ನಾಗರತ್ನ ಜೊತೆ ವಿಚ್ಛೇದನದ ಬಳಿಕ ನಟ ದುನಿಯಾ ವಿಜಯ್ ಮೊದಲ ಪೋಸ್ಟ್ ; ಏನಂದ್ರು ಗೊತ್ತಾ..?


 ಬೆಂಗಳೂರು: ನಟ ದುನಿಯಾ ವಿಜಯ್‌ ಹಾಗೂ ನಾಗರತ್ನ ಅವರ ದಾಂಪತ್ಯ ಜೀವನಕ್ಕೆ ನ್ಯಾಯಾಲಯದ ಆದೇಶದ ಮೂಲಕ ತೆರೆ ಬಿದ್ದ ಬೆನ್ನಲ್ಲೇ, ದುನಿಯಾ ವಿಜಯ್‌ ಅವರು ಸಾಮಾಜಿಕ ಜಾಲತಾಣದಲ್ಲಿ ಮೊದಲ ಪೋಸ್ಟ್‌ ಹಂಚಿಕೊಂಡಿದ್ದಾರೆ. ಈ ಪೋಸ್ಟ್‌ನಲ್ಲಿ ಅಭಿಮಾನಿಗಳು, ಮಾಧ್ಯಮ ಮಿತ್ರರು ಹಾಗೂ ತಮ್ಮ ಪರ ನಿಂತವರಿಗೆ ಧನ್ಯವಾದ ಅರ್ಪಿಸಿರುವ ಅವರು, ಮುಂದಿನ ದಿನಗಳಲ್ಲಿ ಈ ವೈಯಕ್ತಿಕ ವಿಚಾರದ ಬಗ್ಗೆ ಸಾರ್ವಜನಿಕವಾಗಿ ಮಾತನಾಡುವುದಿಲ್ಲ ಎಂದು ತಿಳಿಸಿದ್ದಾರೆ.

ದುನಿಯಾ ವಿಜಯ್‌ ಹೇಳಿದ್ದೇನು?

“ಸಮಸ್ತ ಅಭಿಮಾನಿಗಳಲ್ಲಿ ಹಾಗೂ ನನ್ನ ಬದುಕೆಂಬುದಕ್ಕೂ, ಜೊತೆಯಾಗಿ ನಿಂತ ಮಾಧ್ಯಮ ಮಿತ್ರರಲ್ಲಿ ಕಳಕಳಿಯ ಮನವಿ…” ಎಂದು ತಮ್ಮ ಪೋಸ್ಟ್‌ ಆರಂಭಿಸಿರುವ ದುನಿಯಾ ವಿಜಯ್‌, ನ್ಯಾಯಾಲಯದ ಆದೇಶವನ್ನು ಗೌರವದಿಂದ ಸ್ವೀಕರಿಸಿರುವುದಾಗಿ ಹೇಳಿದ್ದಾರೆ.

“ನ್ಯಾಯಾಲಯದ ಆದೇಶಕ್ಕೆ ಶಿರಸಾದುರ್ಗಿ ಪ್ರಣಾಮಗಳನ್ನು ಸಲ್ಲಿಸಿ ಶರಣಾಗಿದ್ದೇನೆ. ಕಾನೂನಿನ ಮೇಲೆ ನನಗೆ ನಂಬಿಕೆ ಮತ್ತು ಗೌರವವಿದೆ. ನನ್ನ ಮೇಲಿನ ಮಾನಸಿಕ ಕ್ರೌರ್ಯವನ್ನು ಪರಿಗಣಿಸಿ, ಮಾನ್ಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಶ್ರೀ ಡಿ.ಕೆ. ಸಿಂಗ್ ಹಾಗೂ ಶ್ರೀ ಶಾಂತಿಭೂಷಣ್ ಅವರ ಆದೇಶಕ್ಕೆ ತಲೆಬಾಗಿದ್ದೇನೆ. ಈ ಆದೇಶಕ್ಕೆ ನನ್ನ ಗೌರವಪೂರ್ವಕ ಧನ್ಯವಾದಗಳು.”ಹಾಗೆಯೇ ತಮ್ಮ ಪರವಾಗಿ ವಾದಿಸಿದ ಕಾನೂನು ತಜ್ಞರು ಹಾಗೂ ವಕೀಲರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ.

Comments