ವಿಜಯನಗರ: ಬೀಗ ಹಾಕಿದ ಮನೆಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಅಂತಾರಾಜ್ಯ ಕಳ್ಳರ ಬಂಧನ; 6 ಲಕ್ಷ ಮೌಲ್ಯದ ಚಿನ್ನ ಜಪ್ತಿ
ಕೊಟ್ಟೂರು: ವಿಜಯನಗರ ಜಿಲ್ಲೆಯ ಕೊಟ್ಟೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೀಗ ಹಾಕಿದ ಮನೆಗಳನ್ನೇ ಗುರಿಯಾಗಿಸಿಕೊಂಡು ಸರಣಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಕಳ್ಳರ ತಂಡವನ್ನು ಕೊಟ್ಟೂರು ಪೊಲೀಸರು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಕಾರ್ಯಾಚರಣೆಯ ವಿವರ
ಆರೋಪಿಗಳಿಂದ ಅಂದಾಜು 6 ಲಕ್ಷ ರೂಪಾಯಿ ಮೌಲ್ಯದ ಒಟ್ಟು 50 ಗ್ರಾಂ ಚಿನ್ನದ ಆಭರಣಗಳು ಮತ್ತು 20 ಸಾವಿರ ರೂಪಾಯಿ ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಗಳು
ಬಂಧಿತರು ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಭಾಗ್ಯನಗರ ಗುಂತಕಲ್ಲು ಪಟ್ಟಣದವರಾಗಿದ್ದು, ಅವರ ವಿವರ ಹೀಗಿದೆ:
ಶಿಕಾರಿ ಮದ್ದಲಟ್ಟಿ @ ಮದನ್ (30 ವರ್ಷ)
ಗಣೇಶ (20 ವರ್ಷ)
ಬಾಲಚಂದ್ರ (20 ವರ್ಷ)
ಪಗಲಿ @ ಅಶೋಕ್ (30 ವರ್ಷ)
ದಿನಾಂಕ: 21-05-2026 ರಂದು ಕೊಟ್ಟೂರು ಪಟ್ಟಣದ ರೇಣುಕಾ ಬಡಾವಣೆಯಲ್ಲಿ ಆರೋಪಿಗಳು ಕಳ್ಳತನ ನಡೆಸಿದ್ದರು.
ತನಿಖಾ ತಂಡ
ಈ ಯಶಸ್ವಿ ಕಾರ್ಯಾಚರಣೆಯನ್ನು ಕೂಡ್ಲಿಗಿ ಡಿ.ವೈ.ಎಸ್.ಪಿ ಶ್ರೀ ಮಲ್ಲೇಶ ದೊಡ್ಮನಿ ಅವರ ಮಾರ್ಗದರ್ಶನದಲ್ಲಿ, ಕೊಟ್ಟೂರು ವೃತ್ತದ ಸಿ.ಪಿ.ಐ ಶ್ರೀ ಡಿ.ದುರುಗಪ್ಪ ಅವರ ನೇತೃತ್ವದಲ್ಲಿ, ಪಿ.ಎಸ್.ಐ (ಕಾ&ಸು) ಶ್ರೀಮತಿ ಗೀತಾಂಜಲಿ.ಸಿಂಧೆ ಮತ್ತು ಕೊಟ್ಟೂರು ಪೊಲೀಸ್ ಠಾಣೆಯ ಸಿಬ್ಬಂದಿಗಳು ನಿರ್ವಹಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ತಂಡದ ಕಾರ್ಯವನ್ನು ವಿಜಯನಗರ ಜಿಲ್ಲೆಯ ಪೊಲೀಸ್ ಅಧೀಕ್ಷಕರು ಶ್ರೀಮತಿ ಎಸ್.ಜಾಹ್ನವಿ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಶ್ರೀ ಮಂಜುನಾಥ್ ಅವರು ಪ್ರಶಂಸಿಸಿದ್ದಾರೆ.


Comments
Post a Comment