ಹಿಂದೂ ಧರ್ಮ ಸಮಾಜ ವಿಭಜಿಸುವ ಶಕ್ತಿಯಲ್ಲ, ಇಡೀ ಜಗತ್ತನ್ನು ಒಂದುಗೂಡಿಸುವ ತತ್ವ : ಮೋಹನ್ ಭಗವತ್
ಭಾರತದಲ್ಲಿ ಮುಸ್ಲಿಮರೇ ಇರಬಾರದು ಎಂದು ಭಾವಿಸುವವರು ಹಿಂದೂವಲ್ಲ' ಎಂದು ಆರ್‌ಎಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.ಆರ್‌ಎಸ್‌ಎಸ್ ಶತಮಾನೋತ್ಸವದ ಜಾಗತಿಕ ಸಂಪರ್ಕ ಕಾರ್ಯಕ್ರಮದ ಹಿನ್ನೆಲೆ ಮೋಹನ್ ಭಾಗವತ್ ಅವರು ಅಮೆರಿಕಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿ ಮಾತನಾಡಿರುವ ಅವರು, ' ಭಾರತದಲ್ಲಿ ವಾಸಿಸುವ ಹಕ್ಕು ಎಲ್ಲ ಸಮುದಾಯದವರಿಗೂ ಇದೆ. ಪ್ರಪಂಚದ ಬೇರೆಲ್ಲೂ ಆಶ್ರಯ ಸಿಗದವರು ಇಲ್ಲಿ ನೆಲೆ ಕಂಡುಕೊಂಡಿದ್ದಾರೆ. ಜಗತ್ತಿನ ಎಲ್ಲರೂ ಒಂದೇ ಎಂಬ ಭಾವ ನಮಗಿದೆ. ಇಲ್ಲಿನ ವೈವಿದ್ಯತೆಯನ್ನು ಜಗತ್ತಿಗೆ ತಿಳಿಸುವುದೇ ನಮ್ಮ ಕರ್ತವ್ಯ' ಎಂದಿದ್ದಾರೆ. ಟೊರೊಂಟೊ, ಆ.31- ಹಿಂದೂ ಧರ್ಮವು ಸಮಾಜವನ್ನು ವಿಭಜಿಸುವ ಶಕ್ತಿಯಲ್ಲ; ಬದಲಾಗಿ ಇಡೀ ಜಗತ್ತನ್ನು ಒಂದುಗೂಡಿಸುವ ತತ್ವವನ್ನು ಹೊಂದಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಹೇಳಿದರು. ಕೆನಡಾದ ಟೊರೊಂಟೊದಲ್ಲಿ ಕೆನಡಿಯನ್ ಹಿಂದೂಸ್ ಫಾರ್ ಔಟ್‌ರೀಚ್, ರಿಲೇಶನ್ಸ್ ಅಂಡ್ ಡೈಲಾಗ್ ಸಂಸ್ಥೆ ಆಯೋಜಿಸಿದ್ದ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಭಾರತೀಯ ಪರಂಪರೆಯಲ್ಲಿ ಇತರರಿಗೆ ನೆರವಾಗುವುದು ಮತ್ತು ಇಡೀ ಜಗತ್ತನ್ನು ಒಂದು ಕುಟುಂಬವೆಂದು ಪರಿಗಣಿಸುವ ಮನೋಭಾವ ಅಂತರ್ಗತವಾಗಿದೆ ಎಂದರು. ‘ಹಿಂದೂ’ ಎಂಬ ಪದವನ್ನು ನಿರ್ದಿಷ್ಟ ಭಾಷೆ, ಪೂಜಾ ಪದ್ಧತಿ ಅಥವಾ ಜೀವನಶೈತಿಗೆ ಮಾತ್ರ ಸೀಮಿತಗೊಳಿಸಲಾಗದು. ಹಿಂದೂ ತತ್ವಜ್ಞಾನವು ವೈವ...