ದಾವಣಗೆರೆ: ವಿವಿಧ ಪರೀಕ್ಷಾ ಕೇಂದ್ರಗಳಿಗೆ ಎಸ್‌ಪಿ ಶೇಖರ್ ಹೆಚ್.ಟಿ ಭೇಟಿ; ನಾಗರಿಕ ಪೊಲೀಸ್ ಕಾೆನ್ಸ್‌ಸ್ಟೆಬಲ್ ಲಿಖಿತ ಪರೀಕ್ಷೆ ಪರಿಶೀಲನೆ!
ದಾವಣಗೆರೆ: ದಾವಣಗೆರೆ ನಗರದಲ್ಲಿ ನಾಗರಿಕ ಪೊಲೀಸ್ ಕಾೆನ್ಸ್‌ಸ್ಟೆಬಲ್ ಹುದ್ದೆಗಳ ಲಿಖಿತ ಪರೀಕ್ಷೆಯು ಸುಗಮವಾಗಿ ನಡೆಯುವಂತೆ ಎಚ್ಚರಿಕೆ ವಹಿಸಲಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾದ ಶೇಖರ್ ಹೆಚ್.ಟಿ, ಐಪಿಎಸ್ ಅವರು ನಗರದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಾನ್ಯ ಜಿಲ್ಲಾಧಿಕಾರಿಗಳೊಂದಿಗೆ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ಎಸ್‌ಪಿ ಅವರು, ಪರೀಕ್ಷಾ ವ್ಯವಸ್ಥೆ, ಕಲ್ಪಿಸಲಾದ ಭದ್ರತಾ ಕ್ರಮಗಳು ಹಾಗೂ ಅಭ್ಯರ್ಥಿಗಳಿಗೆ ಮಾಡಲಾಗಿರುವ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು. ಪರೀಕ್ಷೆಯು ಯಾವುದೇ ಗೊಂದಲವಿಲ್ಲದೆ ಸುಗಮ, ಶಾಂತಿಯುತ ಹಾಗೂ ಪಾರದರ್ಶಕವಾಗಿ ನಡೆಯುವಂತೆ ನೋಡಿಕೊಳ್ಳಲು ನಿಯೋಜಿತ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಅಗತ್ಯ ಮಾರ್ಗದರ್ಶನ ನೀಡಿದರು. ಅಲ್ಲದೆ, ಅಭ್ಯರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ತಮ್ಮ ಕರ್ತವ್ಯ ನಿರ್ವಹಿಸುವಂತೆ ಅವರು ಸೂಚನೆ ನೀಡಿದ್ದಾರೆ.

Comments
Post a Comment