ದಾವಣಗೆರೆ: ಭೀಕರ ಅಪಘಾತದಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಸ್ಥಳದಲ್ಲೇ ಸಾವು


 ದಾವಣಗೆರೆಯ ಜಗಳೂರಿನಲ್ಲಿ ಮರಕ್ಕೆ ಕಾರು ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ದಾವಣಗೆರೆ: ದಾವಣಗೆರೆಯ ಜಗಳೂರಿನಲ್ಲಿ ಮರಕ್ಕೆ ಕಾರು ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮುಷ್ಟೂರು-ಕಡಬನಕಟ್ಟೆ ಗ್ರಾಮದ ಬಳಿ ಈ ದುರಂತ ಸಂಭವಿಸಿದ್ದು 45 ವರ್ಷದ ರಘುನಾಥ್ ಮೃತಪಟ್ಟಿದ್ದಾರೆ. ವಿಜಯನಗರ ಹಾಗೂ ಕೊಪ್ಪಳ ಜಿಲ್ಲೆಗಳ ಡಿಸಿಆರ್ ಇ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ರಘುನಾಥ್ ಚಿತ್ರದುರ್ಗದಿಂದ ಜಗಳೂರು ಕಡೆಗೆ ಕಾರಿನಲ್ಲಿ ತೆರಳುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿತ್ತು. ಜಗಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Comments

Popular posts from this blog

ಚಾರ್ವಿಕ ಟೂರ್ಸ್ ಅಂಡ್ ಟ್ರಾವೆಲ್ಸ್‌ನಿಂದ ಪ್ರಥಮ ವರ್ಷದ ವಾರ್ಷಿಕೋತ್ಸವದ ಧಮಾಕಾ ಆಫರ್; ಕೇವಲ ₹2,100 ರಲ್ಲಿ 4 ವರ್ಷಗಳ ಸುದೀರ್ಘ ಪ್ರವಾಸ ಯೋಜನೆ!

ದಾವಣಗೆರೆ ಕಾರ್ಗಿಲ್​ ಕಾರ್ಖಾನೆಯಲ್ಲಿ ಉತ್ಪಾದನೆ ಸ್ಥಗಿತ: ನ್ಯಾಯಕ್ಕಾಗಿ ಕಾರ್ಮಿಕರು ಹೋರಾಟ

ತಂದೆ-ತಾಯಿಯ 13 ವರ್ಷಗಳ ಕನಸು ನನಸು ಮಾಡಿದ ಮಗ: ಕಟ್ಟಿಗೆಹಳ್ಳಿಯಲ್ಲಿ ಅದ್ದೂರಿ ಗೃಹಪ್ರವೇಶ!