BREAKING : ಮೌಲ್ವಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ ; ಹಿಂದೂ ಕಾರ್ಯಕರ್ತ ‘ಪುನೀತ್ ಕೆರೆಹಳ್ಳಿ’ ಅರೆಸ್ಟ್.!


 ಬೆಂಗಳೂರು: ಮೌಲ್ವಿಗಳ ವಿರುದ್ಧ ಅವಹೇಳನಕಾರಿ ಹಾಗೂ ನಿಂದನಾತ್ಮಕ ಹೇಳಿಕೆ ನೀಡಿದ ಆರೋಪದಡಿ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ರಜಾಕ್ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ತನಿಖೆಯ ಭಾಗವಾಗಿ ಪುನೀತ್ ಕೆರೆಹಳ್ಳಿಯನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ.

ಕುಮಾರಸ್ವಾಮಿ ಲೇಔಟ್ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮೌಲ್ವಿಗಳಿಗೆ ನಿಂದಿಸಿದ ಆರೋಪದ ಮೇರೆಗೆ ಅಬ್ದುಲ್ ರಜಾಕ್ ಎಂಬುವವರು ದೂರು ನೀಡಿದ್ದರು.ದೂರಿನಲ್ಲಿ, ಪುನೀತ್ ಕೆರೆಹಳ್ಳಿ ಸಾಮಾಜಿಕ ಜಾಲತಾಣ ಹಾಗೂ ಸಾರ್ವಜನಿಕ ಹೇಳಿಕೆಗಳ ಮೂಲಕ ಮೌಲ್ವಿಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ರೀತಿಯಲ್ಲಿ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ದೂರಿನ ಆಧಾರದಲ್ಲಿ ಪೊಲೀಸರು ಸಂಬಂಧಿತ ಕಾನೂನು ವಿಧಿಗಳಡಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ

Comments

Popular posts from this blog

ಚಾರ್ವಿಕ ಟೂರ್ಸ್ ಅಂಡ್ ಟ್ರಾವೆಲ್ಸ್‌ನಿಂದ ಪ್ರಥಮ ವರ್ಷದ ವಾರ್ಷಿಕೋತ್ಸವದ ಧಮಾಕಾ ಆಫರ್; ಕೇವಲ ₹2,100 ರಲ್ಲಿ 4 ವರ್ಷಗಳ ಸುದೀರ್ಘ ಪ್ರವಾಸ ಯೋಜನೆ!

ದಾವಣಗೆರೆ ಕಾರ್ಗಿಲ್​ ಕಾರ್ಖಾನೆಯಲ್ಲಿ ಉತ್ಪಾದನೆ ಸ್ಥಗಿತ: ನ್ಯಾಯಕ್ಕಾಗಿ ಕಾರ್ಮಿಕರು ಹೋರಾಟ

ತಂದೆ-ತಾಯಿಯ 13 ವರ್ಷಗಳ ಕನಸು ನನಸು ಮಾಡಿದ ಮಗ: ಕಟ್ಟಿಗೆಹಳ್ಳಿಯಲ್ಲಿ ಅದ್ದೂರಿ ಗೃಹಪ್ರವೇಶ!