BREAKING : ಕೋರ್ಟ್‌’ನಲ್ಲಿ ಕೆಲಸ ಕೊಡಿಸುವುದಾಗಿ ಕೋಟ್ಯಾಂತರ ಹಣ ವಂಚನೆ ; ಬೆಂಗಳೂರಲ್ಲಿ ಖತರ್ನಾಕ್ ದಂಪತಿ ಅರೆಸ್ಟ್.!


 ಬೆಂಗಳೂರು: ನ್ಯಾಯಾಲಯದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ನೂರಾರು ನಿರುದ್ಯೋಗಿಗಳಿಗೆ ಕೋಟ್ಯಂತರ ರೂಪಾಯಿ ವಂಚಿಸಿದ್ದ ಖತರ್ನಾಕ್ ದಂಪತಿಯನ್ನು ಸಿಸಿಬಿ (CCB) ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತರನ್ನು ಜೈಸನ್ ಡಿಸೋಜಾ ಮತ್ತು ಲವೀನಾ ಎಂದು ಗುರುತಿಸಲಾಗಿದೆ.

ಬಂಧಿತ ದಂಪತಿಗಳು ಪ್ರಮುಖವಾಗಿ ನಿರುದ್ಯೋಗಿಗಳು ಮತ್ತು ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವವರನ್ನೇ ಟಾರ್ಗೆಟ್ ಮಾಡುತ್ತಿದ್ದರು. ನ್ಯಾಯಾಲಯದಲ್ಲಿ ‘ಡಿ-ಗ್ರೂಪ್’ (D-Group) ಕೆಲಸ ಕೊಡಿಸುವುದಾಗಿ ಆಮಿಷ ಒಡ್ಡುತ್ತಿದ್ದರು. ನಂಬಿಕೆ ಬರಿಸಲು ಸ್ವತಃ ನ್ಯಾಯಾಧೀಶರ ಸಹಿಯನ್ನೇ ನಕಲು ಮಾಡಿ, ನಕಲಿ ಆರ್ಡರ್ ಪ್ರತಿಗಳನ್ನು ತೋರಿಸಿ ಜನರನ್ನು ವಂಚಿಸುತ್ತಿದ್ದರು.ಕೆಲಸದ ಆಸೆ ತೋರಿಸಿ ಒಬ್ಬೊಬ್ಬರಿಂದ ತಲಾ ₹10 ಲಕ್ಷದಿಂದ ₹25 ಲಕ್ಷದವರೆಗೆ ಹಣ ಪೀಕುತ್ತಿದ್ದರು.ಸುಮಾರು 500ಕ್ಕೂ ಹೆಚ್ಚು ಜನರಿಂದ ಹಣ ಪಡೆದಿರುವ ಈ ದಂಪತಿ, ಒಟ್ಟು ₹25 ಕೋಟಿಗೂ ಅಧಿಕ ಮೊತ್ತವನ್ನು ವಂಚಿಸಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಹಣ ಕೊಟ್ಟವರು ಕೆಲಸದ ಬಗ್ಗೆ ವಿಚಾರಿಸಿದಾಗ ‘ನಾಳೆ-ನಾಡಿದ್ದು’ ಎಂದು ಸಬೂಬು ಹೇಳಿ ಕಾಲಹರಣ ಮಾಡುತ್ತಿದ್ದರು. ಅಂತಿಮವಾಗಿ ಸಂತ್ರಸ್ತರು ಫೋನ್ ಕರೆ ಮಾಡಿದರೆ ಸ್ವೀಕರಿಸದೆ ತಪ್ಪಿಸಿಕೊಳ್ಳುತ್ತಿದ್ದರು. ಇದರಿಂದ ಸಂಶಯಗೊಂಡ ಸಂತ್ರಸ್ತರು ಸಿಸಿಬಿಗೆ ದೂರು ನೀಡಿದ್ದರು. ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲೂ ಈ ದಂಪತಿ ವಿರುದ್ಧ ದೂರುಗಳು ದಾಖಲಾಗಿದ್ದವು.

ವಿಶೇಷವೆಂದರೆ ಈ ದಂಪತಿಗಳು ಇಂತಹದ್ದೇ ವಂಚನೆ ಪ್ರಕರಣದಲ್ಲಿ 2024 ರಲ್ಲಿ ಕೂಡ ಅರೆಸ್ಟ್ ಆಗಿದ್ದರು. ಜೈಲಿನಿಂದ ಬಿಡುಗಡೆಯಾದ ಬಳಿಕವೂ ತಮ್ಮ ಚಾಳಿಯನ್ನು ಮುಂದುವರಿಸಿದ್ದು, ಈಗ ಮತ್ತೆ ಸಿಸಿಬಿ ಪೊಲೀಸರ ಅತಿಥಿಗಳಾಗಿದ್ದಾರೆ. ಪ್ರಸ್ತುತ ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

Comments

Popular posts from this blog

ಚಾರ್ವಿಕ ಟೂರ್ಸ್ ಅಂಡ್ ಟ್ರಾವೆಲ್ಸ್‌ನಿಂದ ಪ್ರಥಮ ವರ್ಷದ ವಾರ್ಷಿಕೋತ್ಸವದ ಧಮಾಕಾ ಆಫರ್; ಕೇವಲ ₹2,100 ರಲ್ಲಿ 4 ವರ್ಷಗಳ ಸುದೀರ್ಘ ಪ್ರವಾಸ ಯೋಜನೆ!

ದಾವಣಗೆರೆ ಕಾರ್ಗಿಲ್​ ಕಾರ್ಖಾನೆಯಲ್ಲಿ ಉತ್ಪಾದನೆ ಸ್ಥಗಿತ: ನ್ಯಾಯಕ್ಕಾಗಿ ಕಾರ್ಮಿಕರು ಹೋರಾಟ

ತಂದೆ-ತಾಯಿಯ 13 ವರ್ಷಗಳ ಕನಸು ನನಸು ಮಾಡಿದ ಮಗ: ಕಟ್ಟಿಗೆಹಳ್ಳಿಯಲ್ಲಿ ಅದ್ದೂರಿ ಗೃಹಪ್ರವೇಶ!