ಸ್ಟಿಂಗ್ ಆಪರೇಷನ್ʼ ಮಂಗಳೂರಿನ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಮಾಡಿರುವುದು : ಸಿದ್ದರಾಮಯ್ಯ


 ಮೈಸೂರು : ಸ್ಟಿಂಗ್ ಆಪರೇಷನ್ ಎನ್ನುವುದು ಸುಳ್ಳು, ಇದೊಂದು ಕಟ್ಟುಕಥೆ, ನನ್ನನ್ನು ಬ್ಲ್ಯಾಕ್‌ಮೇಲ್ ಮಾಡಲು ಹೀಗೆ ಮಾಡಲಾಗಿದೆ. ಹಾಗಾಗಿ ಸತ್ಯ ಹೊರಗಡೆ ಬರಲಿ ಎಂದು ನಾನೇ ಖುದ್ದು ಪೊಲೀಸರಿಗೆ ದೂರು ನೀಡಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

ನಗರದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಶುಕ್ರವಾರ ತಮ್ಮ ಪುತ್ರ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಜೊತೆಗೆ ಆಗಮಿಸಿದ ಅವರು ಸುತ್ತೂರು ಶ್ರಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಕೆಲ ಸಮಯ ಮಾತುಕತೆ ನಡೆಸಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಂಗಳೂರಿನ ಕೃಪಾ ಆಳ್ವಾ ಮತ್ತು ರಾಕೇಶ್ ಶೆಟ್ಟಿ ಜೊತೆ ಮಾತನಾಡಿರುವ ವೀಡಿಯೋ ವೈರಲ್ ಮಾಡಲಾಗಿದೆ. ರಾಕೇಶ್ ಶೆಟ್ಟಿ ಸ್ಟಿಂಗ್ ಮಾಡಿದ್ದೇನೆ ಎಂದು ಒಪ್ಪಿಕೊಂಡಿದ್ದಾರೆ.‌ ಹಾಗಾಗಿ ಇದರಲ್ಲಿ ಸತ್ಯಾಂಶ ಇಲ್ಲ ಎಂದರು.

ಸ್ಟಿಂಗ್ ಆಪರೇಷನ್ ಎನ್ನುವುದು ಸುಳ್ಳು, ನನ್ನನ್ನು ಬ್ಲ್ಯಾಕ್‌ಮೇಲ್ ಮಾಡಲು ಹೀಗೆ ಮಾಡಲಾಗಿದೆ. ಇದರ ಹಿಂದೆ ಯಾರಿದ್ದಾರೆ ಎಂಬುದು ಜನರಿಗೆ ಗೊತ್ತಾಗಬೇಕು. ಇದು ಸುಳ್ಳು ಕೇಸು ಎಂಬುದು ಗೊತ್ತಾಗಲಿ ಎಂದು ನಾನೇ ದೂರು ನೀಡಿದ್ದೇನೆ. ಇದು ಹೆಚ್ಚು ಪ್ರಚಾರ ಆಗಬಾರದು ಎಂದು ಸಿವಿಲ್ ನ್ಯಾಯಾಲಯಕ್ಕೆ ಹೋಗಿ ತಡೆ ತಂದಿದ್ದೇನೆ ಎಂದು ಹೇಳಿದರು.

ನಾನು ಎಂಟು ವರ್ಷ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ್ದೇನೆ. ಆವಾಗ ಈ ರೀತಿ ಯಾವುದನ್ನು ಮಾಡಲಿಲ್ಲ, ಈಗ ಈ ರೀತಿ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು.

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನಿಮ್ಮ ಪರವಾಗಿ ಮಾತನಾಡುತ್ತಿದ್ದಾರಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ಧರಾಮಯ್ಯ, ನನ್ನ ಪರ ಯಾರೂ ನಿಲ್ಲಬೇಕಿಲ್ಲ, ರಾಜ್ಯದ ಜನರ ಸತ್ಯಾಂಶ ಗೊತ್ತಾಗಬೇಕು, ಇದು ಸುಳ್ಳು ಕೇಸ್ ಎಂಬುದು ಗೊತ್ತಾಗಬೇಕು ಎಂದು ತಿಳಿಸಿದರು.

ನನ್ನ ವ್ಯಕ್ತಿತ್ವಕ್ಕೆ ಮಸಿ ಬಳಿಬೇಕು ಎಂದು ಯಾರೇ ಪ್ರಯತ್ನ ಪಟ್ಟರೂ ರಾಜ್ಯದ ಜನ ನಂಬಲ್ಲ, ಈಗಾಗಲೇ ತನಿಖೆ ನಡೆಯುತ್ತಿದೆ. ನಿಷ್ಪಕ್ಷ ತನಿಖೆಯಾಗಬೇಕು ಎಂದು ಒತ್ತಾಯ ಮಾಡುತ್ತೇನೆ. ಉನ್ನತಮಟ್ಟದ ತನಿಖೆ ಆಗತ್ಯವಿಲ್ಲ ಎಂದರು.

ಸ್ಟಿಂಗ್ ಆಪರೇಷನ್ ಹಿಂದೆ ನಮ್ಮ ಪಕ್ಷದವರು ಇದ್ದಾರಾ, ಬೇರೆ ಪಕ್ಷದವರು ಇದ್ದಾರಾ ಎಂಬುದು ತನಿಖೆಯಿಂದಷ್ಟೇ ಗೊತ್ತಾಗಬೇಕು. ತನಿಖೆ ನಡೆಯುತ್ತಿದೆ ಸತ್ಯ ಆದಷ್ಟು ಬೇಗ ಹೊರಬರಲಿದೆ ಎಂದು ಹೇಳಿದರು.

Comments

Popular posts from this blog

ದಾವಣಗೆರೆಯಲ್ಲಿ ವಿಜೃಂಭಣೆಯಿಂದ ನಡೆದ ಅಂತರರಾಷ್ಟ್ರೀಯ ಸಂಕೇತ ಭಾಷಾ ದಿನ ಹಾಗೂ ಕಿವುಡರ ಸಪ್ತಾಹ ಕಾರ್ಯಕ್ರಮ

ಚಾರ್ವಿಕ ಟೂರ್ಸ್ ಅಂಡ್ ಟ್ರಾವೆಲ್ಸ್‌ನಿಂದ ಪ್ರಥಮ ವರ್ಷದ ವಾರ್ಷಿಕೋತ್ಸವದ ಧಮಾಕಾ ಆಫರ್; ಕೇವಲ ₹2,100 ರಲ್ಲಿ 4 ವರ್ಷಗಳ ಸುದೀರ್ಘ ಪ್ರವಾಸ ಯೋಜನೆ!

ದಾವಣಗೆರೆ ಕಾರ್ಗಿಲ್​ ಕಾರ್ಖಾನೆಯಲ್ಲಿ ಉತ್ಪಾದನೆ ಸ್ಥಗಿತ: ನ್ಯಾಯಕ್ಕಾಗಿ ಕಾರ್ಮಿಕರು ಹೋರಾಟ