ಚನ್ನಗಿರಿಯಲ್ಲಿ ವಿದ್ಯುತ್ ಖಾಸಗೀಕರಣ ವಿರೋಧಿಸಿ ರೈತರ ಪ್ರತಿಭಟನೆ..!


 ಚನ್ನಗಿರಿ: ವಿದ್ಯುತ್ ವಲಯವನ್ನು ಖಾಸಗೀಕರಣ ಮಾಡುವ ಸರ್ಕಾರದ ಕ್ರಮವನ್ನು ಖಂಡಿಸಿ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಚನ್ನಗಿರಿ ಪಟ್ಟಣದ ಗಾಂಧಿ ವೃತ್ತದಲ್ಲಿ ಭರ್ಜರಿ ಪ್ರತಿಭಟನೆ ನಡೆಸಿದರು.

ತಾಲ್ಲೂಕು ಘಟಕದ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿ, ವಿದ್ಯುತ್ ಖಾಸಗೀಕರಣ ಪ್ರಕ್ರಿಯೆಯನ್ನು ತಕ್ಷಣ ನಿಲ್ಲಿಸುವಂತೆ ಒತ್ತಾಯಿಸಿದರು.

ಈ ವೇಳೆ ಮಾತನಾಡಿದ ರೈತ ಮುಖಂಡ ಬಸಪುರ ರಂಗನಾಥ್, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಸಾರ್ವಜನಿಕ ಸ್ವಾಮ್ಯದಲ್ಲಿರುವ ಸಂಸ್ಥೆಗಳನ್ನು ಖಾಸಗೀಕರಣ ಮಾಡುವ ನೀತಿಯನ್ನು ಕೂಡಲೇ ಕೈಬಿಡಬೇಕು ಎಂದು ಆಗ್ರಹಿಸಿದರು.

Comments

Popular posts from this blog

ಚಾರ್ವಿಕ ಟೂರ್ಸ್ ಅಂಡ್ ಟ್ರಾವೆಲ್ಸ್‌ನಿಂದ ಪ್ರಥಮ ವರ್ಷದ ವಾರ್ಷಿಕೋತ್ಸವದ ಧಮಾಕಾ ಆಫರ್; ಕೇವಲ ₹2,100 ರಲ್ಲಿ 4 ವರ್ಷಗಳ ಸುದೀರ್ಘ ಪ್ರವಾಸ ಯೋಜನೆ!

ದಾವಣಗೆರೆ ಕಾರ್ಗಿಲ್​ ಕಾರ್ಖಾನೆಯಲ್ಲಿ ಉತ್ಪಾದನೆ ಸ್ಥಗಿತ: ನ್ಯಾಯಕ್ಕಾಗಿ ಕಾರ್ಮಿಕರು ಹೋರಾಟ

ತಂದೆ-ತಾಯಿಯ 13 ವರ್ಷಗಳ ಕನಸು ನನಸು ಮಾಡಿದ ಮಗ: ಕಟ್ಟಿಗೆಹಳ್ಳಿಯಲ್ಲಿ ಅದ್ದೂರಿ ಗೃಹಪ್ರವೇಶ!