ಲಂಚ ಪಡೆಯುತ್ತಾ ರೆಡ್ಹ್ಯಾಂಡ್ ಆಗಿ ಸಿಕ್ಕ ಆಫೀಸರ್; ಸಿನಿಮೀಯ ರೀತಿಯಲ್ಲಿ ಆರೋಪಿಯನ್ನು ವಶಕ್ಕೆ ಪಡೆದ ಲೋಕಾಯುಕ್ತ!

 


ರಾಯಚೂರು, ಏಪ್ರಿಲ್ 10: ಜಿಲ್ಲೆಯಲ್ಲಿ ಲೋಕಾಯುಕ್ತರು (Lokayukta) ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿ ಭ್ರಷ್ಟಾಚಾರ ಆರೋಪದಡಿ ಸಿರವಾರ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ. ಪಂಚಾಯತ್‌ನ ಚೀಫ್ ಆಫೀಸರ್ ಸುರೇಶ್ ಶೆಟ್ಟಿ, ಖಾತಾ ಮ್ಯೂಟೇಶನ್ ಮಾಡಲು ಲೇಔಟ್ ಮಾಲೀಕ ರಘರಾಮ್ ರೆಡ್ಡಿಯಿಂದ 2 ಲಕ್ಷ ರೂ. ಲಂಚ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಈ ಆರೋಪದ ಹಿನ್ನೆಲೆ ಸುರೇಶ್ನನ್ನು ವಶಕ್ಕೆ ಪಡೆಯಲಾಗಿದೆ.

ಲೇಔಟ್ ಮಾಲೀಕನಿಂದ ಲೋಕಾಯುಕ್ತಗೆ ದೂರು

ಸಿರವಾರ ಪಟ್ಟಣದ ಹೊಸ ಲೇಔಟ್‌ನ 34 ನಿವೇಶನಗಳ ಖಾತಾ ಮ್ಯೂಟೇಶನ್ ಪ್ರಕ್ರಿಯೆಗಾಗಿ ಸುರೇಶ್ ಲಂಚ ಕೇಳಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ರಘರಾಮ್ ರೆಡ್ಡಿ ಲೋಕಾಯುಕ್ತರಿಗೆ ದೂರು ನೀಡಿದ್ದರು. ದೂರು ಆಧಾರವಾಗಿ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ನಿನ್ನೆ ರಘರಾಮ್ ರೆಡ್ಡಿ ಅವರು 1 ಲಕ್ಷ ರೂ. ಹಣವನ್ನು ಸುರೇಶ್ ಶೆಟ್ಟಿಗೆ ನೀಡುವ ವೇಳೆ ದಾಳಿ ನಡೆಸಿದ್ದಾರೆ.

ಸ್ನೇಹಿತನ ಮನೆಯಲ್ಲಿ ಅಡಗಿದ್ದ ಆರೋಪಿ ಬಲೆಗೆ!

ಆದರೆ ದಾಳಿ ವೇಳೆ ಸುರೇಶ್ ಶೆಟ್ಟಿ ಕಾರಿನಲ್ಲಿ ಹಣ ಸಮೇತ ಸ್ಥಳದಿಂದ ಪರಾರಿಯಾಗಿದ್ದು, ಬಳಿಕ ಸಿರವಾರದಿಂದ ಕವಿತಾಳ ಕಡೆಗೆ ಕಾರಿನಲ್ಲಿ ತೆರಳಿ ಸ್ನೇಹಿತರ ಮನೆಯಲ್ಲಿ ಅಡಗಿಕೊಂಡಿದ್ದರು ಎನ್ನಲಾಗಿದೆ. ಲೋಕಾಯುಕ್ತ ತಂಡ ಮೊಬೈಲ್ ಲೊಕೇಶನ್ ಟ್ರೇಸ್ ಮಾಡಿ ಕವಿತಾಳ ಪಟ್ಟಣದಲ್ಲಿ ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದಿದೆ. ಇದೀಗ ಆರೋಪಿಯನ್ನು ವಿಚಾರಣೆಗೊಳಪಡಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ

Comments

Popular posts from this blog

ಚಾರ್ವಿಕ ಟೂರ್ಸ್ ಅಂಡ್ ಟ್ರಾವೆಲ್ಸ್‌ನಿಂದ ಪ್ರಥಮ ವರ್ಷದ ವಾರ್ಷಿಕೋತ್ಸವದ ಧಮಾಕಾ ಆಫರ್; ಕೇವಲ ₹2,100 ರಲ್ಲಿ 4 ವರ್ಷಗಳ ಸುದೀರ್ಘ ಪ್ರವಾಸ ಯೋಜನೆ!

ದಾವಣಗೆರೆ ಕಾರ್ಗಿಲ್​ ಕಾರ್ಖಾನೆಯಲ್ಲಿ ಉತ್ಪಾದನೆ ಸ್ಥಗಿತ: ನ್ಯಾಯಕ್ಕಾಗಿ ಕಾರ್ಮಿಕರು ಹೋರಾಟ

ತಂದೆ-ತಾಯಿಯ 13 ವರ್ಷಗಳ ಕನಸು ನನಸು ಮಾಡಿದ ಮಗ: ಕಟ್ಟಿಗೆಹಳ್ಳಿಯಲ್ಲಿ ಅದ್ದೂರಿ ಗೃಹಪ್ರವೇಶ!