BREAKING: ಕಾಂಗ್ರೆಸ್ ಟಿಕೆಟ್ ಕೈತಪ್ಪಿದ್ದಕ್ಕೆ ದಾವಣಗೆರೆಯಲ್ಲಿ ಮುಸ್ಲಿಂ ಯುವಕರ ಆಕ್ರೋಶ


 ದಾವಣಗೆರೆ: ಏಪ್ರಿಲ್ 9ರಂದು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ನಡೆಯಲಿದ್ದು, ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.


ದಾವಣಗೆರೆಯ ಅಖ್ತರ್ ರಾಜಾ ವೃತ್ತದಲ್ಲಿ ಯುವಕರು ಪ್ರತಿಭಟನೆ ನಡೆಸಿದ್ದಾರೆ. ಕಪ್ಪು ಪಟ್ಟಿ ಧರಿಸಿ ಜಸ್ಟಿಸ್ ಫಾರ್ ಮೈನಾರಿಟಿಸ್ ಎಂದು ಘೋಷಣೆ ಕೂಗಿದ್ದಾರೆ. ಮುಸ್ಲಿಂ ಸಮುದಾಯ ಕಡೆಗಣಿಸಿ ಶಾಮನೂರು ಕುಟುಂಬಕ್ಕೆ ಟಿಕೆಟ್ ನೀಡಲಾಗಿದೆ. ಉಪಚುನಾವಣೆ ಟಿಕೆಟ್ ನೀಡದೇ ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಲಾಗಿದೆ ಎಂದು ದೂರಿದ್ದಾರೆ.

ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ಅಲ್ಪಸಂಖ್ಯಾತರು ಪಾಠ ಕಲಿಸಲಿದ್ದಾರೆ ಎಂದು ದಾವಣಗೆರೆಯಲ್ಲಿ ಪ್ರತಿಭಟನೆ ನಿರತ ಮುಸ್ಲಿಂ ಯುವಕರು ಎಚ್ಚರಿಕೆ ನೀಡಿದ್ದಾರೆ.


ಕಾಂಗ್ರೆಸ್ ಸರ್ಕಾರ ನಮ್ಮನ್ನು ವೋಟ್ ಬ್ಯಾಂಕ್ ಆಗಿ ಬಳಸಿಕೊಳ್ಳುತ್ತಿದೆ. ದಶಕಗಳ ಕಾಲದ ಬೇಡಿಕೆ ಈಡೇರಿಸದೆ ನಿರ್ಲಕ್ಷ್ಯ ತೋರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ವಿರುದ್ಧ ಘೋಷಣೆ ಕೂಗಿದ್ದಾರೆ.


ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ಕೈತಪ್ಪಿದ್ದಕ್ಕೆ ಆಕ್ರೋಶ ವ್ಯಕ್ತವಾಗಿದ್ದು, ಬೃಹತ್ ಪ್ರತಿಭಟನೆ ನಡೆಸಲಾಗಿದೆ. ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಗಿದ್ದು, ಎರಡು ಕ್ಷೇತ್ರಗಳಲ್ಲಿ ತಕ್ಕ ಪಾಠ ಕಲಿಸುವುದಾಗಿ ಹೇಳಲಾಗಿದೆ.

Comments

Popular posts from this blog

ಚಾರ್ವಿಕ ಟೂರ್ಸ್ ಅಂಡ್ ಟ್ರಾವೆಲ್ಸ್‌ನಿಂದ ಪ್ರಥಮ ವರ್ಷದ ವಾರ್ಷಿಕೋತ್ಸವದ ಧಮಾಕಾ ಆಫರ್; ಕೇವಲ ₹2,100 ರಲ್ಲಿ 4 ವರ್ಷಗಳ ಸುದೀರ್ಘ ಪ್ರವಾಸ ಯೋಜನೆ!

ದಾವಣಗೆರೆ ಕಾರ್ಗಿಲ್​ ಕಾರ್ಖಾನೆಯಲ್ಲಿ ಉತ್ಪಾದನೆ ಸ್ಥಗಿತ: ನ್ಯಾಯಕ್ಕಾಗಿ ಕಾರ್ಮಿಕರು ಹೋರಾಟ

ತಂದೆ-ತಾಯಿಯ 13 ವರ್ಷಗಳ ಕನಸು ನನಸು ಮಾಡಿದ ಮಗ: ಕಟ್ಟಿಗೆಹಳ್ಳಿಯಲ್ಲಿ ಅದ್ದೂರಿ ಗೃಹಪ್ರವೇಶ!