣಿಜ್ಯ ತೆರಿಗೆ ಉಪಆಯುಕ್ತ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ!

Image
 6 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ವಾಣಿಜ್ಯ ತೆರಿಗೆ ಉಪಆಯುಕ್ತ ಭರತ್ ಕುಮಾರ್ ಹೆಗ್ಡೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅಂಕೋಲಾ ಮೂಲದ ಉದ್ಯಮಿ ವಿಶ್ವಜಿತ್ ನಾಯಕ್ ಅವರಿಂದ ಹಣ ಪಡೆಯುತ್ತಿದ್ದಾಗ 48 ವರ್ಷದ ಹೆಗ್ಡೆ ಸಿಕ್ಕಿಬಿದ್ದಿದ್ದಾರೆ. ಹುಬ್ಬಳ್ಳಿ: 6 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ವಾಣಿಜ್ಯ ತೆರಿಗೆ ಉಪಆಯುಕ್ತ ಭರತ್ ಕುಮಾರ್ ಹೆಗ್ಡೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅಂಕೋಲಾ ಮೂಲದ ಉದ್ಯಮಿ ವಿಶ್ವಜಿತ್ ನಾಯಕ್ ಅವರಿಂದ ಹಣ ಪಡೆಯುತ್ತಿದ್ದಾಗ 48 ವರ್ಷದ ಹೆಗ್ಡೆ ಸಿಕ್ಕಿಬಿದ್ದಿದ್ದಾರೆ ಎಂದು ಬೆಂಗಳೂರು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಶಿವ ಪ್ರಕಾಶ್ ದೇವರಾಜ್ ತಿಳಿಸಿದ್ದಾರೆ. ವಿಶ್ವಜಿತ್ ನಾಯಕ್ 2019ರಲ್ಲಿ ಎಂಟು ಟಿಪ್ಪರ್ ಟ್ರಕ್‌ಗಳನ್ನು ಖರೀದಿಸಿದ್ದರು. ಅಲ್ಲದೆ ಸುಮಾರು 60 ಲಕ್ಷ ರೂ.ಗಳ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ ಗೆ ಅರ್ಹರಾಗಿದ್ದರು. ಅದರಲ್ಲಿ ಅವರು 34 ಲಕ್ಷ ರೂ.ಗಳನ್ನು ಕ್ಲೇಮ್ ಮಾಡಿದ್ದರು. ವಾಣಿಜ್ಯ ತೆರಿಗೆ ಇಲಾಖೆಯು ಅಕ್ರಮವಾಗಿ ಐಟಿಸಿ ಹಕ್ಕು ಸಾಧಿಸಲಾಗಿದೆ ಎಂದು ಆರೋಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿತ್ತು. ಅಲ್ಲದೆ ನಾಯಕ್ ಅವರನ್ನು ನಾಲ್ಕು ಬಾರಿ ವಿಚಾರಣೆಗೂ ಕರೆಸಿತ್ತು. ಅಂತಿಮವಾಗಿ ಪ್ರಕರಣವನ್ನು ಮುಕ್ತಾಯಗೊಳಿಸಲು 10 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಕೊನೆಗೆ 6 ಲಕ್ಷ ರೂಪಾಯಿಗೆ ಒಪ್ಪಿಕೊಂಡರು. ಇನ್ನು...

ಶಿವಮೊಗ್ಗ ಪ್ರತಿಷ್ಠಿತ ಆಸ್ಪತ್ರೆ ವೈದ್ಯರ ಎಡವಟ್ಟು: ಶಸ್ತ್ರಚಿಕಿತ್ಸೆ ಬಳಿಕ ಕೋಮಾಗೆ ಜಾರಿದ ಮಹಿಳೆ!

Image
 ಶಿವಮೊಗ್ಗದ ಖಾಸಗಿ ಆಸ್ಪತ್ರೆಯೊಂದರಲ್ಲಿ ಹರ್ನಿಯಾ ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆಯೊಬ್ಬರು ವೈದ್ಯರ ನಿರ್ಲಕ್ಷ್ಯದಿಂದ ಕೋಮಾ ಸ್ಥಿತಿಗೆ ತಲುಪಿದ್ದಾರೆ. ಅನಸ್ತೇಶಿಯಾ ಪ್ರಮಾಣ ಮಿತಿ ಮೀರಿದ್ದೇ ಇದಕ್ಕೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದು, ಆಸ್ಪತ್ರೆ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಶಿವಮೊಗ್ಗ (ಮಾ.25): ಜಿಲ್ಲೆಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರ ನಿರ್ಲಕ್ಷ್ಯದಿಂದಾಗಿ ಸಾಮಾನ್ಯ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಿದ್ದ ಮಹಿಳೆಯೊಬ್ಬರು ಇದೀಗ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಶಿವಮೊಗ್ಗದ 'ಅಮೃತ ಲೈಫ್ ಕೇರ್' (Amrutha Lifecare) ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಅನಸ್ತೇಶಿಯಾ ಓವರ್‌ಡೋಸ್‌ನಿಂದಾಗಿ ಮಹಿಳೆ ಕೋಮಾ ಸ್ಥಿತಿಗೆ ತಲುಪಿದ್ದಾರೆ ಎಂದು ಕುಟುಂಬಸ್ಥರು ಗಂಭೀರವಾಗಿ ಆರೋಪಿಸಿದ್ದಾರೆ. ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದ ನಿವಾಸಿ ದೇವಿ ಬಾಯಿ (45) ಎಂಬುವವರು ಹರ್ನಿಯಾ (Hernia) ಸಮಸ್ಯೆಯಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ ಮಾರ್ಚ್ 11ರಂದು ಶಿವಮೊಗ್ಗದ ಅಮೃತ ಲೈಫ್ ಕೇರ್ ಆಸ್ಪತ್ರೆಗೆ ದಾಖಲಾಗಿದ್ದರು. ಮಾರ್ಚ್ 12ರಂದು ವೈದ್ಯರು ಇವರಿಗೆ ಹರ್ನಿಯಾ ಶಸ್ತ್ರಚಿಕಿತ್ಸೆ ನಡೆಸಿದ್ದರು. ಆದರೆ, ಶಸ್ತ್ರಚಿಕಿತ್ಸೆಯ ಸಮಯದಲ್ಲಿ ನೀಡಲಾದ ಅನಸ್ತೇಶಿಯಾ (ಮತ್ತು ಮದ್ದು) ಪ್ರಮಾಣ ಮಿತಿ ಮೀರಿದ್ದರಿಂದ ಮಾರ್ಚ್ 13ರಿಂದಲೇ ಮಹಿಳೆಯ ದೇಹದಲ್ಲಿ ಯಾವುದೇ ಚಲನವಲನ ಇಲ್ಲದಂತಾಗಿದೆ. ಕ...

ತೊಂದರೆ ಇದ್ದ ಬಲಗೈ ಬಿಟ್ಟು ಎಡಗೈಗೆ ಶಸ್ತ್ರಚಿಕಿತ್ಸೆ ಮಾಡಿ ಬೆರಳು ಕತ್ತರಿಸಿದ ವೈದ್ಯರು!

Image
 ಮುಂಬೈ: ವೈದ್ಯರೆಂದರೆ ಜೀವ ಉಳಿಸುವ ರಕ್ಷಕ ಆದ್ರೆ ಇಲ್ಲೊಂದು ಘಟನೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಬಾಲಕನೊಬ್ಬ ತನ್ನ ಕೈ ಬೆರಳನ್ನು ಕಳೆದುಕೊಂಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಪೋಸ್ಟಾಕ್ಸಿಯಲ್ ಪಾಲಿಡಾಕ್ಟಿಲಿ ಅಂದ್ರೆ ಕೈ ಅಥವಾ ಪಾದದ ಕಿರುಬೆರಳಿನ ಬದಿಯಲ್ಲಿ ಹೆಚ್ಚುವರಿ ಬೆರಳು ಇರುವ ಸಮಸ್ಯೆ ಈ ತೊಂದರೆಯಿಂದ ಬಳಲುತ್ತಿದ್ದ ಬಾಲಕನೊಬ್ಬನಿಗೆ ವೈದ್ಯರು ಬಲಗೈಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು ಎಡಗೈಗೆ ಮಾಡಿದ್ದಲ್ಲದೆ, ಬೆರಳನ್ನು ಕೂಡ ಕತ್ತರಿಸಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಬಲಗೈಯ ಒಂದು ಬೆರಳಿನಲ್ಲಿ ಬಿಗಿತ, ನೋವು ಇದ್ದ ಕಾರಣ ಶಸ್ತ್ರ ಚಿಕಿತ್ಸೆ ನಡೆಸಬೇಕೆಂದು ವೈದ್ಯರು ಸಲಹೆ ನೀಡಿದ್ದರು ಇದಕ್ಕಾಗಿ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ವೈದ್ಯರು ತಪ್ಪು ತಪ್ಪಾಗಿ ಶಸ್ತ್ರ ಚಿಕಿತ್ಸೆ ನಡೆಸಿದ್ದು ದೋಷ ಕಂಡುಬಂದ ನಂತರ ಬಾಲಕನ ಕುಟುಂಬ ತಕ್ಷಣ ದೂರು ದಾಖಲಿಸಿದೆ. ಈ ಆರೋಪದ ಬಳಿಕ ಆರೋಗ್ಯ ಇಲಾಖೆ ವಿವರವಾದ ತನಿಖೆ ನಡೆಸಲು ಇಬ್ಬರು ಸದಸ್ಯರ ಸಮಿತಿಯನ್ನು ರಚಿಸಿತು. ಈ ವೇಳೆ ಮಗುವಿನ ಕುಟುಂಬ ಬಲಗೈಯಲ್ಲಿ ಶಸ್ತ್ರಚಿಕಿತ್ಸೆಗೆ ಅನುಮತಿ ನೀಡುವ ಎನ್‌ಒಸಿ ಗೆ ಸ್ಪಷ್ಟವಾಗಿ ಸಹಿ ಹಾಕಿದ್ದೇವೆ ಎಂದು ಹೇಳಿದ್ದು, ಇದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ನಕಲಿ ವೈದ್ಯನ ಎಡವಟ್ಟಿಗೆ ಬಾಲಕಿ ಬ*ಲಿ

Image
 ಮಂಗಳೂರು/ರಾಯಚೂರು : ನಕಲಿ ವೈದ್ಯ ನೀಡಿದ ಇಂಜೆಕ್ಷನ್‌ನಿಂದಾಗಿ 9ನೇ ತರಗತಿ ವಿದ್ಯಾರ್ಥಿನಿ ಸಾ*ವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಬಿಂದು(14) ಮೃ*ತ ಬಾಲಕಿ. ಜ್ವರದ ಹಿನ್ನೆಲೆ ಬಾಲಕಿ ಚಿಕಿತ್ಸೆ ಪಡೆಯುತ್ತಿದ್ದಳು. ವೈದ್ಯನೊಬ್ಬನ ಬಳಿ ಇಂಜೆಕ್ಷನ್ ಪಡೆದ ಬಳಿಕ, ಆರೋಗ್ಯದಲ್ಲಿ ಏರುಪೇರಾಗಿ ಸಾವನ್ನಪ್ಪಿದ್ದಾಳೆ. ವಿದ್ಯಾರ್ಥಿನಿ ಸಾ*ವನ್ನಪ್ಪಿದ ಸುದ್ದಿ ಕೇಳಿ ನಕಲಿ ವೈದ್ಯ ಪರಾರಿಯಾಗಿದ್ದಾನೆ. ಸದ್ಯ ಮ*ರಣೋತ್ತರ ಪರೀಕ್ಷೆಗಾಗಿ ವಿದ್ಯಾರ್ಥಿನಿ ಮೃತದೇಹವನ್ನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಕರಣ ದಾಖಲಾಗಿದೆ.

ಉಪ ಚುನಾವಣೆ: Exit pollsಗೆ ಚುನಾವಣಾ ಆಯೋಗ ನಿಷೇಧ. ಏ.9-29ರವರೆಗೆ ಫಲಿತಾಂಶ ಪ್ರಕಟಿಸದಂತೆ ಖಡಕ್ ಸೂಚನೆ

Image
  ಉಪ ಚುನಾವಣೆ: Exit pollsಗೆ ಚುನಾವಣಾ ಆಯೋಗ ನಿಷೇಧ. ಏ.9-29ರವರೆಗೆ ಫಲಿತಾಂಶ ಪ್ರಕಟಿಸದಂತೆ ಖಡಕ್ ಸೂಚನೆ. ಏಪ್ರಿಲ್ 9ರ ಬೆಳಿಗ್ಗೆ 7:00 ಗಂಟೆಯಿಂದ ಏಪ್ರಿಲ್ 29ರ ಸಂಜೆ 6:30 ರವರೆಗೆ ಈ ನಿಷೇಧ ಜಾರಿಯಲ್ಲಿರುತ್ತದೆ ಎಂದು ರಾಜ್ಯ ಚುನಾವಣಾಧಿಕಾರಿ ಕಚೇರಿ ತಿಳಿಸಿದೆ. ಬೆಂಗಳೂರು: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆ ಮತದಾನದ ಪ್ರಕ್ರಿಯೆ ಮುಗಿಯುವವರೆಗೆ ಎಕ್ಸಿಟ್ ಪೋಲ್ (ಚುನಾವಣೋತ್ತರ ಸಮೀಕ್ಷೆ) ನಡೆಸುವುದನ್ನು ಅಥವಾ ಅದರ ಫಲಿತಾಂಶಗಳ ಪ್ರಕಟಿಸುವುದನ್ನು ಭಾರತೀಯ ಚುನಾವಣಾ ಆಯೋಗವು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಏಪ್ರಿಲ್ 9ರ ಬೆಳಿಗ್ಗೆ 7:00 ಗಂಟೆಯಿಂದ ಏಪ್ರಿಲ್ 29ರ ಸಂಜೆ 6:30 ರವರೆಗೆ ಈ ನಿಷೇಧ ಜಾರಿಯಲ್ಲಿರುತ್ತದೆ ಎಂದು ರಾಜ್ಯ ಚುನಾವಣಾಧಿಕಾರಿ ಕಚೇರಿ ತಿಳಿಸಿದೆ. ರ್ನಾಟಕ ಮುಖ್ಯ ಚುನಾವಣಾಧಿಕಾರಿ (CEO) ಈ ಆದೇಶವನ್ನು ಮಾರ್ಚ್ 27ರಂದು ಹೊರಡಿಸಿದ್ದು, ಶನಿವಾರ ಸಾರ್ವಜನಿಕವಾಗಿ ಪ್ರಕಟಿಸಲಾಗಿದೆ. ಈ ಸಂಬಂಧದ ಅಧಿಸೂಚನೆ ರಾಜ್ಯ ಗಜೆಟ್‌ನಲ್ಲಿ ಪ್ರಕಟಗೊಂಡಿದೆ. ಚುನಾವಣಾ ಆಯೋಗದ ಸೂಚನೆಯ ಪ್ರಕಾರ, ದೇಶದ ಆರು ರಾಜ್ಯಗಳ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಉಪಚುನಾವಣೆಗಳಿಗೆ ಸಂಬಂಧಿಸಿದಂತೆ ಚುನಾವಣೋತ್ತರ ಸಮೀಕ್ಷೆಗಳಿಗೆ ತಾತ್ಕಾಲಿಕ ನಿಷೇಧ ಹೇರಲಾಗಿದೆ. ಜನಪ್ರತಿನಿಧಿಗಳ ಕಾಯ್ದೆ 1951ರ ಸೆಕ್ಷನ್ 126A ಪ್ರಕಾರ, ಚುನಾವಣಾ ಅವಧಿಯಲ್ಲಿ ಯಾವುದೇ ವ್ಯಕ್ತಿ ...

ದಕ್ಷಿಣ ವಿಧಾನಸಭಾ ಉಪಚುನಾವಣೆ: ದಾವಣಗೆರೆಯಲ್ಲಿ ಭದ್ರತೆಗಾಗಿ ಪೊಲೀಸ್ ಪಥಸಂಚಲನ

 ಉದ್ದೇಶ: ಮುಂಬರುವ ದಕ್ಷಿಣ ವಿಧಾನಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕಾನೂನು-ಸುವ್ಯವಸ್ಥೆ ಕಾಪಾಡಲು ಮತ್ತು ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪೊಲೀಸರು ಈ ಪಥಸಂಚಲನ ನಡೆಸಿದರು. ಮಾರ್ಗ: ಬೂದಾಳ್ ರಸ್ತೆಯಿಂದ ಆರಂಭವಾದ ಈ ಪಥಸಂಚಲನವು ರಿಂಗ್ ರೋಡ್, ಶಿವನಗರ, ಆಜಾದ್ ನಗರ ಸೇರಿದಂತೆ ವಿವಿಧ ಪ್ರಮುಖ ಪ್ರದೇಶಗಳಲ್ಲಿ ಸಂಚರಿಸಿ ಅಂತಿಮವಾಗಿ ಎಸ್ಸಿ-ಎಸ್ಟಿ ಹಾಸ್ಟೆಲ್ ಬಳಿ ಮುಕ್ತಾಯಗೊಂಡಿತು. ಭಾಗವಹಿಸುವಿಕೆ: ಡಿವೈಎಸ್‌ಪಿ ಶರಣಬಸವೇಶ್ವರ ಬಿ, ಪೊಲೀಸ್ ನಿರೀಕ್ಷಕರಾದ ನಂಜುಂಡಸ್ವಾಮಿ, ಸುನೀಲ್ ಕುಮಾರ್, ಮಂಜುನಾಥ ಹಾಗೂ ಅರೆ ಸೇನಾ ಪಡೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.

ಕೋಮು ಸೌಹಾರ್ದತೆ: ಬಿಜೆಪಿ ಅಭ್ಯರ್ಥಿ ಪತ್ನಿಗೆ ಉಡಿ ತುಂಬಿ ಗೌರವಿಸಿದ ಮುಸ್ಲಿಂ ಮಹಿಳೆಯರು

 ದಾವಣಗೆರೆ: ನಗರದ ಇಮಾಂ ನಗರದಲ್ಲಿ ಚುನಾವಣಾ ಪ್ರಚಾರದ ವೇಳೆ ಕೋಮು ಸೌಹಾರ್ದತೆಯನ್ನು ಸಾರುವ ಅಪರೂಪದ ಘಟನೆಯೊಂದು ಕಂಡುಬಂದಿದೆ. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಪರವಾಗಿ ಮತಯಾಚನೆಗೆ ತೆರಳಿದ್ದ ಅವರ ಪತ್ನಿ ಸಂಧ್ಯಾ ಶ್ರೀನಿವಾಸ್ ಅವರನ್ನು ಸ್ಥಳೀಯ ಮುಸ್ಲಿಂ ಮಹಿಳೆಯರು ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. ಗೌರವದ ಸ್ವಾಗತ: ಚುನಾವಣಾ ಪ್ರಚಾರದ ಭಾಗವಾಗಿ ಮನೆ ಮನೆಗೆ ಭೇಟಿ ನೀಡುತ್ತಿದ್ದ ಸಂಧ್ಯಾ ಶ್ರೀನಿವಾಸ್ ಅವರನ್ನು ಕೆಲವು ಮುಸ್ಲಿಂ ಮಹಿಳೆಯರು ತಮ್ಮ ಮನೆಗೆ ಆಹ್ವಾನಿಸಿ ಗೌರವಿಸಿದರು. ಅವರಿಗೆ ಕುಡಿಯಲು ನೀರು ನೀಡಿ ಸತ್ಕರಿಸಿದ್ದಲ್ಲದೆ, ಹಿಂದೂ ಸಂಪ್ರದಾಯದಂತೆ ಉಡಿ ತುಂಬಿ ಆಶೀರ್ವದಿಸುವ ಮೂಲಕ ತಮ್ಮ ಬೆಂಬಲ ವ್ಯಕ್ತಪಡಿಸಿದರು. ಚುನಾವಣಾ ಕಣದಲ್ಲಿ ಹೊಸ ಆಯಾಮ: ಸಾಮಾನ್ಯವಾಗಿ ರಾಜಕೀಯ ಪಕ್ಷಗಳ ನಡುವೆ ಸಂಘರ್ಷಗಳು ಕಂಡುಬರುವ ಈ ಕಾಲದಲ್ಲಿ, ಧರ್ಮದ ಭೇದವಿಲ್ಲದೆ ಮಹಿಳೆಯರು ತೋರಿದ ಈ ಪ್ರೀತಿ ಮತ್ತು ಸೌಹಾರ್ದತೆಯು ಚುನಾವಣಾ ಪ್ರಚಾರದಲ್ಲಿ ಹೊಸ ಆಯಾಮವನ್ನು ನೀಡಿದೆ. ಈ ಘಟನೆಯು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ.

ಧಾರವಾಡ ಮಾಜಿ ಶಾಸಕನ ಪುತ್ರನ ಕೊಲೆಗೆ ಬಿಗ್ ಟ್ವಿಸ್ಟ್, ಅನೈತಿಕ ಸಂಬಂಧಕ್ಕೆ ಜೀವ ಹೋಯ್ತಾ? ಬೆಚ್ಚಿಬೀಳಿಸುವ ಸತ್ಯ ಬಿಚ್ಚಿಟ್ಟ ಎಸ್ಪಿ!

Image
 ಧಾರವಾಡದಲ್ಲಿ ನಡೆದ ಮಾಜಿ ಶಾಸಕನ ಪುತ್ರ ರಾಜು ಬೋಳಶೆಟ್ಟಿ ಕೊಲೆ ಪ್ರಕರಣಕ್ಕೆ ಅಕ್ರಮ ಸಂಬಂಧವೇ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಓರ್ವ ಮಹಿಳೆ ಸೇರಿ ನಾಲ್ವರನ್ನು ಬಂಧನ, ತೋಟದ ಮನೆಯಲ್ಲಿ ಕೊಲೆ ಮಾಡಿ ರಾಮಾಪುರ ಬಳಿ ಶವವನ್ನು ಸುಟ್ಟು ಹಾಕಲಾಗಿತ್ತು.ಆರೋಪಿಗಳು ಸಿಕ್ಕಿಬಿದ್ದಿದ್ದು ಹೇಗೆ? ಧಾರವಾಡ (ಮಾ. 26): ಧಾರವಾಡ ಜಿಲ್ಲೆಯ ರಾಮಾಪುರ ಸಮೀಪದಲ್ಲಿ ನಡೆದಿದ್ದ ಮಾಜಿ ಶಾಸಕನ ಪುತ್ರ ರಾಜು ಬೋಳಶೆಟ್ಟಿಯ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿದೆ ಎಂದು ಧಾರವಾಡ ಎಸ್ಪಿ ಗುಂಜನ್ ಆರ್ಯ ಬೆಚ್ಚಿಬಿಳಿಸುವ ಮಾಹಿತಿ ತಿಳಿಸಿದ್ದಾರೆ. ಸದ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಮಹಿಳೆ ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಶಾಸಕ ಪುತ್ರನ ಹತ್ಯೆಗೆ ಸ್ಕೆಚ್ ಹಾಕಿದ್ದು ಯಾಕೆ? ಮೃತ ರಾಜು ಬೋಳಶೆಟ್ಟಿ ಬೈಲಹೊಂಗಲ ತಾಲ್ಲೂಕಿನ ಬಿದರಗಡ್ಡಿ ಗ್ರಾಮದ ಮುನೀರಾ ಎಂಬಾಕೆಯೊಂದಿಗೆ ಕಳೆದ ಎರಡು ವರ್ಷಗಳಿಂದ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ. ಇತ್ತ ಮುನೀರಾ ಮತ್ತು ಮೃತ್ಯುಂಜಯ ಎಂಬಾತನ ನಡುವೆಯೂ 'ಲವ್ವಿ-ಡವ್ವಿ' ಇತ್ತು ಎನ್ನಲಾಗಿದೆ. ಮುನೀರಾ ಮತ್ತು ರಾಜು ನಡುವಿನ ಸಂಬಂಧವನ್ನು ಮೃತ್ಯುಂಜಯ ಪ್ರಶ್ನಿಸಿದ್ದಲ್ಲದೆ, ಇದೇ ಕಾರಣಕ್ಕೆ ಕಳೆದ ಕೆಲವು ದಿನಗಳ ಹಿಂದೆ ಇಬ್ಬರ ನಡುವೆ ಜಗಳ ನಡೆದಿತ್ತು. ಇದೇ ದ್ವೇಷದಿಂದ ರಾ...

ದಾವಣಗೆರೆ ದಕ್ಷಿಣ: 38 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ; 23 ಮುಸ್ಲಿಮರು ಸ್ಪರ್ಧೆ! ಶಾಮನೂರು ಕುಟುಂಬಕ್ಕೆ ಸವಾಲ್

Image
 ಕರ್ನಾಟಕ ಉಪ ಚುನಾವಣೆ ನಾಮಪತ್ರ ಸಲ್ಲಿಕೆ ಸೋಮವಾರ ಮುಕ್ತಾಯಗೊಂಡಿದೆ. 38 ಅಭ್ಯರ್ಥಿಗಳು ದಾವಣಗೆರೆ ದಕ್ಷಿಣದಿಂದ ಸ್ಪರ್ಧೆಗೆ ಮುಂದಾಗಿದ್ದಾರೆ. ಕಾಂಗ್ರೆಸ್‌ ಟಿಕೆಟ್‌ ಸಿಕ್ಕಿಲ್ಲ ಎಂಬ ಬೇಸರದಲ್ಲಿರುವ ಅಲ್ಪಸಂಖ್ಯಾತ ಸಮುದಾಯದಿಂದ ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. 38ರ ಪೈಕಿ 23 ಮಂದಿ ಮುಸ್ಲಿಮರು. ಬಿಜೆಪಿ ಕಾಂಗ್ರೆಸ್ ಹೊರತುಪಡಿಸಿದರೆ ಯಾವ ಪಕ್ಷದಿಂದ ಯಾರೆಲ್ಲಾ ಸ್ಪರ್ಧೆ ಮಾಡಿದ್ದಾರೆ? ಈ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ. ದಾವಣಗೆರೆ: ಕರ್ನಾಟಕ ಉಪ ಚುನಾವಣೆ ನಾಮಪತ್ರ ಸಲ್ಲಿಕೆಗೆ ಸೋಮವಾರ ಕಡೆಯ ದಿನವಾಗಿದ್ದು, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 38 ಮಂದಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ಪೈಕಿ 23 ಮಂದಿ ಮುಸ್ಲಿಮರಿದ್ದಾರೆ. ಇದು ಕಾಂಗ್ರೆಸ್‌ ಟಿಕೆಟ್‌ ಕೈತಪ್ಪಿತು ಎಂದು ಶಾಮನೂರು ಕುಟುಂಬದ ವಿರುದ್ಧ ಅಲ್ಪಸಂಖ್ಯಾತರು ಸವಾಲು ಹಾಕಿದಂತೆ ಕಾಣುತ್ತಿದೆ. ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಸೋಮವಾರ ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರದಿಂದ ಒಟ್ಟು 35 ನಾಮಪತ್ರಗಳು ಸಲ್ಲಿಕೆಯಾಗಿವೆ. ಈ ಮೂಲಕ ಕ್ಷೇತ್ರದಲ್ಲಿಸ್ಪರ್ಧೆ ಬಯಸಿ ಒಟ್ಟು 38 ಅಭ್ಯರ್ಥಿಗಳು 45 ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ ಕಾಂಗ್ರೆಸ್‌ ಹೊರತು ಪಡಿಸಿದರೆ 12 ಇತರೆ ಪಕ್ಷಗಳಿಂದ ಸ್ಪರ್ಧೆಗೆ ಮುಂದಾಗಿದ್ದಾರೆ. ಇನ್ನು ಸ್ವತಂತ್ರ ಸ್ಪರ್ಧಿಗಳಾಗಿ 21 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಅ...

BREAKING : ಕೋರ್ಟ್‌’ನಲ್ಲಿ ಕೆಲಸ ಕೊಡಿಸುವುದಾಗಿ ಕೋಟ್ಯಾಂತರ ಹಣ ವಂಚನೆ ; ಬೆಂಗಳೂರಲ್ಲಿ ಖತರ್ನಾಕ್ ದಂಪತಿ ಅರೆಸ್ಟ್.!

Image
 ಬೆಂಗಳೂರು: ನ್ಯಾಯಾಲಯದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ನೂರಾರು ನಿರುದ್ಯೋಗಿಗಳಿಗೆ ಕೋಟ್ಯಂತರ ರೂಪಾಯಿ ವಂಚಿಸಿದ್ದ ಖತರ್ನಾಕ್ ದಂಪತಿಯನ್ನು ಸಿಸಿಬಿ (CCB) ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತರನ್ನು ಜೈಸನ್ ಡಿಸೋಜಾ ಮತ್ತು ಲವೀನಾ ಎಂದು ಗುರುತಿಸಲಾಗಿದೆ. ಬಂಧಿತ ದಂಪತಿಗಳು ಪ್ರಮುಖವಾಗಿ ನಿರುದ್ಯೋಗಿಗಳು ಮತ್ತು ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವವರನ್ನೇ ಟಾರ್ಗೆಟ್ ಮಾಡುತ್ತಿದ್ದರು. ನ್ಯಾಯಾಲಯದಲ್ಲಿ ‘ಡಿ-ಗ್ರೂಪ್’ (D-Group) ಕೆಲಸ ಕೊಡಿಸುವುದಾಗಿ ಆಮಿಷ ಒಡ್ಡುತ್ತಿದ್ದರು. ನಂಬಿಕೆ ಬರಿಸಲು ಸ್ವತಃ ನ್ಯಾಯಾಧೀಶರ ಸಹಿಯನ್ನೇ ನಕಲು ಮಾಡಿ, ನಕಲಿ ಆರ್ಡರ್ ಪ್ರತಿಗಳನ್ನು ತೋರಿಸಿ ಜನರನ್ನು ವಂಚಿಸುತ್ತಿದ್ದರು.ಕೆಲಸದ ಆಸೆ ತೋರಿಸಿ ಒಬ್ಬೊಬ್ಬರಿಂದ ತಲಾ ₹10 ಲಕ್ಷದಿಂದ ₹25 ಲಕ್ಷದವರೆಗೆ ಹಣ ಪೀಕುತ್ತಿದ್ದರು.ಸುಮಾರು 500ಕ್ಕೂ ಹೆಚ್ಚು ಜನರಿಂದ ಹಣ ಪಡೆದಿರುವ ಈ ದಂಪತಿ, ಒಟ್ಟು ₹25 ಕೋಟಿಗೂ ಅಧಿಕ ಮೊತ್ತವನ್ನು ವಂಚಿಸಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಹಣ ಕೊಟ್ಟವರು ಕೆಲಸದ ಬಗ್ಗೆ ವಿಚಾರಿಸಿದಾಗ ‘ನಾಳೆ-ನಾಡಿದ್ದು’ ಎಂದು ಸಬೂಬು ಹೇಳಿ ಕಾಲಹರಣ ಮಾಡುತ್ತಿದ್ದರು. ಅಂತಿಮವಾಗಿ ಸಂತ್ರಸ್ತರು ಫೋನ್ ಕರೆ ಮಾಡಿದರೆ ಸ್ವೀಕರಿಸದೆ ತಪ್ಪಿಸಿಕೊಳ್ಳುತ್ತಿದ್ದರು. ಇದರಿಂದ ಸಂಶಯಗೊಂಡ ಸಂತ್ರಸ್ತರು ಸಿಸಿಬಿಗೆ ದೂರು ನೀಡಿದ್ದರು. ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲೂ ಈ ದಂಪತಿ ವಿರುದ್ಧ ದೂರುಗಳು ದಾಖಲಾಗಿ...

BREAKING: ಕಾಂಗ್ರೆಸ್ ಟಿಕೆಟ್ ಕೈತಪ್ಪಿದ್ದಕ್ಕೆ ದಾವಣಗೆರೆಯಲ್ಲಿ ಮುಸ್ಲಿಂ ಯುವಕರ ಆಕ್ರೋಶ

Image
 ದಾವಣಗೆರೆ: ಏಪ್ರಿಲ್ 9ರಂದು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ನಡೆಯಲಿದ್ದು, ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದಾವಣಗೆರೆಯ ಅಖ್ತರ್ ರಾಜಾ ವೃತ್ತದಲ್ಲಿ ಯುವಕರು ಪ್ರತಿಭಟನೆ ನಡೆಸಿದ್ದಾರೆ. ಕಪ್ಪು ಪಟ್ಟಿ ಧರಿಸಿ ಜಸ್ಟಿಸ್ ಫಾರ್ ಮೈನಾರಿಟಿಸ್ ಎಂದು ಘೋಷಣೆ ಕೂಗಿದ್ದಾರೆ. ಮುಸ್ಲಿಂ ಸಮುದಾಯ ಕಡೆಗಣಿಸಿ ಶಾಮನೂರು ಕುಟುಂಬಕ್ಕೆ ಟಿಕೆಟ್ ನೀಡಲಾಗಿದೆ. ಉಪಚುನಾವಣೆ ಟಿಕೆಟ್ ನೀಡದೇ ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಲಾಗಿದೆ ಎಂದು ದೂರಿದ್ದಾರೆ. ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ಅಲ್ಪಸಂಖ್ಯಾತರು ಪಾಠ ಕಲಿಸಲಿದ್ದಾರೆ ಎಂದು ದಾವಣಗೆರೆಯಲ್ಲಿ ಪ್ರತಿಭಟನೆ ನಿರತ ಮುಸ್ಲಿಂ ಯುವಕರು ಎಚ್ಚರಿಕೆ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ನಮ್ಮನ್ನು ವೋಟ್ ಬ್ಯಾಂಕ್ ಆಗಿ ಬಳಸಿಕೊಳ್ಳುತ್ತಿದೆ. ದಶಕಗಳ ಕಾಲದ ಬೇಡಿಕೆ ಈಡೇರಿಸದೆ ನಿರ್ಲಕ್ಷ್ಯ ತೋರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ವಿರುದ್ಧ ಘೋಷಣೆ ಕೂಗಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ಕೈತಪ್ಪಿದ್ದಕ್ಕೆ ಆಕ್ರೋಶ ವ್ಯಕ್ತವಾಗಿದ್ದು, ಬೃಹತ್ ಪ್ರತಿಭಟನೆ ನಡೆಸಲಾಗಿದೆ. ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಗಿದ್ದು, ಎರಡು ಕ್ಷೇತ್ರಗಳಲ್ಲಿ ತಕ್ಕ...

ಪವಿತ್ರ ರಂಜಾನ್ ಹಬ್ಬದಂದು ಭಾವೈಕ್ಯತೆ ಮೆರೆದ ಮುಸ್ಲಿಂ ಬಾಂಧವರು – 3 ಸಾವಿರ ಮಠಕ್ಕೆ ತೆರಳಿ ನಮನ

Image
 ಹುಬ್ಬಳ್ಳಿ: ಪವಿತ್ರ ರಂಜಾನ್ ಹಬ್ಬವನ್ನು (Ramadan Festival) ವಾಣಿಜ್ಯ ನಗರದಲ್ಲಿ ಮುಸ್ಲಿಂ ಬಾಂಧವರು ಶ್ರದ್ಧಾ ಭಕ್ತಿಯಿಂದ ಆಚರಿಸಿದರು. ವಿವಾದಿತ ಈದ್ಗಾ ಮೈದಾನದಲ್ಲಿ ಲಕ್ಷಾಂತರ ಮುಸ್ಲಿಮರು ಏಕಕಾಲದಲ್ಲಿ ರಂಜಾನ್ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಹುಬ್ಬಳ್ಳಿಯ ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಅಂಬೇಡ್ಕರ್, ಹೊಸೂರು, ಕಮರಿಪೇಟೆ ಸೇರಿದಂತೆ ಪ್ರಮುಖ ವೃತ್ತಿಗಳಲ್ಲಿ ಸಂಚಾರ ಬಂದ್ ಮಾಡಿ, ಪ್ರಾರ್ಥನೆಗೆ ಅನುವು ಮಾಡಿಕೊಡಲಾಗಿತ್ತು. ಪ್ರಾರ್ಥನೆ ಬಳಿಕ ಅಂಜುಮನ್ ಇಸ್ಲಾಮಿಕ್ ಸಂಸ್ಥೆಯ ಮುಖಂಡರು ಹಾಗೂ ಮುಸ್ಲಿಂ ಮುಖಂಡರು (Muslim Leaders) 3 ಸಾವಿರ ಮಠಕ್ಕೆ ತೆರಳಿ, ದೇವರ ದರ್ಶನ ಪಡೆದು ಭಾವೈಕ್ಯತೆ ಮೆರದರು. ಮಠದ ಪೀಠಾಧಿಪತಿ ಮೂಜಗು ಅನುಪಸ್ಥಿತಿಯಲ್ಲಿ, ಶಿವಮೊಗ್ಗ ಜಿಲ್ಲೆ ಆನಂದಪುರ ಮಠದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಶ್ರೀಗಳು ಮುಸ್ಲಿಂ ಭಕ್ತರಿಗೆ ಆರ್ಶೀವದಿಸಿ ಹಬ್ಬದ ಶುಭಕೋರಿದರು.

ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿ 5 ಕೋಟಿ ರೂ. ಒಡೆಯ

Image
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ರಾಜ್ಯ ಎಸ್ಟಿ ಮೋರ್ಚಾದ ಉಪಾಧ್ಯಕ್ಷ ಶ್ರೀನಿವಾಸ್‌ ದಾಸಕರಿಯಪ್ಪ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ. ಶುಕ್ರವಾರ ಅವರು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಏಪ್ರಿಲ್ 9ರಂದು ಉಪ ಚುನಾವಣೆ ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ. ಮಾರ್ಚ್ 23ರ ಸೋಮವಾರ ಪುನಃ ಬಿಜೆಪಿ ನಾಯಕರ ಜೊತೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ದಾವಣಗೆರೆ ಬಿಜೆಪಿಯಲ್ಲಿ ಬಣ ರಾಜಕೀಯವಿದೆ ಎಂಬ ಆರೋಪಗಳ ನಡುವೆಯೇ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಿರೋಧಿ ಬಣಕ್ಕೆ ಟಿಕೆಟ್ ನೀಡಲಾಗಿದೆ. ಆದ್ದರಿಂದ ಉಪ ಚುನಾವಣೆಯಲ್ಲಿ ಎಲ್ಲರೂ ಒಟ್ಟಾಗಿ ಕೆಲಸ ಮಾಡುವರೇ? ಎಂಬುದು ಪ್ರಶ್ನೆಯಾಗಿದೆ. ಆಸ್ತಿ ವಿವರ: ಶ್ರೀನಿವಾಸ್‌ ದಾಸಕರಿಯಪ್ಪ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸುವಾಗ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಅಫಿಡೆವಿಟ್‌ನಲ್ಲಿ ಆಸ್ತಿ ವಿವರದ ಕುರಿತು ಉಲ್ಲೇಖಿಸಿದ್ದಾರೆ. ಉಪ ಚುನಾವಣೆ ಬಿಜೆಪಿ ಅಭ್ಯರ್ಥಿ 5.75 ಕೋಟಿ ರೂ. ಒಡೆಯ, ಸಾಲ 2.96 ಲಕ್ಷ ರೂ. ಇದೆ. ಒಟ್ಟು ಆಸ್ತಿ 5.75 ಕೋಟಿ ರೂ. ನಗದು 3.60 ಲಕ್ಷ ರೂ. ಒಟ್ಟು ಚರಾಸ್ತಿ 34.79 ಲಕ್ಷ ರೂ. ಸ್ಥಿರಾಸ್ತಿ 5.41 ಕೋಟಿ ರೂ. ವಾಹನ 4 ಬೈಕ್, 1 ಕಾರು ಚಿನ್ನ 120 ಗ್ರಾಂ ಸಾಲ 2.96 ಲಕ್ಷ ರೂ.ಗಳು ಅಪರಾಧ ಪ್ರಕರಣಗಳು ಇಲ್ಲ ಪತ್ನಿ ಸಂಧ್ಯಾ ಎಸ್. ಆಸ್ತಿ ವಿವರ ಒಟ್ಟು ಆಸ್ತಿ ಮೌಲ್ಯ 15.94 ಲಕ್ಷ ನಗದು 90,000 ಚಿನ್ನ 120 ಗ್ರಾಂ ತಾಯಿ ರಂಗಮ್ಮ...

ದಾವಣಗೆರೆ ದಕ್ಷಿಣ: ಸಮರ್ಥ್ ಶಾಮನೂರು ಆಸ್ತಿ ವಿವರ ಘೋಷಣೆ; UK ಪ್ರತಿಷ್ಠಿತ ವಿಶ್ವವಿದ್ಯಾಲಯದಲ್ಲಿ ಕಲಿಕೆ

Image
  ದಾವಣಗೆರೆ ದಕ್ಷಿಣ: ಸಮರ್ಥ್ ಶಾಮನೂರು ಆಸ್ತಿ ವಿವರ ಘೋಷಣೆ; UK ಪ್ರತಿಷ್ಠಿತ ವಿಶ್ವವಿದ್ಯಾಲಯದಲ್ಲಿ ಕಲಿಕೆ ಕರ್ನಾಟಕ ಉಪ ಚುನಾವಣೆಗೆ ಸಂಬಂಧಿಸಿದಂತೆ ದಾವಣಗೆರೆ ದಕ್ಷಿಣದ ಅಭ್ಯರ್ಥಿಯಾಗಿ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಅವರ ಬಳಿ 2.17 ಕೋಟಿ ರೂ. ಚರಾಸ್ತಿ, 2.08 ಕೋಟಿ ಸ್ಥಿರಾಸ್ತಿ ಹೊಂದಿದ್ದಾರೆ. ಮೂರೂವರೆ ಕೋಟಿ ರೂ. ಸಾಲ ಹೊಂದಿದ್ದಾರೆ. ವಿದ್ಯಾಭ್ಯಾಸ ನೋಡಿದರೆ ಇಂಗ್ಲೆಂಡ್‌ನಲ್ಲಿ ಡಿಗ್ರಿ ಮಾಡಿಕೊಂಡು ಬಂದಿದ್ದಾರೆ. ಬೆಂಗಳೂರು: ಕರ್ನಾಟಕ ಉಪ ಚುನಾವಣೆಗೆ ಸಂಬಂಧಿಸಿದಂತೆ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಸದ್ಯ ಅವರ ಆಸ್ತಿ ವಿವರವನ್ನು ಚುನಾವಣಾ ಆಯೋಗ ಬಹಿರಂಗಪಡಿಸಿದೆ ಸಚಿವ ಎಸ್‌ಎಸ್‌ ಮಲ್ಲಿಕಾರ್ಜುನ್‌ - ಪ್ರಭಾ ಮಲ್ಲಿಕಾರ್ಜುನ ದಂಪತಿ ಮೊದಲ ಪುತ್ರ ಸಮರ್ಥ್‌ ಬಳಿ 2.17 ಕೋಟಿ ರೂ. ಚರಾಸ್ತಿ, 2.08 ಕೋಟಿ ರೂ. ಸ್ಥಿರಾಸ್ತಿ ಸೇರಿ 4.25 ಕೋಟಿ ಆಸ್ತಿ ಘೋಷಣೆ ಮಾಡಿಕೊಂಡಿದ್ದಾರೆ. ಹೊಣೆಗಾಗಿಕೆ/ ಸಾಲ ಒಟ್ಟು 3.52 ಕೋಟಿ ರೂ. ಸರ್ಮರ್ಥ್‌ ಮೇಲಿದೆ. ಇನ್ನು ಸ್ವಂತ ಕಾರು/ ವಾಹನಗಳನ್ನು ಹೊಂದಿಲ್ಲ. ಪಿತ್ರಾರ್ಜಿತ ಆಸ್ತಿ ಬಂದಿಲ್ಲ ಎಂದು ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದ್ದಾರೆ. ಸಮರ್ಥ್‌ ಚರಾಸ್ತಿ ಏನೆಲ್ಲಾ ಇದೆ? ಕೈಯಲ್ಲಿ ನಗದು - 8.35 ಲಕ್ಷ ರೂ. ಬ್ಯಾಂಕ್‌ನಲ್ಲಿ ಠೇವ...

ದಾವಣಗೆರೆ ದಕ್ಷಿಣ ಉಪಚುನಾವಣೆ 'ಬಿಜೆಪಿಯ ಮಾಸ್ಟರ್ ಪ್ಲಾನ್'ಗೆ ಕಾಂಗ್ರೆಸ್ ಕಂಗಾಲು; ಕೈ ಪಾಳಯದಲ್ಲೂ ಅಹಿಂದ ಜಪ!

Image
 ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆಯಲ್ಲಿ, ಬಿಜೆಪಿ ಸಾಮಾನ್ಯ ಕ್ಷೇತ್ರದಲ್ಲಿ ಎಸ್‌ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಚ್ಚರಿ ಮೂಡಿಸಿದೆ. ಈ ನಡೆಯಿಂದಾಗಿ, ಲಿಂಗಾಯತ ಅಥವಾ ಮುಸ್ಲಿಂ ಅಭ್ಯರ್ಥಿಯನ್ನು ನಿರೀಕ್ಷಿಸುತ್ತಿದ್ದ ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಗೊಂದಲ ಸೃಷ್ಟಿಯಾಗಿದೆ. ದಾವಣಗೆರೆ (ಮಾ.19): ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾರಕಕ್ಕೇರಿದೆ. ಇದು ಸಾಮಾನ್ಯ ಕ್ಷೇತ್ರವಾಗಿದ್ದರೂ ಇಲ್ಲಿ ಬಿಜೆಪಿ ಪರಿಶಿಷ್ಟ ಪಂಗಡದ (ST) ಅಭ್ಯರ್ಥಿಯನ್ನು ಕಣಕ್ಕಿಳಿಸಿ ಮಾಸ್ಟರ್ ಸ್ಟ್ರೋಕ್ ನೀಡಿದೆ. ಈ ಹಿನ್ನೆಲೆಯಲ್ಲಿ ಲಿಂಗಾಯತ ಅಥವಾ ಮುಸ್ಲಿಂ ಸಮುದಾಯಕ್ಕೆ ಟಿಕೆಟ್‌ ಕೊಡಬೇಕು ಎನ್ನುತ್ತಿದ್ದ ಕಾಂಗ್ರೆಸ್ ಪಾಳಯದಲ್ಲಿ ಹೊಸ ಲೆಕ್ಕಾಚಾರಗಳಿಗೆ ಮತ್ತು ಗೊಂದಲಗಳಿಗೆ ಕಾರಣವಾಗಿದೆ. ಬಿಜೆಪಿಯ ಎಸ್‌ಟಿ ಅಸ್ತ್ರ ಮತ್ತು ಜಾತಿ ಸಮೀಕರಣ: ದಾವಣಗೆರೆ ದಕ್ಷಿಣದಲ್ಲಿ ಕೇಸರಿ ಪಡೆ ಈ ಬಾರಿ ಅತ್ಯಂತ ಚಾಣಾಕ್ಷ ನಡೆ ಇಟ್ಟಿದೆ. ಹತ್ತು ಹಲವು ಲೆಕ್ಕಾಚಾರಗಳನ್ನು ಹಾಕಿರುವ ಬಿಜೆಪಿ ಹೈಕಮಾಂಡ್, ಸಾಮಾನ್ಯ ಕ್ಷೇತ್ರದಲ್ಲಿ ಎಸ್‌ಟಿ ಸಮುದಾಯದ ಶ್ರೀನಿವಾಸ ದಾಸ ಕರಿಯಪ್ಪ ಅವರಿಗೆ ಟಿಕೆಟ್ ನೀಡುವ ಮೂಲಕ ಅಚ್ಚರಿ ಮೂಡಿಸಿದೆ. ನಿರಂತರವಾಗಿ ಸೋಲುತ್ತಿರುವ ಅಭ್ಯರ್ಥಿಗಳನ್ನು ಬದಲಿಸಿ, 'ಗೆಲ್ಲುವುದೊಂದೇ ಮಾನದಂಡ' ಎಂಬ ಸೂತ್ರದಡಿ ಬಿಜೆಪಿ ಈ ನಿರ್ಧಾರ ಕೈಗ...

ದಂಗೆಯ ಸಮಯದಲ್ಲಿ ಪ್ರಾಣ ನೀಡಿದವರಿಗೆ ಕೃತಜ್ಞತೆ: ಕಳೆದ 30 ವರ್ಷಗಳಿಂದ ರಂಜಾನ್ ವ್ರತ ಪಾಲಿಸುತ್ತಿದ್ದಾರೆ ಖ್ಯಾತ ಶೆಫ್ ವಿಕಾಸ್ ಖನ್ನಾ

Image
  ಮಿಚೆಲಿನ್ ಸ್ಟಾರ್ ಗೌರವಕ್ಕೆ ಪಾತ್ರರಾಗಿರುವ ವಿಶ್ವವಿಖ್ಯಾತ ಶೆಫ್ ವಿಕಾಸ್ ಖನ್ನಾ ಅವರು ಪ್ರತಿ ವರ್ಷ ರಂಜಾನ್ ಮಾಸದಲ್ಲಿ ಒಂದು ದಿನ ಉಪವಾಸ (ರೋಜಾ) ಮಾಡುತ್ತಾರೆ. ಒಬ್ಬ ಪಂಜಾಬಿ ಹಿಂದೂ ಕುಟುಂಬದಲ್ಲಿ ಹುಟ್ಟಿದ ಇವರು ಕಳೆದ 30 ವರ್ಷಗಳಿಂದ ಈ ಪದ್ಧತಿಯನ್ನು ಪಾಲಿಸುತ್ತಿರುವುದರ ಹಿಂದೆ ಧರ್ಮಕ್ಕಿಂತ ಮಿಗಿಲಾದ ಮಾನವೀಯತೆಯ ಕಥೆಯಿದೆ 1992ರಲ್ಲಿ ಮುಂಬೈನಲ್ಲಿ ಭೀಕರ ಕೋಮು ದಂಗೆ ನಡೆಯುತ್ತಿದ್ದ ಸಮಯ. ಆಗ ವಿಕಾಸ್ ಖನ್ನಾ ಮುಂಬೈನ ಹೋಟೆಲ್‌ ಒಂದರಲ್ಲಿ ಟ್ರೈನಿ ಆಗಿ ಕೆಲಸ ಮಾಡುತ್ತಿದ್ದರು. ಇಡೀ ನಗರ ಹೊತ್ತಿ ಉರಿಯುತ್ತಿತ್ತು. ಆ ಗಲಭೆಯ ನಡುವೆ ಘಾಟ್ಕೋಪರ್‌ನಲ್ಲಿದ್ದ ತನ್ನ ಸಹೋದರನ ಸುರಕ್ಷತೆಯ ಬಗ್ಗೆ ವಿಕಾಸ್ ಅವರಿಗೆ ಆತಂಕ ಶುರುವಾಯಿತು. ಪ್ರಾಣ ಉಳಿಸಿದ ಆ ಮುಸ್ಲಿಂ ಕುಟುಂಬ ತಮ್ಮ ಸಹೋದರನನ್ನು ಹುಡುಕುತ್ತಾ ವಿಕಾಸ್ ಸುಮಾರು ಎರಡುವರೆ ಗಂಟೆಗಳ ಕಾಲ ಕಾಲ್ನಡಿಗೆಯಲ್ಲೇ ಸಾಗಿದರು. ದಾರಿಯಲ್ಲಿ ಒಂದು ಮುಸ್ಲಿಂ ಕುಟುಂಬ ಇವರನ್ನು ಕಂಡು, ಹೊರಗೆ ಪರಿಸ್ಥಿತಿ ಅಪಾಯಕಾರಿಯಾಗಿದೆ ಎಂದು ಎಚ್ಚರಿಸಿ ತಮ್ಮ ಮನೆಗೆ ಕರೆದೊಯ್ದರು. ಸ್ವಲ್ಪ ಸಮಯದಲ್ಲೇ ರೊಚ್ಚಿಗೆದ್ದ ಗುಂಪೊಂದು ಆ ಮನೆಗೆ ನುಗ್ಗಿ ವಿಕಾಸ್ ಯಾರು ಎಂದು ಪ್ರಶ್ನಿಸಿತು. ಆಗ ಆ ಕುಟುಂಬದವರು ಹಿಂಜರಿಯದೆ, “ಇವನು ನಮ್ಮ ಮಗ” ಎಂದು ಸುಳ್ಳು ಹೇಳಿ ದಂಗೆಕೋರರಿಂದ ವಿಕಾಸ್ ಪ್ರಾಣ ಉಳಿಸಿದರು. ಅಷ್ಟೇ ಅಲ್ಲದೆ, ತಮ್ಮ ಅಳಿಯನನ್ನು ಕಳುಹಿಸಿ ವಿಕಾಸ್ ಅವರ ಸಹೋದರ ಸುರಕ್ಷಿತವಾಗಿದ್ದಾನೆ ಎಂ...

ತಾಯಿಯ ಅಂತ್ಯಕ್ರಿಯೆ ಮುಗಿದ ಬೆನ್ನಲ್ಲೇ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿ ಅಬ್ದುಲ್ ಅಫಾನ್:

Image
 ತಾಯಿಯ ಅಂತ್ಯಕ್ರಿಯೆ ಮುಗಿದ ಬೆನ್ನಲ್ಲೇ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿ ಅಬ್ದುಲ್ ಅಫಾನ್: ಚಾಮರಾಜನಗರದ ಯುವಕನ ಶೈಕ್ಷಣಿಕ ಬದ್ಧತೆಗೆ ಎಲ್ಲರ ಮೆಚ್ಚುಗೆ ಚಾಮರಾಜನಗರ: ತಾಯಿಯ ಅಗಲಿಕೆಯ ಅಪಾರ ದುಃಖದ ನಡುವೆಯೂ, ತನ್ನ ಭವಿಷ್ಯವನ್ನು ರೂಪಿಸುವ ಪರೀಕ್ಷೆಯ ಜವಾಬ್ದಾರಿಯನ್ನು ನಿಭಾಯಿಸುವ ಮೂಲಕ ಚಾಮರಾಜನಗರದ ವಿದ್ಯಾರ್ಥಿಯೊಬ್ಬ ಎಲ್ಲರಿಗೂ ಮಾದರಿಯಾಗಿದ್ದಾನೆ. ಚಾಮರಾಜನಗರದ ನಿವಾಸಿಯಾದ ಅಬ್ದುಲ್ ಅಫಾನ್ ಎಂಬ ವಿದ್ಯಾರ್ಥಿಯ ತಾಯಿ ನೂರ್ ಜಹರಾ ಅವರು ಕಳೆದ ಕೆಲವು ಸಮಯದಿಂದ ಮಾರಕ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಮಂಗಳವಾರ ರಾತ್ರಿ ನಿಧನರಾದರು. ದುಃಖದ ನಡುವೆಯೂ ಮರೆಯದ ಕರ್ತವ್ಯ: ತಾಯಿಯ ಸಾವಿನಿಂದ ಇಡೀ ಕುಟುಂಬ ಶೋಕಸಾಗರದಲ್ಲಿ ಮುಳುಗಿದ್ದರೂ, ಅಬ್ದುಲ್ ಅಫಾನ್ ಧೈರ್ಯ ಗುಂದಲಿಲ್ಲ. ಬುಧವಾರ ಬೆಳಿಗ್ಗೆ ತಾಯಿಯ ಅಂತ್ಯಕ್ರಿಯೆ ವಿಧಿವಿಧಾನಗಳು ಪೂರ್ಣಗೊಂಡ ಕೆಲವೇ ಗಂಟೆಗಳಲ್ಲಿ, ಅಫಾನ್ ತನ್ನ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಿ ಪರೀಕ್ಷೆ ಬರೆದಿದ್ದಾನೆ. ತಾಯಿಯ ಅಗಲಿಕೆಯ ನೋವು ಒಂದೆಡೆಯಾದರೆ, ಶಿಕ್ಷಣದ ಮೇಲಿನ ಬದ್ಧತೆ ಮತ್ತು ತನ್ನ ಭವಿಷ್ಯದ ಬಗ್ಗೆ ಅಫಾನ್ ತೋರಿಸಿದ ಈ ಧೈರ್ಯವು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಮಗನ ಈ ಸಾಹಸಮಯ ನಿರ್ಧಾರಕ್ಕೆ ಸ್ಥಳೀಯರು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ದಾವಣಗೆರೆ | ಉಪಚುನಾವಣೆ ನೀತಿ ಸಂಹಿತೆ ಜಾರಿ; ಪಾಲಿಕೆಯಲ್ಲಿ ಚುನಾವಣಾ ಕಛೇರಿ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

Image
 “ಚುನಾವಣಾ ಆಯೋಗದ ಅಧಿಸೂಚನೆಯಂತೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗಿದ್ದು, ಈಗಾಗಲೇ ಮಾರ್ಚ್ 16 ರಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕ್ಷೇತ್ರದ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗುವುದು ಮತ್ತು ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಚುನಾವಣಾ ಕಛೇರಿ ತೆರೆಯಲಾಗಿದೆ” ಎಂದು ದಾವಣಗೆರೆ ಜಿಲ್ಲಾಧಿಕಾರಿ ಡಾಕ್ಟರ್ ಗಂಗಾಧರ ಸ್ವಾಮಿ ಜಿಎಂ ಮಾಹಿತಿ ನೀಡಿದರು. ದಾವಣಗೆರೆ ಜಿಲ್ಲಾಡಳಿತ ಭವನದಲ್ಲಿ ದಕ್ಷಿಣ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಪ್ರಯುಕ್ತ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು “ಈಗಾಗಲೇ ಮತದಾರರ ಪಟ್ಟಿಯನ್ನು ಸಿದ್ಧಗೊಳಿಸಲಾಗಿದೆ. ಅಲ್ಲದೆ ಮತದಾನಕ್ಕೆ 10 ದಿನ ಇರುವವರೆಗೂ (ಮಾರ್ಚ್ 29) ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿರುವ, ಹೊಸದಾಗಿ ಸೇರಿಸುವ ಅರ್ಹ ಮತದಾರರ ಹೆಸರುಗಳನ್ನು ಸೇರಿಸುವ ಅವಕಾಶವಿದೆ. ಹಾಗಾಗಿ ಅರ್ಹತೆ ಇರುವ ಎಲ್ಲರೂ ತಮ್ಮ ಮತದಾನದ ಹೆಸರುಗಳನ್ನು ಪರಿಶೀಲಿಸಿ, ಮತದಾರರ ಪಟ್ಟಿಯಲ್ಲಿ ಹೆಸರನ್ನು ಸೇರಿಸಬಹುದು” ಎಂದು ಸ್ಪಷ್ಟಪಡಿಸಿದರು. “ಕ್ಷೇತ್ರದ ಮತ್ತು ದಾವಣಗೆರೆಯ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲಾ ಅನಧಿಕೃತ ಫ್ಲೆಕ್ಸ್ ಗಳನ್ನು ಮತ್ತು ರಾಜಕೀಯ ವ್ಯಕ್ತಿಗಳ ಗಣ್ಯರ ಫೋಟೋಗಳನ್ನು ಈಗಾಗಲೇ ತೆರವುಮಾಡಲಾಗುತ್ತಿದೆ ಮತ್ತು ಸಾರ್ವಜನಿಕ ಸ್ಥಳದಲ್ಲಿ ಗಣ್ಯರ ರಾಜಕೀಯ ವ್ಯಕ್ತಿಗಳ ಫೋಟೋ...

ಆಸ್ತಿ ಗಾಗಿ ತಾಯಿ ಮೇಲೆ ಮಾರಣಾಂತಿಕ ಹಲ್ಲೆ! ಹೆತ್ತ ತಪ್ಪಿಗೆ ಸಾವು-ಬದುಕಿನ ನಡುವೆ ಹೋರಾಟ

Image
 ಬೆಂಗಳೂರಿನಲ್ಲಿ ಆಸ್ತಿ ವಿಚಾರವಾಗಿ ನಡೆದ ಜಗಳದಲ್ಲಿ, ಹಿರಿಯ ಮಗ ಪ್ರಕಾಶ್ ತನ್ನ ವೃದ್ಧ ತಾಯಿ ಲಕ್ಷ್ಮೀ ಅವರ ಮೇಲೆ ವಾಕಿಂಗ್ ಸ್ಟಿಕ್‌ನಿಂದ ಮಾರಣಾಂತಿಕ ಹಲ್ಲೆ.. ಗಂಭೀರವಾಗಿ ಗಾಯಗೊಂಡ ತಾಯಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದು, ಈ ಸಂಬಂಧ ತಿಲಕನಗರ ಪೊಲೀಸರು ಆರೋಪಿ ಮಗ ಪೊಲೀಸರ ವಶಕ್ಕೆ ಬೆಂಗಳೂರು (ಮಾ.15): ಹಣ ಆಸ್ತಿ ಮೇಲಿನ ದುರಾಸೆ ಮನುಷ್ಯರಿಂದ ಎಂಥ ಪಾಪ ಕೃತ್ಯಗಳಿಗೆ ಇಳಿಯವಂತೆ ಮಾಡುತ್ತೆ, ಕ್ರೂರ ಸಂಬಂಧಗಳಿಗೂ ನಾಂದಿ ಹಾಡುತ್ತದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಆಸ್ತಿಗಾಗಿ ಸ್ವಂತ ತಾಯಿಯ ಮೇಲೆಯೇ ಮಾರಣಾಂತಿಕ ಹಲ್ಲೆ ನಡೆಸಿದ್ದ ಆರೋಪಿ ಪ್ರಕಾಶ್ ಎಂಬಾತನನ್ನು ತಿಲಕನಗರ ಪೊಲೀಸರು ಇಂದು ಬಂಧಿಸಿದ್ದಾರೆ. ಮಾರ್ಚ್ 12ರಂದು ನಡೆದಿದ್ದ ಈ ಭೀಕರ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೊದಲನೇ ಮಗನಿಂದಲೇ ಕೃತ್ಯ ವೃದ್ಧೆ ಲಕ್ಷ್ಮೀ ಅವರಿಗೆ ಒಟ್ಟು ಮೂವರು ಗಂಡು ಮಕ್ಕಳು. ಪತಿ ಹಾಗೂ ಎರಡನೇ ಮಗ ಈಗಾಗಲೇ ಮೃತಪಟ್ಟಿದ್ದಾರೆ. ಮೊದಲನೇ ಮಗ ಪ್ರಕಾಶ್ ಹಾಗೂ ಮೂರನೇ ಮಗ ರಮೇಶ್ ನಡುವೆ ದೀರ್ಘಕಾಲದಿಂದ ಆಸ್ತಿ ಹಂಚಿಕೆ ವಿಚಾರವಾಗಿ ಜಗಳ ನಡೆಯುತ್ತಿತ್ತು. ಈ ಸಂಬಂಧ 2016ರಿಂದಲೂ ನ್ಯಾಯಾಲಯದಲ್ಲಿ ಕಾನೂನು ಹೋರಾಟ ನಡೆಯುತ್ತಿದ್ದು, ಆಸ್ತಿ ತನ್ನ ಪಾಲಾಗಬೇಕೆಂದು ಪ್ರಕಾಶ್ ಹಠಕ್ಕೆ ಬಿದ್ದಿದ್ದ ಎನ್ನಲಾಗಿದೆ. ಸಾವು-ಬದುಕಿನ ನಡುವೆ ತಾಯಿಯ ಹೋರಾಟ ರಕ್ತದ ಮಡುವಿನಲ್ಲಿ ಬಿದ್ದಿದ್ದ ತಾಯಿಯನ್ನು ಕಂಡು ಗಾಬರಿಯಾದ ಕಿರಿ ಮಗ ರಮೇಶ್, ಕೂಡಲೇ...

ದಾವಣಗೆರೆ | ಯಾರಿಗೆ ಟಿಕೆಟ್‌ ಕೊಟ್ಟರೂ ಬಿಜೆಪಿ ಗೆಲ್ಲಿಸ್ತೇವೆ ಐವರು ಟಿಕೆಟ್ ಆಕಾಂಕ್ಷಿಗಳಿಂದ ಒಗ್ಗಟ್ಟು ಪ್ರದರ್ಶನ

Image
 ದಾವಣಗೆರೆ: ಶಾಮನೂರು ಶಿವಶಂಕರಪ್ಪ (Shamanuru Shivashankarappa) ನಿಧನದ ಬಳಿಕ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ (Davangere South Byelection) ಬಿಜೆಪಿಯಿಂದ ಯಾರೇ ಸ್ಪರ್ಧಿಸಿದರೂ ಗೆಲ್ಲಿಸುತ್ತೇವೆ ಎಂದು ಐವರು ಟಿಕೆಟ್ ಆಕಾಂಕ್ಷಿಗಳು ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಬಿಜೆಪಿಯ (BJP) ಎರಡು ಬಣದ ನಾಯಕರು ಒಂದಾಗಿದ್ದಾರೆ. ಐವರು ಆಕಾಂಕ್ಷಿಗಳು ಜಂಟಿ ಸುದ್ದಿಗೋಷ್ಠಿ ನಡೆಸಿ, ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ಅಜಯ್ ಕುಮಾರ್, ಯಶವಂತರಾವ್ ಜಾದವ್, ರಾಜನಹಳ್ಳಿ ಶಿವಕುಮಾರ್, ಶ್ರೀನಿವಾಸ್ ದಾಸಕರಿಯಪ್ಪ ಮತ್ತು ದೇವರಮನೆ ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ಭಾಗಿಯಯಾಗಿದ್ದರು. ಈ ವೇಳೆ ಯಾರಿಗೆ ಟಿಕೆಟ್ ಕೊಟ್ಟರು ಬಿಜೆಪಿ ಗೆಲ್ಲಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ

ದಾವಣಗೆರೆ ಅಭಿಮಾನಿಯ ಭವಿಷ್ಯವಾಣಿ ನಿಜವಾಯ್ತು! ನ್ಯೂಜಿಲೆಂಡ್ ಮಣಿಸಿ ವಿಶ್ವಕಪ್ ಗೆದ್ದು ಇತಿಹಾಸ ಬರೆದ ಭಾರತ

Image
 ದಾವಣಗೆರೆ ಅಭಿಮಾನಿಯ ಭವಿಷ್ಯವಾಣಿ ನಿಜವಾಯ್ತು! ನ್ಯೂಜಿಲೆಂಡ್ ಮಣಿಸಿ ವಿಶ್ವಕಪ್ ಗೆದ್ದು ಇತಿಹಾಸ ಬರೆದ ಭಾರತ ದಾವಣಗೆರೆ: "ಭಾರತ ಈ ಬಾರಿ ವಿಶ್ವಕಪ್ ಗೆಲ್ಲುವುದು ಖಚಿತ" ಎಂದು ದಾವಣಗೆರೆಯ ಅಭಿಮಾನಿ ಚೇತನಾ ಅವರು ವ್ಯಕ್ತಪಡಿಸಿದ್ದ ಆಶಾವಾದ ಇಂದು ನಿಜವಾಗಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಹೈ-ವೋಲ್ಟೇಜ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 96 ರನ್‌ಗಳ ಬೃಹತ್ ಅಂತರದಿಂದ ಸೋಲಿಸಿದ ಭಾರತ, ಮೂರನೇ ಬಾರಿಗೆ ಟಿ20 ವಿಶ್ವಕಪ್ ಮುಕುಟವನ್ನು ಮುಡಿಗೇರಿಸಿಕೊಂಡಿದೆ. ಅಭಿಮಾನಿಯ ಹಾರೈಕೆ: ಕೆಲ ದಿನಗಳ ಹಿಂದೆ ದಾವಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಕ್ರಿಕೆಟ್ ಅಭಿಮಾನಿ ಚೇತನಾ, "ಭಾರತ ತಂಡವು ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಟ್ರೋಫಿ ಎತ್ತಿ ಹಿಡಿಯಲಿದೆ" ಎಂದು ಭವಿಷ್ಯ ನುಡಿದಿದ್ದರು. ಅವರ ಈ ವಿಶ್ವಾಸದ ಮಾತುಗಳು ಈಗ ಕ್ರೀಡಾ ಪ್ರೇಮಿಗಳ ವಲಯದಲ್ಲಿ ವೈರಲ್ ಆಗುತ್ತಿವೆ. ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾದ ಈ ಐತಿಹಾಸಿಕ ಸಾಧನೆಯನ್ನು ದಾವಣಗೆರೆಯ ಜನತೆ ಪಟಾಕಿ ಸಿಡಿಸಿ, ಸಂಭ್ರಮ ಆಚರಿಸುತ್ತಿದ್ದಾರೆ.

ನಕಲಿ ಬಿಲ್ ಸೃಷ್ಟಿಸಿ 15 ಲಕ್ಷ ರೂ. ಲೂಟಿ ಮಾಡಲು ಯತ್ನ: ಡಿಸಿ ಕಚೇರಿಯ ಐವರು ಸಿಬ್ಬಂದಿ ಅರೆಸ್ಟ್

Image
  ನಕಲಿ ಬಿಲ್ ಸೃಷ್ಟಿಸಿ 15 ಲಕ್ಷ ರೂ. ಲೂಟಿ ಮಾಡಲು ಯತ್ನ: ಡಿಸಿ ಕಚೇರಿಯ ಐವರು ಸಿಬ್ಬಂದಿ ಅರೆಸ್ಟ್ ಚಿತ್ರದುರ್ಗ: ಜಿಲ್ಲಾಧಿಕಾರಿ ಮತ್ತು ಎಡಿಸಿ ಅವರ ಡಿಜಿಟಲ್ ಸಹಿಯನ್ನು ದುರುಪಯೋಗಪಡಿಸಿಕೊಂಡು ಸುಮಾರು 15 ಲಕ್ಷ ರೂ. ಮೌಲ್ಯದ ನಕಲಿ ಬಿಲ್ ಸೃಷ್ಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಸಿಬ್ಬಂದಿಯನ್ನು ಬಂಧಿಸಿರುವ ಘಟನೆ ಚಿತ್ರದುರ್ಗದಲ್ಲಿ ಬೆಳಕಿಗೆ ಬಂದಿದೆ. ನಗರಾಭಿವೃದ್ಧಿ ವಿಭಾಗದಲ್ಲಿ ಹೊರಗುತ್ತಿಗೆ ನೌಕರ ಸೈಯದ್ ಸಾದಿಕ್, ವಿನಯ್ ಶರ್ಮಾ, ವಿಜಯ್ ಕುಮಾರ್, ಬಸವರಾಜ, ಮಹೆಬೂಬ್ ಭಾಷಾ ಹಾಗೂ ವೆಂಕಟೇಶ್ ಎಂಬ ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಸದ್ಯ ಐವರನ್ನು ಬಂಧಿಸಲಾಗಿದ್ದು, ಎ1 ಆರೋಪಿ ಸೈಯದ್ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಜಿಲ್ಲಾ ನಗರಾಭಿವೃದ್ಧಿ ಕೋಶದ ಐವರು ಸಿಎಲ್‌ಟಿಸಿ ಸಿಬ್ಬಂದಿ ಜಿಲ್ಲಾಧಿಕಾರಿ ಮತ್ತು ಎಡಿಸಿಯವರ ಡಿಜಿಟಲ್ ಸಹಿ ಬಳಸಿ 15.08 ಲಕ್ಷ ರೂ. ಮೊತ್ತದ ನಕಲಿ ಬಿಲ್ ಸೃಷ್ಟಿಸಿದ್ದರು. ಈ ನಕಲಿ ಬಿಲ್ಲನ್ನು ಜಿಲ್ಲಾ ಖಜಾನೆಗೆ ಕಳುಹಿಸಿದಾಗ, ಸಹಿಯ ಬಗ್ಗೆ ಅನುಮಾನಗೊಂಡ ಖಜಾನೆ ಇಲಾಖೆ ಅಧಿಕಾರಿಗಳು ಆಕ್ಷೇಪಣೆ ಎತ್ತಿದರು. ಇದರಿಂದ ವಂಚನೆ ಬೆಳಕಿಗೆ ಬಂದಿದೆ. ಸೈಯದ್ ಸಾದಿಕ್ ಎಂಬ ನೌಕರ ಡಿಸಿ ಕಚೇರಿಯಿಂದ ಡಿಜಿಟಲ್ ಸಹಿಯ ಕೀಲಿಯನ್ನು ಕಳ್ಳತನ ಮಾಡಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ನಗರಾಭಿವೃದ್ಧಿ ಕೋಶದ ನಿರ್ದೇಶಕಿ ರೇಷ್ಮಾ ಹಾನಗಲ್ ಅವರು ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾ...

ದಾವಣಗೆರೆ ದಕ್ಷಿಣ ಉಪ ಚುನಾವಣೆ: ಅವನ್ಯಾರು ಮಾತನಾಡೋಕೆ? ಇವೆಲ್ಲ ಸರಿ ಇರಲ್ಲ: ಜಮೀರ್‌ ವಿರುದ್ಧ SS ಮಲ್ಲಿಕಾರ್ಜುನ್‌ ಕಿಡಿ

Image
 ದಾವಣಗೆರೆ ಉಪ ಚುನಾವಣೆ ಕಾಂಗ್ರೆಸ್‌ ಟಿಕೆಟ್‌ ವಿಚಾರ ದಿನದಿಂದ ದಿನಕ್ಕೆ ದೊಡ್ಡ ಚರ್ಚೆಗೆ ಕಾರಣವಾಗುತ್ತಿದೆ. ಅಲ್ಪಸಂಖ್ಯಾತ ಸಮುದಾಯ ವಹಿಸಿಕೊಂಡು ಮಾತನಾಡಿದ ಸಚಿವ ಜಮೀರ್ ವಿರುದ್ಧ ಎಸ್‌ಎಸ್‌ ಮಲ್ಲಿಕಾರ್ಜುನ್ ಕಿಡಿಕಾರಿದ್ದಾರೆ. ಅವನ್ಯಾರು ಇಲ್ಲಿ ಬಂದು ಮಾತನಾಡಲು ಎಂದು ಪ್ರಶ್ನೆ ಮಾಡಿದ್ದಾರೆ. ಇನ್ನು ಪುತ್ರನಿಗೆ ಟಿಕೆಟ್‌ ಕೇಳಿಲ್ಲ ಹೈಕಮಾಂಡ್‌ ಹೇಳಿದಂತೆ ನಾವು ಪಾಲಿಸುತ್ತೇವೆ ಎಂದು ಮಲ್ಲಿಕಾರ್ಜುನ್ ಹೇಳಿದ್ದಾರೆ. ದಾವಣಗೆರೆ ಉಪ ಚುನಾವಣೆ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ನಲ್ಲಿಯೇ ಆಂತರಿಕ ಭಿನ್ನಮತ ಎದುರಾಗಿದ್ದು, ದಾವಣಗೆರೆ ಉಸ್ತುವಾರಿ ಸಚಿವ ಎಸ್‌ಎಸ್‌ ಮಲ್ಲಿಕಾರ್ಜುನ್ ಅವರು ಸಚಿವ ಜಮೀರ್ ಅಹಮ್ಮದ್ ಖಾನ್‌ ನಡೆಯನ್ನು ಪ್ರಶ್ನೆ ಮಾಡಿದ್ದಾರೆ. ಅವನ್ಯಾರು ಇಲ್ಲಿ ಬಂದು ಮಾತನಾಡೋಕೆ, ಇವೆಲ್ಲಾ ಸರಿ ಇರಲ್ಲ ಎಂದು ಕಿಡಿಕಾರಿದ್ದಾರೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಇನ್ನೆರಡು ತಿಂಗಳಲ್ಲಿ ನಡೆಯಲಿದೆ. ಶಾಮನೂರು ಕುಟುಂಬ ಹಾಗೂ ಅಲ್ಪಸಂಖ್ಯಾತ ವರ್ಗದ ನಡುವೆ ಟಿಕೆಟ್‌ಗೆ ಭಾರೀ ಪೈಪೋಟಿ ಇದೆ. ಈ ನಡುವೆ, ಸಚಿವ ಜಮೀರ್‌ ಅವರು ಶಿವಶಂಕರಪ್ಪನವರು ಬದುಕಿದ್ದಾಗ ನನ್ನ ಬಳಿಕ ಮುಸ್ಲಿಂ ಸಮುದಾಯಕ್ಕೆ ಟಿಕೆಟ್‌ ಎಂದು ಮಾತುಕೊಟ್ಟಿದ್ದರು ಎಂದು ಹೇಳಿಕೆ ನೀಡಿದ್ದರು. ಜತೆಗೆ ಹೈಕಮಾಂಡ್‌ ಮಟ್ಟದಲ್ಲಿಯೂ ಲಾಬಿ ನಡೆಸುತ್ತಿದ್ದರು. ಈ ಬಗ್ಗೆ ಎಸ್ಎಸ್‌ ಮಲ್ಲಿಕಾರ್ಜುನ್ ಬಹಿರಂಗವಾಗಿ ಆಕ್ರೋಶ ವ್ಯಕ್ತ...

ಲೋಕಾಯುಕ್ತ ದಾಳಿ: ಬಿಡಿಎ ಅರಣ್ಯಾಧಿಕಾರಿ ಮನೆಯಲ್ಲಿ ₹3.08 ಕೋಟಿ ಮೌಲ್ಯದ ಅಕ್ರಮ ಆಸ್ತಿ ಪತ್ತೆ!

Image
 ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪದ ಮೇಲೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (BDA) ವಲಯ ಅರಣ್ಯಾಧಿಕಾರಿ ದಾಳೇಶ್ ಎ.ಎಲ್. ಅವರ ಮೇಲೆ ಲೋಕಾಯುಕ್ತ ಅಧಿಕಾರಿಗಳು ಶನಿವಾರ ಸಂಜೆ ದಿಢೀರ್ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯ ವೇಳೆ ಅಂದಾಜು ₹3.08 ಕೋಟಿ ಮೌಲ್ಯದ ಅಕ್ರಮ ಆಸ್ತಿ ಇರುವುದು ಪತ್ತೆಯಾಗಿದೆ. ದಾಳಿಯ ವಿವರಗಳು: ಬೆಂಗಳೂರು ನಗರ-1 ವಿಭಾಗದ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ದಾಳೇಶ್ ಅವರ ವಿರುದ್ಧ ದಾಖಲಾಗಿದ್ದ ದೂರಿನ ಅನ್ವಯ ಈ ಕ್ರಮ ಕೈಗೊಳ್ಳಲಾಗಿದೆ. ಲೋಕಾಯುಕ್ತ ಪೊಲೀಸರು ಮತ್ತು ಅಧಿಕಾರಿಗಳ ತಂಡವು ದಾಳೇಶ್ ಮತ್ತು ಅವರ ಆಪ್ತರಿಗೆ ಸೇರಿದ ಒಟ್ಟು ನಾಲ್ಕು ಸ್ಥಳಗಳಲ್ಲಿ ಏಕಕಾಲಕ್ಕೆ ಶೋಧ ಕಾರ್ಯ ನಡೆಸಿತು. ವಶಪಡಿಸಿಕೊಂಡ ಅಕ್ರಮ ಆಸ್ತಿಯ ಪಟ್ಟಿ: ತನಿಖೆಯ ವೇಳೆ ಅಧಿಕಾರಿಗಳು ದಾಳೇಶ್ ಮತ್ತು ಅವರ ಆಪ್ತರ ಹೆಸರಿನಲ್ಲಿರುವ ಕೋಟ್ಯಂತರ ರೂಪಾಯಿ ಮೌಲ್ಯದ ಸ್ಥಿರ ಮತ್ತು ಚರಾಸ್ತಿಗಳನ್ನು ಪತ್ತೆಹಚ್ಚಿದ್ದಾರೆ: ನಿವೇಶನ ಮತ್ತು ಮನೆ: ₹2.70 ಕೋಟಿ ಮೌಲ್ಯದ 3 ನಿವೇಶನಗಳು ಮತ್ತು 2 ವಾಸದ ಮನೆಗಳು. ವಾಣಿಜ್ಯ ಸಂಕೀರ್ಣ: ಒಂದು ವಾಣಿಜ್ಯ ಸಂಕೀರ್ಣ ಪತ್ತೆಯಾಗಿದೆ. ಕೃಷಿ ಭೂಮಿ: 17 ಎಕರೆ 20 ಗುಂಟೆ ವಿಸ್ತೀರ್ಣದ ಕೃಷಿ ಜಮೀನು ಇರುವುದು ದೃಢಪಟ್ಟಿದೆ. ಚಿನ್ನಾಭರಣ: ₹13 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ವಾಹನಗಳು: ₹34.50 ಲಕ್ಷ ಮೌಲ್ಯದ ವಿವಿಧ ವಾಹನಗಳು ಪತ್ತೆಯಾಗಿವೆ. ಲೋಕಾಯುಕ್ತದ ಅ...

ಹಾಸನ ನಗರಪಾಲಿಕೆ AEE ಮನೆ ಮೇಲೆ ʻಲೋಕಾಯುಕ್ತʼ ದಾಳಿ: ಬಾಗಿಲು ತೆರೆಯದೇ ಕಳ್ಳಾಟ; ಬಿಲ್ಡಿಂಗ್ ಹತ್ತಿ ಕಿಟಕಿ ಬಡಿದರು ನೋ ರೆಸ್ಪಾನ್ಸ್!

Image
 ಲೋಕಾಯುಕ್ತ ಅಧಿಕಾರಿಗಳು ಬರುತ್ತಿದ್ದಂತೆ ಮನೆಯ ಲೈಟ್ ಆಫ್ ಮಾಡಿದ್ದು ಮನೆಯ ಬಾಗಿಲು ತೆರೆಯದ ಸತ್ಯನಾರಾಯಣ ಅಧಿಕಾರಿಗಳನ್ನ ಸತಾಯಿಸಿದ್ದಾರೆ ಹಾಸನ: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದಡಿ ಹಾಸನ ನಗರದ ರಕ್ಷಣಾಪುರಂನಲ್ಲಿರುವ ಹಾಸನ ಮಹಾನಗರಪಾಲಿಕೆ ಎಇಇ ಎಂ.ಸಿ ಸತ್ಯನಾರಾಯಣ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಡಿವೈಎಸ್‌ಪಿ ಸುರೇಶ್‌ ಕುಮಾರ್, ಇನ್ಸ್‌ಪೆಕ್ಟರ್ ಶಿಲ್ಪಾ ನೇತೃತ್ವದಲ್ಲಿ ದಾಳಿ ನಡೆದಿದ್ದು ಬೆಳಗ್ಗೆ 5.15 ಕ್ಕೆ ಸತ್ಯನಾರಾಯಣ ಅವರ ಮನೆಯೊಳಗೆ ಪರಿಶೀಲನೆ‌ ಮಾಡಲು ಲೋಕಾಯುಕ್ತ ಅಧಿಕಾರಿಗಳು ಬಂದು ಕಾಯುತ್ತಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಬರುತ್ತಿದ್ದಂತೆ ಮನೆಯ ಲೈಟ್ ಆಫ್ ಮಾಡಿದ್ದು ಮನೆಯ ಬಾಗಿಲು ತೆರೆಯದ ಸತ್ಯನಾರಾಯಣ ಅಧಿಕಾರಿಗಳನ್ನ ಸತಾಯಿಸಿದ್ದಾರೆ. ಸತತ 2 ಗಂಟೆಯಿಂದ ಮನೆಯ ಬಾಗಿಲು ತೆಗೆಸಲು ಲೋಕಾಯುಕ್ತ ಅಧಿಕಾರಿಗಳು ಹರಸಾಹಸಡಪಡುತ್ತಿದ್ದಾರೆ. ಬಿಲ್ಡಿಂಗ್ ಹತ್ತಿ ಕಿಟಕಿ ಬಡಿದು, ಕೂಗಿದರು ಸತ್ಯನಾರಾಯಣ ಬಾಗಿಲು ತೆರೆಯುತ್ತಿಲ್ಲ. ಮನೆಯ ಸುತ್ತಲೂ ಓಡಾಡಿ ಬಾಗಿಲು ತೆರಸಲು ಪ್ರಯತ್ನಿಸುತ್ತಿದ್ದು ಸತತ 2 ಗಂಟೆಗೂ ಹೆಚ್ಚು ಕಾಲದಿಂದ ಮನೆಯ ಬಳಿಯೇ ಬೀಡುಬಿಟ್ಟಿದ್ದಾರೆ‌. ಸತ್ಯನಾರಾಯಣ ಫೋನ್ ಕೂಡ ಸ್ವಿಚ್‌ ಆಫ್‌ ಮಾಡಿದ್ದಾರೆ ಇನ್ನೂ ಸತ್ಯನಾರಾಯಣ ಬಾಗಿಲು ತೆರೆಯದೇ ಸತಾಯಿಸುತ್ತಿರುವ ಕಾರಣ ಸ್ಥಳಕ್ಕೆ ಲೋಕಾಯುಕ್ತ ಎಸ್ಪಿ ನಂದಿನಿ ಕೂಟ ಭೇಟಿ ನೀಡಿ ಪರಿಸ್ಥಿತಿ ಮೇಲ್ವಿ...

ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ: ಹೈ ಅಲರ್ಟ್ ಘೋಷಿಸಿದ ಪೊಲೀಸರು!

Image
 ದಾವಣಗೆರೆ: ನಗರದ ಜಿಲ್ಲಾಧಿಕಾರಿಗಳ ಅಧಿಕೃತ ಸರ್ಕಾರಿ ನಿವಾಸಕ್ಕೆ ಬುಧವಾರ ಮಧ್ಯಾಹ್ನ ಬಾಂಬ್ ಬೆದರಿಕೆ ಕರೆ ಬಂದಿದ್ದು, ಬೆಣ್ಣೆ ನಗರಿಯ ಜನತೆಯಲ್ಲಿ ಆತಂಕ ಮೂಡಿಸಿದೆ. ತನಿಖೆಯ ನಂತರ ಇದೊಂದು ಹುಸಿ ಬಾಂಬ್ ಬೆದರಿಕೆ ಎಂದು ತಿಳಿದುಬಂದಿದೆ. ಘಟನೆಯ ವಿವರ: ಬುಧವಾರ ಮಧ್ಯಾಹ್ನ ಸುಮಾರು 2:40ಕ್ಕೆ ತುರ್ತು ಸಹಾಯವಾಣಿ 112ಕ್ಕೆ ಕರೆ ಮಾಡಿದ ಅಪರಿಚಿತ ವ್ಯಕ್ತಿಯೊಬ್ಬ, ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರ ನಿವಾಸದಲ್ಲಿ ಬಾಂಬ್ ಇಡಲಾಗಿದೆ ಎಂದು ತಿಳಿಸಿದ್ದಾನೆ. ಕರೆ ಮಾಡಿದ ವ್ಯಕ್ತಿ ಕನ್ನಡದಲ್ಲೇ ಮಾತನಾಡಿದ್ದು, ಮುಂದಿನ 45 ನಿಮಿಷಗಳಲ್ಲಿ ಬಾಂಬ್ ಸ್ಫೋಟಗೊಳ್ಳಲಿದೆ ಎಂದು ಬೆದರಿಕೆ ಹಾಕಿದ್ದನು. ತಪಾಸಣೆ ಮತ್ತು ಕಾರ್ಯಾಚರಣೆ: ಮಾಹಿತಿ ತಿಳಿಯುತ್ತಿದ್ದಂತೆಯೇ ಅಲರ್ಟ್ ಆದ ಪೊಲೀಸರು, ಬಾಂಬ್ ಪತ್ತೆ ದಳ ಮತ್ತು ಶ್ವಾನ ದಳದೊಂದಿಗೆ ಜಿಲ್ಲಾಧಿಕಾರಿಗಳ ನಿವಾಸಕ್ಕೆ ಧಾವಿಸಿದರು. ನಿವಾಸದ ಆವರಣ, ಕೈತೋಟ, ಕೊಠಡಿಗಳು ಹಾಗೂ ವಾಹನಗಳನ್ನು ಒಂದು ಗಂಟೆಗೂ ಹೆಚ್ಚು ಕಾಲ ಕೂಲಂಕಷವಾಗಿ ಪರಿಶೀಲಿಸಲಾಯಿತು. ಪರಿಶೀಲನೆಯ ನಂತರ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗದ ಹಿನ್ನೆಲೆಯಲ್ಲಿ, ಇದೊಂದು ಹುಸಿ ಕರೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ. ಡಿಸಿ ನಿವಾಸದಲ್ಲಿ ಯಾರಿದ್ದರು? ಬೆದರಿಕೆ ಕರೆ ಬಂದ ಸಮಯದಲ್ಲಿ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರು ಮಧ್ಯಾಹ್ನದ ಊಟ ಮುಗಿಸಿ ಕಚೇರಿಗೆ ತೆರಳಿದ್ದರು. ನಿವಾಸದಲ್ಲಿ ಅವರ ತಾಯಿ ಮಾತ್ರ ಇದ್ದರು ...

ಲೋಕಾಯುಕ್ತ ದಾಳಿಗೊಳಗಾದ KREIS ಎಂಜಿನಿಯರ್ ಜನಾರ್ಧನ್ ಒಂದು ತಿಂಗಳಿಂದ ನಿಗೂಢ ನಾಪತ್ತೆ

Image
  ಲೋಕಾಯುಕ್ತ ದಾಳಿಗೊಳಗಾಗಿದ್ದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕೆಆರ್‌ಇಐಎಸ್) ಅಧೀಕ್ಷಕ ಅಭಿಯಂತರ ಎಚ್.ಎಂ. ಜನಾರ್ಧನ್ ಅವರು ಒಂದು ತಿಂಗಳಿನಿಂದ ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ಅವರ ಪತ್ತೆಗೆ ಒತ್ತಾಯಿಸಿ ಕೆಆರ್‌ಎಸ್ ಪಕ್ಷವು ಪೊಲೀಸ್ ಆಯುಕ್ತರಿಗೆ ದೂರು ನೀಡಿದೆ ಬೆಂಗಳೂರು: ಇತ್ತೀಚೆಗೆ ಲೋಕಾಯುಕ್ತ ದಾಳಿಗೊಳಗಾಗಿದ್ದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕೆಆರ್‌ಇಐಎಸ್) ಅಧೀಕ್ಷಕ ಅಭಿಯಂತರ ಎಚ್.ಎಂ. ಜನಾರ್ಧನ್ ಅವರು ಕಳೆದಒಂದು ತಿಂಗಳಿ ನಿಂದ ನಿಗೂಢವಾಗಿ ನಾಪತ್ತೆಯಾಗಿದ್ದು, ಈ ಕುರಿತು ಸಮಗ್ರ ವಾದ ತನಿಖೆ ನಡೆಸುವಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ (ಕೆಆರ್‌ಎಸ್) ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದೆ. ಲೋಕಾಯುಕ್ತ ದಾಳಿಗೊಳಗಾಗಿದ್ದ ಜನಾರ್ಧನ್ ಅವರು ಫೆ.7 ರಿಂದ ಇದುವರೆಗೂ ಕಚೇರಿಗೆ ಹಾಜರಾಗಿಲ್ಲ ಮತ್ತು ಹಾಜರಾತಿ ಪುಸ್ತಕದಲ್ಲಿ ಸಹಿ ಮಾಡಿಲ್ಲ ಎಂಬ ಅಧಿಕೃತ ಮಾಹಿತಿಯನ್ನು ಕೆ.ಆರ್.ಇ.ಐ. ಎಸ್. ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರು ಲಿಖಿತವಾಗಿ ನೀಡಿದ್ದಾರೆ. ಒಬ್ಬ ಜವಾಬ್ದಾರಿಯುತ ಉನ್ನತ ಅಧಿಕಾರಿ ಸುದೀರ್ಘ ಕಾಲದಿಂದ ನಾಪತ್ತೆಯಾಗಿರುವುದು ಆಡಳಿತ ವಲಯದಲ್ಲಿ ತೀವ್ರ ಆತಂಕ ಮೂಡಿಸಿದೆ. ಒಬ್ಬ ಉನ್ನತ ದರ್ಜೆಯ ಸರ್ಕಾರಿ ಅಧಿಕಾರಿ ಯಾವುದೇ ರಜೆ ಅಥವಾ ಮುನ್ಸೂಚನೆ ಇಲ್ಲದೆ 25ಕ್ಕೂ ಹೆಚ್ಚು ದಿನಗಳಿಂದ ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಲೋಕಾಯುಕ್ತ ತನಿಖೆಗೆ ಹೆದರಿ ...

ರಾಜ್ಯಾದ್ಯಂತ ಲೋಕಾಯುಕ್ತ ಮಹಾಬೇಟೆ: ಬೆಚ್ಚಿಬಿದ್ದ ಭ್ರಷ್ಟ ಅಧಿಕಾರಿಗಳು, ಒಬ್ಬೊಬ್ಬರಂದೂ ಒಂದೊಂದು ಕಥೆ!

Image
 ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿ, ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ಹಿರಿಯ ಇಂಜಿನಿಯರ್‌ಗಳು ಸೇರಿದಂತೆ ಹಲವು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆ ಮಾಡಲಾಗುತ್ತಿದೆ ಬೆಂಗಳೂರು (ಮಾ.05): ರಾಜ್ಯದಲ್ಲಿ ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಪೊಲೀಸರು ಮತ್ತೊಂದು ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ. ಗುರುವಾರ ಬೆಳಿಗ್ಗೆ 6 ಗಂಟೆಯಿಂದಲೇ ಬೆಂಗಳೂರು, ಮೈಸೂರು, ಹಾಸನ, ಮಂಡ್ಯ, ಗದಗ, ಯಾದಗಿರಿ, ಹುಬ್ಬಳ್ಳಿ, ವಿಜಯಪುರ ಮತ್ತು ಬಾಗಲಕೋಟೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆದಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ (DA Case) ಆರೋಪದ ಹಿನ್ನೆಲೆಯಲ್ಲಿ ಹಿರಿಯ ಇಂಜಿನಿಯರ್‌ಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳನ್ನು ಜಾಲಾಡಲಾಗುತ್ತಿದೆ. ಹಾಸನದಲ್ಲಿ ಜೀಪ್ ಏರಿ ಒಳಹೋದ ಅಧಿಕಾರಿಗಳು! ಇಂದಿನ ದಾಳಿಯ ಅತ್ಯಂತ ರೋಚಕ ಘಟನೆ ನಡೆದದ್ದು ಹಾಸನದಲ್ಲಿ. ಹಾಸನ ಮಹಾನಗರ ಪಾಲಿಕೆಯ ಎಎಇ (AEE) ಸತ್ಯನಾರಾಯಣ ಅವರ ರವೀಂದ್ರ ನಗರದ ನಿವಾಸಕ್ಕೆ ಲೋಕಾಯುಕ್ತ ಡಿವೈಎಸ್‌ಪಿ ಸುರೇಶ್ ನೇತೃತ್ವದ ತಂಡ ದಾಳಿ ಮಾಡಿದಾಗ, ಅಧಿಕಾರಿ ಬಾಗಿಲು ತೆಗೆಯಲು ನಿರಾಕರಿಸಿದ್ದಾರೆ. ಸುಮಾರು ಅರ್ಧ ಗಂಟೆಗಳ ಕಾಲ ಬಾಗಿಲು ಬಡಿದರೂ ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬಾರದಿದ್ದಾಗ, ಲೋಕಾಯುಕ್ತ ಅಧಿಕಾರಿಗಳು ಚಾಣ...

ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್​ಗಳು ಪತ್ತೆ: ತನಿಖೆಗೆ ಸೂಚಿಸಿದ ಸ್ಪೀಕರ್ ಖಾದರ್

Image
  ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್​ಗಳು ಪತ್ತೆ: ತನಿಖೆಗೆ ಸೂಚಿಸಿದ ಸ್ಪೀಕರ್ ಖಾದರ್ ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಗಳೂರು ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ಪುದು ಗ್ರಾಮದ ಫರಂಗಿಪೇಟೆ ಎಂಬಲ್ಲಿ ನೇತ್ರಾವತಿ ನದಿ ತೀರದಲ್ಲಿ ಅಪಾರ ಪ್ರಮಾಣದ ಆಧಾರ್ ಕಾರ್ಡ್ ಗಳು ನದಿ ತಟದಲ್ಲಿರುವುದು ಕಂಡುಬಂದಿದ್ದು, ಸ್ಥಳೀಯ ಶಾಸಕರೂ ಆಗಿರುವ ವಿಧಾನಸಭಾಧ್ಯಕ್ಷ ಯು. ಟಿ. ಖಾದರ್ ಅವರು ತನಿಖೆಗೆ ಸೂಚಿಸಿದ್ದಾರೆ. ಕಾರ್ಡ್ ಗಳು ನದಿ ತಟದಲ್ಲಿರುವುದನ್ನು ಕಂಡು ಸಾರ್ವಜನಿಕರು ಸ್ಥಳೀಯ ಪುದು ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ನೀಡಿದ ಮಾಹಿತಿ ಮೇರೆಗೆ ಅಧ್ಯಕ್ಷರು ಹಾಗೂ ಸಾರ್ವಜನಿಕರು ಸೇರಿ ಪತ್ತೆಯಾಗಿರುವ ಆಧಾರ್ ಕಾರ್ಡ್ ಗಳನ್ನು ಸಂಗ್ರಹಿಸಿದ್ದಾರೆ. ಈ ಕುರಿತು ಸ್ಥಳೀಯ ಶಾಸಕರಾದ ತನಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಆಧಾರ್ ಕಾರ್ಡ್ ಗಳು ಇಷ್ಟೊಂದು ಪ್ರಮಾಣದಲ್ಲಿ ನದಿ ತಟದಲ್ಲಿ ಪತ್ತೆಯಾಗಲು ಕಾರಣವೇನು, ಇದಕ್ಕೆ ಕಾರಣರಾದವರು ಯಾರು ಎಂಬುದನ್ನು ತನಿಖೆ ನಡೆಸಿ, ಪತ್ತೆ ಹಚ್ಚಿ, ತಮ್ಮ ಇಲಾಖೆ ಮುಖಾಂತರ ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಅಗತ್ಯ ಕ್ರಮ ಕೈಗೊಳ್ಳಿ ಎಂದು ಸ್ಪೀಕರ್ ಯು.ಟಿ. ಖಾದರ್ ಅವರು ಯುಐಡಿಎಐ ಯೋಜನಾ ವ್ಯವಸ್ಥಾಪಕರಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ. ಅಂಚೆ ವಿಭಾಗದವರು ಏನಂತಾರೆ?ಹೊಳೆ ಬದಿಯಲ್ಲಿ ಆಧಾರ್ ಕಾಡ್೯ಗಳ ರಾಶಿ ಪತ್ತೆಯಾಗಿರುವುದು ನಮ್ಮ...

ಹದಡಿ ಪೊಲೀಸರ ಮಿಂಚಿನ ಕಾರ್ಯಾಚರಣೆ: ಮನೆ ಕಳ್ಳತನ ಮಾಡಿದ್ದ ಆರೋಪಿ ಬಂಧನ, ₹3.42 ಲಕ್ಷ ಮೌಲ್ಯದ ಸ್ವತ್ತು ವಶ!

Image
 ಹದಡಿ ಪೊಲೀಸರ ಮಿಂಚಿನ ಕಾರ್ಯಾಚರಣೆ: ಮನೆ ಕಳ್ಳತನ ಮಾಡಿದ್ದ ಆರೋಪಿ ಬಂಧನ, ₹3.42 ಲಕ್ಷ ಮೌಲ್ಯದ ಸ್ವತ್ತು ವಶ! ಘಟನೆ: ಫೆಬ್ರವರಿ 26 ರಂದು ಹದಡಿ ಪೊಲೀಸ್ ಠಾಣಾ ವ್ಯಾಪ್ತಿಯ ಜರೆಕಟ್ಟೆ ಗ್ರಾಮದ ಎಸ್.ಟಿ. ಹಾಲೇಶ್ ಎಂಬುವವರ ಮನೆಯಲ್ಲಿ ಕಳ್ಳತನವಾಗಿತ್ತು. ಬಂಧನ: ಸಿಪಿಐ ರಾಘವೇಂದ್ರ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಫೆಬ್ರವರಿ 28 ರಂದು ಆರೋಪಿ ಶಿವು ಅಲಿಯಾಸ್ ಶಿವಕುಮಾರ್ ರೆಡ್ಡಿ (24) ಎಂಬಾತನನ್ನು ಬಂಧಿಸಲಾಗಿದೆ. ವಶಪಡಿಸಿಕೊಂಡ ವಸ್ತುಗಳು: ಆರೋಪಿಯಿಂದ ₹1,92,000 ಮೌಲ್ಯದ 47 ಗ್ರಾಂ ಬಂಗಾರದ ಆಭರಣಗಳು ಹಾಗೂ ₹1,50,000 ನಗದು ಹಣ ಸೇರಿದಂತೆ ಒಟ್ಟು ₹3,42,000 ಮೌಲ್ಯದ ಸ್ವತ್ತನ್ನು ವಶಪಡಿಸಿಕೊಳ್ಳಲಾಗಿದೆ.

: ಆಶಾ ಕಾರ್ಯಕರ್ತೆಯರ ಪ್ರತಿಭಟನೆ

Image
 ಬಜೆಟ್‌ನಲ್ಲಿ ಬೇಡಿಕೆ ಈಡೇರಿಸಲು ಆಗ್ರಹಿಸಿ ದಾವಣಗೆರೆಯಲ್ಲಿ ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ ದಾವಣಗೆರೆ: ರಾಜ್ಯ ಬಜೆಟ್‌ನಲ್ಲಿ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದಲ್ಲಿ ಆಶಾ ಕಾರ್ಯಕರ್ತೆಯರು ಬೃಹತ್ ಪ್ರತಿಭಟನೆ ನಡೆಸಿದರು. ನಗರದ ಜಯದೇವ ವೃತ್ತದಿಂದ ಉಪವಿಭಾಗಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ಕಾರ್ಯಕರ್ತೆಯರು, ಎಸಿ ಮುಖಾಂತರ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಿದರು. ಪ್ರಮುಖಾಂಶಗಳು: ಮಾಸಿಕ ಗೌರವಧನ ಹೆಚ್ಚಳ ಸೇರಿದಂತೆ ಸರ್ಕಾರ ನೀಡಿದ್ದ ಭರವಸೆಗಳು ಇನ್ನೂ ಈಡೇರಿಲ್ಲ ಎಂದು ಸಂಘಟನೆಯ ಜಿಲ್ಲಾ ಗೌರವಾಧ್ಯಕ್ಷ ಮಂಜುನಾಥ ಕುಕ್ಕವಾಡ ಆರೋಪಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷೆ ಲಲಿತಮ್ಮ ಸೇರಿದಂತೆ ನೂರಾರು ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

ಶೀರ್ಷಿಕೆ: ದಾವಣಗೆರೆ ದುಗ್ಗಮ್ಮನ ಜಾತ್ರೆ: ಅಖಾಡದಲ್ಲಿ ಇರಾನ್ ಪೈಲ್ವಾನ್ ಮಿರ್ಜಾ ಮಿಂಚು; ಮೈನವಿರೇಳಿಸುವ ಕುಸ್ತಿ ಪಂದ್ಯಾವಳಿ!

Image
 ಶೀರ್ಷಿಕೆ: ದಾವಣಗೆರೆ ದುಗ್ಗಮ್ಮನ ಜಾತ್ರೆ: ಅಖಾಡದಲ್ಲಿ ಇರಾನ್ ಪೈಲ್ವಾನ್ ಮಿರ್ಜಾ ಮಿಂಚು; ಮೈನವಿರೇಳಿಸುವ ಕುಸ್ತಿ ಪಂದ್ಯಾವಳಿ! ದಾವಣಗೆರೆ: ನಗರದ ದೇವತೆ ಶ್ರೀ ದುಗ್ಗಮ್ಮದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಅಂತರರಾಷ್ಟ್ರೀಯ ಕುಸ್ತಿ ಪಂದ್ಯಾವಳಿಯು ಕ್ರೀಡಾಭಿಮಾನಿಗಳ ಮನಗೆದ್ದಿದೆ. ಈ ಬಾರಿಯ ಕುಸ್ತಿ ಅಖಾಡದ ವಿಶೇಷ ಆಕರ್ಷಣೆಯಾಗಿದ್ದ ಇರಾನ್ ದೇಶದ ಪೈಲ್ವಾನ್ ಮಿರ್ಜಾ ಅವರು ತಮ್ಮ ಅದ್ಭುತ ಪ್ರದರ್ಶನದ ಮೂಲಕ ಜನರ ಮೆಚ್ಚುಗೆಗೆ ಪಾತ್ರರಾದರು. ಮುಖ್ಯಾಂಶಗಳು: ಇರಾನ್ ಪೈಲ್ವಾನ್ ಮಿಂಚು: ಮಿರ್ಜಾ ಅವರು ಇರಾನ್‌ನಿಂದ ಆಗಮಿಸಿ ಇಲ್ಲಿನ ಅಖಾಡದಲ್ಲಿ ಪುಣೆಯ ಪೈಲ್ವಾನ್ ರವಿರಾಜ್ ಅವರೊಂದಿಗೆ ಸೆಣಸಾಡಿದರು. ಸಮಬಲದ ಹೋರಾಟ: ಮಿರ್ಜಾ ಮತ್ತು ರವಿರಾಜ್ ನಡುವಿನ ಈ ರೋಚಕ ಹೋರಾಟವು ಅಂತಿಮವಾಗಿ ಸಮಬಲದಲ್ಲಿ ಅಂತ್ಯಗೊಂಡಿತು. ಮಿರ್ಜಾ ಭಾವುಕ ನುಡಿ: "ನನ್ನ ದೇಶದಲ್ಲಿ ಯುದ್ಧದ ಭೀತಿ ಮತ್ತು ಪರಿಸ್ಥಿತಿ ಸರಿಯಿಲ್ಲದಿದ್ದರೂ, ಭಾರತೀಯರ ಪ್ರೀತಿ ಮತ್ತು ಇಲ್ಲಿನ ಮಣ್ಣಿನ ಸಂಸ್ಕೃತಿ ನನಗೆ ಅಖಾಡಕ್ಕಿಳಿಯಲು ಧೈರ್ಯ ನೀಡಿದೆ" ಎಂದು ಮಿರ್ಜಾ ಭಾವುಕರಾಗಿ ನುಡಿದರು. ಸಾವಿರಾರು ಸಾಕ್ಷಿ: ಈ ಐತಿಹಾಸಿಕ ಕುಸ್ತಿ ಪಂದ್ಯವನ್ನು ವೀಕ್ಷಿಸಲು ಜಿಲ್ಲೆಯಾದ್ಯಂತ ಸಾವಿರಾರು ಕ್ರೀಡಾಭಿಮಾನಿಗಳು ಆಗಮಿಸಿದ್ದರು

ದಾವಣಗೆರೆ ದಕ್ಷಿಣ ಕ್ಷೇತ್ರ: BJP - JDS ಮೈತ್ರಿ ಟಿಕೆಟ್‌ಗೆ ಮಾಜಿ ಸಿಎಂ ಕುಟುಂಬ ಕಸರತ್ತು; ಮಹಿಮಾ ಪಟೇಲ್‌ಗೆ ಅವಕಾಶ?

Image
 ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆ ಕುರಿತು ಬಿಜೆಪಿ, ಕಾಂಗ್ರೆಸ್‌ನಲ್ಲಿ ಟಿಕೆಟ್‌ ಕಸರತ್ತು ಜೋರಿದೆ. ಈ ನಡುವೆ ಅಚ್ಚರಿ ಎಂಬಂತೆ ಜೆಡಿಯು ನಾಯಕ ಮಹಿಮಾ ಜೆ ಪಟೇಲ್ ಅವರು ಬಿಜೆಪಿ ಜೆಡಿಎಸ್‌ ಮೈತ್ರಿ ಟಿಕೆಟ್‌ಗೆ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಇದಕ್ಕಾಗಿ ಜೆಡಿಯು ನಾಯಕ ನಿತೀಶ್‌ ಕುಮಾರ್ ಅವರ ಜತೆ ಚರ್ಚೆ ನಡೆಸುತ್ತಿದ್ದಾರೆ. ಒಂದು ವೇಳೆ ಬಿಜೆಪಿ ಹೈಕಮಾಂಡ್‌ ಒಪ್ಪಿದರೆ ಟಿಕೆಟ್‌ ಜೆಡಿಯು ಪಾಲಾಗಲಿದೆ. ದಾವಣಗೆರೆ: ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ತೆರವಾದ ದಾವಣಗೆರೆ ದಕ್ಷಿಣ ಲೋಕಸಭಾ ಕ್ಷೇತ್ರದ ಮೇಲೆ ಕರ್ನಾಟಕ ಮಾಜಿ ಸಿಎಂ ಕುಟುಂಬವೂ ಕಣ್ಣಿಟ್ಟಿದೆ. ಬಿಜೆಪಿ ಜೆಡಿಎಸ್‌ ಮೈತ್ರಿ ಟಿಕೆಟ್‌ಗೆ ಮಾಜಿ ಸಿಎಂ ಜೆಎಚ್‌ ಪಟೇಲ್‌ ಪುತ್ರ ಮಹಿಮಾ ಪಟೇಲ್ ಕಸರತ್ತು ನಡೆಸುತ್ತಿದ್ದಾರೆ ಎಂಬ ಚರ್ಚೆ ಜೋರಿದೆ. ಇತ್ತೀಚೆಗೆ ಮಹಿಮಾ ಪಟೇಲ್ ಅವರು ಜೆಡಿಯು ನಾಯಕ, ಬಿಹಾರ ಸಿಎಂ ನಿತೀಶ್‌ ಕುಮಾರ್‌ ಅವರ ಬಳಿ ಈ ಬಗ್ಗೆ ಪ್ರಸ್ತಾಪಿಸಿದ್ದು, ಮಾರ್ಚ್‌ 2 ವಾರ ಬಿಹಾರಕ್ಕೆ ಭೇಟಿಯಾಗಿದ್ದಾರೆ ಎನ್ನಲಾಗಿದೆ. ಭೇಟಿ ವೇಳೆ ಬಿಜೆಪಿ, ಜೆಡಿಎಸ್‌ ಮನವೊಲಿಸಿ ಜೆಡಿಯುಗೆ ಟಿಕೆಟ್‌ ಕೊಡಿಸುವಂತೆ ಒತ್ತಾಯಿಸಲಿದ್ದಾರೆ. ಇನ್ನು ನಿತೀಶ್‌ ಕುಮಾರ್ ಅವರು ಕೂಡ ಪ್ರಯತ್ನಿಸುವುದಾಗಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ತೆರೆಮರೆಗೆ ಸರಿದಿದ್ದ ಮಹಿಮಾ ಪಟೇಲ್ 2018 ರ ವಿಧಾನಸಭಾ ಚುನಾವಣೆಯಲ್ಲಿ ಚನ್ನಗಿರಿಯಿಂದ ಸ್ಪರ್ಧಿಸಿ ಸೋತಿದ್ದ ಮಹಿಮಾ ಜೆ ಪಟೇಲ್ ಅ...

ಫೈನಾನ್ಸ್ ಸಿಬ್ಬಂದಿ ಅಮಾನವೀಯತೆ: 3 ತಿಂಗಳ ಮಗು ಸಮೇತ ಕುಟುಂಬ ಬೀದಿಗೆ!

Image
 ಬೆಳಗಾವಿ: ಫೈನಾನ್ಸ್ ಕಿರುಕುಳದಿಂದಾಗಿ ಒಂದು ಇಡೀ ಕುಟುಂಬ ಮೂರು ತಿಂಗಳ ಹಸುಗೂಸು ಸಮೇತ ಬೀದಿಗೆ ಬಿದ್ದ ಅಮಾನವೀಯ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದಲ್ಲಿ ನಡೆದಿದೆ. ಚಿಕ್ಕೋಡಿಯ ಇಕ್ವಿಟಾಸ್ ಸ್ಮಾಲ್ ಫೈನಾನ್ಸ್ ಕಂಪನಿಯ ವಿರುದ್ಧ ಈ ಆರೋಪ ಕೇಳಿಬಂದಿದೆ. ಹನುಮಂತ ಪಾಟೀಲ್ ಎಂಬುವವರು ತಮ್ಮ ತಂದೆ ಶ್ರೀಕಾಂತ್ ಪಾಟೀಲ್ ಅವರ ಹೃದಯ ಶಸ್ತ್ರಚಿಕಿತ್ಸೆಗಾಗಿ ಮನೆ ಅಡವಿಟ್ಟು ಸುಮಾರು ₹20 ಲಕ್ಷ ಸಾಲ ಪಡೆದಿದ್ದರು. ಆದಾದ ಬಳಿಕ ತಂದೆಯ ನಿಧನ ಮತ್ತು ಆರ್ಥಿಕ ಸಂಕಷ್ಟದ ಕಾರಣದಿಂದಾಗಿ ಕಳೆದ ಏಳು ತಿಂಗಳಿಂದ ಸಾಲದ ಕಂತು ಪಾವತಿಸಲು ಸಾಧ್ಯವಾಗಿರಲಿಲ್ಲ. ಸುಮಾರು ಏಳು ಲಕ್ಷ ರೂ. ಬಾಕಿ ಇದ್ದ ಹಿನ್ನೆಲೆಯಲ್ಲಿ ಏಕಾಏಕಿ ಬಂದ ಫೈನಾನ್ಸ್‌ ಸಿಬ್ಬಂದಿ ಮನೆಯಲ್ಲಿದ್ದ ಬಟ್ಟೆ, ಪಾತ್ರೆ ಸೇರಿದಂತೆ ಅಗತ್ಯ ವಸ್ತುಗಳನ್ನು ಹೊರತೆಗೆಯಲು ಬಿಡದೆ ಮನೆಗೆ ಬೀಗ ಹಾಕಿ ಜಪ್ತಿ ಮಾಡಿದ್ದಾರೆ. ಇದರಿಂದಾಗಿ ಹನುಮಂತ ದಂಪತಿಯ ಮೂರು ತಿಂಗಳ ಹಸುಗೂಸು ಸೇರಿದಂತೆ ಐವರು ಕುಟುಂಬಸ್ಥರು ರಾತ್ರಿಯಿಡೀ ಮನೆಯಿಂದ ಹೊರಗೆ ಕಾಲ ಕಳೆದಿದ್ದಾರೆ. ಚಳಿಯಿಂದ ಬಳಲಿದ ಮಗು ಅಸ್ವಸ್ಥಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕುಟುಂಬದವರು ತಿಳಿಸಿದ್ದಾರೆ ಘಟನೆ ಕುರಿತು ಸ್ಥಳೀಯರಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಮಾನವೀಯ ದೃಷ್ಟಿಯಿಂದ ಸಮಸ್ಯೆ ಬಗೆಹರಿಸಲು ಆಗ್ರಹ ಕೇಳಿಬರುತ್ತಿದೆ.

ದಾಣಗೆರೆಯಲ್ಲಿ ಉದ್ಯಮಿ ದಂಪತಿ, ಇಬ್ಬರು ಯುವತಿಯರಿಂದ ಜೈನ ಸನ್ಯಾಸ ದೀಕ್ಷೆ ಸ್ವೀಕಾರ

Image
 ದಾವಣಗೆರೆಯಲ್ಲಿ ಕೋಟ್ಯಂತರ ರೂಪಾಯಿಯ ಹಣ-ಆಸ್ತಿ ದಾನ ಮಾಡಿ ದಂಪತಿ ಸನ್ಯಾಸತ್ವ ಸ್ವೀಕರಿಸಿದ್ದಾರೆ. ಈ ದಂಪತಿಯ ಇಬ್ಬರು ಪುತ್ರರು ಕೂಡ ಮೂರು ವರ್ಷಗಳ ಹಿಂದೆಯೇ ಸನ್ಯಾಸತ್ವ ಸ್ವೀಕರಿಸಿದ್ದರು. ಇನ್ನು ಇದೇ ವೇಳೆ ಇಬ್ಬರು ಯುವತಿಯರು ಕೂಡ ಲೌಕಿಕ ಜೀವನ ತೊರೆದು ಸನ್ಯಾಸ ಜೀವನ ಆಯ್ಕೆ ಮಾಡಿಕೊಂಡಿದ್ದಾರೆ. ದಾವಣಗೆರೆ: ನಗರದಲ್ಲಿ ಉದ್ಯಮಿ ದಂಪತಿ ಹಾಗೂ ಇಬ್ಬರು ಯುವತಿಯರು ಲೌಕಿಕ ಸುಖ-ಸಂತೋಷಗಳನ್ನು ತ್ಯಜಿಸಿ, ಕಠಿಣ ಜೈನ ಸನ್ಯಾಸ ದೀಕ್ಷೆ (Jain Diksha) ಸ್ವೀಕರಿಸಿದ್ದಾರೆ. ಆಚಾರ್ಯ ಶ್ರೀ ಅಭಯ್ ಶೇಖರ್ ಸುರೀಶ್ವರ ಜೀ ಮಹಾರಾಜ್ ಅವರ ಸಾನ್ನಿಧ್ಯದಲ್ಲಿ ಪುಣೆಯ ಸಿಂಬೋಸಿಸ್ ಕಾಲೇಜಿನಲ್ಲಿ ಎಂಬಿಎ ಪದವಿ ಪಡೆದುಕೊಂಡಿರುವ ಕ್ರನಾಲ್ ಬೇನ್ (30), ದಾವಣಗೆರೆಯ ಬಿ.ಕಾಂ ಪದವೀಧರೆ, ದೀಕ್ಷಿತ ಬೇನ್ (28) ಸನ್ಯಾಸತ್ವದ ದೀಕ್ಷೆ ಪಡೆದುಕೊಂಡಿದ್ದಾರೆ. ಅಲ್ಲದೇ ದಾವಣಗೆರೆಯ ಲಲಿತ್ ಗಾರ್ಮೆಂಟ್ಸ್‌ನ ಮಾಲೀಕರಾದ ಭರತ್ ಜೈನ್ (52), ಪತ್ನಿ ಆರತಿ ಬೇನ್ (50) ಕೂಡ ಸನ್ಯಾಸತ್ವದ ದೀಕ್ಷೆ ಸ್ವೀಕರಿಸಿದ್ದಾರೆ. ಭರತ್ ಜೈನ್, ಆರತಿ ಬೇನ್ ದಂಪತಿಯ ಇಬ್ಬರು ಪುತ್ರರು ಮೂರು ವರ್ಷಗಳ ಹಿಂದೆಯೇ ಸನ್ಯಾಸತ್ವ ಸ್ವೀಕರಿಸಿದ್ದರು. ಮುನಿ ಶ್ರೀ ಮಗ್ನಶೇಖರ್ ವಿಜಯ್ ಜಿ ಮತ್ತು ಮುನಿ ಶ್ರೀ ಪೂರ್ಣ ಶೇಖರ್ ವಿಜಯ್ ಜಿ ಸನ್ಯಾಸತ್ವ ಸ್ವೀಕರಿಸಿದ್ದರು. ಈಗ ದಂಪತಿ ಕೋಟ್ಯಂತರ ರೂಪಾಯಿಯ ಹಣ-ಆಸ್ತಿ ದಾನ ಮಾಡಿ ಸನ್ಯಾಸತ್ವ ಸ್ವೀಕರಿಸಿದ್ದಾರೆ. ಜೈನ ಧರ್ಮದಲ್ಲಿ ಸನ್ಯಾಸತ್ವ ಸ...

ಮಂಗಳೂರು | ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಇಲಾಖಾ ಸಿಬ್ಬಂದಿ !

Image
 ಸರ್ಕಾರಿ ಕಾಮಗಾರಿಯ ಬಿಲ್ ಬಿಡುಗಡೆ ಮಾಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದಲ್ಲಿ ಲೋಕೋಪಯೋಗಿ ಇಲಾಖೆಯ ಸಿಬ್ಬಂದಿಯೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ಸೋಮವಾರ ನಡೆದಿದೆ. ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿ, ವಿದ್ಯುತ್ ಉಪವಿಭಾಗ, ಲೋಕೋಪಯೋಗಿ ಇಲಾಖೆ, ಮಂಗಳೂರು ಕಚೇರಿಯಲ್ಲಿ ಎಸ್‌ಡಿಎ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂಪತ್ ಅವರು ಸರ್ಕಾರಿ ಕಾಮಗಾರಿಯ ಬಿಲ್‌ಗೆ 4 ಶೇಕಡಾ ಪ್ರಮಾಣದಲ್ಲಿ ರೂ.22,600 ಲಂಚ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಕುರಿತು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಂದು (ಮಾರ್ಚ್ 2) ಲಂಚದ ಹಣವನ್ನು ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಲೆಗೆ ಬೀಳಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಲಾಗಿದೆ. ಈ ಕಾರ್ಯಾಚರಣೆ ಕರ್ನಾಟಕ ಲೋಕಾಯುಕ್ತ, ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕ ಬಿ.ಪಿ. ದಿನೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ, ಡಿವೈಎಸ್‌ಪಿ ಸುರೇಶ್ ಕುಮಾರ್ ಪಿ., ಡಾ. ಗಾನ ಪಿ. ಕುಮಾರ್, ಪಿಐ ಭಾರತಿ ಜಿ. ಅವರ ನೇತೃತ್ವದಲ್ಲಿ, ಇನ್ಸ್‌ಪೆಕ್ಟರ್ ಚಂದ್ರಶೇಖರ್ ಕೆ.ಎನ್. ಹಾಗೂ ಸಿಬ್ಬಂದಿ ತಂಡದ ಸಹಕಾರದಿಂದ ನಡೆಯಿತು ಎಂದು ಮೂಲಗಳು ತಿಳಿಸಿವೆ.

₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

Image
 ಶಿವಮೊಗ್ಗ: ಬಾಕಿ ಇರುವ ವಾರ್ಷಿಕ ವೇತನ ಬಡ್ತಿ ಹಾಗೂ ಇತರೆ ಭತ್ಯೆಗಳ ಮಂಜೂರಾತಿಗಾಗಿ ಲಂಚ ಪಡೆಯುತ್ತಿದ್ದ ಸಂದರ್ಭ ಭದ್ರಾವತಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ (BEO) ನಾಗೇಂದ್ರಪ್ಪ ಎ.ಕೆ. ಮತ್ತು ಅವರ ಮಧ್ಯವರ್ತಿ ಮಂಜುನಾಥ್ ಎಂಬುವವರನ್ನು ಶಿವಮೊಗ್ಗ ಲೋಕಾಯುಕ್ತ (Lokayukta) ಪೊಲೀಸರು ಸೋಮವಾರ ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ಸಹೋದ್ಯೋಗಿಗೆ ಲಂಚಕ್ಕೆ ಬೇಡಿಕೆ ಭದ್ರಾವತಿ ಬಿ.ಇ.ಓ ಕಚೇರಿಯಲ್ಲಿ ಅಧೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಲಿಂಗರಾಜು ಎಂಬುವವರು 2011 ರಿಂದ 2023 ರ ಅವಧಿಯ ತಮ್ಮ ವಾರ್ಷಿಕ ವೇತನ ಬಡ್ತಿ ಮತ್ತು ಆರ್ಥಿಕ ಸೌಲಭ್ಯಗಳನ್ನು ನೀಡುವಂತೆ ಹಲವು ಬಾರಿ ಮೇಲಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ಈ ಕೆಲಸ ಮಾಡಿಕೊಡಲು ಬಿ.ಇ.ಓ ನಾಗೇಂದ್ರಪ್ಪ ಮತ್ತು ಮಧ್ಯವರ್ತಿ ಮಂಜುನಾಥ್ ಅವರು ₹4 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಮ್.ಎಸ್. ಕೌಲಾಪೂರೆ ಅವರ ಮಾರ್ಗದರ್ಶನದಲ್ಲಿ, ಡಿವೈಎಸ್‌ಪಿ ಚಂದ್ರಶೇಖರ್.ಬಿ.ಪಿ. ನೇತೃತ್ವದಲ್ಲಿ ಇನ್ಸ್‌ಪೆಕ್ಟರ್‌ಗಳಾದ ವೀರಬಸಪ್ಪ ಎಲ್. ಕುಸಲಾಪುರ, ಗುರುರಾಜ್ ಎನ್. ಮೈಲಾರ, ಸಿಬ್ಬಂದಿ ಯೋಗೇಶ್ ಜಿ.ಸಿ, ಮಂಜುನಾಥ ಎಂ, ಟೀಕಪ್ಪ, ಸುರೇಂದ್ರ ಹೆಚ್.ಜಿ., ಪ್ರಶಾಂತ್ ಕುಮಾರ್ ಹೆಚ್, ಚನ್ನೇಶ, ಅರುಣ್ ಕುಮಾರ್ ಯು.ಬಿ, ದೇವರಾಜ್ ವಿ, ಪ್ರಕಾಶ್ ಬಾರಿಮರದ, ಮತ್ತು ಆದರ್ಶ್, ಚಂದ್ರಿಬಾಯಿ ಎಸ್, ಪ್ರದೀಪ, ಚೇತನ್, ತರುಣ್‌ಕುಮಾರ್, ಆಂಜನೇಯ ಡಿ.ಹೆಚ್,...

ಅಮೆರಿಕ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಸುಪ್ರೀಂ ನಾಯಕ ಖಮೇನಿ ಸಾವು- ಯಾರಾಗಬಹುದು ಮುಂದಿನ ಪರಮೋಚ್ಚ ನಾಯಕ?

Image
  ಟೆಹ್ರಾನ್‌: ಇರಾನ್‌ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇಮನಿ ಹತ್ಯೆ ಕುರಿತ ಅನುಮಾನಗಳನ್ನು ದೂರ ಮಾಡಿರುವ ಇರಾನ್‌ ಸರ್ಕಾರಿ ಮಾಧ್ಯಮ IRIB, “ಅಮೆರಿಕ ಮತ್ತು ಇಸ್ರೇಲ್‌ ಜಂಟಿ ಕಾರ್ಯಾಚರಣೆಯಲ್ಲಿ ಸರ್ವೋಚ್ಚ ನಾಯಕ ಮೃತಪಟ್ಟಿರುವುದು ನಿಜ” ಎಂದು ವರದಿ ಮಾಡಿದೆ. ಈ ಮೂಲಕ ಖಮೇನಿ ಹತ್ಯೆ ಕುರಿತ ಡೊನಾಲ್ಡ್‌ ಟ್ರಂಪ್‌ ದೃಢೀಕರಣ ನಿಜವಾಗಿದೆ. ಹೌದು.. ಮೂರು ದಶಕಗಳಿಗೂ ಹೆಚ್ಚು ಕಾಲ ಆಳಿದ ರಾಜಕೀಯ ವ್ಯವಸ್ಥೆಯು 86 ರ ಹರೆಯದ ಖಮೇನಿಯ ಹಠಾತ್ ಸಾವಿನ ಬಳಿಕ ಮುಂದಿನ ಉತ್ತರಾಧಿಕಾರಿ ಯಾರು ಎಂಬ ಪ್ರಶ್ನೆ ಹುಟ್ಟುಹಾಕಿದೆ. ಅದರಲ್ಲೂ ಒಂದು ವೇಳೆ ಇರಾನ್‌ ಪ್ರತೀಕಾರದ ಬೆದರಿಕೆಗಳನ್ನು ನೀಡಿದರೆ, ಅದು ಅಮೆರಿಕ ಮತ್ತು ಇಸ್ರೇಲ್‌ನಿಂದ ಮತ್ತಷ್ಟು ಆಕ್ರಮಣಗಳನ್ನು ಎದುರಿಸಬಹುದು. ಇದು ಮಧ್ಯಪ್ರಾಚ್ಯದಲ್ಲಿ ದೀರ್ಘಕಾಲದ ಸಂಘರ್ಷದ ಆತಂಕವನ್ನು ಹೆಚ್ಚಿಸಲಿದೆ. ಇದಕ್ಕೆ ಪೂರಕವಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರು, “ಜಾಗತಿಕ ಶಾಂತಿಗಾಗಿ ಇರಾನ್‌ ಮೇಲೆ ಅಮೆರಿಕ-ಇಸ್ರೇಲ್‌ ಜಂಟಿ ದಾಳಿ ಮುಂದುವರೆಯಲಿದೆ” ಎಂದು ಘೋಷಿಸಿದ್ದಾರೆ. ಯಾರಾಗಬಹುದು ಮುಂದಿನ ಪರಮೋಚ್ಚ ನಾಯಕ? ಸಂಭಾವ್ಯ ಉತ್ತರಾಧಿಕಾರಿಗಳಲ್ಲಿ, ಸುಪ್ರೀಂ ಲೀಡರ್ ಅವರ ಎರಡನೇ ಮಗ ಮೊಜ್ತಬಾ ಖಮೇನಿ ಅವರು ಅತ್ಯಂತ ಸಂಭಾವ್ಯ ಸ್ಪರ್ಧಿಯಾಗಿ ಹೊರಹೊಮ್ಮಿದ್ದಾರೆ.1969 ರಲ್ಲಿ ಜನಿಸಿದ ಮೊಜ್ತಬಾ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಮತ್ತು ಇರಾನ್‌ನ ಕ್ಲೆರಿಕಲ್ ಸ್ಥಾಪ...

Iran-Israel War: ಇಸ್ರೇಲ್ ಪ್ರಧಾನಿ ನೆತನ್ಯಾಹು ಕಚೇರಿ ಮೇಲೆ ಇರಾನ್ ಭೀಕರ ದಾಳಿ!

Image
  ಜೆರುಸಲೇಂ/ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ತೀವ್ರಗೊಂಡಿದೆ. ಇರಾನ್ ಈಗ ನೇರವಾಗಿಯೇ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಗುರಿಯಾಗಿಸಿಕೊಂಡು ವಿನಾಶಕಾರಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ನೆತನ್ಯಾಹು ನಿವಾಸ ಮತ್ತು ಕಚೇರಿ ಮೇಲೆ ಅಟ್ಯಾಕ್ ಇರಾನ್ ಪಡೆಗಳು ಇಸ್ರೇಲ್ ಪ್ರಧಾನಿ ನೆತನ್ಯಾಹು ಅವರ ಮನೆ ಮತ್ತು ಕಚೇರಿಯನ್ನು ಗುರಿಯಾಗಿಸಿ ನೇರ ದಾಳಿ ನಡೆಸಿವೆ. ಇರಾನ್, ಇಸ್ರೇಲ್ ಮತ್ತು ಅಮೆರಿಕದ ನಡುವಿನ ಸಂಘರ್ಷ ಈಗ ಉತ್ತುಂಗಕ್ಕೇರಿದ್ದು, ಇಡೀ ಮಧ್ಯಪ್ರಾಚ್ಯ ದೇಶಗಳಲ್ಲಿ ತೀವ್ರ ಆತಂಕ ಮತ್ತು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಯುದ್ಧದ ಭೀತಿಯಲ್ಲಿ ಮಧ್ಯಪ್ರಾಚ್ಯ ಇರಾನ್ ನಡೆಸಿದ ಈ 'ಡೆಡ್ಲಿ ಅಟ್ಯಾಕ್'ನಿಂದಾಗಿ ಪರಿಸ್ಥಿತಿ ಕೈಮೀರಿ ಹೋಗುತ್ತಿದೆ. ಇಸ್ರೇಲ್ ಮತ್ತು ಇರಾನ್ ನಡುವಿನ ಈ ನೇರ ಸಂಘರ್ಷವು ಜಾಗತಿಕ ಮಟ್ಟದಲ್ಲಿ ದೊಡ್ಡ ಆತಂಕಕ್ಕೆ ಕಾರಣವಾಗಿದ್ದು, ಅಮೆರಿಕ ಕೂಡ ಈ ಯುದ್ಧದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ.