ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮಹಿಳಾ ಪೊಲೀಸ್ ಅಧಿಕಾರಿ ಸಾವು


 ಬೆಂಗಳೂರು: ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ.


ಬೆಸ್ಕಾಂ ವಿಜಿಲೆನ್ಸ್ ನಲ್ಲಿ ಎಸ್ಪಿಯಾಗಿದ್ದ ಲಾವಣ್ಯ ಮೃತ ಮಹಿಳಾ ಅಧಿಕಾರಿ. ತಾಯಿ ನಿಧನರಾಗಿ 10 ವರ್ಷದ ಗಂಡು ಮಗು ಹಾಗೂ 3 ವರ್ಷದ ಹೆಣ್ಣು ಮಗು ಅನಾಥವಾಗಿದೆ.

ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ದೊಡ್ಡಗಂಜೂರು ಗ್ರಾಮದವರಾದ ಲಾವಣ್ಯ 2023 ರಿಂದಲೂ ಪೊಲೀಸ್ ಇಲಾಖೆಯಲ್ಲಿ ಎಸ್ಪಿಯಾಗಿ ಸೇವೆ ಸಲ್ಲಿಸಿದ್ದಾರೆ.. ಮಂಡ್ಯ ಮತ್ತು ಬಳ್ಳಾರಿಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷರಾಗಿ ಕೆಲಸ ಮಾಡಿದ್ದಾರೆ. ಅಷ್ಟೇ ಅಲ್ಲ, ಬೆಂಗಳೂರಿನಲ್ಲಿ ಇಂಟಲಿಜೆನ್ಸ್ ಮತ್ತು ಡಿಸಿಆರ್‌ ಇ ಎಸ್ಪಿ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ.


ಚಿಕಿತ್ಸೆ ಪಡೆಯುತ್ತಿದ್ದ ಲಾವಣ್ಯ ಅವರನ್ನು ಇತ್ತೀಚೆಗಷ್ಟೇ ಡಿಜಿ, ಐಜಿಪಿ ಡಾ. ಎಂ.ಎ ಸಲೀಂ ಭೇಟಿ ನೀಡಿ ಧೈರ್ಯ ತುಂಬಿದ್ದರು. ಇವರ ನಿಧನಕ್ಕೆ ಪೊಲೀಸ್ ಇಲಾಖೆ, ರಾಜಕೀಯ ಗಣ್ಯರು ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.

Comments

Popular posts from this blog

ಚಾರ್ವಿಕ ಟೂರ್ಸ್ ಅಂಡ್ ಟ್ರಾವೆಲ್ಸ್‌ನಿಂದ ಪ್ರಥಮ ವರ್ಷದ ವಾರ್ಷಿಕೋತ್ಸವದ ಧಮಾಕಾ ಆಫರ್; ಕೇವಲ ₹2,100 ರಲ್ಲಿ 4 ವರ್ಷಗಳ ಸುದೀರ್ಘ ಪ್ರವಾಸ ಯೋಜನೆ!

ದಾವಣಗೆರೆ ಕಾರ್ಗಿಲ್​ ಕಾರ್ಖಾನೆಯಲ್ಲಿ ಉತ್ಪಾದನೆ ಸ್ಥಗಿತ: ನ್ಯಾಯಕ್ಕಾಗಿ ಕಾರ್ಮಿಕರು ಹೋರಾಟ

ತಂದೆ-ತಾಯಿಯ 13 ವರ್ಷಗಳ ಕನಸು ನನಸು ಮಾಡಿದ ಮಗ: ಕಟ್ಟಿಗೆಹಳ್ಳಿಯಲ್ಲಿ ಅದ್ದೂರಿ ಗೃಹಪ್ರವೇಶ!