Posts

Showing posts from October, 2026

ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯ ಕೆ.ಎಂ. ಸುರೇಶ್‌ಗೆ ಭರ್ಜರಿ ಜಯ: 23,098 ಮತಗಳ ಅಂತರದಿಂದ ಕಾಂಗ್ರೆಸ್‌ಗೆ ಮುಖಭಂಗ!

Image
 ದಾವಣಗೆರೆ: ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಕೆ.ಎಂ. ಸುರೇಶ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ತೀವ್ರ ಕುತೂಹಲ ಕೆರಳಿಸಿದ್ದ ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ ಅವರನ್ನು ಬರೋಬ್ಬರಿ 23,098 ಮತಗಳ ಬೃಹತ್ ಅಂತರದಿಂದ ಪರಾಭವಗೊಳಿಸಿ ಮೊದಲ ಬಾರಿಗೆ ವಿಧಾನ ಪರಿಷತ್ ಪ್ರವೇಶಿಸಿದ್ದಾರೆ.    ಮತಗಳ ಲೆಕ್ಕಾಚಾರ: ಕೆ.ಎಂ. ಸುರೇಶ್ (ಬಿಜೆಪಿ): 66,020 ಮತಗಳು    ಶಶಿ ಹುಲಿಕುಂಟೆಮಠ (ಕಾಂಗ್ರೆಸ್): 42,922 ಮತಗಳು    ಗೆಲುವಿನ ಅಂತರ: 23,098 ಮತಗಳು    20 ಸಾವಿರಕ್ಕೂ ಹೆಚ್ಚು ಪದವೀಧರರ ಮತಗಳು ತಿರಸ್ಕೃತ! ಈ ಬಾರಿಯ ಚುನಾವಣೆಯಲ್ಲಿ ಒಟ್ಟು ಚಲಾವಣೆಯಾದ 1,32,138 ಮತಗಳಲ್ಲಿ ಸರಿಯಾಗಿ ಆದ್ಯತೆ ನಮೂದಿಸದ ಕಾರಣ ಬರೋಬ್ಬರಿ 20,076 ಮತಗಳು ಅಸಿಂಧುಗೊಂಡು (ತಿರಸ್ಕೃತ) ಹೊರಬಿದ್ದಿರುವುದು ವಿಶೇಷ.    2028ರ ಚುನಾವಣೆಗೆ ಇದು ದಿಕ್ಸೂಚಿ: ತಮ್ಮ ಭರ್ಜರಿ ಗೆಲುವಿನ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕೆ.ಎಂ. ಸುರೇಶ್, "ಈ ಗೆಲುವನ್ನು ಬಿಜೆಪಿಯ ಸಾಮಾನ್ಯ ಕಾರ್ಯಕರ್ತರಿಗೆ ಅರ್ಪಿಸುತ್ತೇನೆ. ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಪದವೀಧರರು ನೀಡಿದ ತೀರ್ಪು ಇದಾಗಿದ್ದು, 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರಲು ...

ಗಡಿಯಲ್ಲಿ ಚೀನಾ ಕ್ಯಾತೆ: ITBP ಮಹಾನಿರ್ದೇಶಕರ ಹೇಳಿಕೆ ತೀವ್ರ ಆತಂಕಕಾರಿ: ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

Image
 ನವದೆಹಲಿ: ಅರುಣಾಚಲ ಪ್ರದೇಶದಲ್ಲಿ ಭಾರತೀಯ ಮತ್ತು ಚೀನಾ ಸೇನೆಗಳ ನಡುವೆ ನಿರಂತರ ಮುಖಾಮುಖಿ ನಡೆಯುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಶುಕ್ರವಾರ ತೀವ್ರ ವಾಗ್ದಾಳಿ ನಡೆಸಿದೆ. ಗಡಿ ಭದ್ರತೆ, ಚೀನಾದೊಂದಿಗಿನ ರಾಜತಾಂತ್ರಿಕ ಸಂಬಂಧ ಹಾಗೂ ರಾಷ್ಟ್ರೀಯ ಹಿತಾಸಕ್ತಿಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಉತ್ತರ ನೀಡಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಮಹಾನಿರ್ದೇಶಕ ಶತ್ರುಜೀತ್ ಕಪೂರ್ ಅವರು ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಜೊತೆಗಿನ ಇತ್ತೀಚಿನ ಮುಖಾಮುಖಿಗಳ ಕುರಿತು ನೀಡಿರುವ ಹೇಳಿಕೆಗಳು ಈ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿವೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಚೀನಾಕ್ಕೆ ಈಗಾಗಲೇ ಹಲವು ಬಾರಿ ಕ್ಲೀನ್ ಚಿಟ್ ನೀಡಲಾಗಿದೆ ಎಂದು ಆರೋಪಿಸಿದ್ದಾರೆ. ಗಡಿ ಪರಿಸ್ಥಿತಿಯ ಕುರಿತು ಸರ್ಕಾರ ಹೊಣೆಗಾರಿಕೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ಸ್ಟಿಂಗ್ ಆಪರೇಷನ್ʼ ಮಂಗಳೂರಿನ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಮಾಡಿರುವುದು : ಸಿದ್ದರಾಮಯ್ಯ

Image
 ಮೈಸೂರು : ಸ್ಟಿಂಗ್ ಆಪರೇಷನ್ ಎನ್ನುವುದು ಸುಳ್ಳು, ಇದೊಂದು ಕಟ್ಟುಕಥೆ, ನನ್ನನ್ನು ಬ್ಲ್ಯಾಕ್‌ಮೇಲ್ ಮಾಡಲು ಹೀಗೆ ಮಾಡಲಾಗಿದೆ. ಹಾಗಾಗಿ ಸತ್ಯ ಹೊರಗಡೆ ಬರಲಿ ಎಂದು ನಾನೇ ಖುದ್ದು ಪೊಲೀಸರಿಗೆ ದೂರು ನೀಡಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ನಗರದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಶುಕ್ರವಾರ ತಮ್ಮ ಪುತ್ರ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಜೊತೆಗೆ ಆಗಮಿಸಿದ ಅವರು ಸುತ್ತೂರು ಶ್ರಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಕೆಲ ಸಮಯ ಮಾತುಕತೆ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಂಗಳೂರಿನ ಕೃಪಾ ಆಳ್ವಾ ಮತ್ತು ರಾಕೇಶ್ ಶೆಟ್ಟಿ ಜೊತೆ ಮಾತನಾಡಿರುವ ವೀಡಿಯೋ ವೈರಲ್ ಮಾಡಲಾಗಿದೆ. ರಾಕೇಶ್ ಶೆಟ್ಟಿ ಸ್ಟಿಂಗ್ ಮಾಡಿದ್ದೇನೆ ಎಂದು ಒಪ್ಪಿಕೊಂಡಿದ್ದಾರೆ.‌ ಹಾಗಾಗಿ ಇದರಲ್ಲಿ ಸತ್ಯಾಂಶ ಇಲ್ಲ ಎಂದರು. ಸ್ಟಿಂಗ್ ಆಪರೇಷನ್ ಎನ್ನುವುದು ಸುಳ್ಳು, ನನ್ನನ್ನು ಬ್ಲ್ಯಾಕ್‌ಮೇಲ್ ಮಾಡಲು ಹೀಗೆ ಮಾಡಲಾಗಿದೆ. ಇದರ ಹಿಂದೆ ಯಾರಿದ್ದಾರೆ ಎಂಬುದು ಜನರಿಗೆ ಗೊತ್ತಾಗಬೇಕು. ಇದು ಸುಳ್ಳು ಕೇಸು ಎಂಬುದು ಗೊತ್ತಾಗಲಿ ಎಂದು ನಾನೇ ದೂರು ನೀಡಿದ್ದೇನೆ. ಇದು ಹೆಚ್ಚು ಪ್ರಚಾರ ಆಗಬಾರದು ಎಂದು ಸಿವಿಲ್ ನ್ಯಾಯಾಲಯಕ್ಕೆ ಹೋಗಿ ತಡೆ ತಂದಿದ್ದೇನೆ ಎಂದು ಹೇಳಿದರು. ನಾನು ಎಂಟು ವರ್ಷ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ್ದೇನೆ. ಆವಾಗ ಈ ರೀತಿ ಯಾವುದನ್ನು ಮಾಡಲಿಲ್ಲ, ಈಗ ಈ...

SIR ವಿವಾದ: ಚುನಾವಣಾ ಆಯೋಗ, ಜ್ಞಾನೇಶ್ ಕುಮಾರ್ಗೆ ಸುಪ್ರೀಂ ಕೋರ್ಟ್ ನೋಟಿಸ್; ರಾಹುಲ್ ಗಾಂಧಿಗೂ ತರಾಟೆ

Image
 ಸಿಜೆಐ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠ, ಚುನಾವಣಾ ಆಯೋಗ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಮತ್ತು ಚುನಾವಣಾ ಆಯುಕ್ತರಾದ ಸುಖಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರಿಂದ ಪ್ರತಿಕ್ರಿಯೆ ಕೇಳಿದೆ. ನವದೆಹಲಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್)ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗುರುವಾರ ಕೇಂದ್ರ ಚುನಾವಣಾ ಆಯೋಗ(ಇಸಿಐ) ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿದೆ. ಎಸ್ಐಆರ್ ವೇಳೆ ದೊಡ್ಡ ಪ್ರಮಾಣದ ಮತದಾರರನ್ನು ಡಿಲೀಟ್ ಮಾಡಲಾಗುತ್ತಿದೆ ಮತ್ತು ಪ್ರಕ್ರಿಯೆಯಲ್ಲಿ ಅಕ್ರಮ ನಡೆಯುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಇತರ ವಿರೋಧ ಪಕ್ಷದ ನಾಯಕರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಚುನಾವಣಾ ಆಯೋಗ ಮತ್ತು ಇತರರಿಗೆ ನೋಟಿಸ್ ನೀಡಿದೆ. ಸಿಜೆಐ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠ, ಚುನಾವಣಾ ಆಯೋಗ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಮತ್ತು ಚುನಾವಣಾ ಆಯುಕ್ತರಾದ ಸುಖಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರಿಂದ ಪ್ರತಿಕ್ರಿಯೆ ಕೇಳಿದೆ.

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

Image
 ಪಣಜಿ ಸಮೀಪದ ಡೋನಾ ಪೌಲಾದಲ್ಲಿರುವ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ 75 ವರ್ಷದ ನಟ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು, ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಖ್ಯಾತ ಬಾಲಿವುಡ್ ನಟ ನಾನಾ ಪಾಟೇಕರ್ ಇಂದು ಗುರುವಾರ ಮುಂಜಾನೆ ಗೋವಾದಲ್ಲಿ ಹೃದಯಾಘಾತದಿಂದ ನಿಧನರಾದರು ಎಂದು ಪಿಟಿಐ ವರದಿ ಮಾಡಿದೆ. ಪಣಜಿ ಸಮೀಪದ ಡೋನಾ ಪೌಲಾದಲ್ಲಿರುವ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ 75 ವರ್ಷದ ನಟ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು, ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು. 45 ನಿಮಿಷಗಳ ನಿರಂತರ ಸಿಪಿಆರ್ (CPR) ನೀಡಿದರೂ ಪಾಟೇಕರ್ ಅವರನ್ನು ಬದುಕಿಸಲು ಸಾಧ್ಯವಾಗಲಿಲ್ಲ. ಇಂದು ನಸುಕಿನ ಜಾವ 5:10ರ ಸುಮಾರಿಗೆ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು ಎಂದು ಪಿಟಿಐ ತಿಳಿಸಿದೆ.