ದಾವಣಗೆರೆಯಲ್ಲಿ ಎರಡು ಗುಂಪಿನ ನಡುವೆ ಮಾರಾಮಾರಿ; ತಲ್ವಾರ್‌ ಹಿಡಿದು ನಡುರಸ್ತೆಯಲ್ಲೇ ಯುವಕರ ಜಗಳ, ಐವರಿಗೆ ಗಂಭೀರ ಗಾಯ..!


 ಯುವಕರು ಪರಸ್ಪರ ಅಟ್ಟಾಡಿಸಿಕೊಂಡು ಹಲ್ಲೆ ನಡೆಸಿದ್ದು, ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ.

ದಾವಣಗೆರೆ: ದಾವಣಗೆರೆಯ ಬಿ.ಡಿ. ಲೇಔಟ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಆರಂಭವಾದ ಗಲಾಟೆ ಏಕಾಏಕಿ ವಿಕೋಪಕ್ಕೆ ತಿರುಗಿದ್ದು, ನಡುರಸ್ತೆಯಲ್ಲೇ ಯುವಕರು ತಲ್ವಾರ್‌ ಹಾಗೂ ದೊಣ್ಣೆ ಹಿಡಿದು ಪರಸ್ಪರ ಹೊಡೆದಾಡಿಕೊಂಡಿದ್ದಾರೆ

ಯುವಕರು ಪರಸ್ಪರ ಅಟ್ಟಾಡಿಸಿಕೊಂಡು ಹಲ್ಲೆ ನಡೆಸಿದ್ದು, ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಘಟನೆಗೆ ಹಳೇ ವೈಷಮ್ಯವೇ ಕಾರಣ ಎನ್ನಲಾಗಿದ್ದು, ದಾವಣಗೆರೆ ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ನಗರದ ಬಿ.ಡಿ. ಲೇಔಟ್‌ ನಿವಾಸಿಗಳಾದ ಮೈನು, ಜುನೇದ್‌, ಇರ್ಫಾನ್‌ ಸೇರಿದಂತೆ ನಾಲ್ವರು ಯುವಕರು ರಸ್ತೆಯಲ್ಲಿ ನಿಂತಿದ್ದ ವೇಳೆ ಮಹಮ್ಮದ್‌ ಸೇರಿದಂತೆ 20ಕ್ಕೂ ಹೆಚ್ಚು ಯುವಕರ ಗುಂಪು ಏಕಾಏಕಿ ದಾಳಿ ನಡೆಸಿದೆ ಎನ್ನಲಾಗಿದೆ.

Comments

Popular posts from this blog

ಚಾರ್ವಿಕ ಟೂರ್ಸ್ ಅಂಡ್ ಟ್ರಾವೆಲ್ಸ್‌ನಿಂದ ಪ್ರಥಮ ವರ್ಷದ ವಾರ್ಷಿಕೋತ್ಸವದ ಧಮಾಕಾ ಆಫರ್; ಕೇವಲ ₹2,100 ರಲ್ಲಿ 4 ವರ್ಷಗಳ ಸುದೀರ್ಘ ಪ್ರವಾಸ ಯೋಜನೆ!

ತಂದೆ-ತಾಯಿಯ 13 ವರ್ಷಗಳ ಕನಸು ನನಸು ಮಾಡಿದ ಮಗ: ಕಟ್ಟಿಗೆಹಳ್ಳಿಯಲ್ಲಿ ಅದ್ದೂರಿ ಗೃಹಪ್ರವೇಶ!

ದಾವಣಗೆರೆ ಕಾರ್ಗಿಲ್​ ಕಾರ್ಖಾನೆಯಲ್ಲಿ ಉತ್ಪಾದನೆ ಸ್ಥಗಿತ: ನ್ಯಾಯಕ್ಕಾಗಿ ಕಾರ್ಮಿಕರು ಹೋರಾಟ