ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸ್‌ಗೆ ಸಿಕ್ಕಿ ಬಿದ್ದ ಅಧಿಕಾರಿಗಳು


 ವಿಜಯಪುರ ಜಿಲ್ಲೆಯ ಸಾಲೋಟಗಿಯಲ್ಲಿ ಲಂಚ ಪಡೆಯುತ್ತಿದ್ದಾಗಲೇ ಇಬ್ಬರು ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಅಧಿಕಾರಿಗಳು ಕೆಬಿಜೆಎನ್‌ಎಲ್ ಕೆನಾಲ್‌ನ 3,71,419 ರೂ. ಬಿಲ್ ಪಾವತಿಗಾಗಿ 18 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ.

ಕೆಬಿಜೆಎನ್‌ಎಲ್ ಉಪವಿಭಾಗ ನಂಬರ್ ಒಂದರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಸೇವುಲಾಲ್ ಚವ್ಹಾಣ 10 ಸಾವಿರ ರೂ.ಗೆ ಹಾಗೂ ಇನ್ನೊಂದು ಉಪವಿಭಾಗದ ಕಿರಿಯ ಅಭಿಯಂತರ ಸಾತಲಿಂಗಪ್ಪ ರೂಡಗಿ 8 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ನಾನಾಸಾಹೇಬ್ ರೂಡಗಿ ದೂರು ನೀಡಿದ್ದರು.

ದೂರು ಆಧರಿಸಿ ಕಾರ್ಯಪ್ರವೃತ್ತರಾದ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಇಬ್ಬರು ಲಂಚಕೋರ ಅಧಿಕಾರಿಗಳನ್ನು ಲಂಚದ ಹಣ ಸಮೇತ ಬಂಧಿಸಿದ್ದಾರೆ. ಸಂಬಂಧ ವಿಜಯಪುರ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Comments

Popular posts from this blog

ಚಾರ್ವಿಕ ಟೂರ್ಸ್ ಅಂಡ್ ಟ್ರಾವೆಲ್ಸ್‌ನಿಂದ ಪ್ರಥಮ ವರ್ಷದ ವಾರ್ಷಿಕೋತ್ಸವದ ಧಮಾಕಾ ಆಫರ್; ಕೇವಲ ₹2,100 ರಲ್ಲಿ 4 ವರ್ಷಗಳ ಸುದೀರ್ಘ ಪ್ರವಾಸ ಯೋಜನೆ!

ದಾವಣಗೆರೆ ಕಾರ್ಗಿಲ್​ ಕಾರ್ಖಾನೆಯಲ್ಲಿ ಉತ್ಪಾದನೆ ಸ್ಥಗಿತ: ನ್ಯಾಯಕ್ಕಾಗಿ ಕಾರ್ಮಿಕರು ಹೋರಾಟ

ತಂದೆ-ತಾಯಿಯ 13 ವರ್ಷಗಳ ಕನಸು ನನಸು ಮಾಡಿದ ಮಗ: ಕಟ್ಟಿಗೆಹಳ್ಳಿಯಲ್ಲಿ ಅದ್ದೂರಿ ಗೃಹಪ್ರವೇಶ!