₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

 ಶಿವಮೊಗ್ಗ: ಬಾಕಿ ಇರುವ ವಾರ್ಷಿಕ ವೇತನ ಬಡ್ತಿ ಹಾಗೂ ಇತರೆ ಭತ್ಯೆಗಳ ಮಂಜೂರಾತಿಗಾಗಿ ಲಂಚ ಪಡೆಯುತ್ತಿದ್ದ ಸಂದರ್ಭ ಭದ್ರಾವತಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ (BEO) ನಾಗೇಂದ್ರಪ್ಪ ಎ.ಕೆ. ಮತ್ತು ಅವರ ಮಧ್ಯವರ್ತಿ ಮಂಜುನಾಥ್ ಎಂಬುವವರನ್ನು ಶಿವಮೊಗ್ಗ ಲೋಕಾಯುಕ್ತ (Lokayukta) ಪೊಲೀಸರು ಸೋಮವಾರ ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.

ಸಹೋದ್ಯೋಗಿಗೆ ಲಂಚಕ್ಕೆ ಬೇಡಿಕೆ


ಭದ್ರಾವತಿ ಬಿ.ಇ.ಓ ಕಚೇರಿಯಲ್ಲಿ ಅಧೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಲಿಂಗರಾಜು ಎಂಬುವವರು 2011 ರಿಂದ 2023 ರ ಅವಧಿಯ ತಮ್ಮ ವಾರ್ಷಿಕ ವೇತನ ಬಡ್ತಿ ಮತ್ತು ಆರ್ಥಿಕ ಸೌಲಭ್ಯಗಳನ್ನು ನೀಡುವಂತೆ ಹಲವು ಬಾರಿ ಮೇಲಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ಈ ಕೆಲಸ ಮಾಡಿಕೊಡಲು ಬಿ.ಇ.ಓ ನಾಗೇಂದ್ರಪ್ಪ ಮತ್ತು ಮಧ್ಯವರ್ತಿ ಮಂಜುನಾಥ್ ಅವರು ₹4 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಮ್.ಎಸ್. ಕೌಲಾಪೂರೆ ಅವರ ಮಾರ್ಗದರ್ಶನದಲ್ಲಿ, ಡಿವೈಎಸ್‌ಪಿ ಚಂದ್ರಶೇಖರ್.ಬಿ.ಪಿ. ನೇತೃತ್ವದಲ್ಲಿ ಇನ್ಸ್‌ಪೆಕ್ಟರ್‌ಗಳಾದ ವೀರಬಸಪ್ಪ ಎಲ್. ಕುಸಲಾಪುರ, ಗುರುರಾಜ್ ಎನ್. ಮೈಲಾರ, ಸಿಬ್ಬಂದಿ ಯೋಗೇಶ್ ಜಿ.ಸಿ, ಮಂಜುನಾಥ ಎಂ, ಟೀಕಪ್ಪ, ಸುರೇಂದ್ರ ಹೆಚ್.ಜಿ., ಪ್ರಶಾಂತ್ ಕುಮಾರ್ ಹೆಚ್, ಚನ್ನೇಶ, ಅರುಣ್ ಕುಮಾರ್ ಯು.ಬಿ, ದೇವರಾಜ್ ವಿ, ಪ್ರಕಾಶ್ ಬಾರಿಮರದ, ಮತ್ತು ಆದರ್ಶ್, ಚಂದ್ರಿಬಾಯಿ ಎಸ್, ಪ್ರದೀಪ, ಚೇತನ್, ತರುಣ್‌ಕುಮಾರ್, ಆಂಜನೇಯ ಡಿ.ಹೆಚ್, ಆನಂದ, ಮತ್ತು ಗೋಪಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Comments

Popular posts from this blog

ಚಾರ್ವಿಕ ಟೂರ್ಸ್ ಅಂಡ್ ಟ್ರಾವೆಲ್ಸ್‌ನಿಂದ ಪ್ರಥಮ ವರ್ಷದ ವಾರ್ಷಿಕೋತ್ಸವದ ಧಮಾಕಾ ಆಫರ್; ಕೇವಲ ₹2,100 ರಲ್ಲಿ 4 ವರ್ಷಗಳ ಸುದೀರ್ಘ ಪ್ರವಾಸ ಯೋಜನೆ!

ತಂದೆ-ತಾಯಿಯ 13 ವರ್ಷಗಳ ಕನಸು ನನಸು ಮಾಡಿದ ಮಗ: ಕಟ್ಟಿಗೆಹಳ್ಳಿಯಲ್ಲಿ ಅದ್ದೂರಿ ಗೃಹಪ್ರವೇಶ!

ದಾವಣಗೆರೆ ಕಾರ್ಗಿಲ್​ ಕಾರ್ಖಾನೆಯಲ್ಲಿ ಉತ್ಪಾದನೆ ಸ್ಥಗಿತ: ನ್ಯಾಯಕ್ಕಾಗಿ ಕಾರ್ಮಿಕರು ಹೋರಾಟ