ಏಳು ದಿನ ಪೂರೈಸಿದ ಬಳ್ಳಾರಿ ಪಾದಯಾತ್ರೆ: ಕೇಸರಿ ಪಡೆಯಲ್ಲಿ ರಣೋತ್ಸಾಹ


 ರೈತರ ಜೀವನಾಡಿ ತುಂಗಭದ್ರಾ ಜಲಾಶಯ ಭರ್ತಿಯಾದರೂ ಈ ಭಾಗದ ರೈತರಿಗೆ ಸಮಪರ್ಕವಾಗಿ ನೀರು ಕೊಡುವಲ್ಲಿ ಸ್ಥಳೀಯ ಶಾಸಕ ಸೇರಿದಂತೆ ರಾಜ್ಯ ಸರಕಾರ ವಿಫಲವಾಗಿದೆ. ರೈತರು ಮತ್ತು ಜನರು ಸಂಕಷ್ಟದಲ್ಲಿದ್ದರೂ ಸಿಎಂ ಡಿಕೆಶಿ ಬೆಂಗಳೂರು ರಿಯಲ್ ಎಸ್ಟೇಟ್ ಅಪ್ಪಿಕೊಂಡು ಕೂತಿದ್ದಾರೆ. ಬಡವರ ಬಿಪಿಎಲ್ ಕಾರ್ಡ್ ಕಿತ್ತುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಬಳ್ಳಾರಿ: ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ರಾಜ್ಯ ಬಿಜೆಪಿ ಕೈಗೊಂಡಿರುವ ಬಳ್ಳಾರಿ ಚಲೋ ಪಾದಯಾತ್ರೆ 7ನೇ ದಿನ ಪೂರೈಸಿದ್ದು ಸೋಮವಾರ ಕಂಪ್ಲಿ ತಾಲೂಕಿನ ದೇವಲಾಪುರ ತಲುಪಿದೆ. ಗಣಿನಾಡು ಬಳ್ಳಾರಿ ಜಿಲ್ಲೆಗೆ ಪಾದಯಾತ್ರೆ ಪ್ರವೇಶಿಸುತ್ತಿದ್ದಂತೆ ಕೇಸರಿ ಪಡೆಯ ರಣೋತ್ಸಾಹ ಮತ್ತಷ್ಟು ಹೆಚ್ಚಾಗಿದೆ. ಕಂಪ್ಲಿ ಪಟ್ಟಣಕ್ಕೆ ಭಾನುವಾರ ಆಗಮಿಸಿದ ಪಾದಯಾತ್ರೆ 7 ದಿನವಾದ ಸೋಮವಾರ ಬೆಳಗ್ಗೆ ಕಂಪ್ಲಿ ಪಟ್ಟದ ಅಂಬೇಡ್ಕರ್ ವೃತ್ತದಿಂದ ಆರಂಭವಾದ ಪಾದಯಾತ್ರೆ ದೇವಸಮುದ್ರ ಕ್ರಾಸ್ ಮೂಲಕ ಮೆಟ್ರಿ ಗ್ರಾಮದ ಮಾರ್ಗವಾಗಿ ದೇವಲಾಪುರಕ್ಕೆ ತಲುಪಿದ್ದು ಸರಿ ಸುಮಾರು 20 ಕಿಮೀ ಪಾದ ಯಾತ್ರೆಯಲ್ಲಿ ಕ್ರಮಿಸಿದ ಮುಖಂಡರು, ಕಾರ್ಯಕರ್ತರಿಗೆ ಗ್ರಾಮ ಗಳಲ್ಲಿ ಜನರು ಸ್ವಾಗತಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ನೇತೃತ್ವದಲ್ಲಿ ಕಂಪ್ಲಿ ವಿಧಾನಸಭೆ ಕ್ಷೇತ್ರದ ಕಂಪ್ಲಿ ಪಟ್ಟಣ ದಿಂದ ಆರಂಭವಾದ 7ನೇ ದಿನದ ಪಾದ ಯಾತ್ರೆ, ಇಡೀ ದಿನ ಕಂಪ್ಲಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿ ಯಲ್ಲಿ ಮುಂದುವರಿಯಿತು.ಸಂಜೆ ಕಂಪ್ಲಿ ಕ್ಷೇತ್ರದ ದರೋಜಿ ಗ್ರಾಮದಲ್ಲಿ ಸಮಾರೋಪಗೊಂಡಿತು.

ಶಾಸಕರಾದ ಸಿ.ಟಿ ರವಿ, ಬಿ ಶ್ರೀರಾಮುಲು. ಹರೀಶ್ ಪೂಂಜ, ಶ್ರೀವತ್ಸ , ಸಂಸದ ತೇಜಸ್ವಿ ಸೂರ್ಯ, ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವು ಬಿಜೆಪಿ ನಾಯಕರು ಹಾಗೂ ಸಹಸ್ರಾರು ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದರು. ಪಾದಯಾತ್ರೆಯಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ, ಗ್ಯಾರಂಟಿ ಪ್ರಚಾರದ ರಾಜ್ಯದ ಕಾಂಗ್ರೆಸ್ ಸರಕಾರ ಕಾಲಹರಣ ಮಾಡುತ್ತಿದ್ದು, ಇದರಿಂದ ರೈತ ಮತ್ತು ಜನ ಸಾಮಾನ್ಯರ ಬದುಕಿಗೆ ಕಂಟಕವಾಗಿದೆ ಎಂದರು.

ರೈತರ ಜೀವನಾಡಿ ತುಂಗಭದ್ರಾ ಜಲಾಶಯ ಭರ್ತಿಯಾದರೂ ಈ ಭಾಗದ ರೈತರಿಗೆ ಸಮಪರ್ಕವಾಗಿ ನೀರು ಕೊಡುವಲ್ಲಿ ಸ್ಥಳೀಯ ಶಾಸಕ ಸೇರಿದಂತೆ ರಾಜ್ಯ ಸರಕಾರ ವಿಫಲವಾಗಿದೆ. ರೈತರು ಮತ್ತು ಜನರು ಸಂಕಷ್ಟದಲ್ಲಿದ್ದರೂ ಸಿಎಂ ಡಿಕೆಶಿ ಬೆಂಗಳೂರು ರಿಯಲ್ ಎಸ್ಟೇಟ್ ಅಪ್ಪಿಕೊಂಡು ಕೂತಿದ್ದಾರೆ. ಬಡವರ ಬಿಪಿಎಲ್ ಕಾರ್ಡ್ ಕಿತ್ತುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ತೆರೆದ ವಾಹನದಲ್ಲಿ ಗಂಡುಗಲಿ ಕುಮಾರ ರಾಮನ ಕೋಟೆ ಮೂಲಕ ಸಾಗಿದ ಬಿಜೆಪಿ ನಾಯಕರು ಜೋಗಿ ಕಾಲುವೆ, ಹಳೇ ಪೊಲೀಸ್ ಠಾಣೆ, ನಡುವಲ ಮಸೀದಿ, ಡಾ.ರಾಜಕುಮಾರ ರಸ್ತೆ, ಮಾರೆಮ್ಮ ಗುಡಿ ಮಾರ್ಗವಾಗಿ ಅಂಬೇಡ್ಕರ್ ವೃತ್ತದಲ್ಲಿ ಸಮಾವೇಶಗೊಂಡು ಬೃಹತ್ ಬಹಿರಂಗ ಸಭೆ ನಡೆಸಿದರು. ಕಂಪ್ಲಿ ಪಟ್ಟಣದ ವೀರಶೈವ ಸಂಘದಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಸನ್ಮಾನಿಸ ಲಾಯಿತು. ಸಂಘದ ಕಚೇರಿಗೆ ಬರಮಾಡಿಕೊಂಡ ಸಂಘದ ಪದಾಧಿಕಾರಿಗಳು, ಸದಸ್ಯರು, ಅಭಿಮಾನಿಗಳು ಶಾಲುಹೊದಿಸಿ, ಹಾರ ಹಾಕಿದ ಆತ್ಮೀಯವಾಗಿ ಗೌರವಿಸಿದರು.

ಪಾದಯಾತ್ರೆ ಹಿನ್ನಲೆ ಕಂಪ್ಲಿಗೆ ಕ್ಷೇತ್ರ ಸೇರಿದಂತೆ ನಾನಾ ಕಡೆಗಳಲ್ಲಿ ಜನಸಾಗರವೇ ಹರಿದು ಬಂದಿತು. ಮುಖಂಡರು, ಕಾರ್ಯಕರ್ತರು, ಜನರು ಪಾಲ್ಗೊಂಡು ಪಾದಯಾತ್ರೆಗೆ ಉತ್ಸಾಹ ನೀಡಿದರು. ಹಗಲು ವೇಷ, ಕಹಳೆ ವಾದ್ಯ, ತಾಷಾರಾಂಡೋಲ್ ಸೇರಿದಂತೆ ವಿವಿಧ ಕಲಾ ಪ್ರಕಾರ ಗಳೊಂದಿಗೆ ಭವ್ಯ ಸ್ವಾಗತ ಕೋರಲಾಯಿತು

Comments

Popular posts from this blog

ಚಾರ್ವಿಕ ಟೂರ್ಸ್ ಅಂಡ್ ಟ್ರಾವೆಲ್ಸ್‌ನಿಂದ ಪ್ರಥಮ ವರ್ಷದ ವಾರ್ಷಿಕೋತ್ಸವದ ಧಮಾಕಾ ಆಫರ್; ಕೇವಲ ₹2,100 ರಲ್ಲಿ 4 ವರ್ಷಗಳ ಸುದೀರ್ಘ ಪ್ರವಾಸ ಯೋಜನೆ!

ದಾವಣಗೆರೆ ಕಾರ್ಗಿಲ್​ ಕಾರ್ಖಾನೆಯಲ್ಲಿ ಉತ್ಪಾದನೆ ಸ್ಥಗಿತ: ನ್ಯಾಯಕ್ಕಾಗಿ ಕಾರ್ಮಿಕರು ಹೋರಾಟ

ತಂದೆ-ತಾಯಿಯ 13 ವರ್ಷಗಳ ಕನಸು ನನಸು ಮಾಡಿದ ಮಗ: ಕಟ್ಟಿಗೆಹಳ್ಳಿಯಲ್ಲಿ ಅದ್ದೂರಿ ಗೃಹಪ್ರವೇಶ!