'ಪ್ರೆಸ್' ಎಂದು ಹಾಕಿಕೊಂಡರೆ ವಾಹನ ಜಪ್ತಿ; ಬ್ಲ್ಯಾಕ್‌ಮೇಲ್ ಮಾಡುವ ನಕಲಿ ಪತ್ರಕರ್ತರಿಗೆ ಜೈಲು ಕಾಯಂ: ಜಿಲ್ಲಾಧಿಕಾರಿ ಎಚ್ಚರಿಕೆ..!


 ದಾವಣಗೆರೆ: ಮುದ್ರಣ ಮತ್ತು ದೃಶ್ಯ ಮಾಧ್ಯಮದ ಹೆಸರು ದುರ್ಬಳಕೆ ಮಾಡಿಕೊಂಡು ಸರ್ಕಾರಿ ಅಧಿಕಾರಿಗಳು, ಸಾರ್ವಜನಿಕರು ಹಾಗೂ ಸಂಸ್ಥೆಗಳಿಗೆ ಬೆದರಿಸಿ ಬ್ಲ್ಯಾಕ್‌ಮೇಲ್ ಮಾಡುತ್ತಿರುವ ನಕಲಿ ಪತ್ರಕರ್ತರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಎಚ್.ಟಿ. ಶೇಖರ್ ಎಚ್ಚರಿಕೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪತ್ರಕರ್ತರ ಮೊದಲ ಸಮನ್ವಯ ಸಭೆಯಲ್ಲಿ ಉಭಯ ಅಧಿಕಾರಿಗಳು ಮಾತನಾಡಿದರು. ಮಾಧ್ಯಮ ಕ್ಷೇತ್ರದ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್ ಅಥವಾ ಅಕ್ರಮ ಹಣ ವಸೂಲಿಯಲ್ಲಿ ತೊಡಗುವ ಯಾವುದೇ ನಕಲಿ ವ್ಯಕ್ತಿಗಳಿರಲಿ, ಅವರ ವಿರುದ್ಧ ತಕ್ಷಣ ಎಫ್‌ಐಆರ್ ದಾಖಲಿಸಲು ಪೊಲೀಸ್ ಇಲಾಖೆಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ. ಡಿಸಿ, ಎಸ್‌ಪಿ ಹಾಗೂ ಜಿಪಂ ಸಿಇಒ ಜಂಟಿಯಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದ್ದೇವೆ. ಜೊತೆಗೆ ಅಂಥವರ ಪತ್ರಿಕೆ ಹಾಗೂ ಸುದ್ದಿ ವಾಹಿನಿಗಳ ಸಂಪಾದಕರು ಹಾಗೂ ಮಾಲೀಕರಿಗೆ ಜಂಟಿ ಪತ್ರ ರವಾನಿಸಲಾಗುವುದು ಎಂದು ಡಿಸಿ ಎಚ್ಚರಿಸಿದರು.


ಇಂದಿನಿಂದಲೇ 'ಪ್ರೆಸ್' ವಾಹನಗಳ ಜಪ್ತಿ ಕಾರ್ಯಾಚರಣೆ:

ಅನಧಿಕೃತ ವ್ಯಕ್ತಿಗಳಿಂದ ಮಾಧ್ಯಮದ ಹೆಸರು ದುರುಪಯೋಗವಾಗುವುದನ್ನು ತಡೆಯಲು ಜಿಲ್ಲಾದ್ಯಂತ ಇಂದಿನಿಂದಲೇ 'ಪ್ರೆಸ್' ಕಾರ್ಯಾಚರಣೆ ಆರಂಭವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಎಚ್.ಟಿ. ಶೇಖರ್ ತಿಳಿಸಿದರು. ಯಾವುದೇ ಅಧಿಕೃತ ರಹadari ಇಲ್ಲದೆ ದ್ವಿಚಕ್ರ ವಾಹನ ಸೇರಿದಂತೆ ಇತರ ವಾಹನಗಳ ಮೇಲೆ 'ಪ್ರೆಸ್' ಅಥವಾ 'ಪತ್ರಕರ್ತ' ಎಂದು ಹಾಕಿಕೊಂಡು ತಿರುಗಾಡುವವರ ವಿರುದ್ಧ ವಿವಿಧ ಕಾಯ್ದೆಯಡಿ ಪ್ರಕರಣ ದಾಖಲಿಸಿ ವಾಹನಗಳನ್ನು ವಶಪಡಿಸಿಕೊಳ್ಳಲಾಗುವುದು ಎಂದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅಧಿಕೃತ ಪತ್ರಕರ್ತರ ಪಟ್ಟಿಯನ್ನು ಪಡೆದು, ಫೋಟೋ ಮತ್ತು ಬೆರಳುತುಬಿ ಸಹಿತ ಹೊಸ ಐಡಿ ಕಾರ್ಡ್‌ಗಳನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸಹಿ ಸಮೇತ ಮುದ್ರಿಸಿ ನೀಡಲಾಗುವುದು. ಈ ಅಧಿಕೃತ ಪಟ್ಟಿಯಲ್ಲಿರುವವರಿಗೆ ಮಾತ್ರ ಇನ್ನು ಮುಂದೆ ಇಲಾಖೆಯ ಮಾಹಿತಿಗಳು ಲಭ್ಯವಾಗಲಿವೆ ಎಂದು ಅವರು ತಿಳಿಸಿದರು.

Comments

Popular posts from this blog

ಚಾರ್ವಿಕ ಟೂರ್ಸ್ ಅಂಡ್ ಟ್ರಾವೆಲ್ಸ್‌ನಿಂದ ಪ್ರಥಮ ವರ್ಷದ ವಾರ್ಷಿಕೋತ್ಸವದ ಧಮಾಕಾ ಆಫರ್; ಕೇವಲ ₹2,100 ರಲ್ಲಿ 4 ವರ್ಷಗಳ ಸುದೀರ್ಘ ಪ್ರವಾಸ ಯೋಜನೆ!

ತಂದೆ-ತಾಯಿಯ 13 ವರ್ಷಗಳ ಕನಸು ನನಸು ಮಾಡಿದ ಮಗ: ಕಟ್ಟಿಗೆಹಳ್ಳಿಯಲ್ಲಿ ಅದ್ದೂರಿ ಗೃಹಪ್ರವೇಶ!

ದಾವಣಗೆರೆ ಕಾರ್ಗಿಲ್​ ಕಾರ್ಖಾನೆಯಲ್ಲಿ ಉತ್ಪಾದನೆ ಸ್ಥಗಿತ: ನ್ಯಾಯಕ್ಕಾಗಿ ಕಾರ್ಮಿಕರು ಹೋರಾಟ