ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?
ವಿವಿಧ ಸಮುದಾಯಗಳಿಗೆ ರಾಜಕೀಯ ಪ್ರತಿನಿಧಿತ್ವ ನೀಡುವ ಉದ್ದೇಶದಿಂದ ಕಾಂಗ್ರೆಸ್ ಹೈಕಮಾಂಡ್ ಈ ಮಹತ್ವದ ಹೆಜ್ಜೆ ಇಡಲು ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರಗೊಂಡಿರುವ ನಡುವೆ, ಹೊಸ ಸರ್ಕಾರದಲ್ಲಿ 3ರಿಂದ 4 ಉಪಮುಖ್ಯಮಂತ್ರಿ (ಡಿಸಿಎಂ) ಹುದ್ದೆಗಳನ್ನು ಸೃಷ್ಟಿಸುವ ಸಾಧ್ಯತೆ ಬಗ್ಗೆ ಕಾಂಗ್ರೆಸ್ ವಲಯದಲ್ಲಿ ಭಾರೀ ಚರ್ಚೆ ಆರಂಭವಾಗಿದೆ.
ವಿವಿಧ ಸಮುದಾಯಗಳಿಗೆ ರಾಜಕೀಯ ಪ್ರತಿನಿಧಿತ್ವ ನೀಡುವ ಉದ್ದೇಶದಿಂದ ಕಾಂಗ್ರೆಸ್ ಹೈಕಮಾಂಡ್ ಈ ಮಹತ್ವದ ಹೆಜ್ಜೆ ಇಡಲು ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
ಉಪಮುಖ್ಯಮಂತ್ರಿ ಸ್ಥಾನಕ್ಕೆ ಗ್ರಾಮೀಣಾಭಿವೃದ್ಧಿ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಕೈಗಾರಿಕಾ ಸಚಿವ ಎಂಬಿ.ಪಾಟೀಲ್, ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಹೆಸರುಗಳು ಪ್ರಮುಖವಾಗಿ ಕೇಳಿಬರುತ್ತಿವೆ.
2028 ಚುನಾವಣೆಗೆ ಸಮುದಾಯ ಸಮೀಕರಣ?
ಕಾಂಗ್ರೆಸ್ ಹೈಕಮಾಂಡ್ 2028ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ವಿವಿಧ ಸಮುದಾಯಗಳಿಗೆ ಸಮತೋಲನ ಸಾಧಿಸುವ ತಂತ್ರ ರೂಪಿಸುತ್ತಿದೆ ಎನ್ನಲಾಗಿದೆ.
ದಲಿತ, ಲಿಂಗಾಯತ, ಮುಸ್ಲಿಂ ಹಾಗೂ ಕುರುಬ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡುವ ಉದ್ದೇಶದಿಂದ ಬಹು ಡಿಸಿಎಂ ಫಾರ್ಮುಲಾ ಬಳಕೆ ಮಾಡಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ.

Comments
Post a Comment