: ಆಶಾ ಕಾರ್ಯಕರ್ತೆಯರ ಪ್ರತಿಭಟನೆ
ಬಜೆಟ್‌ನಲ್ಲಿ ಬೇಡಿಕೆ ಈಡೇರಿಸಲು ಆಗ್ರಹಿಸಿ ದಾವಣಗೆರೆಯಲ್ಲಿ ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ
ದಾವಣಗೆರೆ: ರಾಜ್ಯ ಬಜೆಟ್‌ನಲ್ಲಿ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದಲ್ಲಿ ಆಶಾ ಕಾರ್ಯಕರ್ತೆಯರು ಬೃಹತ್ ಪ್ರತಿಭಟನೆ ನಡೆಸಿದರು. ನಗರದ ಜಯದೇವ ವೃತ್ತದಿಂದ ಉಪವಿಭಾಗಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ಕಾರ್ಯಕರ್ತೆಯರು, ಎಸಿ ಮುಖಾಂತರ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಿದರು.
ಪ್ರಮುಖಾಂಶಗಳು:
ಮಾಸಿಕ ಗೌರವಧನ ಹೆಚ್ಚಳ ಸೇರಿದಂತೆ ಸರ್ಕಾರ ನೀಡಿದ್ದ ಭರವಸೆಗಳು ಇನ್ನೂ ಈಡೇರಿಲ್ಲ ಎಂದು ಸಂಘಟನೆಯ ಜಿಲ್ಲಾ ಗೌರವಾಧ್ಯಕ್ಷ ಮಂಜುನಾಥ ಕುಕ್ಕವಾಡ ಆರೋಪಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷೆ ಲಲಿತಮ್ಮ ಸೇರಿದಂತೆ ನೂರಾರು ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

Comments
Post a Comment