ಕೋಳೂರು ಗ್ರಾ.ಪಂನಲ್ಲಿ ಲೋಕಾಯುಕ್ತ ಭೇಟೆ: ಲಂಚ ಪಡೆಯುತ್ತಿದ್ದ ಕಾರ್ಯದರ್ಶಿ, ಬಿಲ್ ಕಲೆಕ್ಟರ್ ಸೇರಿ ಮೂವರು ಅರೆಸ್ಟ್!


 ಕೊಪ್ಪಳ: ನಿವೇಶನ ದಾಖಲಾತಿ ನೀಡಲು ಲಂಚದ ಬೇಡಿಕೆ ಇಟ್ಟಿದ್ದ ಕೊಪ್ಪಳ ತಾಲೂಕಿನ ಕೋಳೂರು ಗ್ರಾಮ ಪಂಚಾಯತಿಯ ಮೂವರು ಅಧಿಕಾರಿಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಗ್ರಾಮ ಪಂಚಾಯತಿ ಕಾರ್ಯದರ್ಶಿ ಮರಿಯಪ್ಪ, ಬಿಲ್ ಕಲೆಕ್ಟರ್ ನಾಗರಾಜ ಮತ್ತು ದಿನಗೂಲಿ ನೌಕರ ಮಾರುತಿ ಬಂಧಿತ ಆರೋಪಿಗಳು.


ನಡೆದಿದ್ದೇನು?

ಅರ್ಜಿದಾರರಾದ ಜ್ಞಾನೇಶ್ವರ್ ಎಂಬುವವರು ತಮ್ಮ ನಿವೇಶನಕ್ಕೆ ಸಂಬಂಧಿಸಿದ ದಾಖಲಾತಿಗಳನ್ನು ಪಡೆಯಲು ಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಕಳೆದ ಏಳು ತಿಂಗಳಿನಿಂದ ಅಧಿಕಾರಿಗಳು ಯಾವುದೇ ಕೆಲಸ ಮಾಡಿಕೊಡದೆ ಅರ್ಜಿದಾರರನ್ನು ಸತಾಯಿಸುತ್ತಿದ್ದರು. ಅಂತಿಮವಾಗಿ ದಾಖಲೆ ನೀಡಲು 75 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

75 ಸಾವಿರ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಅರೆಸ್ಟ್!

ಅಧಿಕಾರಿಗಳ ಕಿರುಕುಳದಿಂದ ಬೇಸತ್ತ ಅರ್ಜಿದಾರ ಜ್ಞಾನೇಶ್ವರ್ ಅವರು ರಾಯಚೂರು ಲೋಕಾಯುಕ್ತ ಪೊಲೀಸರಿಗೆ ಲಿಖಿತ ದೂರು ನೀಡಿದ್ದರು. ಯೋಜನೆಯಂತೆ ಬುಧವಾರ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಅರ್ಜಿದಾರರಿಂದ 75 ಸಾವಿರ ರೂಪಾಯಿ ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ಏಕಾಏಕಿ ದಾಳಿ ನಡೆಸಿದ್ದಾರೆ. ಲಂಚದ ಹಣದ ಸಮೇತ ಕಾರ್ಯದರ್ಶಿ ಮರಿಯಪ್ಪ, ಬಿಲ್ ಕಲೆಕ್ಟರ್ ನಾಗರಾಜ ಮತ್ತು ದಿನಗೂಲಿ ನೌಕರ ಮಾರುತಿಯನ್ನು ವಶಕ್ಕೆ ಪಡೆದಿದ್ದಾರೆ

ಲೋಕಾಯುಕ್ತ ತಂಡದ ಕಾರ್ಯಾಚರಣೆ:

ರಾಯಚೂರು ಲೋಕಾಯುಕ್ತ ಎಸ್ಪಿ ಸಿದ್ದರಾಜು ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಲೋಕೇಶ, ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಾದ ಚಂದ್ರಪ್ಪ, ಸುನಿಲ್ ಹಾಗೂ ಶೈಲಾ ಅವರು ಈ ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ.


ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೋಲಿಸರು ನಡೆಸಿದ ಈ ಭೇಟೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.


ವರದಿ: ಟಿವಿ ನ್ಯೂಸ್ ಕನ್ನಡ ಏಷ್ಯನ್  ನೆಟ್ವರ್ಕ್,

Comments

Popular posts from this blog

ದಾವಣಗೆರೆ ಕಾರ್ಗಿಲ್​ ಕಾರ್ಖಾನೆಯಲ್ಲಿ ಉತ್ಪಾದನೆ ಸ್ಥಗಿತ: ನ್ಯಾಯಕ್ಕಾಗಿ ಕಾರ್ಮಿಕರು ಹೋರಾಟ

ತಂದೆ-ತಾಯಿಯ 13 ವರ್ಷಗಳ ಕನಸು ನನಸು ಮಾಡಿದ ಮಗ: ಕಟ್ಟಿಗೆಹಳ್ಳಿಯಲ್ಲಿ ಅದ್ದೂರಿ ಗೃಹಪ್ರವೇಶ!

ಕೊಟ್ಟೂರು ತಾಲ್ಲೂಕಿನ ಕೋಗಲಿಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ