ಕೊಟ್ಟೂರಿನ ಹಿರಿಯ ನಾಯಕ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಎಂ.ಎಂ.ಜೆ. ಹರ್ಷವರ್ಧನ್ ನಿಧನ
ಕೊಟ್ಟೂರು: ಕೊಟ್ಟೂರಿನ ಹಮ್ಮೆಯ ನಾಯಕ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು ಹಾಗೂ ಉಜ್ಜಯಿನಿ ಪೀಠದ ಕಾರ್ಯದರ್ಶಿಯಾಗಿದ್ದ ಶ್ರೀ ಎಂ.ಎಂ.ಜೆ. ಹರ್ಷವರ್ಧನ್ ಅವರು ಇಂದು ನಿಧನರಾಗಿದ್ದಾರೆ.
ಸಮಾಜ ಸೇವೆಯಲ್ಲಿ ಸಕ್ರಿಯ:
ದಿವಂಗತ ಎಂ.ಎಂ.ಜೆ. ಹರ್ಷವರ್ಧನ್ ಅವರು ತಮ್ಮ ಸಮಾಜ ಸೇವೆ, ಧಾರ್ಮಿಕ ಕಾರ್ಯಗಳು ಹಾಗೂ ಜನಪರ ಕಾಳಜಿಯ ಮೂಲಕ ಜನಮಾನಸದಲ್ಲಿ ಅಚ್ಚಳಿಯದ ನೆನಪನ್ನು ಉಳಿಸಿದ್ದಾರೆ. ಅವರ ಅಗಲಿಕೆಯಿಂದ ಕೊಟ್ಟೂರು ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ.
ಗಣ್ಯರ ಸಂತಾಪ:
ಅವರ ನಿಧನಕ್ಕೆ ಅಪಾರ ಅಭಿಮಾನಿಗಳು ಮತ್ತು ಹಿತೈಷಿಗಳು ಕಂಬನಿ ಮಿಡಿದಿದ್ದಾರೆ. ಅವರ ಆತ್ಮಕ್ಕೆ ಭಗವಂತನು ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬವರ್ಗಕ್ಕೆ ಮತ್ತು ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇವೆ. ಓಂ ಶಾಂತಿ.
![]() |
| ಮುಖ್ಯ ವರದಿಗಾರರು : ಸಿ ಜಿ ವಸಂತ್ ಕುಮಾರ್ ಟಿವಿ ನ್ಯೂಸ್ ಕನ್ನಡ ಏಷ್ಯನ್ ನೆಟ್ವರ್ಕ್ |


Comments
Post a Comment