ದಾವಣಗೆರೆ: ಬಿ.ಡಿ. ಲೇಔಟ್‌ನಲ್ಲಿ ತಲ್ವಾರ್‌ ಗಲಾಟೆ ವಿಕೋಪ; ಚಿಕಿತ್ಸೆ ಫಲಕಾರಿಯಾಗದೆ ಯುವಕ ಸಾವು, ಆತಂಕದ ವಾತಾವರಣ


 ದಾವಣಗೆರೆ: ನಗರದ ಬಿ.ಡಿ. ಲೇಔಟ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ನಡೆದ ಭೀಕರ ಮಾರಾಮಾರಿ ಪ್ರಕರಣ ದುರಂತದಲ್ಲಿ ಅಂತ್ಯಗೊಂಡಿದೆ. ನಡುವರಸೆಯಲ್ಲೇ ತಲ್ವಾರ್ ಹಾಗೂ ದೊಣ್ಣೆಗಳಿಂದ ಪರಸ್ಪರ ಅಟ್ಟಾಡಿಸಿ ಹಲ್ಲೆ ನಡೆಸಿದ ಘ್ಚಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೊಹಮ್ಮದ್ ಹುಸ್ಸೇನ್ (ಜೀಶನ್) ಎಂಬ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಘಟನೆಯ ಹಿನ್ನೆಲೆ:

ನಗರದ ಬಿ.ಡಿ. ಲೇಔಟ್ ನಿವಾಸಿಗಳಾದ ಮೈನು, ಜುನೇದ್, ಇರ್ಫಾನ್ ಸೇರಿದಂತೆ ನಾಲ್ವರು ಯುವಕರು ರಸ್ತೆಯಲ್ಲಿ ನಿಂತಿದ್ದ ವೇಳೆ, ಮಹಮ್ಮದ್ ಸೇರಿದಂತೆ 20ಕ್ಕೂ ಹೆಚ್ಚು ಯುವಕರ ಗುಂಪು ಏಕಾಏಕಿ ತಲ್ವಾರ್ ಹಾಗೂ ಮಾರಕಾಸ್ತ್ರಗಳಿಂದ ದಾಳಿ ನಡೆಸಿತ್ತು. ಈ ವೇಳೆ ಎರಡೂ ಗುಂಪುಗಳ ನಡುವೆ ಭಾರಿ ಗಲಾಟೆ ನಡೆದಿದ್ದು, ಐವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದವು.

ತಕ್ಷಣವೇ ಗಾಯಾಳುಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ, ಗಾಯಗೊಂಡಿದ್ದ ಮೊಹಮ್ಮದ್ ಹುಸ್ಸೇನ್ (ಜೀಶನ್) ಅವರು ಚಿಕಿತ್ಸೆ ಸ್ಪಂದಿಸದೆ ನಿನ್ನೆ (ಸೆಪ್ಟೆಂಬರ್ 13) ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಉಳಿದ ಗಾಯಾಳುಗಳಿಗೂ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ.

ಹಳೆ ವೈಷಮ್ಯವೇ ಕಾರಣ?:

ಈ ಮಾರಾಮಾರಿಗೆ ಹಳೆ ವೈಷಮ್ಯವೇ ಪ್ರಮುಖ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಈ ಘಟನೆಯಿಂದಾಗಿ ದಾವಣಗೆರೆ ನಗರದಲ್ಲಿ ಒಂದು ರೀತಿಯ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ ನೆಲೆಸಿದೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿರುವ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಪರಿಶೀಲನೆ ನಡೆಸಿದ್ದು, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Comments

Popular posts from this blog

ಚಾರ್ವಿಕ ಟೂರ್ಸ್ ಅಂಡ್ ಟ್ರಾವೆಲ್ಸ್‌ನಿಂದ ಪ್ರಥಮ ವರ್ಷದ ವಾರ್ಷಿಕೋತ್ಸವದ ಧಮಾಕಾ ಆಫರ್; ಕೇವಲ ₹2,100 ರಲ್ಲಿ 4 ವರ್ಷಗಳ ಸುದೀರ್ಘ ಪ್ರವಾಸ ಯೋಜನೆ!

ತಂದೆ-ತಾಯಿಯ 13 ವರ್ಷಗಳ ಕನಸು ನನಸು ಮಾಡಿದ ಮಗ: ಕಟ್ಟಿಗೆಹಳ್ಳಿಯಲ್ಲಿ ಅದ್ದೂರಿ ಗೃಹಪ್ರವೇಶ!

ದಾವಣಗೆರೆ ಕಾರ್ಗಿಲ್​ ಕಾರ್ಖಾನೆಯಲ್ಲಿ ಉತ್ಪಾದನೆ ಸ್ಥಗಿತ: ನ್ಯಾಯಕ್ಕಾಗಿ ಕಾರ್ಮಿಕರು ಹೋರಾಟ