ವರ್ಗಾವಣೆಗೊಂಡ ಹು-ಧಾ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರಿಗೆ ಸಿಬ್ಬಂದಿಯಿಂದ ಭಾವನಾತ್ಮಕ ಬೀಳ್ಕೊಡುಗೆ


 ವರ್ಗಾವಣೆಗೊಂಡ ಹು-ಧಾ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರಿಗೆ ಸಿಬ್ಬಂದಿಯಿಂದ ಭಾವನಾತ್ಮಕ ಬೀಳ್ಕೊಡುಗೆ

ಹುಬ್ಬಳ್ಳಿ: ವರ್ಗಾವಣೆಗೊಂಡ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರಿಗೆ ಪೊಲೀಸ್ ಸಿಬ್ಬಂದಿ ಭಾವನಾತ್ಮಕವಾಗಿ ಬೀಳ್ಕೊಡುಗೆ ನೀಡಿದರು.

ನಗರದ ನವನಗರದಲ್ಲಿರುವ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಪೊಲೀಸ್ ಆಯುಕ್ತರಾಗಿ ಭೂಷಣ್ ಬೊರಸೆ ಅವರು ಅಧಿಕಾರ ಸ್ವೀಕರಿಸಿದರು. ಈ ವೇಳೆ ಎನ್. ಶಶಿಕುಮಾರ್ ಅವರು ನೂತನ ಆಯುಕ್ತರಿಗೆ ಅಧಿಕಾರ ಹಸ್ತಾಂತರಿಸಿದರು.

ಸುಮಾರು ಎರಡು ವರ್ಷ ಎರಡು ತಿಂಗಳ ಕಾಲ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದ ಎನ್. ಶಶಿಕುಮಾರ್ ಅವರನ್ನು ಸಿಬ್ಬಂದಿ ಗೌರವಪೂರ್ವಕವಾಗಿ ಬೀಳ್ಕೊಟ್ಟರು.

ಕಮಿಷನರ್ ಕಚೇರಿಯಿಂದ ಹೊರಡುವ ಸಂದರ್ಭದಲ್ಲಿ ಸಿಬ್ಬಂದಿ ಎನ್. ಶಶಿಕುಮಾರ್ ಅವರ ಮೇಲೆ ಪುಷ್ಪವೃಷ್ಟಿ ಮಾಡಿ ಗೌರವ ಸಲ್ಲಿಸಿದರು. ಈ ವೇಳೆ ಸಿಬ್ಬಂದಿ ಅವರ ಪರವಾಗಿ ಜೈಕಾರ ಕೂಗಿ, ಆತ್ಮೀಯವಾಗಿ ಬೀಳ್ಕೊಟ್ಟರು

Comments

Popular posts from this blog

ಚಾರ್ವಿಕ ಟೂರ್ಸ್ ಅಂಡ್ ಟ್ರಾವೆಲ್ಸ್‌ನಿಂದ ಪ್ರಥಮ ವರ್ಷದ ವಾರ್ಷಿಕೋತ್ಸವದ ಧಮಾಕಾ ಆಫರ್; ಕೇವಲ ₹2,100 ರಲ್ಲಿ 4 ವರ್ಷಗಳ ಸುದೀರ್ಘ ಪ್ರವಾಸ ಯೋಜನೆ!

ತಂದೆ-ತಾಯಿಯ 13 ವರ್ಷಗಳ ಕನಸು ನನಸು ಮಾಡಿದ ಮಗ: ಕಟ್ಟಿಗೆಹಳ್ಳಿಯಲ್ಲಿ ಅದ್ದೂರಿ ಗೃಹಪ್ರವೇಶ!

ದಾವಣಗೆರೆ ಕಾರ್ಗಿಲ್​ ಕಾರ್ಖಾನೆಯಲ್ಲಿ ಉತ್ಪಾದನೆ ಸ್ಥಗಿತ: ನ್ಯಾಯಕ್ಕಾಗಿ ಕಾರ್ಮಿಕರು ಹೋರಾಟ