ಬೆಂಗ್ಳೂರಲ್ಲಿ ಬೃಹತ್ ಡ್ರಗ್ಸ್ ಜಾಲ ಪತ್ತೆ – 35 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, ಎಂಟು ಜನ ಅರೆಸ್ಟ್


 ಬೆಂಗಳೂರು: ಹೆಬ್ಬಾಳ ಪೊಲೀಸರು (Hebbal Police) ದೆಹಲಿ ಮೂಲದ ಬೃಹತ್ ಡ್ರಗ್ಸ್‌ ಜಾಲವೊಂದನ್ನ ಭೇದಿಸಿ, ಎಂಟು ಆರೋಪಿಗಳನ್ನು ಬಂಧಿಸಿ, ಬರೋಬ್ಬರಿ 35 ಕೋಟಿ ರೂ. ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ.


ದೆಹಲಿಯಿಂದ (Delhi) ಬೆಂಗಳೂರಿಗೆ (Bengaluru) ಮಾದಕ ವಸ್ತುಗಳನ್ನು ತಂದು ಮಾರಾಟ ಮಾಡ್ತಿದ್ದ ಗ್ಯಾಂಗ್‌ವೊಂದನ್ನು ಹೆಡೆಮುರಿ ಕಟ್ಟಿದ್ದಾರೆ. ಪೊಲೀಸರು ಒಟ್ಟು ಎಂಟು ಜನ ಆರೋಪಿಗಳನ್ನು ಅರೆಸ್ಟ್ ಮಾಡಿ, ಒಂದೇ ಗ್ಯಾಂಗ್‌ನಿಂದ ಸುಮಾರು 35 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಮಾದಕ ವಸ್ತುಗಳ ಸಾಗಾಟಕ್ಕೆ ಆರೋಪಿಗಳು ನಾನಾ ದಾರಿಗಳನ್ನು ಕಂಡುಕೊಂಡಿದ್ದರು ಎಂದು ತನಿಖೆ ವೇಳೆ ಗೊತ್ತಾಗಿದೆ.

ದೆಹಲಿಯಿಂದ ರೈಲಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಆರೋಪಿಗಳು ಮಾದಕ ವಸ್ತುವನ್ನು ಟೇಬಲ್ ಮತ್ತು ಚೇರ್‌ಗಳಲ್ಲಿ ಅಡಗಿಸಿಟ್ಟು ಎಂಡಿಎಂಎ ತಂದಿದ್ದರು. ಗಿಫ್ಟ್ ರೀತಿಯಲ್ಲಿ ಪ್ಯಾಕ್ ಮಾಡಿ ತಂದಿದ್ದು, ಅದನ್ನ ಕಾಲೇಜುಗಳು, ಐಷಾರಾಮಿ ಏರಿಯಾಗಳಲ್ಲಿ ಕಾರಿನಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಪೊಲೀಸರು ಖಚಿತ ಮಾಹಿತಿ ಆಧಾರಿಸಿ ದಾಳಿ ನಡೆಸಿ, ಹದಿನೇಳು ಕೆಜಿ ಡ್ರಗ್ ವಶಕ್ಕೆ ಪಡೆದಿದ್ದಾರೆ.

Comments

Popular posts from this blog

ಚಾರ್ವಿಕ ಟೂರ್ಸ್ ಅಂಡ್ ಟ್ರಾವೆಲ್ಸ್‌ನಿಂದ ಪ್ರಥಮ ವರ್ಷದ ವಾರ್ಷಿಕೋತ್ಸವದ ಧಮಾಕಾ ಆಫರ್; ಕೇವಲ ₹2,100 ರಲ್ಲಿ 4 ವರ್ಷಗಳ ಸುದೀರ್ಘ ಪ್ರವಾಸ ಯೋಜನೆ!

ದಾವಣಗೆರೆ ಕಾರ್ಗಿಲ್​ ಕಾರ್ಖಾನೆಯಲ್ಲಿ ಉತ್ಪಾದನೆ ಸ್ಥಗಿತ: ನ್ಯಾಯಕ್ಕಾಗಿ ಕಾರ್ಮಿಕರು ಹೋರಾಟ

ತಂದೆ-ತಾಯಿಯ 13 ವರ್ಷಗಳ ಕನಸು ನನಸು ಮಾಡಿದ ಮಗ: ಕಟ್ಟಿಗೆಹಳ್ಳಿಯಲ್ಲಿ ಅದ್ದೂರಿ ಗೃಹಪ್ರವೇಶ!