Posts

Showing posts from September, 2026

ಬ್ಯಾಂಕ್ ಗ್ರಾಹಕರಿಗೆ ದೊಡ್ಡ ರಿಲೀಫ್‌: ಕೊನೆ ಕ್ಷಣದಲ್ಲಿ 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆ! UFBU ಅಧಿಕೃತ ಪ್ರಕಟಣೆ

Image
 ಸೆಪ್ಟೆಂಬರ್ 28ರಿಂದ ಸೆಪ್ಟೆಂಬರ್ 30 ರವರೆಗೆ ದೇಶಾದ್ಯಂತ ಆಯೋಜಿಸಲಾಗಿದ್ದ ಮೂರು ದಿನಗಳ ಬ್ಯಾಂಕ್ ನೌಕರರ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ (IBA) ಮತ್ತು ಬ್ಯಾಂಕ್ ಯೂನಿಯನ್‌ಗಳ ಒಕ್ಕೂಟವಾದ ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ನಡುವೆ ನಡೆದ ಉನ್ನತ ಮಟ್ಟದ ಮಾತುಕತೆಯ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಸೆಪ್ಟೆಂಬರ್ 27 ರಂದು ರಾತ್ರಿ 9:30 ಕ್ಕೆ ಐಬಿಎ ಮತ್ತು ಯುಎಫ್‌ಬಿಯು ಪ್ರತಿನಿಧಿಗಳ ನಡುವೆ ಸುದೀರ್ಘ ಚರ್ಚೆಗಳು ನಡೆದವು. ಬ್ಯಾಂಕ್ ನೌಕರರ ಪ್ರಮುಖ ಬೇಡಿಕೆಗಳ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಲು ಮತ್ತು ಸಮಸ್ಯೆಗಳನ್ನು ಪರಿಹರಿಸಲು ಜಂಟಿ ಸಮಿತಿಯನ್ನು ರಚಿಸಲು ಐಬಿಎ ಸಮ್ಮತಿಸಿದ ಹಿನ್ನೆಲೆಯಲ್ಲಿ, ಪ್ರತಿಭಟನಾ ಕಾರ್ಯಕ್ರಮಗಳು ಹಾಗೂ ಮುಷ್ಕರವನ್ನು ಮುಂದೂಡಲು ಯೂನಿಯನ್‌ಗಳು ನಿರ್ಧರಿಸಿವೆ. ಮಾತುಕತೆಯ ನಂತರ ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ ಬಿಡುಗಡೆ ಮಾಡಿದ ಅಧಿಕೃತ ಜಂಟಿ ಪ್ರಕಟಣೆಯ ಪೂರ್ಣ ವಿವರ ಇಲ್ಲಿದೆ: ಸೆಪ್ಟೆಂಬರ್ 27 ರಂದು ರಾತ್ರಿ 9:30 ಕ್ಕೆ ಐಬಿಎ (IBA) ಮತ್ತು ಯುಎಫ್‌ಬಿಯು (UFBU) ನಡುವೆ ಸಭೆ ನಡೆಯಿತು. ವಿವರವಾದ ಆಲೋಚನೆ ಮತ್ತು ಚರ್ಚೆಗಳ ನಂತರ ಈ ಕೆಳಗಿನ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ: ಉಳಿದ ಶನಿವಾರಗಳಿಗೆ ರಜೆ ಘೋಷಣೆ: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಬಾಕಿ ಉಳಿದಿರುವ ಎಲ್ಲಾ ಶನಿವಾರಗಳನ್ನು ರಜಾದಿನಗ...

ಹಾವೇರಿ: ಆಸ್ತಿ ವಿಚಾರಕ್ಕೆ ತಾಯಿ-ಮಗನನ್ನು ಮಾರಕಾಸ್ತ್ರಗಳಿಂದ ಬರ್ಬರ ಹತ್ಯೆಗೈದ ದುಷ್ಕರ್ಮಿಗಳು

Image
 ಹಾವೇರಿ: ಆಸ್ತಿ ವಿಚಾರವಾಗಿ ತಾಯಿ ಮತ್ತು ಮಗನನ್ನು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾನಗಲ್ ತಾಲೂಕಿನ ಕುಸನೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನು 55 ವರ್ಷದ ಪ್ರೇಮಕ್ಕ ಬಡಿಗೇರ ಹಾಗೂ ಪುತ್ರ 38 ವರ್ಷದ ಅವಿನಾಶ್ ಬಡಿಗೇರ ಎಂದು ಗುರುತಿಸಲಾಗಿದೆ. ಆಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಪ್ರೇಮಕ್ಕ ಬಡಿಗೇರ ಕೆಲವು ವರ್ಷಗಳ ಹಿಂದೆ ಆಸ್ತಿಯನ್ನು ಖರೀದಿ ಮಾಡಿದ್ದರು. ಆದರೆ ಆಸ್ತಿಯನ್ನು ಪ್ರೇಮಕ್ಕ ಹೆಸರಿಗೆ ವರ್ಗಾವಣೆ ಮಾಡಿರಲಿಲ್ಲ. ಈ ಸಂಬಂಧ ಕಾನೂನು ಹೋರಾಟ ನಡೆಸಿ ಕೋರ್ಟ್ ಮೂಲಕ ಆಸ್ತಿಯನ್ನು ಮರಳಿ ತಮ್ಮ ವಶಕ್ಕೆ ಪಡೆದುಕೊಂಡಿದ್ದರು. ಇದರಿಂದ ರೊಚ್ಚಿಗೆದ್ದ ತಿರಕಯ್ಯ ಹೊಸಮಠ ಹಾಗೂ ಬಸವರಾಜ ಹೊಸಮಠ ಎಂಬುವವರು ಕೊಲೆ ಮಾಡಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಆಡೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ದಾವಣಗೆರೆಯಲ್ಲಿ : ಅಕ್ರಮ ಸಂಬಂಧ: ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ!

Image
 45 ವರ್ಷದ ನಾಗರತ್ನ ಕೊಲೆಯಾದ ಮಹಿಳೆಯಾಗಿದ್ದು, 36 ವರ್ಷದ ನಾಗರಾಜ್ ಕೊಲೆ ಆರೋಪಿಯಾಗಿದ್ದಾನೆ. ಈತ ಹಲವು ವರ್ಷಗಳಿಂದ ಆಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ ದಾವಣಗೆರೆ: ಅಕ್ರಮ ಸಂಬಂಧದಿಂದ ಮೂರು ಮಕ್ಕಳ ತಾಯಿಯೊಬ್ಬಳು ಪ್ರಿಯಕರನಿಂದಲೇ ಕೊಲೆಯಾಗಿರುವ ಘಟನೆ ದಾವಣಗೆರೆಯ ಶೇಖರಪ್ಪ ನಗರದಲ್ಲಿ ನಡೆದಿದೆ. 45 ವರ್ಷದ ನಾಗರತ್ನ ಕೊಲೆಯಾದ ಮಹಿಳೆಯಾಗಿದ್ದು, 36 ವರ್ಷದ ನಾಗರಾಜ್ ಕೊಲೆ ಆರೋಪಿಯಾಗಿದ್ದಾನೆ. ಈತ ಹಲವು ವರ್ಷಗಳಿಂದ ಆಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಇಬ್ಬರ ನಡುವೆ ಕೆಲ ದಿನಗಳಿಂದ ಪದೇ ಪದೇ ಜಗಳ ನಡೆಯುತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ನಾಗರತ್ನ ಪತಿಯನ್ನು ತ್ಯಜಿಸಿ ತನ್ನ ಮೂರು ಮಕ್ಕಳನ್ನು ಬೇರೆ ಕಡೆ ಮನೆ ಮಾಡಿ ಬಿಟ್ಟಿದ್ದಳು. ತಾನು ಒಂಟಿಯಾಗಿ ಜೀವನ ಮಾಡುತ್ತಿದ್ದಳು. ಕಲ್ಯಾಣ ಮಂಟಪದಲ್ಲಿ ಕೆಲಸ ಮಾಡಿಕೊಂಡಿದ್ದ ನಾಗರತ್ನಳಿಗೆ ನಾಗರಾಜ್ ಪರಿಚಯವಾಗಿದ್ದ. ಬಳಿಕ ಇಬ್ಬರ ನಡುವೆ ಸಂಬಂಧ ಬೆಳೆದಿತ್ತು ಎಂದು ತಿಳಿದುಬಂದಿದೆ.

ದಾವಣಗೆರೆ : ಕುಡಿದ ಮತ್ತಿನಲ್ಲಿ ಏನು ಮಾಡುತ್ತಿದ್ದೇನೆಂಬುವುದನ್ನು ಯೋಚಿಸದೆ ಮಹಿಳೆಯೊಬ್ಬಳು ತನ್ನ ಪ್ರೀಯಕರನ್ನೇ ಭೀಕರವಾಗಿ ಕೊಲೆ ಮಾಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ.

Image
  ದಾವಣಗೆರೆ : ಕುಡಿದ ಮತ್ತಿನಲ್ಲಿ ಏನು ಮಾಡುತ್ತಿದ್ದೇನೆಂಬುವುದನ್ನು ಯೋಚಿಸದೆ ಮಹಿಳೆಯೊಬ್ಬಳು ತನ್ನ ಪ್ರೀಯಕರನ್ನೇ ಭೀಕರವಾಗಿ ಕೊಲೆ ಮಾಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಈ ಘಟನೆ ನಡೆದಿರೋದು ದಾವಣಗೆರೆಯಲ್ಲಿ. ಮಂಜಪ್ಪ (40) ಕೊಲೆಯಾದ ದುರ್ದೈವಿ. ಶಬೀನಾ (38) ಕೊಲೆಗೈದ ಆರೋಪಿ. ಹೌದು… ಗಂಡನಿಂದ ವಿಚ್ಛೇದನ ಪಡೆದಿದ್ದ ಶಬೀನಾ ಮತ್ತು ಹೆಂಡತಿ, ಮಕ್ಕಳಿಂದ ದೂರವಿದ್ದ ಮಂಜಪ್ಪ ನಡುವೆ ಪ್ರೀತಿಯಾಗಿದ್ದು, ಬಳಿಕ ಇಬ್ಬರು ಒಟ್ಟಿಗೆ ವಾಸವಿದ್ದರು ಎಂದು ತಿಳಿದು ಬಂದಿದೆ. ಎಂದಿನಂತೆ ಮದ್ಯ ಸೇವಿಸಿದ ಅಮಲಿನಲ್ಲಿ ಇಬ್ಬರ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಶಬೀನಾ ಸೀರೆಯಿಂದ ಮಂಜಪ್ಪನ ಕತ್ತು ಬಿಗಿದು ಕೊಲೆ ಮಾಡಿದ್ದಾಳೆ ಎನ್ನಲಾಗಿದೆ. ಘಟನೆ ಕುರಿತು ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಶಬೀನಾಳನ್ನು ಬಂಧಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿಸಿದ್ದಾರೆ.

ಕೊಟ್ಟೂರಿನಲ್ಲಿ ಯುವ ಭಾರತೀಯರ ವೇದಿಕೆ ವತಿಯಿಂದ 5ನೇ ವರ್ಷದ ಗಣೇಶೋತ್ಸವ ಹಾಗೂ ಧಣಿ ಧ್ವನಿ ಕಾರ್ಯಕ್ರಮ ಯಶಸ್ವಿ

Image
 ಕೊಟ್ಟೂರು: ಯುವ ಭಾರತೀಯರ ವೇದಿಕೆ, ಕೊಟ್ಟೂರು ವತಿಯಿಂದ 5ನೇ ವರ್ಷದ ಗಣೇಶೋತ್ಸವದ ಸಂಭ್ರಮದ ಅಂಗವಾಗಿ ‘ಧ್ವನಿ ಧ್ವನಿ’ ಸಾಂಸ್ಕೃತಿಕ ಕಾರ್ಯಕ್ರಮವು ಅತ್ಯಂತ ವಿಜೃಂಭಣೆಯಿಂದ ಜರುಗಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಡೋಣ್ಹೋರು ಜಾನುಕೋಟಿ ಮಠದ ಪೂಜ್ಯ ಶ್ರೀ ಡಾ. ಸಿದ್ದಲಿಂಗ ಶಿವಚಾರ್ಯ ಸ್ವಾಮಿಗಳು ವಹಿಸಿದ್ದರು. ಕಾರ್ಯಕ್ರಮವನ್ನು ಶ್ರೀ ಡಾ. ತಿಪ್ಪೇಸ್ವಾಮಿ ವೆಂಕಟೇಶ್ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಎಂ.ಎಂ.ಜೆ ಶೋಭಿತ್ ವಹಿಸಿದ್ದರು. ಗಣ್ಯರ ಉಪಸ್ಥಿತಿ: ಮುಖ್ಯ ಅತಿಥಿಗಳಾಗಿ ದಾರುಕೇಶ್.ಎಂ.ಎಂ, ಅಟ್ಟಾವಳಿಗೆ ಸಂತೋಷ್, ಅಂಗಡಿ ಪಂಪಾಪತಿ, ವಿಕ್ರಮ್ ನಂದಿ, ನಲ್ಲಿ ಪ್ರಕಾಶ್ ಹಾಗೂ ನಿಲುಂಜಿ ನಾಗರಾಜ್ ಉಪಸ್ಥಿತರಿದ್ದರು. ವಿಶೇಷ ಸನ್ಮಾನ ಹಾಗೂ ಅಭಿನಂದನೆ: ಸಮಾಜಮುಖಿ ಹಾಗೂ ಕಲಾ ಸೇವೆ ಸಲ್ಲಿಸಿದ ವಿವಿಧ ಕ್ಷೇತ್ರಗಳ ಸಾಧಕರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು: ವಿನಯ್ ಕುಮಾರ್ ಚಿತ್ರಗಾರ (ಗಣೇಶ ಮೂರ್ತಿ ತಯಾರಕರು) ಬಂಡ್ರಿ ಪ್ರಕಾಶ್ ಹಾಗೂ ವೀರಬಸಪ್ಪ (ಪ್ರಸಾದ ತಯಾರಕರು) ನಿಲುಂಜಿ ವೀರೇಶ್ (ಶಾಮಿಯಾನ ವಿತರಕರು) ಬಂಡ್ರಿ ಕಾಲೇಶ್ (ಶ್ರೀ ಬನಶಂಕರಿ ದೇವಸ್ಥಾನ ಸೇವ ಸಮಿತಿ) ದೊಡ್ಡ ವೀರಯ್ಯ (ಶಾಸ್ತ್ರಿಗಳು) ಆದರ್ಶ್ (ಛಾಯಾಗ್ರಾಹಕರು) ಇಶೋಕ್ (ಆರ್ಟ್ಸ್ & ಪೇಂಟ್ಸ್) ಸಾಂಸ್ಕೃತಿಕ ವೈಭವ: ವೇದಿಕೆಯಲ್ಲಿ ಜ್ಯೋತಿ ಹರೀಶ್ ಅವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಆಕರ್ಷ್ ಹಳೆಮನಿ ಸ್ವಾಗತ...

ಮುದ್ದಾದ ಬಾಲಕಿ 'ಚಾರ್ವಿಕಾ'ಗೆ 'ಟಿವಿ ನ್ಯೂಸ್ ಕನ್ನಡ' ವತಿಯಿಂದ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು

Image
 ಮನೆಯಂಗಳದ ನಂದಾದೀವಿಗೆ, ಮುದ್ದಿನ ಬಾಲಕಿ ಚಾರ್ವಿಕಾ (Charvika) ಇಂದು ತನ್ನ ಜನ್ಮದಿನದ ಸಂಭ್ರಮದಲ್ಲಿದ್ದಾಳೆ. ತನ್ನ ಮುಗ್ಧ ನಗು ಹಾಗೂ ತುಂಟಾಟಗಳಿಂದ ಎಲ್ಲರ ಗಮನ ಸೆಳೆಯುತ್ತಿರುವ ಈ ಪುಟ್ಟ ರಾಜಕುಮಾರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಮಗುವಿನ ನಗು ಮನೆಯಲ್ಲಿ ನೂರು ಆನೆಗಳ ಬಲವಿದ್ದಂತೆ. ಭಗವಂತನು ಚಾರ್ವಿಕಾಗೆ ಸಕಲ ಆಯುರಾರೋಗ್ಯ, ಸುಖ-ಶಾಂತಿ, ನೆಮ್ಮದಿ ಹಾಗೂ ಉಜ್ವಲ ಭವಿಷ್ಯವನ್ನು ಕರುಣಿಸಿ ಆಶೀರ್ವದಿಸಲಿ. ಆಕೆಯ ಮುಂದಿನ ಜೀವನ ಹೂವಿನಂತೆ ಸದಾ ನಳನಳಿಸುತ್ತಿರಲಿ ಮತ್ತು ಅವಳ ಭವಿಷ್ಯದ ಎಲ್ಲಾ ಕನಸುಗಳು ನನಸಾಗಲಿ ಎಂದು ನಾವು ತುಂಬು ಹೃದಯದಿಂದ ಹಾರೈಸುತ್ತೇವೆ. ಶುಭಾಶಯಗಳೊಂದಿಗೆ, ಮಾಲೀಕರು, ಸಂಪಾದಕರು ಹಾಗೂ 'ಟಿವಿ ನ್ಯೂಸ್ ಕನ್ನಡ' ಮಾಧ್ಯಮ ಬಳಗ. Happy Birthday to the little princess Charvika! May your life be filled with love, happiness, good health, and all the dreams you wish for. Best Wishes from the TV NEWS KANNADA Team."

ದಾವಣಗೆರೆ: ಬಿ.ಡಿ. ಲೇಔಟ್‌ನಲ್ಲಿ ತಲ್ವಾರ್‌ ಗಲಾಟೆ ವಿಕೋಪ; ಚಿಕಿತ್ಸೆ ಫಲಕಾರಿಯಾಗದೆ ಯುವಕ ಸಾವು, ಆತಂಕದ ವಾತಾವರಣ

Image
 ದಾವಣಗೆರೆ: ನಗರದ ಬಿ.ಡಿ. ಲೇಔಟ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ನಡೆದ ಭೀಕರ ಮಾರಾಮಾರಿ ಪ್ರಕರಣ ದುರಂತದಲ್ಲಿ ಅಂತ್ಯಗೊಂಡಿದೆ. ನಡುವರಸೆಯಲ್ಲೇ ತಲ್ವಾರ್ ಹಾಗೂ ದೊಣ್ಣೆಗಳಿಂದ ಪರಸ್ಪರ ಅಟ್ಟಾಡಿಸಿ ಹಲ್ಲೆ ನಡೆಸಿದ ಘ್ಚಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೊಹಮ್ಮದ್ ಹುಸ್ಸೇನ್ (ಜೀಶನ್) ಎಂಬ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನೆಯ ಹಿನ್ನೆಲೆ: ನಗರದ ಬಿ.ಡಿ. ಲೇಔಟ್ ನಿವಾಸಿಗಳಾದ ಮೈನು, ಜುನೇದ್, ಇರ್ಫಾನ್ ಸೇರಿದಂತೆ ನಾಲ್ವರು ಯುವಕರು ರಸ್ತೆಯಲ್ಲಿ ನಿಂತಿದ್ದ ವೇಳೆ, ಮಹಮ್ಮದ್ ಸೇರಿದಂತೆ 20ಕ್ಕೂ ಹೆಚ್ಚು ಯುವಕರ ಗುಂಪು ಏಕಾಏಕಿ ತಲ್ವಾರ್ ಹಾಗೂ ಮಾರಕಾಸ್ತ್ರಗಳಿಂದ ದಾಳಿ ನಡೆಸಿತ್ತು. ಈ ವೇಳೆ ಎರಡೂ ಗುಂಪುಗಳ ನಡುವೆ ಭಾರಿ ಗಲಾಟೆ ನಡೆದಿದ್ದು, ಐವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದವು. ತಕ್ಷಣವೇ ಗಾಯಾಳುಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ, ಗಾಯಗೊಂಡಿದ್ದ ಮೊಹಮ್ಮದ್ ಹುಸ್ಸೇನ್ (ಜೀಶನ್) ಅವರು ಚಿಕಿತ್ಸೆ ಸ್ಪಂದಿಸದೆ ನಿನ್ನೆ (ಸೆಪ್ಟೆಂಬರ್ 13) ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಉಳಿದ ಗಾಯಾಳುಗಳಿಗೂ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ. ಹಳೆ ವೈಷಮ್ಯವೇ ಕಾರಣ?: ಈ ಮಾರಾಮಾರಿಗೆ ಹಳೆ ವೈಷಮ್ಯವೇ ಪ್ರಮುಖ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಈ ಘಟನೆಯಿಂದಾಗಿ ದಾವಣಗೆರೆ ನಗರದಲ್ಲಿ ಒಂದು ರೀತಿಯ...

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಮೊಳಗಿದ ಗುಂಡಿನ ಸದ್ದು; ರೌಡಿಶೀಟರ್‌ ಹತ್ಯೆ ಆರೋಪಿ ಕಾಲಿಗೆ ಪೊಲೀಸರ ಗುಂಡೇಟು..!

Image
 ಶಿವಮೊಗ್ಗ: ಕೊಲೆ ಪ್ರಕರಣದ ಆರೋಪಿ ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ಶಿವಮೊಗ್ಗ–ಎನ್.ಆರ್.ಪುರ ರಸ್ತೆಯ ಲಿಂಗಾಪುರ ಬಳಿ ಸೋಮವಾರ ನಡೆದಿದೆ. ಹತ್ಯೆ ಪ್ರಕರಣದ ಆರೋಪಿ ಉಮೇಶ್‌ ನಾಯ್ಕ್‌ (27) ಕಾಲಿಗೆ ಪೊಲೀಸರು ಗುಂಡು ಹಾರಿಸಿ, ಬಂಧನಕ್ಕೊಳಪಡಿಸಿದ್ದಾರೆ. ಆರೋಪಿಯನ್ನು ಬಂಧಿಸಲು ಪೊಲೀಸರು ಲಿಂಗಾಪುರಕ್ಕೆ ತೆರಳಿದ್ದ ವೇಳೆ, ಪೊಲೀಸ್‌ ಸಿಬ್ಬಂದಿ ತಮ್ಮಣ್ಣ ಜಂಬಗಿ ಮೇಲೆ ಆತ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಈ ವೇಳೆ ತುಂಗಾನಗರ ಠಾಣೆಯ ಇನ್‌ಸ್ಪೆಕ್ಟರ್‌ ಗುರುರಾಜ್‌ ಕರ್ಕಿ ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದಾರೆ. ಆದರೂ ಆರೋಪಿ ಪೊಲೀಸರ ಮೇಲೆ ಮತ್ತೆ ಹಲ್ಲೆಗೆ ಮುಂದಾದ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಆತನ ಕಾಲಿಗೆ ಗುಂಡು ಹಾರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡೇಟಿನಿಂದ ಗಾಯಗೊಂಡ ಉಮೇಶ್‌ ನಾಯ್ಕ್‌ನನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಲ್ಲೆಯಿಂದ ಗಾಯಗೊಂಡ ಪೊಲೀಸ್‌ ಸಿಬ್ಬಂದಿ ತಮ್ಮಣ್ಣ ಜಂಬಗಿಗೂ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ತುಂಗಾನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಇನ್ನು ರಾಮಿನಕೊಪ್ಪದಲ್ಲಿ ಭ...

ಕರ್ನಾಟಕ ರಾಜ್ಯದಲ್ಲಿ ನಕಲಿ ವೈದ್ಯರ ವಿರುದ್ಧ ಕೇಸ್‌, ಕ್ಲಿನಿಕ್‌ಗೆ ಬೀಗ

Image
 ಮಂಗಳೂರು : ನಕಲಿ ವೈದ್ಯರ (ಕ್ವಾಕ್‌ಗಳ) ಹಾವಳಿಯನ್ನು ತಡೆಗಟ್ಟಲು ರಾಜ್ಯಾದ್ಯಂತ ನಡೆಸಲಾದ ಬೃಹತ್ ಕಾರ್ಯಾಚರಣೆಯಲ್ಲಿ, ಆರೋಗ್ಯ ಇಲಾಖೆಯು 2024 ರಿಂದೀಚೆಗೆ ಕರ್ನಾಟಕದಾದ್ಯಂತ ನಕಲಿ ವೈದ್ಯರು ನಡೆಸುತ್ತಿದ್ದ 582 ಅಕ್ರಮ ಚಿಕಿತ್ಸಾಲಯಗಳನ್ನು (ಕ್ಲಿನಿಕ್‌ಗಳನ್ನು) ಮುಚ್ಚಿಸಿದೆ; ಇದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯೊಂದರಲ್ಲೇ 20 ಪ್ರಕರಣಗಳು ವರದಿಯಾಗಿವೆ. ಹೈಕೋರ್ಟ್‌ನ ಕಟ್ಟುನಿಟ್ಟಿನ ನಿರ್ದೇಶನದ ನಂತರ, 2025 ರಲ್ಲಿ ನಕಲಿ ವೈದ್ಯರು ಮತ್ತು ಅಕ್ರಮ ಚಿಕಿತ್ಸಾಲಯಗಳ ವಿರುದ್ಧದ ಕಾರ್ಯಾಚರಣೆ ತೀವ್ರಗೊಂಡಿತು. 2024 ಮತ್ತು 2026 ರ ನಡುವೆ, ಅಧಿಕಾರಿಗಳು ಕಠಿಣ ಕ್ರಮ ಕೈಗೊಂಡು ರಾಜ್ಯಾದ್ಯಂತ ಮಾನ್ಯತೆ ಪಡೆಯದ 582 ಚಿಕಿತ್ಸಾಲಯಗಳನ್ನು ಸಂಪೂರ್ಣವಾಗಿ ಮುಚ್ಚಿಸಿದ್ದಾರೆ. 87 ಅಪರಾಧಿಗಳಿಗೆ ದಂಡ ವಿಧಿಸಲಾಗಿದ್ದು, 29 ವ್ಯಕ್ತಿಗಳ ವಿರುದ್ಧ ನ್ಯಾಯಾಲಯದಲ್ಲಿ ಕಾನೂನು ಪ್ರಕ್ರಿಯೆಗಳು ನಡೆಯುತ್ತಿವೆ. ಈ ಅಕ್ರಮ ಚಟುವಟಿಕೆಗಳಲ್ಲಿ ಹೆಚ್ಚಿನವು ಗ್ರಾಮೀಣ ಪ್ರದೇಶಗಳಲ್ಲಿ ಪತ್ತೆಯಾಗಿವೆ. ದಕ್ಷಿಣ ಕನ್ನಡದಲ್ಲಿ 20 ನಕಲಿ ವೈದ್ಯರ ಪ್ರಕರಣಗಳು ದಾಖಲಾಗಿದ್ದರೆ, ಕಲಬುರಗಿ ಜಿಲ್ಲೆಯು 127 ಪ್ರಕರಣಗಳೊಂದಿಗೆ ರಾಜ್ಯದಲ್ಲೇ ಅಗ್ರಸ್ಥಾನದಲ್ಲಿದೆ. ನಂತರದ ಸ್ಥಾನಗಳಲ್ಲಿ ರಾಯಚೂರು (124), ಧಾರವಾಡ (75), ಕೋಲಾರ (31), ವಿಜಯಪುರ (24), ಬಳ್ಳಾರಿ (23), ಚಿಕ್ಕಬಳ್ಳಾಪುರ (17), ಬೆಂಗಳೂರು ನಗರ (16) ಮತ್ತು ಕೊಪ್ಪಳ (14) ಜಿಲ್ಲೆಗಳಿವೆ.

ದಾವಣಗೆರೆ: ಹೆದ್ದಾರಿಯಲ್ಲಿ ರಾತ್ರಿ ಅಪಘಾತದಲ್ಲಿ ಚಿರತೆ ಗಂಭೀರ ಗಾಯ: ರಕ್ಷಣೆಗೆ ಹೋದ ಸಿಬ್ಬಂದಿ ಮೇಲೆ ದಾಳಿ;

Image
 ದಾವಣಗೆರೆ: ದಾವಣಗೆರೆಯಲ್ಲಿ ಹೆದ್ದಾರಿಯಲ್ಲಿ ಕಾರು ಡಿಕ್ಕಿ ಹೊಡೆದು ಗಾಯಗೊಂಡಿದ್ದ ಚಿರತೆ ರಕ್ಷಣಾ ಕಾರ್ಯಾಚರಣೆ ವೇಳೆ ಅರಣ್ಯ ಇಲಾಖೆ ಅಧಿಕಾರಿಯೊಬ್ಬರ ಮೇಲೆ ದಾಳಿ ನಡೆಸಿದೆ. ಅಧಿಕಾರಿಗಳು ಚಿರತೆಗೆ ಅರವಳಿಕೆ ಮದ್ದು ನೀಡಿದರೂ, ಅದು ಸಂಪೂರ್ಣವಾಗಿ ಪ್ರಜ್ಞಾಹೀನವಾಗುವ ಮುನ್ನ ಅಧಿಕಾರಿಯೊಬ್ಬರ ಮೇಲೆ ದಾಳಿ ನಡೆಸಿದ್ದು, ಅವರು ಗಾಯಗೊಂಡಿದ್ದಾರೆ. ಬಳಿಕ ಚಿರತೆಯನ್ನು ಸುರಕ್ಷಿತವಾಗಿ ರಕ್ಷಿಸಿ, ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಪಘಾತದಲ್ಲಿ ಗಾಯಗೊಂಡು ರಾತ್ರಿಯಿಡೀ ರಸ್ತೆ ಬದಿಯಲ್ಲೇ ನರಳುತ್ತಿದ್ದ ಚಿರತೆಯನ್ನು ರಕ್ಷಣೆ ಮಾಡಲು ಹೋದಾಗ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆರಹಗಿದೆ. ಈ ಘಟನೆ ದಾವಣಗೆರೆ ತಾಲೂಕಿನ ಕೊಕ್ಕನೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇಂದು ಮಂಗಳವಾರ ಬೆಳಗ್ಗೆ ನಡೆದಿದೆ. ನಿನ್ನೆ ರಾತ್ರಿ ರಾಷ್ಟ್ರೀಯ ಹೆದ್ದಾರಿ ದಾಟುವ ವೇಳೆ ಚಿರತೆಗೆ ರಭಸವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಇದರಿಂದ ಚರಂಡಿಗೆ ಬಿದ್ದ ಚಿರತೆಗೆ ಗಂಭೀರ ಗಾಯಗಳಾಗಿದೆ. ಇದು ರಾಷ್ಟ್ರೀಯ ಹೆದ್ದಾರಿ ಪೆಟ್ರೋಲಿಂಗ್ ಪೊಲೀಸರ ಗಮನಕ್ಕೆ ಬಂದ ತಕ್ಷಣ ಸ್ಥಳಕ್ಕಾಗಮಿಸಿ, ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ರಾತ್ರಿಯಿಡೀ ಗಾಯದಿಂದ ನರಳಾಡುತ್ತಿದ್ದ ಚಿರತೆಗೆ ಚಿಕಿತ್ಸೆ ಕೊಡುವ ಸಲುವಾಗಿ, ಅದನ್ನು ರಕ್ಷಣೆ ಮಾಡಲು ಅರಣ್ಯ ಇಲಾಖೆ ಸಿಬ್ಬಂದಿ ಮುಂದಾಗಿದ್ದರು ಎಂದು ಎಸಿಎಫ್ ಆನಂದ್ ತಿಳಿಸಿದ್ದಾರೆ. ಹಂಪಿಯಿಂದ ಆ...

ಏಳು ದಿನ ಪೂರೈಸಿದ ಬಳ್ಳಾರಿ ಪಾದಯಾತ್ರೆ: ಕೇಸರಿ ಪಡೆಯಲ್ಲಿ ರಣೋತ್ಸಾಹ

Image
 ರೈತರ ಜೀವನಾಡಿ ತುಂಗಭದ್ರಾ ಜಲಾಶಯ ಭರ್ತಿಯಾದರೂ ಈ ಭಾಗದ ರೈತರಿಗೆ ಸಮಪರ್ಕವಾಗಿ ನೀರು ಕೊಡುವಲ್ಲಿ ಸ್ಥಳೀಯ ಶಾಸಕ ಸೇರಿದಂತೆ ರಾಜ್ಯ ಸರಕಾರ ವಿಫಲವಾಗಿದೆ. ರೈತರು ಮತ್ತು ಜನರು ಸಂಕಷ್ಟದಲ್ಲಿದ್ದರೂ ಸಿಎಂ ಡಿಕೆಶಿ ಬೆಂಗಳೂರು ರಿಯಲ್ ಎಸ್ಟೇಟ್ ಅಪ್ಪಿಕೊಂಡು ಕೂತಿದ್ದಾರೆ. ಬಡವರ ಬಿಪಿಎಲ್ ಕಾರ್ಡ್ ಕಿತ್ತುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಬಳ್ಳಾರಿ: ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ರಾಜ್ಯ ಬಿಜೆಪಿ ಕೈಗೊಂಡಿರುವ ಬಳ್ಳಾರಿ ಚಲೋ ಪಾದಯಾತ್ರೆ 7ನೇ ದಿನ ಪೂರೈಸಿದ್ದು ಸೋಮವಾರ ಕಂಪ್ಲಿ ತಾಲೂಕಿನ ದೇವಲಾಪುರ ತಲುಪಿದೆ. ಗಣಿನಾಡು ಬಳ್ಳಾರಿ ಜಿಲ್ಲೆಗೆ ಪಾದಯಾತ್ರೆ ಪ್ರವೇಶಿಸುತ್ತಿದ್ದಂತೆ ಕೇಸರಿ ಪಡೆಯ ರಣೋತ್ಸಾಹ ಮತ್ತಷ್ಟು ಹೆಚ್ಚಾಗಿದೆ. ಕಂಪ್ಲಿ ಪಟ್ಟಣಕ್ಕೆ ಭಾನುವಾರ ಆಗಮಿಸಿದ ಪಾದಯಾತ್ರೆ 7 ದಿನವಾದ ಸೋಮವಾರ ಬೆಳಗ್ಗೆ ಕಂಪ್ಲಿ ಪಟ್ಟದ ಅಂಬೇಡ್ಕರ್ ವೃತ್ತದಿಂದ ಆರಂಭವಾದ ಪಾದಯಾತ್ರೆ ದೇವಸಮುದ್ರ ಕ್ರಾಸ್ ಮೂಲಕ ಮೆಟ್ರಿ ಗ್ರಾಮದ ಮಾರ್ಗವಾಗಿ ದೇವಲಾಪುರಕ್ಕೆ ತಲುಪಿದ್ದು ಸರಿ ಸುಮಾರು 20 ಕಿಮೀ ಪಾದ ಯಾತ್ರೆಯಲ್ಲಿ ಕ್ರಮಿಸಿದ ಮುಖಂಡರು, ಕಾರ್ಯಕರ್ತರಿಗೆ ಗ್ರಾಮ ಗಳಲ್ಲಿ ಜನರು ಸ್ವಾಗತಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ನೇತೃತ್ವದಲ್ಲಿ ಕಂಪ್ಲಿ ವಿಧಾನಸಭೆ ಕ್ಷೇತ್ರದ ಕಂಪ್ಲಿ ಪಟ್ಟಣ ದಿಂದ ಆರಂಭವಾದ 7ನೇ ದಿನದ ಪಾದ ಯಾತ್ರೆ, ಇಡೀ ದಿನ ಕಂಪ್ಲಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿ ಯಲ್ಲಿ ಮುಂದುವರಿಯಿತು.ಸಂಜೆ ಕಂಪ್ಲಿ ...

ದಾವಣಗೆರೆಯಲ್ಲಿ ಎರಡು ಗುಂಪಿನ ನಡುವೆ ಮಾರಾಮಾರಿ; ತಲ್ವಾರ್‌ ಹಿಡಿದು ನಡುರಸ್ತೆಯಲ್ಲೇ ಯುವಕರ ಜಗಳ, ಐವರಿಗೆ ಗಂಭೀರ ಗಾಯ..!

Image
 ಯುವಕರು ಪರಸ್ಪರ ಅಟ್ಟಾಡಿಸಿಕೊಂಡು ಹಲ್ಲೆ ನಡೆಸಿದ್ದು, ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ. ದಾವಣಗೆರೆ: ದಾವಣಗೆರೆಯ ಬಿ.ಡಿ. ಲೇಔಟ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಆರಂಭವಾದ ಗಲಾಟೆ ಏಕಾಏಕಿ ವಿಕೋಪಕ್ಕೆ ತಿರುಗಿದ್ದು, ನಡುರಸ್ತೆಯಲ್ಲೇ ಯುವಕರು ತಲ್ವಾರ್‌ ಹಾಗೂ ದೊಣ್ಣೆ ಹಿಡಿದು ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಯುವಕರು ಪರಸ್ಪರ ಅಟ್ಟಾಡಿಸಿಕೊಂಡು ಹಲ್ಲೆ ನಡೆಸಿದ್ದು, ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಘಟನೆಗೆ ಹಳೇ ವೈಷಮ್ಯವೇ ಕಾರಣ ಎನ್ನಲಾಗಿದ್ದು, ದಾವಣಗೆರೆ ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ನಗರದ ಬಿ.ಡಿ. ಲೇಔಟ್‌ ನಿವಾಸಿಗಳಾದ ಮೈನು, ಜುನೇದ್‌, ಇರ್ಫಾನ್‌ ಸೇರಿದಂತೆ ನಾಲ್ವರು ಯುವಕರು ರಸ್ತೆಯಲ್ಲಿ ನಿಂತಿದ್ದ ವೇಳೆ ಮಹಮ್ಮದ್‌ ಸೇರಿದಂತೆ 20ಕ್ಕೂ ಹೆಚ್ಚು ಯುವಕರ ಗುಂಪು ಏಕಾಏಕಿ ದಾಳಿ ನಡೆಸಿದೆ ಎನ್ನಲಾಗಿದೆ.

360 ಪುರಾತನ ತಾಮದ ನಾಣ್ಯಗಳು ಪತ್ತೆ ಮಾನ್ವಿ: ಪಟ್ಟಣದ ಕಿಲ್ಲಾ ಪ್ರದೇಶದಲ್ಲಿ

Image
 ನಾಣ್ಯಗಳನ್ನು ತಾಮ್ರದಿಂದ ತಯಾರಿಸಲಾಗಿದ್ದು, ಅವುಗಳ ಮೇಲೆ ಉರ್ದು ಭಾಷೆಯ ಲಿಪಿಯ ಬರಹ ಗಳಿವೆ. ಹಿಂದೆ ಈ ಭಾಗದಲ್ಲಿ ಆಡಳಿತ ನಡೆಸಿದವರ ಕಾಲಮಾನದಲ್ಲಿ ಚಲಾವಣೆಯಲ್ಲಿದ್ದ ನಾಣ್ಯ ಗಳಾಗಿರಬಹುದು ಎಂದು ಶಂಕಿಸಲಾಗಿದೆ. ಅವುಗಳನ್ನು ಹೆಚ್ಚಿನ ಅಧ್ಯಯನಕ್ಕಾಗಿ ಪುರಾತತ್ವ ಇಲಾಖೆಗೆ ಕಳುಹಿಸಿ ಕೋಡಲಾಗುವುದು ಮಾನ್ವಿ: ಪಟ್ಟಣದ ಕಿಲ್ಲಾ ಪ್ರದೇಶದಲ್ಲಿರುವ ಮನೆಯೊಂದರ ಅಡಿಪಾಯ ಅಗಿಯುವಾಗ ಮನೆ ಯವರಿಗೆ ಪುರಾತನವಾದ 360 ತಾಮ್ರದ ನಾಣ್ಯಗಳು ಪತ್ತೆಯಾಗಿವೆ. ವಿಷಯ ತಿಳಿದು ತಹಶೀಲ್ದಾರ್ ಭೀಮರಾಯ ಬಿ. ರಾಮ ಸಮುದ್ರ ಅವರು, ಸ್ಥಳಕ್ಕೆ ಭೇಟಿ ನೀಡಿ ಮನೆಯ ಮಾಲೀಕರಿಂದ ನಾಣ್ಯಗಳನ್ನು ವಶಕ್ಕೆ ಪಡೆದರು. ನಂತರ ಮಾತನಾಡಿದ ಅವರು, ಪಟ್ಟಣದಲ್ಲಿ ಕಿಲ್ಲಾ ಪ್ರದೇಶದಲ್ಲಿ ವ್ಯಕ್ತಿಯೊಬ್ಬರಿಗೆ 360 ತಾಮ್ರದ ನಾಣ್ಯಗಳು ದೊರೆ ತಿದ್ದು, ಅವುಗಳನ್ನು ವಶಕ್ಕೆ ಪಡೆದು ಪೊಲೀಸ್ ಇಲಾಖೆಯ ವಶಕ್ಕೆ ನೀಡಲಾಗಿದೆ. ನಾಣ್ಯಗಳನ್ನು ತಾಮ್ರದಿಂದ ತಯಾರಿಸಲಾಗಿದ್ದು, ಅವುಗಳ ಮೇಲೆ ಉರ್ದು ಭಾಷೆಯ ಲಿಪಿಯ ಬರಹಗಳಿವೆ. ಹಿಂದೆ ಈ ಭಾಗದಲ್ಲಿ ಆಡಳಿತ ನಡೆಸಿದವರ ಕಾಲಮಾನದಲ್ಲಿ ಚಲಾವಣೆಯಲ್ಲಿದ್ದ ನಾಣ್ಯಗಳಾಗಿರ ಬಹುದು ಎಂದು ಶಂಕಿಸಲಾಗಿದೆ. ಅವುಗಳನ್ನು ಹೆಚ್ಚಿನ ಅಧ್ಯಯನಕ್ಕಾಗಿ ಪುರಾತತ್ವ ಇಲಾಖೆಗೆ ಕಳುಹಿಸಿ ಕೋಡಲಾಗುವುದು ಎಂದು ತಿಳಿಸಿದರು.

ಪಡಿತರ ಅಕ್ಕಿ ನೆಪದಲ್ಲಿ ಧಮಕಿ, ಸುಲಿಗೆ ಯತ್ನ; ಮೂವರು ಆರೋಪಿಗಳ ಬಂಧನ

Image
 ಉಡುಪಿ ಸೆಪ್ಟೆಂಬರ್ 03: ಮನೆಯ ಅಂಗಳದಲ್ಲಿ ಪಡಿತರ ಅಕ್ಕಿ ಚೀಲಗಳನ್ನು ಇಟ್ಟುಕೊಂಡಿದ್ದೀರಿ ಎಂದು ಆರೋಪಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಸುಲಿಗೆಗೆ ಯತ್ನಿಸಿ ಕೊಲೆ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಸುಲಿಗೆ ಹಾಗೂ ಬೆದರಿಕೆ ಒಡ್ಡಿದ ಆರೋಪಿಗಳಾದ ಕೋಟತಟ್ಟು ಗ್ರಾಮದ ನಾಗೇಂದ್ರ ಪುತ್ರನ್ (37) ಹಾಗೂ ಪಾರಂಪಳ್ಳಿ ಗ್ರಾಮದ ಪಡುಕೆರೆ ನಿವಾಸಿ ಪಿ. ಸುಮಂತ್ ಕುಂದರ್ (40) ಅವರನ್ನು ಸೆಪ್ಟೆಂಬರ್ 2ರಂದು ಮೈಸೂರಿನ ಅರಮನೆ ಎದುರಿನ ವಸ್ತು ಪ್ರದರ್ಶನ ಮೈದಾನದ ಬಳಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಇದೇ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಆರೋಪಿ, ಮೂಡುಹಡು ಗ್ರಾಮದ ಸಚಿನ್ ಶ್ರೀಯಾನ್ (32) ಎಂಬಾತನನ್ನು ಸೆಪ್ಟೆಂಬರ್ 1ರಂದೇ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದರು. ಕಾರ್ಯಾಚರಣೆ ನಡೆಸಿದ ಪೊಲೀಸ್ ತಂಡ: ಆಗಸ್ಟ್ 31ರಂದು ಈ ಘಟನೆ ನಡೆದಿದ್ದು, ಸಂತ್ರಸ್ತರು ನೀಡಿದ ದೂರಿನನ್ವಯ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಬಂಧನಕ್ಕಾಗಿ ಉಡುಪಿ ಉಪವಿಭಾಗದ ಡಿವೈಎಸ್ಪಿ ಬೆಳ್ಳಿಯಪ್ಪ ಕೆ.ಯು. ಹಾಗೂ ಬ್ರಹ್ಮಾವರ ವೃತ್ತ ನಿರೀಕ್ಷಕ ಗೋಪಿಕೃಷ್ಣ ಅವರ ಮಾರ್ಗದರ್ಶನದಲ್ಲಿ ಕೋಟ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ಕುಮಾರ್ ಆರ್. ಹಾಗೂ ಪಿಎಸ್‌ಐ ಮಹಾಂತೇಶ ಜಾಬಗೌಡ ನೇತೃತ್ವದಲ್ಲಿ ಸಿಬ್ಬಂದಿಗಳಾದ ವಿಜಯೇಂದ್ರ, ಶರತ್ ಮತ್ತು ಶಿವ...

ಪತ್ರಕರ್ತೆ ವಶಕ್ಕೆ ಪಡೆದು ಹಲ್ಲೆ ಆರೋಪ: ದೆಹಲಿ ಪೊಲೀಸರ ನಡೆಗೆ KUWJ ಖಂಡನೆ

Image
 ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರನ್ನು ಪ್ರಶ್ನಿಸಲು ಯತ್ನಿಸಿದ ವೇಳೆ 4PM ಸುದ್ದಿ ವಾಹಿನಿಯ ಪತ್ರಕರ್ತೆ ಶಾಹಿನ್ ಅವರನ್ನು ಪೊಲೀಸರು ವಶಕ್ಕೆ ಪಡೆದು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಅತ್ಯಂತ ಗಂಭೀರ ಹಾಗೂ ಖಂಡನೀಯವಾಗಿದೆ ಎಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ತಿಳಿಸಿದೆ. ಈ ಕುರಿತು ಎಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ಕೆಯುಡಬ್ಲಯುಜೆ, ಈ ಪ್ರಕರಣದ ಕುರಿತು ನ್ಯಾಯಸಮ್ಮತ ಮತ್ತು ಪಾರದರ್ಶಕ ತನಿಖೆ ನಡೆಸಬೇಕು. ಘಟನೆ ನಡೆದ ಸ್ಥಳ ಹಾಗೂ ಪೊಲೀಸ್ ಠಾಣೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಕೂಡಲೇ ಸಂರಕ್ಷಿಸಿ, ಸತ್ಯಾಂಶವನ್ನು ಬಹಿರಂಗಪಡಿಸಬೇಕು. ತಪ್ಪಿತಸ್ಥ ಪೊಲೀಸ್ ಸಿಬ್ಬಂದಿ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದೆ. ಪತ್ರಕರ್ತರ ಧ್ವನಿಯನ್ನು ಬಲಪ್ರಯೋಗದಿಂದ ಹತ್ತಿಕ್ಕಲು ಸಾಧ್ಯವಿಲ್ಲ. ಪತ್ರಿಕಾ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸುವುದು ಪ್ರಜಾಪ್ರಭುತ್ವದ ಮೂಲ ಜವಾಬ್ದಾರಿಯಾಗಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಪತ್ರಕರ್ತೆ ಶಾಹಿನ್ ಅವರೊಂದಿಗೆ ನಿಲ್ಲುತ್ತದೆ ಎಂದು ತಿಳಿಸಿದೆ.

ಬೆಂಗಳೂರಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ; ಪುನೀತ್ ಕೆರೆಹಳ್ಳಿ ಸೇರಿದಂತೆ ಮೂವರು ಅರೆಸ್ಟ್

Image
 ಬೆಂಗಳೂರು: ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಹಾಗೂ ಕೋಮು ಸೌಹಾರ್ದತೆಗೆ ಧಕ್ಕೆ ತರುವ ರೀತಿಯಲ್ಲಿ ವರ್ತಿಸಿದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಎಫ್‌ಐಆರ್‌ಗಳು ದಾಖಲಾಗಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿ, ಗೋಪಿಗೌಡ ಹಾಗೂ ಪುನೀತ್ ಗೌಡ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈದ್ ಮಿಲಾದ್ ಅಂಗವಾಗಿ ನಡೆಯುತ್ತಿದ್ದ ಮೆರವಣಿಗೆ ವೇಳೆ ಆರೋಪಿಗಳು ಗಲಾಟೆ ಮಾಡಿದ್ದು, ಮೆರವಣಿಗೆಯಲ್ಲಿ ಭಾಗವಹಿಸಿದ್ದವರನ್ನು ಉದ್ದೇಶಿಸಿ ಆಕ್ಷೇಪಾರ್ಹವಾಗಿ ಮಾತನಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮೆರವಣಿಗೆ ವೇಳೆ “ನಿಮಗೆ ಯಾರು ಪರ್ಮಿಷನ್ ಕೊಟ್ಟಿದ್ದು?”, “ನೀವು ಜಿಹಾದಿಗಳು” ಎಂದು ಪುನೀತ್ ಕೆರೆಹಳ್ಳಿ ಹೇಳಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆರೋಪಿಗಳ ವಿರುದ್ಧ ಕೋಮು ಸೌಹಾರ್ದತೆಗೆ ಧಕ್ಕೆ ತರುವುದು ಹಾಗೂ ವಿವಿಧ ಸಮುದಾಯಗಳ ನಡುವೆ ಶತ್ರುತ್ವ ಸೃಷ್ಟಿಸಲು ಯತ್ನಿಸಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮೂರು ಎಫ್‌ಐಆರ್‌ಗಳ ಆಧಾರದ ಮೇಲೆ ಪೊಲೀಸರು ತನಿಖೆ ಮುಂದುವರಿಸಿದ್ದು, ಮೆರವಣಿಗೆ ವೇಳೆ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋಗಳು ಹಾಗೂ ಇತರ ಸಾಕ್ಷ್ಯಗಳನ್ನು ಪರಿಶೀಲಿಸುತ್ತಿದ್ದಾರೆ.

ʼಜಂತರ್ ಮಂತರ್ʼ ಗಲಾಟೆ ಕೇಸ್‌ಗೆ ಬಿಗ್ ಟ್ವಿಸ್ಟ್ ; ಪ್ರಮುಖ ಆರೋಪಿ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ !

Image
 ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನಾನಿರತ ವಿದ್ಯಾರ್ಥಿನಿಯೊಬ್ಬರ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ದೇಶಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿರುವ ಬೆನ್ನಲ್ಲೇ, ಪ್ರಕರಣದ ಪ್ರಮುಖ ಆರೋಪಿ ಸ್ವತಂತ್ರ ಭಾರದ್ವಾಜ್‌ನನ್ನು ಪೊಲೀಸರು ಉತ್ತರ ಪ್ರದೇಶದಲ್ಲಿ ವಶಕ್ಕೆ ಪಡೆದಿದ್ದಾರೆ. ಭಾರತದ ಮುಖ್ಯ ನ್ಯಾಯಮೂರ್ತಿಗಳು (CJI) ಈ ಘಟನೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಕಠಿಣ ಕ್ರಮ ಕೈಗೊಳ್ಳುವಂತೆ ಖಡಕ್ ಎಚ್ಚರಿಕೆ ನೀಡಿದ ಕೆಲವೇ ಗಂಟೆಗಳಲ್ಲಿ ಪೊಲೀಸರು ಈ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಹೆಡೆಮುರಿಕಟ್ಟಿದ್ದಾರೆ. ಸಿಜೆಐ ಎಚ್ಚರಿಕೆಯ ಬೆನ್ನಲ್ಲೇ ಮಿಂಚಿನ ಕಾರ್ಯಾಚರಣೆ: ಜಂತರ್ ಮಂತರ್‌ನಲ್ಲಿ ನಡೆದ ಹಲ್ಲೆ ಪ್ರಕರಣವು ನ್ಯಾಯಾಂಗದ ಗಮನಕ್ಕೆ ಬಂದ ತಕ್ಷಣ, ದೇಶದ ಅತ್ಯುನ್ನತ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳು ಕಾನೂನು ಸುವ್ಯವಸ್ಥೆ ಮತ್ತು ನಾಗರಿಕರ ಸುರಕ್ಷತೆಯ ವಿಚಾರದಲ್ಲಿ ತೀವ್ರ ಕಳವಳ ವ್ಯಕ್ತಪಡಿಸಿದ್ದರು. ಹಲ್ಲೆಕೋರರ ವಿರುದ್ಧ ಯಾವುದೇ ಮುಲಾಜಿಲ್ಲದೆ ತಕ್ಷಣ ಕ್ರಮ ಜರುಗಿಸಬೇಕು ಎಂದು ಕಟುವಾದ ಎಚ್ಚರಿಕೆ ರವಾನಿಸಿದ್ದರು. ಸಿಜೆಐ ಅವರ ಈ ಕಟ್ಟುನಿಟ್ಟಿನ ಸೂಚನೆ ಹೊರಬಿದ್ದ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ದೆಹಲಿ ಮತ್ತು ಉತ್ತರ ಪ್ರದೇಶ ಪೊಲೀಸ್ ತಂಡಗಳು, ತಲೆಮರೆಸಿಕೊಂಡಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್ ಇರುವ ಸ್ಥಳವನ್ನು ಪತ್ತೆಹಚ್ಚಿ ಉತ್ತರ ಪ್ರದೇಶದಲ್ಲಿ ಆತನನ್ನು ವಶಕ್ಕೆ ಪಡೆದುಕೊಂಡಿವೆ. ಏನಿದು ಜಂತರ್ ...

ವರ್ಗಾವಣೆಗೊಂಡ ಹು-ಧಾ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರಿಗೆ ಸಿಬ್ಬಂದಿಯಿಂದ ಭಾವನಾತ್ಮಕ ಬೀಳ್ಕೊಡುಗೆ

Image
 ವರ್ಗಾವಣೆಗೊಂಡ ಹು-ಧಾ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರಿಗೆ ಸಿಬ್ಬಂದಿಯಿಂದ ಭಾವನಾತ್ಮಕ ಬೀಳ್ಕೊಡುಗೆ ಹುಬ್ಬಳ್ಳಿ: ವರ್ಗಾವಣೆಗೊಂಡ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರಿಗೆ ಪೊಲೀಸ್ ಸಿಬ್ಬಂದಿ ಭಾವನಾತ್ಮಕವಾಗಿ ಬೀಳ್ಕೊಡುಗೆ ನೀಡಿದರು. ನಗರದ ನವನಗರದಲ್ಲಿರುವ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಪೊಲೀಸ್ ಆಯುಕ್ತರಾಗಿ ಭೂಷಣ್ ಬೊರಸೆ ಅವರು ಅಧಿಕಾರ ಸ್ವೀಕರಿಸಿದರು. ಈ ವೇಳೆ ಎನ್. ಶಶಿಕುಮಾರ್ ಅವರು ನೂತನ ಆಯುಕ್ತರಿಗೆ ಅಧಿಕಾರ ಹಸ್ತಾಂತರಿಸಿದರು. ಸುಮಾರು ಎರಡು ವರ್ಷ ಎರಡು ತಿಂಗಳ ಕಾಲ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದ ಎನ್. ಶಶಿಕುಮಾರ್ ಅವರನ್ನು ಸಿಬ್ಬಂದಿ ಗೌರವಪೂರ್ವಕವಾಗಿ ಬೀಳ್ಕೊಟ್ಟರು. ಕಮಿಷನರ್ ಕಚೇರಿಯಿಂದ ಹೊರಡುವ ಸಂದರ್ಭದಲ್ಲಿ ಸಿಬ್ಬಂದಿ ಎನ್. ಶಶಿಕುಮಾರ್ ಅವರ ಮೇಲೆ ಪುಷ್ಪವೃಷ್ಟಿ ಮಾಡಿ ಗೌರವ ಸಲ್ಲಿಸಿದರು. ಈ ವೇಳೆ ಸಿಬ್ಬಂದಿ ಅವರ ಪರವಾಗಿ ಜೈಕಾರ ಕೂಗಿ, ಆತ್ಮೀಯವಾಗಿ ಬೀಳ್ಕೊಟ್ಟರು

ನಾಗರತ್ನ ಜೊತೆ ವಿಚ್ಛೇದನದ ಬಳಿಕ ನಟ ದುನಿಯಾ ವಿಜಯ್ ಮೊದಲ ಪೋಸ್ಟ್ ; ಏನಂದ್ರು ಗೊತ್ತಾ..?

Image
 ಬೆಂಗಳೂರು: ನಟ ದುನಿಯಾ ವಿಜಯ್‌ ಹಾಗೂ ನಾಗರತ್ನ ಅವರ ದಾಂಪತ್ಯ ಜೀವನಕ್ಕೆ ನ್ಯಾಯಾಲಯದ ಆದೇಶದ ಮೂಲಕ ತೆರೆ ಬಿದ್ದ ಬೆನ್ನಲ್ಲೇ, ದುನಿಯಾ ವಿಜಯ್‌ ಅವರು ಸಾಮಾಜಿಕ ಜಾಲತಾಣದಲ್ಲಿ ಮೊದಲ ಪೋಸ್ಟ್‌ ಹಂಚಿಕೊಂಡಿದ್ದಾರೆ. ಈ ಪೋಸ್ಟ್‌ನಲ್ಲಿ ಅಭಿಮಾನಿಗಳು, ಮಾಧ್ಯಮ ಮಿತ್ರರು ಹಾಗೂ ತಮ್ಮ ಪರ ನಿಂತವರಿಗೆ ಧನ್ಯವಾದ ಅರ್ಪಿಸಿರುವ ಅವರು, ಮುಂದಿನ ದಿನಗಳಲ್ಲಿ ಈ ವೈಯಕ್ತಿಕ ವಿಚಾರದ ಬಗ್ಗೆ ಸಾರ್ವಜನಿಕವಾಗಿ ಮಾತನಾಡುವುದಿಲ್ಲ ಎಂದು ತಿಳಿಸಿದ್ದಾರೆ. ದುನಿಯಾ ವಿಜಯ್‌ ಹೇಳಿದ್ದೇನು? “ಸಮಸ್ತ ಅಭಿಮಾನಿಗಳಲ್ಲಿ ಹಾಗೂ ನನ್ನ ಬದುಕೆಂಬುದಕ್ಕೂ, ಜೊತೆಯಾಗಿ ನಿಂತ ಮಾಧ್ಯಮ ಮಿತ್ರರಲ್ಲಿ ಕಳಕಳಿಯ ಮನವಿ…” ಎಂದು ತಮ್ಮ ಪೋಸ್ಟ್‌ ಆರಂಭಿಸಿರುವ ದುನಿಯಾ ವಿಜಯ್‌, ನ್ಯಾಯಾಲಯದ ಆದೇಶವನ್ನು ಗೌರವದಿಂದ ಸ್ವೀಕರಿಸಿರುವುದಾಗಿ ಹೇಳಿದ್ದಾರೆ. “ನ್ಯಾಯಾಲಯದ ಆದೇಶಕ್ಕೆ ಶಿರಸಾದುರ್ಗಿ ಪ್ರಣಾಮಗಳನ್ನು ಸಲ್ಲಿಸಿ ಶರಣಾಗಿದ್ದೇನೆ. ಕಾನೂನಿನ ಮೇಲೆ ನನಗೆ ನಂಬಿಕೆ ಮತ್ತು ಗೌರವವಿದೆ. ನನ್ನ ಮೇಲಿನ ಮಾನಸಿಕ ಕ್ರೌರ್ಯವನ್ನು ಪರಿಗಣಿಸಿ, ಮಾನ್ಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಶ್ರೀ ಡಿ.ಕೆ. ಸಿಂಗ್ ಹಾಗೂ ಶ್ರೀ ಶಾಂತಿಭೂಷಣ್ ಅವರ ಆದೇಶಕ್ಕೆ ತಲೆಬಾಗಿದ್ದೇನೆ. ಈ ಆದೇಶಕ್ಕೆ ನನ್ನ ಗೌರವಪೂರ್ವಕ ಧನ್ಯವಾದಗಳು.”ಹಾಗೆಯೇ ತಮ್ಮ ಪರವಾಗಿ ವಾದಿಸಿದ ಕಾನೂನು ತಜ್ಞರು ಹಾಗೂ ವಕೀಲರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ.

ದಾವಣಗೆರೆಯ ಖಾಸಗಿ ಬ್ಯಾಂಕ್ ಉದ್ಯೋಗಿ ಮೋಹನ್ ಕುಮಾರ್, ಸಹೋದ್ಯೋಗಿಗಳ ಕಿರುಕುಳ ಮತ್ತು ಸಾಲದ ಒತ್ತಡದಿಂದ ನೊಂದು ಸೆಲ್ಫೀ ವಿಡಿಯೋ ಮಾಡಿ ನಾಪತ್ತೆಯಾಗಿದ್ದಾರೆ. ತುಂಗಾ ಕಾಲುವೆಯಲ್ಲಿ ಅವರ ಬೈಕ್ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

Image
 ದಾವಣಗೆರೆ(ಆ.30) ಸಿಬ್ಬಂದಿ ಕಿರುಕುಳ, ಸಾಲ, ಪ್ರಮೋಶನ್ ಸಿಕ್ಕಿಲ್ಲ ಎಂಬ ಕಾರಣಕ್ಕೆ ನೊಂದ ಖಾಸಗಿ ಬ್ಯಾಂಕ್ ಸಿಬ್ಬಂದಿಯೊಬ್ಬರ ಸೆಲ್ಫೀ ವಿಡಿಯೋ ಮಾಡಿ ನಾಪತ್ತೆಯಾದ ಆಘಾತಕಾರಿ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಮಾದನಬಾವಿ ಗ್ರಾಮದಲ್ಲಿ ನಡೆದಿದೆ. ಅರ್‌ಡಿ ಮೋಹನ್ ಕುಮಾರ್(37) ನಾಪತ್ತೆಯಾಗಿರುವ ವ್ಯಕ್ತ. ಬೈಕ್ ಸಮೇತ ತುಂಗಾ ಕಾಲುವೆಗೆ ಹಾರಿ ಆತ್ಮ೧ಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದೆ ಎಂದು ಶಂಕಿಸಲಾಗಿದೆ. ನಾಪತ್ತೆಯಾಗಿರೋ ವ್ಯಕ್ತಿ ಸೆಲ್ಫೀ ವಿಡಿಯೋದಲ್ಲಿ ಹೇಳಿದ್ದೇನು? ನಾಪತ್ತೆಯಾಗಿರುವ ವ್ಯಕ್ತಿ ತನ್ನ ನಿರ್ಧಾರಕ್ಕೆ ಮುನ್ನ ಸೇಲ್ಫಿ ವಿಡಿಯೋ ಮಾಡಿದ್ದಾನೆ. ವಿಡಿಯೋದಲ್ಲಿ, ನನ್ನ ಸಾವಿಗೆ ಬ್ಯಾಂಕ್ ಸಿಬ್ಬಂದಿ ಕಿರುಕುಳ ನೀಡುತ್ತಿದ್ದಾರೆ, ನನಗೆ ಸಾಲವಿದೆ. ಸಾಲ ಮಾಡಿ ಕೊಟ್ರೇಶ್ ಎಂಬುವರ ಬಳಿ ಮಾರ್ಕ್ಸ್ ಕಾರ್ಡ್ ಮಾಡಿಕೊಂಡಿದ್ದೇನೆ. ಪ್ರಮೋಶನ್ ಬರಲಿಲ್ಲ. ಇತ್ತ ಸಾಲ ಸಿಕ್ಕಾಪಟ್ಟೆ ಆಗಿದೆ. ನನ್ನ ಸಾಲಕ್ಕೆ ಬ್ಯಾಂಕ್ ಸಿಬ್ಬಂದಿ ಕಾರಣ. ನನ್ನ ಸಹ ಸಿಬ್ಬಂದಿಗಳಾದ ತಿಪ್ಪೇಶ್, ಮಾರ್ಕ್ಸ್‌ ಕಾರ್ಡ್ ಮಾಡಿಕೊಡುವ ಕೊಟ್ರೇಶ್ ಕಾರಣ. ನನ್ನಿಂದ ಹೀಗಾಗಿ ನೊಂದು ಸಾಯುವ ನಿರ್ಧಾರಕ್ಕೆ ಬಂದಿದ್ದೇನೆ. ನನ್ನ ಸಾವಿಗೆ ಬ್ಯಾಂಕ್ ಸಿಬ್ಬಂದಿಗಳೇ ಕಾರಣ. ಲಂಚ ಪಡೆದು ಎಲ್ಲರೂ ಸೇರಿ ಮೋಸ ಮಾಡಿದರು ಎಂದು ವಿಡಿಯೋದಲ್ಲಿ ಮೋಹನ್ ಕಣ್ಣೀರು ಹಾಕುತ್ತಾ ನನಗೆ ನ್ಯಾಯ ಕೊಡಿಸಬೇಕು ಅಂತಾ ಎಂಪಿ ರೇಣುಕಾಚಾರ್ಯ ಅವರಿಗೆ ಮೋಹನ್ ಮನವಿ ಮಾಡಿದ್ದ...

ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿ ಅಂದರ್

Image
 ನಕಲಿ ದಾಖಲೆ ಸೃಷ್ಠಿಸಿ ಬೇರಯವರ ಭೂಮಿ ಮಾರಾಟ ಮಾಡಿದ 80 ವರ್ಷದ ಅಜ್ಜಿಯನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ವಡಗಾಂವ ಗಣೇಶ ಕಾಲೋನಿ ನಿವಾಸಿ ಮಂದಾಕಿನಿ ಪರಿಶವಾಡಕರ ಬಂಧಿತ ಆರೋಪಿ. ಬೇರೊಬ್ಬರ ಹೆಸರಿನಲ್ಲಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನನ್ನು ತನ್ನದೆಂದು ಮಾರಾಟ ಮಾಡಿರುವ ಆರೋಪ ಇವರ ಮೇಲೆ ಇದೆ. ಪ್ರಕರಣದ ಹಿನ್ನೆಲೆ ಕಣಬರ್ಗಿ ರಸ್ತೆಯ ಮಹಾಂತೇಶ ನಗರದಲ್ಲಿರುವ ಪ್ಲಾಟ್ ನಂ.2313 ಹಾಗೂ ಸಿಟಿಎಸ್ ನಂ.9449ರ ಜಾಗ ರತ್ನಾ ಯಶವಂತ ಮಲ್ಲೂಕರ ಅವರ ಹೆಸರಿನಲ್ಲಿತ್ತು. ಈ ಜಾಗವನ್ನು ಅಕ್ರಮವಾಗಿ ಪರಭಾರೆ ಮಾಡುವ ಉದ್ದೇಶದಿಂದ ಮಂದಾಕಿನಿ, ರತ್ನಾ ಅವರಂತೆ ನಟನೆ ಮಾಡಿ ನಕಲಿ ದಾಖಲೆಗಳನ್ನು ಸೃಷ್ಟಿಸಿರುವುದು ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ. 2023ರ ಸೆಪ್ಟೆಂಬರ್ 16ರಂದು ಬೆಳಗಾವಿ ಉತ್ತರ ಉಪನೋಂದಣಾಧಿಕಾರಿ ಕಚೇರಿಗೆ ತೆರಳಿದ್ದ ಆರೋಪಿ, ರತ್ನಾ ಮಲ್ಲೂಕರ ಅವರ ಹೆಸರಿನಲ್ಲಿ ವೆಬ್ ಕ್ಯಾಮೆರಾದಲ್ಲಿ ಫೋಟೊ ತೆಗೆಸಿಕೊಂಡಿದ್ದಲ್ಲದೆ, ಅವರ ಹೆಸರಿನಲ್ಲಿ ಹೆಬ್ಬೆರಳಿನ ಗುರುತು ಹಾಗೂ ಸಹಿ ನೀಡಿ ಜಾಗವನ್ನು ಮತ್ತೊಬ್ಬರಿಗೆ ಸೇಲ್‌ಡೀಡ್ ಮಾಡಿರುವ ಆರೋಪವಿದೆ. ಜಾಗದ ಮಾಲೀಕರಿಗೆ ಈ ವಂಚನೆ ತಿಳಿದುಬಂದ ಬಳಿಕ ರತ್ನಾ ಮಲ್ಲೂಕರ ಅವರು 2025ರ ಫೆಬ್ರವರಿ 4ರಂದು ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಮಂದಾಕಿನಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ...

ಮತದಾರರ ಕರಡು ಪಟ್ಟಿ ಪ್ರಕಟ: ನಿಮ್ಮ ಹೆಸರನ್ನು ಹೀಗೆ ಚೆಕ್ ಮಾಡಿಕೊಳ್ಳಿ

Image
 ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್ಐಆರ್) ಪ್ರಕ್ರಿಯೆ ಮೊದಲ ಹಂತ ಮುಕ್ತಾಯವಾಗಿದ್ದು, ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಲಿದೆ. ರಾಜ್ಯದ ಒಟ್ಟು 5.54 ಕೋಟಿ ಮತದಾರರ ಪೈಕಿ 4.46 ಕೋಟಿ ಮತದಾರರ ಹೆಸರು ಕರಡು ಪಟ್ಟಿಯಲ್ಲಿ ಇರಲಿದೆ. ಸೆ. 23ರವರೆಗೆ ಆಕ್ಷೇಪಣಿ ಸಲ್ಲಿಸಲು ಅವಕಾಶವಿದೆ. ceo.karnataka.gov.in ನಲ್ಲಿ ಕರಡು ಮತದಾರರ ಪಟ್ಟಿ ಲಭ್ಯವಾಗಲಿದೆ. ಎಸ್ಐಆರ್‌ ಗೆ ಮೊದಲು ರಾಜ್ಯದಲ್ಲಿ 5.54 ಕೋಟಿ ಮತದಾರರಿದ್ದರು. ಎಸ್ಐಆರ್ ವೇಳೆ 1.08 ಕೋಟಿ ಜನರನ್ನು ಕರಡು ಮತದಾರರು ಪಟ್ಟಿಗೆ ಸೇರ್ಪಡೆ ಮಾಡಲಾಗಿಲ್ಲ. ಈಗ 4.46 ಕೋಟಿ ಮತದಾರರ ಹೆಸರು ಪ್ರಕಟವಾಗಲಿದೆ. 43.8 ಲಕ್ಷ ಮಂದಿಗೆ ನೋಟಿಸ್ ಬರಲಿದೆ. ಎಸ್ಐಆರ್ ಪ್ರಕ್ರಿಯೆ ವೇಳೆ 1.08 ಕೋಟಿ ಮತದಾರರನ್ನು ಎ.ಎಸ್.ಡಿ.ಡಿ.ಒ. ವರ್ಗಕ್ಕೆ ಸೇರಿಸಲಾಗಿದ್ದು, ಈ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಇರುವುದಿಲ್ಲ. ಉಳಿದ 4.46 ಕೋಟಿ ಮತದಾರರ ಹೆಸರು ಪಟ್ಟಿಯಲ್ಲಿ ಪ್ರಕಟವಾಗಲಿದೆ. ಕರಡು ಮತದಾರರ ಪಟ್ಟಿಯಿಂದ ಹೊರಗೊಳಿಯುವ ಮತದಾರರ ಪೈಕಿ ಗೈರು, ಸ್ಥಳಾಂತರಗೊಂಡ ಮತದಾರರು ನಿಗದಿತ ದಾಖಲೆಗಳೊಂದಿಗೆ ಹೊಸದಾಗಿ ಫಾರ್ಮ್ 6 ಸಲ್ಲಿಕೆ ಮಾಡಬೇಕು. ಇದರೊಂದಿಗೆ ಅಕ್ಟೋಬರ್ 1ಕ್ಕೆ 18 ವರ್ಷ ತುಂಬುವ ಯುವ ಮತದಾರರು ನಿಗದಿತ ದಾಖಲೆಗಳೊಂದಿಗೆ ಫಾರ್ಮ್ 6 ಸಲ್ಲಿಸಿ ಮತದಾರರ ಪಟ್ಟಿಗೆ ಸೇರ್ಪಡೆಯಾಗಬಹುದು.