ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯ ಕೊಲೆ: ನದಿಗೆ ಮೃತದೇಹ ಎಸೆದ ಪತ್ನಿ!


 ದಾವಣಗೆರೆ: ದಾವಣಗೆರೆ ತಾಲೂಕಿನ ಪಾಮೇನಹಳ್ಳಿ ಗ್ರಾಮದಲ್ಲಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದನೆಂಬ ಕಾರಣಕ್ಕೆ ಪತ್ನಿ ಹಾಗೂ ಆಕೆಯ ಪ್ರಿಯಕರ ಸೇರಿ ಪತಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಪಾಮೇನಹಳ್ಳಿ ಗ್ರಾಮದ ರಘು ಎಂಬಾತನನ್ನು ಆತನ ಪತ್ನಿ ಶೃತಿ, ಆಕೆಯ ಪ್ರಿಯಕರ ಹಾಗೂ ಆತನ ಸ್ನೇಹಿತ ಸುರೇಶ್ ಸೇರಿ ಕೊಲೆ ಮಾಡಿದ್ದಾರೆ. ಬಳಿಕ ಮೃತದೇಹವನ್ನು ತುಂಗಭದ್ರಾ ನದಿಗೆ ಬಿಸಾಕಿ ಪರಾರಿಯಾಗಿದ್ದಾರೆ.

ರಘು ಕಾಣೆಯಾಗಿರುವ ಬಗ್ಗೆ ದೂರು ದಾಖಲಾಗಿದ್ದು, ತನಿಖೆ ಚುರುಕುಗೊಳಿಸಿದ ಪೊಲೀಸರು ಶೃತಿಯ ಸಹೋದರಿಯನ್ನು ವಿಚಾರಣೆ ನಡೆಸಿದಾಗ ಈ ಕೃತ್ಯದ ಕರಾಳ ಸತ್ಯ ಬಯಲಾಗಿದೆ. ಹದಡಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ನದಿಯಲ್ಲಿ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ

Comments

Popular posts from this blog

ಚಾರ್ವಿಕ ಟೂರ್ಸ್ ಅಂಡ್ ಟ್ರಾವೆಲ್ಸ್‌ನಿಂದ ಪ್ರಥಮ ವರ್ಷದ ವಾರ್ಷಿಕೋತ್ಸವದ ಧಮಾಕಾ ಆಫರ್; ಕೇವಲ ₹2,100 ರಲ್ಲಿ 4 ವರ್ಷಗಳ ಸುದೀರ್ಘ ಪ್ರವಾಸ ಯೋಜನೆ!

ತಂದೆ-ತಾಯಿಯ 13 ವರ್ಷಗಳ ಕನಸು ನನಸು ಮಾಡಿದ ಮಗ: ಕಟ್ಟಿಗೆಹಳ್ಳಿಯಲ್ಲಿ ಅದ್ದೂರಿ ಗೃಹಪ್ರವೇಶ!

ದಾವಣಗೆರೆ ಕಾರ್ಗಿಲ್​ ಕಾರ್ಖಾನೆಯಲ್ಲಿ ಉತ್ಪಾದನೆ ಸ್ಥಗಿತ: ನ್ಯಾಯಕ್ಕಾಗಿ ಕಾರ್ಮಿಕರು ಹೋರಾಟ