ಮಂಡ್ಯ: ಬಾಲಗರ್ಭಿಣಿಯರಿಗೆ ಕಾನೂನು ಬಾಹಿರ ಸ್ಕ್ಯಾನಿಂಗ್; ಮೂವರು ವೈದ್ಯರು ಅರೆಸ್ಟ್- 12 ಎಫ್ ಐಆರ್
12 ಎಫ್‌ಐಆರ್‌ಗಳ ಆಧಾರದ ಮೇಲೆ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲ್ಲೂಕಿನಲ್ಲಿ ಖಾಸಗಿ ಕ್ಲಿನಿಕ್ ಗಳ ಮೂವರು ವೈದ್ಯರನ್ನು ಬಂಧಿಸಲಾಗಿದೆ. ಮಂಡ್ಯ: ಭ್ರೂಣಲಿಂಗ ಪತ್ತೆಗಾಗಿ 31 ಬಾಲಗರ್ಭಿಣಿಯರಿಗೆ ಕಾನೂನುಬಾಹಿರವಾಗಿ ಸ್ಕ್ಯಾನಿಂಗ್ ಮಾಡಿರುವ ಆರೋಪದ ಮೇರೆಗೆ ಮೂವರು ವೈದ್ಯರನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪೋಕ್ಸೋ ಕಾಯ್ದೆಯಡಿ ಪೊಲೀಸ್ ದೂರುಗಳನ್ನು ದಾಖಲಿಸದೆ ಗರ್ಭಿಣಿ ಅಪ್ರಾಪ್ತ ವಯಸ್ಕರ ಮೇಲೆ ಸ್ಕ್ಯಾನಿಂಗ್ ನಡೆಸುವುದು ಮತ್ತು ಗರ್ಭಿಣಿ ಮಹಿಳೆಯರಿಗೆ ಸಂಬಂಧಿಸಿದ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಸ್ವಯಂಪ್ರೇರಿತ ದೂರು ದಾಖಲಿಸಿದ್ದರು. ಇದರ ಆಧಾರದ ಮೇಲೆ ಸಮನ್ಸ್ ನೀಡಲಾಗಿತ್ತು. 12 ಎಫ್‌ಐಆರ್‌ಗಳ ಆಧಾರದ ಮೇಲೆ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲ್ಲೂಕಿನಲ್ಲಿ ಖಾಸಗಿ ಕ್ಲಿನಿಕ್ ಗಳ ಮೂವರು ವೈದ್ಯರನ್ನು ಬಂಧಿಸಲಾಗಿದೆ. ಕೆ.ಆರ್.ಪೇಟೆಯ ಚೇತನ ಮೆಟರ್ನಿಟಿ ಸೆಂಟರ್‌ನ ಡಾ.ದಿವ್ಯಾ ಚೇತನ, ನಾವಿ ಡಯಾಗ್ನಸ್ಟಿಕ್ ಸೆಂಟರ್ ಡಾ.ಹರ್ಷಿತ್ ಮತ್ತು ಕುಶಾಲ್ ಡಯಾಗ್ನಸ್ಟಿಕ್ ಸೆಂಟರ್‌ನ ಡಾ.ಹರೀಶ್ ಬಂಧಿತರು. ಇಲ್ಲಿನ ಸರ್ಕಾರಿ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಪ್ರಿಯಾಂಕಾ ತಲೆಮರೆಸಿ ಕೊಂಡಿದ್ದು, ಪೊಲೀಸರು ಶೋಧ ಮುಂದುವರಿಸಿದ್ದಾರೆ ಎಂದು ನ್ಯಾಯಮೂರ್ತಿ ಬಿ. ವೀರಪ್ಪ ತಿಳಿಸಿದ್ದಾರೆ. ಈ ವೈದ್ಯರ ಕೃತ್ಯಗಳನ್ನು ಸಮಾಜದಲ್ಲಿ ನಡೆಯುತ್ತಿರುವ ಘೋ...