ದಾವಣಗೆರೆಯಲ್ಲಿ 18 ಸಿಲಿಂಡರ್‌ಗಳ ಸ್ಫೋಟ: ಇಬ್ಬರಿಗೆ ಗಾಯ, ಅನಿಲ್ ಎಂಬಾತನ ಸ್ಥಿತಿ ಚಿಂತಾಜನಕ!


 ಕಲ್ಪನಹಳ್ಳಿ ಗ್ರಾಮದ ಹೊರ ವಲಯದಲ್ಲಿರುವ ಸಿಲಿಂಡರ್‌ ಗೋದಾಮಿನಲ್ಲಿ 18ಕ್ಕೂ ಹೆಚ್ಚು ಸಿಲಿಂಡರ್ ಗಳು ಸ್ಫೋಟಗೊಂಡಿವೆ. ಈ ದುರ್ಘಟನೆಯಲ್ಲಿ ಗೋದಾಮಿನಲ್ಲಿದ್ದ ಅನಿಲ್‌ ಹಾಗೂ ಸಿಲಿಂಡರ್ ಏಜೆನ್ಸಿಯ ಸಿಬ್ಬಂದಿಗೆ ಗಂಭೀರ ಗಾಯಗಳಾಗಿವೆ.

ದಾವಣಗೆರೆ: ಕಲ್ಪನಹಳ್ಳಿ ಗ್ರಾಮದ ಹೊರ ವಲಯದಲ್ಲಿರುವ ಸಿಲಿಂಡರ್‌ ಗೋದಾಮಿನಲ್ಲಿ 18ಕ್ಕೂ ಹೆಚ್ಚು ಸಿಲಿಂಡರ್ ಗಳು ಸ್ಫೋಟಗೊಂಡಿವೆ. ಈ ದುರ್ಘಟನೆಯಲ್ಲಿ ಗೋದಾಮಿನಲ್ಲಿದ್ದ ಅನಿಲ್‌ ಹಾಗೂ ಸಿಲಿಂಡರ್ ಏಜೆನ್ಸಿಯ ಸಿಬ್ಬಂದಿಗೆ ಗಂಭೀರ ಗಾಯಗಳಾಗಿವೆ. ಅನಿಲ್ ಸ್ಥಿತಿ ಚಿಂತಾಜನಕವಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಒಂದರ ನಂತರ ಒಂದರಂತೆ 18ಕ್ಕೂ ಹೆಚ್ಚು ಸಿಲಿಂಡರ್ ಗಳು ಸ್ಫೋಟಗೊಂಡಿವೆ.

ಸ್ಫೋಟದ ರಭಸಕ್ಕೆ ಸಿಲಿಂಡರ್‌ಗಳು ನೂರಾರು ಅಡಿ ಎತ್ತರಕ್ಕೆ ಚಿಮ್ಮಿದ್ದವು. ದೊಗ್ಗಳ್ಳಿ ಶಿವಕುಮಾ‌ರ್ ಎಂಬುವರಿಗೆ ಸೇರಿದ ಗೋದಾಮಿನಲ್ಲಿ ಅನಿಲ್ ಸಿಲಿಂಡರ್ ಸಂಗ್ರಹಿಸಿ ವಿತರಿಸುತ್ತಿದ್ದರು ಎನ್ನಲಾಗಿದೆ. ಘಟನೆ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದರು. ಎಸ್ ಪಿ ಶೇಖರ್ ಸೇರಿದಂತೆ ಇತರ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Comments

Popular posts from this blog

ಚಾರ್ವಿಕ ಟೂರ್ಸ್ ಅಂಡ್ ಟ್ರಾವೆಲ್ಸ್‌ನಿಂದ ಪ್ರಥಮ ವರ್ಷದ ವಾರ್ಷಿಕೋತ್ಸವದ ಧಮಾಕಾ ಆಫರ್; ಕೇವಲ ₹2,100 ರಲ್ಲಿ 4 ವರ್ಷಗಳ ಸುದೀರ್ಘ ಪ್ರವಾಸ ಯೋಜನೆ!

ತಂದೆ-ತಾಯಿಯ 13 ವರ್ಷಗಳ ಕನಸು ನನಸು ಮಾಡಿದ ಮಗ: ಕಟ್ಟಿಗೆಹಳ್ಳಿಯಲ್ಲಿ ಅದ್ದೂರಿ ಗೃಹಪ್ರವೇಶ!

ದಾವಣಗೆರೆ ಕಾರ್ಗಿಲ್​ ಕಾರ್ಖಾನೆಯಲ್ಲಿ ಉತ್ಪಾದನೆ ಸ್ಥಗಿತ: ನ್ಯಾಯಕ್ಕಾಗಿ ಕಾರ್ಮಿಕರು ಹೋರಾಟ