ಮಮತಾಗೆ 15,000ಕ್ಕೂ ಹೆಚ್ಚು ಮತಗಳಿಂದ ಹೀನಾಯ ಸೋಲು – ಸುವೆಂದು ಅಧಿಕಾರಿಗೆ ಜಯ


 ಕೋಲ್ಕತ್ತಾ: ಜಿದ್ದಾಜಿದ್ದಿನಿಂದ ಕೂಡಿದ್ದ ಭವಾನಿಪುರ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಅವರು 15 ಸಾವಿರಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಸೋಲು ಅನುಭವಿಸಿದ್ದಾರೆ.

ಮತ ಎಣಿಕೆಯ ಆರಂಭದಲ್ಲಿ ಮಮತಾ ಬ್ಯಾನರ್ಜಿ, ಅಲ್ಪ ಮುನ್ನಡೆ ಸಾಧಿಸಿದ್ದರು. 19ನೇ ಸುತ್ತಿನ ಮತ ಎಣಿಕೆಯ ನಂತರ ಸುವೆಂದು ಅಧಿಕಾರಿ 15001 ಮತಗಳ ಮುನ್ನಡೆ ಸಾಧಿಸಿದ್ದಾರೆ. ಇನ್ನೂ ಒಂದು ಸುತ್ತಿನ ಮತ ಎಣಿಕೆ ಬಾಕಿಯಿದೆ.


ರಾತ್ರಿ 9:30ರ ವೇಳೆಗೆ ಬಿಜೆಪಿ 176 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. 32 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಬಹುಮತ ಪಡೆಯಲು 148 ಸ್ಥಾನಗಳ ಅಗತ್ಯವಿದ್ದು, ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತವಾಗಿದೆ.


ಪ್ರಸ್ತುತ ವಿರೋಧ ಪಕ್ಷದ ಪ್ರಬಲ ನಾಯಕನಾಗಿರುವ ಸುವೇಂದು ಅಧಿಕಾರಿ ಮುಖ್ಯಮಂತ್ರಿ ರೇಸ್‍ನಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಸಂಘಟನಾ ಚತುರ, ಪ್ರಭಾವಿ ನಾಯಕನಾಗಿ ಗುರುತಿಸಿಕೊಂಡಿರುವ ಸುವೇಂದು ಅಧಿಕಾರಿ ನಂದಿಗ್ರಾಮ್ ಮತ್ತು ಭವಾನಿಪುರ ಎರಡು ಕ್ಷೇತ್ರಗಳಿಂದ ಸ್ಪರ್ಧಿಸಿದ್ದಾರೆ. ಈ ಹಿಂದೆ ಮಮತಾ ಬ್ಯಾನರ್ಜಿ ಸರ್ಕಾರದಲ್ಲೇ ಪ್ರಮುಖ ಸಚಿವ ಸ್ಥಾನಗಳನ್ನು ನಿರ್ವಹಿಸಿದ್ದ, ತಮ್ಲುಕ್‍ನಿಂದ ಸಂಸದನಾಗಿ ಸೇವೆ ಸಲ್ಲಿಸಿದ್ದ ಸುವೇಂದು ಈಗ ಬಂಗಾಳದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಹೀಗಾಗಿ ಬಿಜೆಪಿ ಸಿಎಂ ಸ್ಥಾನಕ್ಕೆ ಪರಿಗಣಿಸಿದೆ.

Comments

Popular posts from this blog

ಚಾರ್ವಿಕ ಟೂರ್ಸ್ ಅಂಡ್ ಟ್ರಾವೆಲ್ಸ್‌ನಿಂದ ಪ್ರಥಮ ವರ್ಷದ ವಾರ್ಷಿಕೋತ್ಸವದ ಧಮಾಕಾ ಆಫರ್; ಕೇವಲ ₹2,100 ರಲ್ಲಿ 4 ವರ್ಷಗಳ ಸುದೀರ್ಘ ಪ್ರವಾಸ ಯೋಜನೆ!

ದಾವಣಗೆರೆ ಕಾರ್ಗಿಲ್​ ಕಾರ್ಖಾನೆಯಲ್ಲಿ ಉತ್ಪಾದನೆ ಸ್ಥಗಿತ: ನ್ಯಾಯಕ್ಕಾಗಿ ಕಾರ್ಮಿಕರು ಹೋರಾಟ

ತಂದೆ-ತಾಯಿಯ 13 ವರ್ಷಗಳ ಕನಸು ನನಸು ಮಾಡಿದ ಮಗ: ಕಟ್ಟಿಗೆಹಳ್ಳಿಯಲ್ಲಿ ಅದ್ದೂರಿ ಗೃಹಪ್ರವೇಶ!