ಉದ್ಯೋಗದ ನೆಪದಲ್ಲಿ ವೇಶ್ಯಾವಾಟಿಕೆ! : ದಂಧೆಗೆ ಇಳಿಸಿದ್ದ ಕಿಂಗ್ ಪಿನ್ ಸೇರಿ 11 ಜನ ಬಂಧನ


 ರಾಯಚೂರು, ಏಪ್ರಿಲ್ 28: ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ಉದ್ಯೋಗ ನೀಡುವ ನೆಪದಲ್ಲಿ ನಿರುದ್ಯೋಗಿ ಮಹಿಳೆಯರನ್ನು ದಂಧೆಗೆ ಇಳಿಸುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಹಿರೇಕೊಟ್ನೆಕಲ್ ಗ್ರಾಮದ ಸುತ್ತಮುತ್ತಲಿನ ಜಮೀನುಗಳಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಯ ಮೇಲೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಕಿಂಗ್‌ಪಿನ್ ತಾಯಪ್ಪ ಸೇರಿದಂತೆ ಒಟ್ಟು 11 ಜನರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಾನ್ವಿ ಪಟ್ಟಣದ ಇಂದಿರಾನಗರದ ನಿವಾಸಿಯಾದ ತಾಯಪ್ಪ ಈ ದಂಧೆಯ ಮಾಸ್ಟರ್ ಮೈಂಡ್ ಆಗಿದ್ದು, ಆಂಧ್ರಪ್ರದೇಶ, ತೆಲಂಗಾಣ, ಬೆಳಗಾವಿ ಹಾಗೂ ಮಹಾರಾಷ್ಟ್ರದ ನಿರುದ್ಯೋಗಿ ಮಹಿಳೆಯರನ್ನು ಗುರಿಯಾಗಿಸಿಕೊಂಡಿದ್ದ. ಅವರಿಗೆ ಉತ್ತಮ ಕೆಲಸ ಕೊಡಿಸುವುದಾಗಿ ನಂಬಿಸಿ ಕರೆತಂದು, ನಂತರ ಬಲವಂತವಾಗಿ ದಂಧೆಗೆ ತಳ್ಳುತ್ತಿದ್ದ ಎನ್ನಲಾಗಿದೆ. ಹಿರೇಕೊಟ್ನೆಕಲ್ ಗ್ರಾಮದ ಹೊರವಲಯದ ಜಮೀನುಗಳನ್ನು ಈ ಅಕ್ರಮ ಚಟುವಟಿಕೆಗೆ ಅಡ್ಡೆಯನ್ನಾಗಿ ಮಾಡಿಕೊಳ್ಳಲಾಗಿತ್ತು ಎಂದು ತಿಳಿದು ಬಂದಿದೆ.


ವಿಷಯ ತಿಳಿದ ಮಾನ್ವಿ ಪೊಲೀಸರು ಜಮೀನಿನ ಮೇಲೆ ಅನಿರೀಕ್ಷಿತ ದಾಳಿ ನಡೆಸಿದ್ದಾರೆ. ಈ ವೇಳೆ ಕಿಂಗ್‌ಪಿನ್ ತಾಯಪ್ಪ, ಅಮರೇಶ್, ಹುಸೇನಪ್ಪ, ಪ್ರಕಾಶ್, ಆದೇಶ್, ವಿಜಯಕುಮಾರ್, ಶರಣಬಸವ ಹಾಗೂ ಮಲ್ಲಿಕಾರ್ಜುನ ಸೇರಿದಂತೆ 11 ಮಂದಿಯನ್ನು ಪೊಲೀಸರು ಸೆರೆಹಿಡಿದಿದ್ದಾರೆ. ಕಾರ್ಯಾಚರಣೆಯ ಸಮಯದಲ್ಲಿ ಇಬ್ಬರು ಸಂತ್ರಸ್ತ ಮಹಿಳೆಯರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದ್ದು, ಅವರನ್ನು ಸಾಂತ್ವನ ಕೇಂದ್ರಕ್ಕೆ ರವಾನಿಸಲಾಗಿದೆ. ಈ ಬಗ್ಗೆ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧಿತರಿಂದ ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ.

Comments

Popular posts from this blog

ಚಾರ್ವಿಕ ಟೂರ್ಸ್ ಅಂಡ್ ಟ್ರಾವೆಲ್ಸ್‌ನಿಂದ ಪ್ರಥಮ ವರ್ಷದ ವಾರ್ಷಿಕೋತ್ಸವದ ಧಮಾಕಾ ಆಫರ್; ಕೇವಲ ₹2,100 ರಲ್ಲಿ 4 ವರ್ಷಗಳ ಸುದೀರ್ಘ ಪ್ರವಾಸ ಯೋಜನೆ!

ದಾವಣಗೆರೆ ಕಾರ್ಗಿಲ್​ ಕಾರ್ಖಾನೆಯಲ್ಲಿ ಉತ್ಪಾದನೆ ಸ್ಥಗಿತ: ನ್ಯಾಯಕ್ಕಾಗಿ ಕಾರ್ಮಿಕರು ಹೋರಾಟ

ತಂದೆ-ತಾಯಿಯ 13 ವರ್ಷಗಳ ಕನಸು ನನಸು ಮಾಡಿದ ಮಗ: ಕಟ್ಟಿಗೆಹಳ್ಳಿಯಲ್ಲಿ ಅದ್ದೂರಿ ಗೃಹಪ್ರವೇಶ!