ಕಾರ್ಯಕ್ರಮದಲ್ಲಿ ಕುಸಿದುಬಿದ್ದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ


 ಬೆಂಗಳೂರು, (ಏಪ್ರಿಲ್ 03): ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆಯವರು  ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ. ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಇಂದು (ಏಪ್ರಿಲ್ 03) ಸ್ಕೌಟ್ಸ್ & ಗೈಡ್ಸ್ ಆಯುಕ್ತ PGR ಸಿಂಧ್ಯಾ ಅವರಿಗೆ ಆಯೋಜಿಸಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಸಂತೋಷ್ ಹೆಗ್ಡೆ ಭಾಗವಹಿಸಿದ್ದು, ಈ ವೇಳೆ ಭಾಷಣ ಮಾಡುವಾಗ ಅಸ್ವಸ್ಥಗೊಂಡಿದ್ದಾರೆ. ಬಳಿಕ ಭಾಷಣ ಮುಗಿಸಿ ವೇದಿಕೆ ಮೇಲಿನ ಕುರ್ಚಿ ಮೇಲೆ ಕುಳಿತುಕೊಳ್ಳುವಾಗ ಕುಸಿದುಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಸದ್ಯ ಅವರಿಗೆ ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಕಿತ್ಸೆ ನೀಡಲಾಗುತ್ತಿದೆ.

ಅಸ್ವಸ್ಥರಾಗಿ ವೇದಿಕೆ ಮೇಲೆ ಕುಸಿದುಬೀಳುತ್ತಿದ್ದಂತೆಯೇ ಕೂಡಲೇ ಸಂತೋಷ ಹೆಗ್ಡೆಯವರನ್ನು ಸ್ವತ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ತಮ್ಮ ಕಾರಿನಲ್ಲಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಣಿಪಾಲ್ ಆಸ್ಪತ್ರೆಯ ಐಸಿಯುನಲ್ಲಿ ಸಂತೋಷ್ ಹೆಗ್ಡೆಗೆ ಚಿಕಿತ್ಸೆ ಮುಂದುವರೆದಿದ್ದ, ಸದ್ಯ ಚೇರಿಸಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Comments

Popular posts from this blog

ದಾವಣಗೆರೆ ಕಾರ್ಗಿಲ್​ ಕಾರ್ಖಾನೆಯಲ್ಲಿ ಉತ್ಪಾದನೆ ಸ್ಥಗಿತ: ನ್ಯಾಯಕ್ಕಾಗಿ ಕಾರ್ಮಿಕರು ಹೋರಾಟ

ಕೊಟ್ಟೂರು ತಾಲ್ಲೂಕಿನ ಕೋಗಲಿಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ

ತಂದೆ-ತಾಯಿಯ 13 ವರ್ಷಗಳ ಕನಸು ನನಸು ಮಾಡಿದ ಮಗ: ಕಟ್ಟಿಗೆಹಳ್ಳಿಯಲ್ಲಿ ಅದ್ದೂರಿ ಗೃಹಪ್ರವೇಶ!