ಬೆಳಗಾವಿ | ವೇಶ್ಯಾವಾಟಿಕೆ ಮಹಿಳೆ ಬಂಧನ: ಯುವತಿ ರಕ್ಷಣೆ


 ಬೆಳಗಾವಿ ನಗರದ ಟಿಳಕವಾಡಿ ಪ್ರದೇಶದ ನೆಹರು ರಸ್ತೆಯಲ್ಲಿರುವ ಬಹುಮಹಡಿ ಅಪಾರ್ಟ್‌ಮೆಂಟ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಯ ಮೇಲೆ ಟಿಳಕವಾಡಿ ಠಾಣೆ ಪೊಲೀಸರು ದಾಳಿ ನಡೆಸಿ, ತೆಲಂಗಾಣ ಮೂಲದ ಯುವತಿಯನ್ನು ರಕ್ಷಿಸಿ, ದಂಧೆ ನಡೆಸುತ್ತಿದ್ದ ಮಹಿಳೆಯನ್ನು ಬಂಧಿಸಿದ್ದಾರೆ.

ಬಂಧಿತೆಯನ್ನು ಆಯೇಶಾ ಶಬ್ಬಿರ್ ಶೇಖ್ ಅಲಿಯಾಸ್ ರೇಷ್ಮಾ ಅಂಕಲೆವಾಲೆ (31) ಎಂದು ಗುರುತಿಸಲಾಗಿದೆ. ಆರೋಪಿತೆ ಬಾಡಿಗೆ ಮನೆಯಲ್ಲಿ ಯುವತಿಯನ್ನು ಇರಿಸಿಕೊಂಡು ಗಿರಾಕಿಗಳನ್ನು ಕರೆಸಿ ಅನೈತಿಕ ಚಟುವಟಿಕೆ ನಡೆಸುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಸಿಪಿಐ ಪರಶುರಾಮ ಪೂಜೇರಿ ನೇತೃತ್ವದಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿ ಒಳಗೊಂಡ ವಿಶೇಷ ತಂಡ ದಾಳಿ ನಡೆಸಿತು. ಕಾರ್ಯಾಚರಣೆಯ ವೇಳೆ ಯುವತಿಯನ್ನು ಸುರಕ್ಷಿತವಾಗಿ ರಕ್ಷಿಸಿ ಆರೋಪಿತೆಯನ್ನು ವಶಕ್ಕೆ ಪಡೆಯಲಾಯಿತು.

ಈ ಕುರಿತು ಟಿಳಕವಾಡಿ ಪೊಲೀಸ್‌ ಠಾಣೆಯಲ್ಲಿ ಅನೈತಿಕ ಮಾನವ ಸಾಗಣೆ ತಡೆ ಕಾಯ್ದೆ 1956ರ ಕಲಂ 3, 4 ಮತ್ತು 5ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ.

Comments

Popular posts from this blog

ಚಾರ್ವಿಕ ಟೂರ್ಸ್ ಅಂಡ್ ಟ್ರಾವೆಲ್ಸ್‌ನಿಂದ ಪ್ರಥಮ ವರ್ಷದ ವಾರ್ಷಿಕೋತ್ಸವದ ಧಮಾಕಾ ಆಫರ್; ಕೇವಲ ₹2,100 ರಲ್ಲಿ 4 ವರ್ಷಗಳ ಸುದೀರ್ಘ ಪ್ರವಾಸ ಯೋಜನೆ!

ತಂದೆ-ತಾಯಿಯ 13 ವರ್ಷಗಳ ಕನಸು ನನಸು ಮಾಡಿದ ಮಗ: ಕಟ್ಟಿಗೆಹಳ್ಳಿಯಲ್ಲಿ ಅದ್ದೂರಿ ಗೃಹಪ್ರವೇಶ!

ದಾವಣಗೆರೆ ಕಾರ್ಗಿಲ್​ ಕಾರ್ಖಾನೆಯಲ್ಲಿ ಉತ್ಪಾದನೆ ಸ್ಥಗಿತ: ನ್ಯಾಯಕ್ಕಾಗಿ ಕಾರ್ಮಿಕರು ಹೋರಾಟ