Posts

ದಾವಣಗೆರೆ: ಚಿಗಟೇರಿ ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ಸ್ಫೋಟ; ಭಾರೀ ಅನಾಹುತ ತಪ್ಪಿತು

Image
 ದಾವಣಗೆರೆ: ನಗರದ ಚಿಗಟೇರಿ ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ಅಳವಡಿಸಲಾಗಿದ್ದ ಅನೆಸ್ಥೆಸಿಯಾ ವರ್ಕ್‌ಸ್ಟೇಷನ್‌ನಲ್ಲಿ ಮಂಗಳವಾರ ಸಂಭವಿಸಿದ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿರುವ ಘಟನೆ ನಡೆದಿದೆ. ಘಟನೆಯ ವಿವರ: ಆಸ್ಪತ್ರೆಯ ಆಪರೇಷನ್ ಥಿಯೇಟರ್-5 ಮತ್ತು 6ರ ಕಣ್ಣಿನ ಶಸ್ತ್ರಚಿಕಿತ್ಸಾ ವಿಭಾಗದಲ್ಲಿ ರೋಗಿಯೊಬ್ಬರಿಗೆ ಶಸ್ತ್ರಚಿಕಿತ್ಸೆ ನಡೆಸಲು ಸಿದ್ಧತೆ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಅನೆಸ್ಥೆಸಿಯಾ ವರ್ಕ್‌ಸ್ಟೇಷನ್‌ನಲ್ಲಿ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ. ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ: ಘಟನೆ ನಡೆದ ಸಮಯದಲ್ಲಿ 10ಕ್ಕೂ ಹೆಚ್ಚು ಸಿಬ್ಬಂದಿ ಕರ್ತವ್ಯದಲ್ಲಿದ್ದರು. ಸಿಬ್ಬಂದಿಯ ಸಮಯಪ್ರಜ್ಞೆಯಿಂದಾಗಿ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ತಪ್ಪಿದೆ. ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ. ಹಾನಿಗೊಳಗಾದ ಉಪಕರಣಗಳು: ಸ್ಫೋಟದ ಪರಿಣಾಮವಾಗಿ ಆಪರೇಷನ್ ಥಿಯೇಟರ್‌ನಲ್ಲಿದ್ದ ಅನೆಸ್ಥೆಸಿಯಾ ಯಂತ್ರ ಸೇರಿದಂತೆ ಹಲವು ವೈದ್ಯಕೀಯ ಉಪಕರಣಗಳು ಬೆಂಕಿಗಾಹುತಿಯಾಗಿವೆ. ಘಟನೆಯ ನಂತರ ಆಸ್ಪತ್ರೆಯ ಸಿಬ್ಬಂದಿ ಹಾಗೂ ಸಂಬಂಧಿತ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ತನಿಖೆ ಆರಂಭ: ಸ್ಫೋಟಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ತಾಂತ್ರಿಕ ದೋಷವೇ ಅಥವಾ ಇತರ ಕಾರಣಗಳಿಂದಾಗಿ ಈ ಘಟನೆ ಸಂಭವಿಸಿದೆಯೇ ಎಂಬುದರ ಕು...

ಮೂಗಿನ ಡ್ರಾಪ್ಸ್‌ ಕಣ್ಣಿಗೆ ಹಾಕಿದ ವೈದ್ಯ: ಶಾಶ್ವತವಾಗಿ ದೃಷ್ಟಿ ಕಳೆದುಕೊಡ 19 ತಿಂಗಳ ಕಂದಮ್ಮ

Image
 ಭೋಪಾಲ್: ವೈದ್ಯರ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯಕ್ಕೆ 19 ತಿಂಗಳ ಕಂದಮ್ಮನೊಬ್ಬ ತನ್ನ ಎರಡು ಕಣ್ಣುಗಳ ದೃಷ್ಟಿಯನ್ನು ಶಾಶ್ವತವಾಗಿ ಕಳೆದುಕೊಂಡಿರುವ ದಾರುಣ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ನಡೆದಿದೆ. ಸಾಗರ್ ಜಿಲ್ಲೆಯ ಭೂಸಾ ಕಮಲಪುರ ಗ್ರಾಮದ ಇಂದ್ರಜ್ ವಿಶ್ವಕರ್ಮ ಎಂಬುವವರ 19 ತಿಂಗಳ ಗಂಡು ಮಗು ವಿನಯ್‌ಗೆ ಮೇ 29 ರಂದು ತೀವ್ರ ಕೆಮ್ಮು, ನೆಗಡಿಯಾಗಿ, ಕಣ್ಣುಗಳು ಸ್ವಲ್ಪ ಕೆಂಪಾಗಾಗಿದ್ದವು. ತಕ್ಷಣ ಪೋಷಕರು ಮಗುವನ್ನು ಸಾಗರ್ ಜಿಲ್ಲೆಯ ಬಂದಾ ಸಿವಿಲ್ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಈ ವೇಳೆ ಕರ್ತವ್ಯದಲ್ಲಿದ್ದ ಮಕ್ಕಳ ವೈದ್ಯರು ಮಗುವನ್ನು ಪರೀಕ್ಷಿಸಿದ ಬಳಿಕ ಮೂಗಿಗೆ ಬಳಸಬೇಕಿದ್ದ ಸಲೈನ್ ಡ್ರಾಪ್ಸ್ ಅನ್ನು ಕಣ್ಣಿಗೆ ಹಾಕಿದ್ದಾರೆ. ಜೊತೆಗೆ ಪ್ಯಾರಾಸಿಟಮಾಲ್ ಸಿರಪ್, ಇಂಜೆಕ್ಷನ್ ಹಾಗೂ ಇತರ ಔಷಧಿಗಳನ್ನು ಕೂಡ ನೀಡಿದ್ದಾರೆ. ಚಿಕಿತ್ಸೆ ಪಡೆದ ಕೆಲವೇ ಗಂಟೆಗಳಲ್ಲಿ ಮಗುವಿನ ಆರೋಗ್ಯ ಮತ್ತಷ್ಟು ಹದಗೆಟ್ಟಿದೆ. ಹಲವು ಗಂಟೆಗಳ ಕಾಲ ಸಿವಿಲ್ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಿದರೂ ಯಾವುದೇ ಸುಧಾರಣೆ ಕಾಣದ ಹಿನ್ನೆಲೆಯಲ್ಲಿ ವೈದ್ಯರು ಮಗುವನ್ನು ಸಾಗರ್ ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದಾರೆ. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಭೋಪಾಲ್‌ನ ಏಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಭೋಪಾಲ್ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆದ ವೇಳೆ, ಮಗುವಿನ ದೃಷ್ಟಿ ಶಾಶ್ವತವಾಗಿ ಕಳೆದುಹೋಗಿದೆ ಎಂದು ವೈದ್ಯರು ತಿಳಿಸಿರುವುದಾಗಿ ಕುಟು...

ರಾಯಚೂರು: ಜಮೀನಿನ ಖಾತೆ ನೀಡಲು 1.5 ಲಕ್ಷ ರೂ. ಲಂಚ ಪಡೆದಿದ್ದ ಬಿಜನಗೇರಾ ಪಿಡಿಒ ಲಕ್ಷ್ಮೀ ಲೋಕಾಯುಕ್ತ ಬಲೆಗೆ!

Image
 ಜಮೀನಿನ ಖಾತಾ ಉತಾರ ನೀಡಲು ವ್ಯಕ್ತಿಯೊಬ್ಬರಿಂದ 1.5 ಲಕ್ಷ ಲಂಚ ಪಡೆದಿದ್ದ ಬಿಜನಗೇರಾ ಗ್ರಾಮದ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ರಾಯಚೂರು: ಜಮೀನಿನ ಖಾತಾ ಉತಾರ ನೀಡಲು ವ್ಯಕ್ತಿಯೊಬ್ಬರಿಂದ 1.5 ಲಕ್ಷ ಲಂಚ ಪಡೆದಿದ್ದ ಬಿಜನಗೇರಾ ಗ್ರಾಮದ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೇಔಟ್ ನಿರ್ಮಾಣಕ್ಕಾಗಿ ಎರಡು ಎಕರೆ ಜಮೀನಿನ ಖಾತಾ ಉತಾರಕ್ಕಾಗಿ ಬಿಜನಗೇರಾದ ಮೆಹಬೂಬ್ ಅಲಿ ಎಂಬುವರು ಮನವಿ ಮಾಡಿದ್ದರು. ಉತಾರ ಕೊಡಲು ಪಿಡಿಒ ಅವರು 2 ಲಕ್ಷ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಮೆಹಬೂಬ್ ಅಲಿ ಲೋಕಾಯುಕ್ತರಿಗೆ ದೂರು ನೀಡಿದ್ದರು. ಇಂದು ಲಕ್ಷ್ಮೀ ಪ್ಯಾಟಿ ತನ್ನ ಪತಿ ಖಾತೆಗೆ ಫೋನ್ ಪೇ ಮೂಲಕ 1.50 ಲಕ್ಷ ರೂಪಾಯಿ ವರ್ಗಾವಣೆ ಮಾಡಿಸಿಕೊಂಡ ಬೆನ್ನಲ್ಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಲಕ್ಷ್ಮೀಯನ್ನು ವಶಕ್ಕೆ ತೆಗೆದುಕೊಂಡರು.

ದಾವಣಗೆರೆ: ಕುಡಿದು ವಾಹನ ಚಾಲನೆ ಮಾಡಿ ಪೊಲೀಸರೊಂದಿಗೆ ಯುವತಿಯ ರಂಪಾಟ!

Image
 ದಾವಣಗೆರೆಯ ಶಾಮನೂರು ರಸ್ತೆಯಲ್ಲಿ ಗುರುವಾರ ರಾತ್ರಿ ನಡೆದ ಘಟನೆಯೊಂದರಲ್ಲಿ, ಯುವತಿಯೊಬ್ಬಳು ಮದ್ಯಪಾನ ಮಾಡಿ ಏಕಮುಖ ರಸ್ತೆಯಲ್ಲಿ (ಒನ್-ವೇ) ವಿರುದ್ಧ ದಿಕ್ಕಿನಲ್ಲಿ ಥಾರ್ ಜೀಪ್ ಚಾಲನೆ ಮಾಡಿದ್ದಾಳೆ. ವಾಹನವನ್ನು ತಡೆದ ಪೊಲೀಸರೊಂದಿಗೆ ಆಕೆ ವಾಗ್ವಾದಕ್ಕಿಳಿದು ರಂಪಾಟ ನಡೆಸಿದ್ದಾಳೆ. ಘಟನೆಯ ವಿವರ: ಪ್ರೀತಿ ಎಂಬ ಹೆಸರಿನ ಯುವತಿ ಮದ್ಯಪಾನ ಮಾಡಿ ಥಾರ್ ಜೀಪ್‌ನಲ್ಲಿ ಒನ್-ವೇ ರಸ್ತೆಯಲ್ಲಿ ಅಜಾಗರೂಕತೆಯಿಂದ ಚಾಲನೆ ಮಾಡುತ್ತಿದ್ದಳು. ಪೊಲೀಸರು ಆಕೆಯ ವಾಹನವನ್ನು ತಡೆದಾಗ, ಆಕೆ ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದಾಳೆ. ಅಲ್ಲದೆ, ನಶೆಯಲ್ಲಿದ್ದ ಯುವತಿ ಮಹಿಳಾ ಪಿಎಸ್ಐ ಅವರಿಗೆ ಕಾಲಿನಿಂದ ಒದೆಯುವ ರೀತಿಯಲ್ಲಿ ವರ್ತಿಸಿ, "ನಾನು ಯಾರು ಗೊತ್ತೇನೋ, ನಿಮ್ಮನ್ನು ಸುಮ್ಮನೆ ಬಿಡಲ್ಲ" ಎಂದು ಪೊಲೀಸರಿಗೆ ಅವಾಜ್ ಹಾಕಿದ್ದಾಳೆ. ಈ ಯುವತಿ ದಾವಣಗೆರೆಯ ಪ್ರತಿಷ್ಠಿತ ವ್ಯಕ್ತಿಯೊಬ್ಬರ ಪುತ್ರಿ ಎಂದು ಹೇಳಲಾಗುತ್ತಿದ್ದು, ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕರ್ತವ್ಯಕ್ಕೆ ಅಡ್ಡಿಪಡಿಸಿದ ಯುವತಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

ದಾವಣಗೆರೆ: ಶಂಕಿತ ಉಗ್ರ ಗ್ಯಾಂಗ್‌ ಅನ್ನ ಬಂಧಿಸಿದ್ದೇ ರೋಚಕ, ಮನೆ ಮಾಲೀಕರು ಫುಲ್ ಶಾಕ್

Image
 ದಾವಣಗೆರೆ, ಜೂನ್ 25: ಅಯೋಧ್ಯೆಯ ಶ್ರೀರಾಮ ಮಂದಿರದ ಮೇಲೆ ದಾಳಿ ನಡೆಸಲು ಹೊಂಚು ಹಾಕುತ್ತಿದ್ದರು ಎನ್ನಲಾದ ಉಗ್ರರ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಜಿಲ್ಲೆಯ ಹರಿಹರ ತಾಲ್ಲೂಕಿನ ಬನ್ನಿಕೋಡು ಗ್ರಾಮದಲ್ಲಿ ಅಡಗಿದ್ದ ಶಂಕಿತ ಉಗ್ರ ಸುಹೇಲ್ ಮತ್ತು ಆತನ ಸಹಚರರನ್ನು ಬಂಧಿಸಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಶಂಕಿತರಿಗೆ ಮನೆ ಬಾಡಿಗೆ ಕೊಟ್ಟಿದ್ದ ಮಾಲೀಕರು ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ. ಶಂಕಿತ ಉಗ್ರ ಸುಹೇಲ್‌ಗೆ ಬಾಡಿಗೆ ಮನೆ ನೀಡಿದ್ದ ಬನ್ನಿಕೋಡು ಗ್ರಾಮದ ರೇಣುಕಮ್ಮ ಮತ್ತು ಗುತ್ಯಪ್ಪ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಆತನ ಚಟುವಟಿಕೆಗಳ ವಿವರ ಹಾಗೂ ಪೊಲೀಸರು ದಾಳಿ ಮಾಡಿದ ರೋಚಕ ಕ್ಷಣಗಳನ್ನು ಹಂಚಿಕೊಂಡಿದ್ದಾರೆ. ಮನೆ ಮಾಲೀಕರು ನೀಡಿರುವ ಮಾಹಿತಿಯ ಪ್ರಕಾರ, ಸುಮಾರು 15 ದಿನಗಳ ಹಿಂದೆಯಷ್ಟೇ ಸುಹೇಲ್ ಈ ಮನೆಗೆ ಬಾಡಿಗೆಗೆ ಬಂದಿದ್ದ. ಆತ ಒಬ್ಬನೇ ಇರದೆ, ಆತನ ಜೊತೆಯಲ್ಲಿ ಇನ್ನೂ 10 ಜನರು ಬಂದಿದ್ದರು. ತಿಂಗಳಿಗೆ 6,000 ರೂಪಾಯಿ ಬಾಡಿಗೆ ನೀಡುವುದಾಗಿ ಒಪ್ಪಂದ ಮಾಡಿಕೊಂಡಿದ್ದರು. 'ಅವರೆಲ್ಲರೂ ಸದಾ ತಮ್ಮತಮ್ಮಲ್ಲೇ ಹಿಂದಿ ಭಾಷೆಯಲ್ಲಿ ಮಾತನಾಡಿಕೊಳ್ಳುತ್ತಿದ್ದರು. ನಮ್ಮ ಬಳಿ ದಿನನಿತ್ಯ ಹಾಲು ಮತ್ತು ಮಜ್ಜಿಗೆಯನ್ನು ಪಡೆಯುತ್ತಿದ್ದರು. ಯಾರೊಂದಿಗೂ ಅಷ್ಟಾಗಿ ಬೆರೆಯದೆ, ತಾವು ಆಯಿತು ತಮ್ಮ ಕೆಲಸವಾಯಿತು ಎನ್ನುವಂತೆ ಇರುತ್ತಿದ್ದರು,' ಎಂದು ಮಾಲೀಕರು ತಿಳಿಸಿದ್ದಾರೆ. ಸುಹೇಲ್ ಗ್ಯಾಂಗ್‌ಗೆ ಗಾಳ ಹಾಕಿದ ಪೊಲೀಸರು...

ಮಂಗಳೂರು: ಲಾಡ್ಜ್ ನಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ; 35.53 ಗ್ರಾಂ ಎಂ.ಡಿ.ಎಂ.ಎ. ವಶ

Image
 ಮಂಗಳೂರು: ನಗರದ ಬೆಂದೂರ್‌ ನಲ್ಲಿರುವ ಲಾಡ್ಜ್ ಒಂದರಲ್ಲಿ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಬಗ್ಗೆ ಮಂಗಳೂರು ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬಂದಿ ಮಾಹಿತಿ ಸಂಗ್ರಹಿಸಿ ದಾಳಿ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿ 35.53 ಗ್ರಾಂ ಎಂ.ಡಿ.ಎಂ.ಎ. ಮತ್ತು 7 ಸಾವಿರದ 30 ರೂಪಾಯಿ ನಗದು ಹಣ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನ ಹಲಸೂರು ನಿವಾಸಿ ಮೊಹಮ್ಮದ್ ನದೀಂ (27), ಉಳ್ಳಾಲ ತಾಲೂಕು ಸೋಮೇಶ್ವರ ಉಚ್ಚಿಲದ ಪೆರಿಬೈಲ್ ನಿವಾಸಿ ಉಮರುಲ್ ಫಾರೂಕ್ (30) ಮತ್ತು ಉಳ್ಳಾಲ ತಾಲೂಕಿನ ಕೆ.ಸಿ. ರೋಡ್ ಕಿನ್ಯಾ ನಿವಾಸಿ ಇಮ್ತಿಯಾಜ್ ಇಸ್ಮಾಯಿಲ್ (41) ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳನ್ನು ಮತ್ತು ಸೊತ್ತುಗಳನ್ನು ಮುಂದಿನ ತನಿಖೆಗಾಗಿ ಕದ್ರಿ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದು, ಕದ್ರಿ ಪೊಲೀಸರು ಎನ್.ಡಿ.ಪಿ.ಎಸ್. ಕಾಯ್ದೆಯಡಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ದಾವಣಗೆರೆಯ ನಿವೃತ್ತ ಶಿಕ್ಷಕಿಯಿಂದ ಯೋಧರ ನಿಧಿಗೆ 10 ಲಕ್ಷ ರೂ. ದೇಣಿಗೆ

Image
 ದಾವಣಗೆರೆಯ 86 ವರ್ಷದ ನಿವೃತ್ತ ಶಿಕ್ಷಕಿ ಎಚ್.ಬಿ. ಕರಿಬಸಮ್ಮ ಅವರು, ಕ್ಯಾನ್ಸರ್ ಸೇರಿದಂತೆ ಗಂಭೀರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರೂ, ದೇಶ ಕಾಯುವ ಯೋಧರ ಮೇಲಿನ ಗೌರವದಿಂದ 10 ಲಕ್ಷ ರೂಪಾಯಿಗಳನ್ನು 'ಭಾರತ್ ಕೀ ವೀರ್' (Bharat Ke Veer) ನಿಧಿಗೆ ದೇಣಿಗೆ ನೀಡಿದ್ದಾರೆ. ಪ್ರಮುಖ ಅಂಶಗಳು: ದೇಶಪ್ರೇಮದ ಸಂಕಲ್ಪ: ದಾವಣಗೆರೆಯ ಎಂಸಿಸಿ 'ಬಿ' ಬ್ಲಾಕ್‌ನ ವೃದ್ಧಾಶ್ರಮದಲ್ಲಿ ವಾಸಿಸುತ್ತಿರುವ ಕರಿಬಸಮ್ಮ ಅವರು, ಯೋಧರಿಗೆ ಏನಾದರೂ ಕೊಡುಗೆ ನೀಡಬೇಕೆಂಬ ದೀರ್ಘಕಾಲದ ಕನಸನ್ನು ಹೊಂದಿದ್ದರು. ತಮ್ಮ ಸ್ವಂತ ಮನೆ ಮಾರಾಟ ಮಾಡಿದ ಹಣ ಮತ್ತು ಪಿಂಚಣಿಯ ಉಳಿತಾಯವನ್ನು ಸೇರಿಸಿ ಅವರು ಈ ಮೊತ್ತವನ್ನು ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಮೂಲಕ ಹಸ್ತಾಂತರ: ಅವರು ದಾವಣಗೆರೆ ಜಿಲ್ಲಾಧಿಕಾರಿ ಡಾ. ಜಿ.ಎಂ. ಗಂಗಾಧರಸ್ವಾಮಿ ಅವರನ್ನು ಭೇಟಿಯಾಗಿ 10 ಲಕ್ಷ ರೂಪಾಯಿಯ ಚೆಕ್ ಅನ್ನು ಸೈನಿಕರ ಕಲ್ಯಾಣ ನಿಧಿಗೆ ಹಸ್ತಾಂತರಿಸಿದರು. ಹಿನ್ನೆಲೆ: ಕರಿಬಸಮ್ಮ ಅವರು ದಯಾಮರಣದ (Right to Die with Dignity) ಪರವಾಗಿ ಹಲವು ವರ್ಷಗಳಿಂದ ಹೋರಾಟ ನಡೆಸುತ್ತಾ ಬಂದಿದ್ದಾರೆ. ವೈಯಕ್ತಿಕ ಆರೋಗ್ಯ ಸಮಸ್ಯೆಗಳ ನಡುವೆಯೂ ಅವರು ತೋರಿದ ಈ ದೇಶಪ್ರೇಮದ ನಡೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಇದು ಅವರ ದೇಶಪ್ರೇಮ ಮತ್ತು ತ್ಯಾಗಮನೋಭಾವಕ್ಕೆ ಸಾಕ್ಷಿಯಾಗಿದೆ.

ದಾವಣಗೆರೆಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ವಕೀಲರ ಆಗ್ರಹ

Image
 ದಾವಣಗೆರೆ: ದಾವಣಗೆರೆಯಲ್ಲಿ ಹೈಕೋರ್ಟ್ ಸಂಚಾರಿ ಪೀಠವನ್ನು ಸ್ಥಾಪಿಸಬೇಕು ಎಂದು ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಬಲವಾಗಿ ಆಗ್ರಹಿಸಿದ್ದಾರೆ. ವಕೀಲರ ಸಂಘದ ಪ್ರಮುಖ ಬೇಡಿಕೆಗಳು: ಪ್ರಯಾಣದ ಅನುಕೂಲ: ದಾವಣಗೆರೆ ಜಿಲ್ಲೆಯು ಚಿತ್ರದುರ್ಗ, ವಿಜಯನಗರ, ಬಳ್ಳಾರಿ, ಹಾವೇರಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಕೇಂದ್ರ ಬಿಂದುವಾಗಿದೆ. ಸಂಚಾರಿ ಪೀಠ ಸ್ಥಾಪನೆಯಾದರೆ ಈ ಎಲ್ಲಾ ಜಿಲ್ಲೆಗಳ ವಕೀಲರು ಮತ್ತು ಕಕ್ಷಿದಾರರಿಗೆ ಪ್ರಯಾಣದ ದೃಷ್ಟಿಯಿಂದ ಅತ್ಯಂತ ಅನುಕೂಲವಾಗುತ್ತದೆ. ಕೆಲಸದ ಒತ್ತಡ ನಿರ್ವಹಣೆ: ಸಂಚಾರಿ ಪೀಠವು ಇಲ್ಲಿ ಕಾರ್ಯನಿರ್ವಹಿಸುವುದರಿಂದ ಹೈಕೋರ್ಟ್‌ನ ಮೇಲಿರುವ ಕೆಲಸದೊತ್ತಡವನ್ನು ಗಮನಾರ್ಹವಾಗಿ ಕಡಿಮೆ ಮಾಡಬಹುದು. ಕಟ್ಟಡ ಕಾಮಗಾರಿಯ ಕುರಿತು ಅಸಮಾಧಾನ: ನಿರ್ಮಾಣ ಹಂತದಲ್ಲಿರುವ ನ್ಯಾಯಾಲಯದ ಸಂಕೀರ್ಣದ ವಿನ್ಯಾಸ (ನೀಲಿ ನಕ್ಷೆ) ಸರಿಯಾಗಿಲ್ಲ ಎಂದು ವಕೀಲರ ಸಂಘವು ಈಗಾಗಲೇ ಮನವಿ ಸಲ್ಲಿಸಿದೆ. ಆದರೂ, ಆಕ್ಷೇಪಣೆಗಳನ್ನು ಪರಿಗಣಿಸದೆ ಕಾಮಗಾರಿ ಮುಂದುವರಿಸುತ್ತಿರುವುದಕ್ಕೆ ವಕೀಲರ ಸಂಘ ಅಸಮಾಧಾನ ವ್ಯಕ್ತಪಡಿಸಿದೆ. ವಕೀಲರ ಸಲಹೆ: ದಾವಣಗೆರೆ ನಗರದ ಮಧ್ಯಭಾಗದಲ್ಲಿರುವ ಎಪಿಎಂಸಿ ಸಮೀಪದ ಹಳೇ ಪಿ.ಬಿ. ರಸ್ತೆಯ ಪಕ್ಕದಲ್ಲಿ ನ್ಯಾಯಾಲಯದ ಸಂಕೀರ್ಣವನ್ನು ನಿರ್ಮಿಸಬೇಕು ಎಂದು ವಕೀಲರು ಈ ಮೊದಲೇ ಪ್ರಸ್ತಾವನೆ ಸಲ್ಲಿಸಿದ್ದರು. ಪ್ರಸ್ತುತ ನಿರ್ಮಾಣ ಹಂತದಲ್ಲಿರುವ ಸಂಕೀರ್ಣವು ಹೆದ್ದಾರಿಗೆ ಹತ್ತಿರವಿದ್ದರೂ, ಮೂಲ ಯೋ...

ಬೆಳಗಾವಿ: 2 ಕೋಟಿ ವಿಮೆ ಹಣಕ್ಕಾಗಿ ಪ್ರಿಯಕರನ ಜತೆ ಸೇರಿ ಗಂಡನನ್ನೇ ಕೊಂದ ಮಗಳು; ಮರ್ಯಾದೆಗೆ ಅಂಜಿ ತಾಯಿ ಆತ್ಮಹತ್ಯೆ!

Image
 ಬೆಳಗಾವಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಘೋಡಗೇರಿ ಗ್ರಾಮದಲ್ಲಿ ಎರಡು ಕೋಟಿ ರೂಪಾಯಿ ವಿಮೆ ಹಣಕ್ಕಾಗಿ ಪ್ರಿಯಕರನ ಜೊತೆ ಸೇರಿ ತನ್ನ ಪತಿ, ಮಾಜಿ ಸೈನಿಕನ ಕೊಲೆ ಮಾಡಿದ್ದ ಸುಮಾ ಮಂಜರಗಿ ಸೇರಿದಂತೆ 9 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಸುಮಾ ಮಂಜರಗಿ ಬಂಧನಕ್ಕೊಳಗಾಗುತ್ತಿದ್ದಂತೆ, ಅತ್ತ ಅವರ ತಾಯಿ, ಮಗಳ ಕೃತ್ಯದಿಂದ ಆಘಾತಗೊಂಡಿದ್ದಾರೆ ಮತ್ತು ಮರ್ಯಾದೆಗೆ ಅಂಜಿ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಜಿ ಸೈನಿಕ ಸಂದೀಪ್ ಮಂಜರಗಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾದ ಸುಮಾ ಮಂಜರಗಿ ಅವರ ತಾಯಿ ಮಹಾದೇವಿ ಬದಾಮಿ(57) ಅವರು ಇಂದು ನೇಣಿಗೆ ಶರಣಾಗಿದ್ದಾರೆ.

ಬಳ್ಳಾರಿ: ತಹಶೀಲ್ದಾರ್ ಕಚೇರಿಯಲ್ಲಿ ತಾಯಿ-ಮಗನ ಲಂಚದ ಆಟ! ರೆಡ್‌ ಹ್ಯಾಂಡ್‌ ಆಗಿ ಲೋಕಾಯುಕ್ತ ಬಲೆಗೆ

Image
 ಬಳ್ಳಾರಿಯ ಸಿರುಗುಪ್ಪ ತಹಶೀಲ್ದಾರ್ ಕಚೇರಿಯಲ್ಲಿ, ಜಮೀನಿನ ಪಟ್ಟಾ ಬದಲಾವಣೆಗೆ ಪ್ರಥಮ ದರ್ಜೆ ಸಹಾಯಕಿ (FDA) ಸುವರ್ಣ ಮತ್ತು ಆಕೆಯ ಮಗ ದೀಪಕ್ ₹1,10,000 ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ದೂರುದಾರರ ದೂರಿನ ಮೇರೆಗೆ, ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ತಾಯಿ-ಮಗ ಇಬ್ಬರನ್ನೂ ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಬಳ್ಳಾರಿ: ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಯಾವ ಮಟ್ಟಕ್ಕೆ ಇಳಿದಿದೆ ಎಂಬುದಕ್ಕೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ಜಮೀನಿನ ಇನಾಮು ರದ್ದುಪಡಿಸಿ 'ಪಟ್ಟಾ' ಎಂದು ಬದಲಾಯಿಸಿಕೊಡಲು ಭಾರಿ ಮೊತ್ತದ ಲಂಚಕ್ಕೆ ಬೇಡಿಕೆಯಿಟ್ಟಿದ್ದ ತಹಶೀಲ್ದಾರ್ ಕಚೇರಿಯ ಪ್ರಥಮ ದರ್ಜೆ ಸಹಾಯಕಿ (FDA) ಮತ್ತು ಆಕೆಯ ಮಗ ಇಬ್ಬರೂ ಒಟ್ಟಿಗೇ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಸಿರುಗುಪ್ಪ ತಾಲ್ಲೂಕು ತಹಶೀಲ್ದಾರ್ ಕಚೇರಿಯ ಎಫ್‌ಡಿಎ ಸುವರ್ಣ ಮತ್ತು ಆಕೆಯ ಮಗ ದೀಪಕ್ ಲೋಕಾಯುಕ್ತ ದಾಳಿಗೆ ಸಿಲುಕಿ ಬಂಧಿತರಾದ ಭ್ರಷ್ಟರು. 7 ಎಕರೆ ಜಮೀನಿನ ಪಟ್ಟಾ ಬದಲಾವಣೆಗೆ ಲಂಚದ ಬೇಡಿಕೆ ವರದಿ ಪ್ರಕಾರ, ಸಿರುಗುಪ್ಪ ತಾಲ್ಲೂಕಿನ ಬೈರಾಪುರ ಗ್ರಾಮದ ನಿವಾಸಿಯಾದ ಗೋವಿಂದ ಎಂಬುವವರು ಈ ಪ್ರಕರಣದ ದೂರುದಾರರಾಗಿದ್ದಾರೆ. ಗೋವಿಂದ ಅವರಿಗೆ ಸೇರಿದ ಸರ್ವೇ ನಂಬರ್ 57/4/ಡಿ ನಲ್ಲಿರುವ 7 ಎಕರೆ 68 ಸೆಂಟ್ಸ್ ವಿಸ್ತೀರ್ಣದ ಜಮೀನಿನ ಪಹಣಿಯಲ್ಲಿ (RTC) 'ಇನಾಮ್' ಎಂದು ದಾಖಲಾಗಿತ್ತು. ಇದನ್ನು ರದ್ದುಪಡಿಸಿ, ನ...

ದಾವಣಗೆರೆ: ಮಾಜಿ ಸಚಿವ, ದಿವಂಗತ ಶಾಮನೂರು ಶಿವಶಂಕರಪ್ಪ ಅವರ 96ನೇ ಜನ್ಮದಿನದ ಅಂಗವಾಗಿ ನಗರದ ಎಂಬಿಎ ಕಾಲೇಜು ಮೈದಾನದಲ್ಲಿ ಬುಧವಾರ ಏರ್ಪಡಿಸಿದ್ದ ಸರ್ವಧರ್ಮ ಸಾಮೂಹಿಕ ವಿವಾಹದಲ್ಲಿ 60 ಜೋಡಿ ವಧು–ವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

Image
 ದಾವಣಗೆರೆಯ ಎಂಬಿಎ ಕಾಲೇಜು ಮೈದಾನದಲ್ಲಿ ಬುಧವಾರ ಏರ್ಪಡಿಸಿದ್ದ ಸರ್ವಧರ್ಮ ಸಾಮೂಹಿಕ ವಿವಾಹದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಧು–ವರರಿಗೆ ಸಂಸದೆ ಡಾ.ಪ್ರಭಾ ಹಾಗೂ ಶಾಸಕ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಶುಭ ಹಾರೈಸಿದರು    ದಾವಣಗೆರೆ: ಮಾಜಿ ಸಚಿವ, ದಿವಂಗತ ಶಾಮನೂರು ಶಿವಶಂಕರಪ್ಪ ಅವರ 96ನೇ ಜನ್ಮದಿನದ ಅಂಗವಾಗಿ ನಗರದ ಎಂಬಿಎ ಕಾಲೇಜು ಮೈದಾನದಲ್ಲಿ ಬುಧವಾರ ಏರ್ಪಡಿಸಿದ್ದ ಸರ್ವಧರ್ಮ ಸಾಮೂಹಿಕ ವಿವಾಹದಲ್ಲಿ 60 ಜೋಡಿ ವಧು–ವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಎಸ್‌.ಎಸ್‌. ಮಲ್ಲಿಕಾರ್ಜುನ್‌ ಅಭಿಮಾನಿ ಬಳಗ ಸಾಮೂಹಿಕ ವಿವಾಹ ಮಹೋತ್ಸವ ಆಯೋಜಿಸಿತ್ತು. ವಧು–ವರರ ಕುಟುಂಬದ ಸದಸ್ಯರು, ಸಂಬಂಧಿಕರು ಆಗಮಿಸಿದ್ದರಿಂದಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಶಾಸಕ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಹಾಗೂ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌ ನವ ದಂಪತಿಗಳನ್ನು ಹರಸಿದರು. ಮದುವೆಗೆ ಆಗಮಿಸಿದ್ದ ಸಂಬಂಧಿಕರಿಗೆ ಬೆಳಿಗ್ಗೆ ಉಪಾಹಾರ ಹಾಗೂ ಮಧ್ಯಾಹ್ನದ ಭೋಜನದ ವ್ಯವಸ್ಥೆ ಮಾಡಲಾಗಿತ್ತು. ವಧು–ವರರಿಗೆ ಕಾಲುಂಗರ, ಮಾಂಗಲ್ಯ, ಅಲ್ಮೇರಾ ಹಾಗೂ ಬಟ್ಟೆಗಳನ್ನು ಉಚಿತವಾಗಿ ನೀಡಲಾಯಿತು. ವಿಧಾನಪರಿಷತ್‌ ಚುನಾವಣೆಯ ಅಂಗವಾಗಿ ಬೆಂಗಳೂರಿನಲ್ಲಿ ಕರೆದಿರುವ ಶಾಸಕಾಂಗ ಪಕ್ಷದ ಸಭೆಯ ಮಧ್ಯೆಯೇ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಮುಖ್ಯಮಂತ್ರಿ ಅನುಮತಿ ಪಡೆದು ಬಂದಿದ್ದ ಅವರು ‘ಸಂಸಾರದಲ್ಲಿ ಪತಿ–ಪತ್ನಿಯ ನಡುವೆ ಹ...

ದಾವಣಗೆರೆ: ಜಿಮ್ ಮುಗಿಸಿ ಮನೆಗೆ ಬಂದ ಬಾಡಿ ಬಿಲ್ಡರ್ ಕುಸಿದು ಬಿದ್ದು ಸಾವು!

Image
 ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಮಾರ್ಗ ಮಧ್ಯದಲ್ಲೇ ಸುಶೀಲ್ ಸಾವನ್ನಪ್ಪಿದ್ದಾನೆ. ಲೋ ಬಿಪಿಯಾಗಿ ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಎಂದು ಹೇಳಲಾಗುತ್ತಿದೆ. ದಾವಣಗೆರೆ: ಜಿಮ್ ಮುಗಿಸಿ ಮನೆಗೆ ಮರಳಿದ್ದ ಬಾಡಿ ಬಿಲ್ಡರ್‌ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕೆಟಿಜೆ ನಗರದ ನಿವಾಸಿ ಸುಶೀಲಕುಮಾರ್ (26) ಮೃತ ಯುವಕ. ಬಾಡಿ ಬಿಲ್ಡಿಂಗ್‌‌ ಪಟುವಾಗಿದ್ದ ಇವರು ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಗಳಿಸಿದ್ದರು. ಅಂತರರಾಷ್ಟ್ರೀಯ ಮಟ್ಟದ ಬಾಡಿ ಬಿಲ್ಡಂಗ್ ಕಾಂಪಿಟೇಷನ್‌ಗೆ ರೆಡಿಯಾಗುತ್ತಿದ್ದರು.ರಾತ್ರಿ 8:30 ರ ಸುಮಾರಿಗೆ ಜಿಮ್ ಮುಗಿಸಿಕೊಂಡು ಮನೆಗೆ ಬಂದಿದ್ದ. ತಲೆ ಸುತ್ತುವುದಾಗಿ ಹೇಳಿ, ಕೆಲ ಕ್ಷಣದಲ್ಲೇ ಕುಸಿದು ಬಿದ್ದಿದ್ದಾ‌ನೆ. ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಮಾರ್ಗ ಮಧ್ಯದಲ್ಲೇ ಸುಶೀಲ್ ಸಾವನ್ನಪ್ಪಿದ್ದಾನೆ. ಲೋ ಬಿಪಿಯಾಗಿ ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಎಂದು ಹೇಳಲಾಗುತ್ತಿದೆ. ಮಂಗಳವಾರ ರಾತ್ರಿ ಜಿಮ್ ಮುಗಿಸಿ ಮನೆಗೆ ಬಂದ ಸುಶೀಲ ಕುಮಾರ್ ಊಟ ಮಾಡಿದ ಕೆಲ ಕ್ಷಣದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ

ದಾವಣಗೆರೆ: ಸಹಶಿಕ್ಷಕರು ಹಾಗೂ ಅಡುಗೆ ಸಿಬ್ಬಂದಿ ನಡುವಿನ ವಿವಾದ; ಮನನೊಂದು ಆತ್ಮಹತ್ಯೆಗೆ ಶರಣಾದ ಮುಖ್ಯ ಶಿಕ್ಷಕ ಜಯಪ್ಪ

Image
 ದಾವಣಗೆರೆ: ಹರಿಹರ ತಾಲೂಕಿನ ಕೊಕ್ಕನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಜಯಪ್ಪ (55) ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಶಾಲೆಯ ಸಹಶಿಕ್ಷಕರು ಹಾಗೂ ಅಡುಗೆ ಸಿಬ್ಬಂದಿ ನಡುವಿನ ನಿರಂತರ ಭಿನ್ನಾಭಿಪ್ರಾಯ ಮತ್ತು ವಿವಾದದಿಂದ ಮನನೊಂದು ಅವರು ಈ ನಿರ್ಧಾರ ಕೈಗೊಂಡಿದ್ದರು. ಘಟನೆಯ ಹಿನ್ನೆಲೆ ಕಳೆದ ಕೆಲ ದಿನಗಳಿಂದ ಶಾಲೆಯಲ್ಲಿ ಮುಖ್ಯ ಶಿಕ್ಷಕ ಜಯಪ್ಪ, ಸಹಶಿಕ್ಷಕರು ಮತ್ತು ಅಡುಗೆ ಸಿಬ್ಬಂದಿ ನಡುವೆ ಕೆಲಸದ ವಿಚಾರವಾಗಿ ಪದೇ ಪದೇ ಜಗಳಗಳು ನಡೆಯುತ್ತಿದ್ದವು. ಈ ಸಮಸ್ಯೆಯನ್ನು ಬಗೆಹರಿಸಲು ಸೋಮವಾರ ಶಾಲಾಭಿವೃದ್ಧಿ ಸಮಿತಿ (SDMC) ಸದಸ್ಯರು ಮತ್ತು ಗ್ರಾಮದ ಮುಖಂಡರ ನೇತೃತ್ವದಲ್ಲಿ ರಾಜೀ ಸಂಧಾನ ಸಭೆ ನಡೆಸಲಾಗಿತ್ತು. ಆದರೆ, ಸಮಸ್ಯೆ ಸಂಪೂರ್ಣವಾಗಿ ಬಗೆಹರಿಯದ ಹಿನ್ನೆಲೆಯಲ್ಲಿ, ಮಂಗಳವಾರ ಮತ್ತೊಮ್ಮೆ ಬಿಆರ್‌ಸಿ (BRC) ನೇತೃತ್ವದಲ್ಲಿ ಸಭೆ ಆಯೋಜಿಸಲಾಗಿತ್ತು. ಸಭೆ ನಡೆಯುತ್ತಿದ್ದ ಸಂದರ್ಭದಲ್ಲಿ, ಮಾನಸಿಕವಾಗಿ ನೊಂದಿದ್ದ ಮುಖ್ಯ ಶಿಕ್ಷಕ ಜಯಪ್ಪ ಅವರು ಶೌಚಾಲಯಕ್ಕೆ ತೆರಳಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ವಿಷ ಸೇವಿಸಿ ಅಸ್ವಸ್ಥರಾಗಿದ್ದ ಜಯಪ್ಪ ಅವರನ್ನು ಸ್ಥಳೀಯರು ಮತ್ತು ಶಿಕ್ಷಕರು ತಕ್ಷಣವೇ ದಾವಣಗೆರೆಯ ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ, ಚ...

ದಾವಣಗೆರೆಯಲ್ಲಿ 18 ಸಿಲಿಂಡರ್‌ಗಳ ಸ್ಫೋಟ: ಇಬ್ಬರಿಗೆ ಗಾಯ, ಅನಿಲ್ ಎಂಬಾತನ ಸ್ಥಿತಿ ಚಿಂತಾಜನಕ!

Image
 ಕಲ್ಪನಹಳ್ಳಿ ಗ್ರಾಮದ ಹೊರ ವಲಯದಲ್ಲಿರುವ ಸಿಲಿಂಡರ್‌ ಗೋದಾಮಿನಲ್ಲಿ 18ಕ್ಕೂ ಹೆಚ್ಚು ಸಿಲಿಂಡರ್ ಗಳು ಸ್ಫೋಟಗೊಂಡಿವೆ. ಈ ದುರ್ಘಟನೆಯಲ್ಲಿ ಗೋದಾಮಿನಲ್ಲಿದ್ದ ಅನಿಲ್‌ ಹಾಗೂ ಸಿಲಿಂಡರ್ ಏಜೆನ್ಸಿಯ ಸಿಬ್ಬಂದಿಗೆ ಗಂಭೀರ ಗಾಯಗಳಾಗಿವೆ. ದಾವಣಗೆರೆ: ಕಲ್ಪನಹಳ್ಳಿ ಗ್ರಾಮದ ಹೊರ ವಲಯದಲ್ಲಿರುವ ಸಿಲಿಂಡರ್‌ ಗೋದಾಮಿನಲ್ಲಿ 18ಕ್ಕೂ ಹೆಚ್ಚು ಸಿಲಿಂಡರ್ ಗಳು ಸ್ಫೋಟಗೊಂಡಿವೆ. ಈ ದುರ್ಘಟನೆಯಲ್ಲಿ ಗೋದಾಮಿನಲ್ಲಿದ್ದ ಅನಿಲ್‌ ಹಾಗೂ ಸಿಲಿಂಡರ್ ಏಜೆನ್ಸಿಯ ಸಿಬ್ಬಂದಿಗೆ ಗಂಭೀರ ಗಾಯಗಳಾಗಿವೆ. ಅನಿಲ್ ಸ್ಥಿತಿ ಚಿಂತಾಜನಕವಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಒಂದರ ನಂತರ ಒಂದರಂತೆ 18ಕ್ಕೂ ಹೆಚ್ಚು ಸಿಲಿಂಡರ್ ಗಳು ಸ್ಫೋಟಗೊಂಡಿವೆ. ಸ್ಫೋಟದ ರಭಸಕ್ಕೆ ಸಿಲಿಂಡರ್‌ಗಳು ನೂರಾರು ಅಡಿ ಎತ್ತರಕ್ಕೆ ಚಿಮ್ಮಿದ್ದವು. ದೊಗ್ಗಳ್ಳಿ ಶಿವಕುಮಾ‌ರ್ ಎಂಬುವರಿಗೆ ಸೇರಿದ ಗೋದಾಮಿನಲ್ಲಿ ಅನಿಲ್ ಸಿಲಿಂಡರ್ ಸಂಗ್ರಹಿಸಿ ವಿತರಿಸುತ್ತಿದ್ದರು ಎನ್ನಲಾಗಿದೆ. ಘಟನೆ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದರು. ಎಸ್ ಪಿ ಶೇಖರ್ ಸೇರಿದಂತೆ ಇತರ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೆಳಗಾವಿ | ವೇಶ್ಯಾವಾಟಿಕೆ ಮಹಿಳೆ ಬಂಧನ: ಯುವತಿ ರಕ್ಷಣೆ

Image
 ಬೆಳಗಾವಿ ನಗರದ ಟಿಳಕವಾಡಿ ಪ್ರದೇಶದ ನೆಹರು ರಸ್ತೆಯಲ್ಲಿರುವ ಬಹುಮಹಡಿ ಅಪಾರ್ಟ್‌ಮೆಂಟ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಯ ಮೇಲೆ ಟಿಳಕವಾಡಿ ಠಾಣೆ ಪೊಲೀಸರು ದಾಳಿ ನಡೆಸಿ, ತೆಲಂಗಾಣ ಮೂಲದ ಯುವತಿಯನ್ನು ರಕ್ಷಿಸಿ, ದಂಧೆ ನಡೆಸುತ್ತಿದ್ದ ಮಹಿಳೆಯನ್ನು ಬಂಧಿಸಿದ್ದಾರೆ. ಬಂಧಿತೆಯನ್ನು ಆಯೇಶಾ ಶಬ್ಬಿರ್ ಶೇಖ್ ಅಲಿಯಾಸ್ ರೇಷ್ಮಾ ಅಂಕಲೆವಾಲೆ (31) ಎಂದು ಗುರುತಿಸಲಾಗಿದೆ. ಆರೋಪಿತೆ ಬಾಡಿಗೆ ಮನೆಯಲ್ಲಿ ಯುವತಿಯನ್ನು ಇರಿಸಿಕೊಂಡು ಗಿರಾಕಿಗಳನ್ನು ಕರೆಸಿ ಅನೈತಿಕ ಚಟುವಟಿಕೆ ನಡೆಸುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಸಿಪಿಐ ಪರಶುರಾಮ ಪೂಜೇರಿ ನೇತೃತ್ವದಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿ ಒಳಗೊಂಡ ವಿಶೇಷ ತಂಡ ದಾಳಿ ನಡೆಸಿತು. ಕಾರ್ಯಾಚರಣೆಯ ವೇಳೆ ಯುವತಿಯನ್ನು ಸುರಕ್ಷಿತವಾಗಿ ರಕ್ಷಿಸಿ ಆರೋಪಿತೆಯನ್ನು ವಶಕ್ಕೆ ಪಡೆಯಲಾಯಿತು. ಈ ಕುರಿತು ಟಿಳಕವಾಡಿ ಪೊಲೀಸ್‌ ಠಾಣೆಯಲ್ಲಿ ಅನೈತಿಕ ಮಾನವ ಸಾಗಣೆ ತಡೆ ಕಾಯ್ದೆ 1956ರ ಕಲಂ 3, 4 ಮತ್ತು 5ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ.

ದಾವಣಗೆರೆ: ಕಳೆದುಹೋಗಿದ್ದ 50 ಗ್ರಾಂ ಚಿನ್ನದ ಪರ್ಸ್ ಪತ್ತೆ ಹಚ್ಚಿದ ಬಸವನಗರ ಪೊಲೀಸರು

Image
 ದಾವಣಗೆರೆ: ನಗರದ ಬಸವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದುಹೋಗಿದ್ದ ಸುಮಾರು 50 ಗ್ರಾಂ ಚಿನ್ನದ ಆಭರಣಗಳಿದ್ದ ಪರ್ಸ್ ಅನ್ನು ಪೊಲೀಸರು ಅತ್ಯಂತ ಚುರುಕಾಗಿ ಪತ್ತೆ ಹಚ್ಚಿ, ಅದರ ನಿಜವಾದ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಘಟನೆಯ ಹಿನ್ನೆಲೆ ಜಾಲಿನಗರದಿಂದ ರೈಲ್ವೆ ನಿಲ್ದಾಣದ ಕಡೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಮಹಿಳೆಯೊಬ್ಬರ ಪರ್ಸ್ ಕಳೆದುಹೋಗಿತ್ತು. ಈ ಕುರಿತು ಅವರು ಪೊಲೀಸರಿಗೆ ದೂರು ನೀಡಿದ್ದರು. ದೂರು ಸ್ವೀಕರಿಸಿದ ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು, ಆ ಮಾರ್ಗದ ಸಿಸಿಟಿವಿ ಕ್ಯಾಮೆರಾಗಳನ್ನು ಕೂಲಂಕುಷವಾಗಿ ಪರಿಶೀಲಿಸಿದರು. ಕಾರ್ಯಾಚರಣೆ ಪರಿಶೀಲನೆಯ ವೇಳೆ, ಶಿವಾಜಿ ಸರ್ಕಲ್ ಬಳಿ ಪರ್ಸ್ ಬಿದ್ದಿರುವುದು ಪತ್ತೆಯಾಗಿದೆ. ಸ್ಥಳೀಯ ಅಂಗಡಿ ಮಾಲೀಕರೊಬ್ಬರ ಸಹಾಯದಿಂದ ಪೊಲೀಸರು ಪರ್ಸ್ ಅನ್ನು ವಶಕ್ಕೆ ಪಡೆದುಕೊಂಡು, ಅದನ್ನು ಪರಿಶೀಲಿಸಿ ಸುರಕ್ಷಿತವಾಗಿ ಅದರ ಮಾಲೀಕರಿಗೆ ಹಿಂದಿರುಗಿಸಿದ್ದಾರೆ. ಕಳೆದುಕೊಂಡಿದ್ದ ಬೆಲೆಬಾಳುವ ವಸ್ತುಗಳನ್ನು ಮರಳಿ ಪಡೆದ ವಾರಸುದಾರರು ಪೊಲೀಸರ ಕಾರ್ಯಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.

ದಾವಣಗೆರೆ: ವಿದ್ಯಾನಗರ ಪೊಲೀಸರ ಕಾರ್ಯಾಚರಣೆ; 42 ಲಕ್ಷ ರೂ. ಮೌಲ್ಯದ ಕಳವು ಸ್ವತ್ತು ವಶ

Image
 ದಾವಣಗೆರೆ: ನಗರದ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ವಿವಿಧ ಅಪರಾಧ ಪ್ರಕರಣಗಳನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಸುಮಾರು 42 ಲಕ್ಷ ರೂಪಾಯಿ ಮೌಲ್ಯದ ಕಳವು ಸ್ವತ್ತನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯ ವಿವರ ನಗರದಲ್ಲಿ ಇತ್ತೀಚೆಗೆ ನಡೆದಿದ್ದ ಕಳ್ಳತನ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳ ಬಗ್ಗೆ ದೂರುಗಳು ದಾಖಲಾಗಿದ್ದವು. ಈ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಶೇಖರ್ ಅವರು, ಆರೋಪಿಗಳನ್ನು ಪತ್ತೆ ಹಚ್ಚಲು ವಿಶೇಷ ತಂಡಗಳನ್ನು ರಚಿಸಿದ್ದರು. ತೀವ್ರ ತನಿಖೆ ನಡೆಸಿದ ಪೊಲೀಸ್ ತಂಡವು ಯಶಸ್ವಿಯಾಗಿ ಆರೋಪಿಗಳನ್ನು ಪತ್ತೆ ಹಚ್ಚಿದ್ದು, ಅವರಿಂದ ದೊಡ್ಡ ಮೊತ್ತದ ಸೊತ್ತನ್ನು ವಶಪಡಿಸಿಕೊಳ್ಳುವಲ್ಲಿ ಸಫಲವಾಗಿದೆ. ಈ ಕಾರ್ಯಾಚರಣೆಯ ಕುರಿತು ಸ್ವತಃ ಎಸ್ಪಿ ಶೇಖರ್ ಅವರು ಮಾಹಿತಿ ನೀಡಿದ್ದು, ಪೊಲೀಸರ ಕಾರ್ಯವೈಖರಿಯನ್ನು ಶ್ಲಾಘಿಸಿದ್ದಾರೆ.

ಸಾರ್ವಜನಿಕರೇ ಭಯಬೇಡ, ನಾವಿದ್ದೇವೆ.ರಾತ್ರಿಪೂರ ಓಣಿ ಓಣಿ ಗಸ್ತು ತಿರುಗಿದ ಪೊಲೀಸ್ ಅಧಿಕಾರಿಗಳು

Image
 ಕೂಡ್ಲಿಗಿ.ಜೂ. 8 :- ಪಟ್ಟಣದಲ್ಲಿ ಮುಸುಕುಧರಿಸಿದ ಕಳ್ಳರು ಓಡಾಡುತ್ತಿದ್ದಾರೆ ಎನ್ನುವ ವಿಡಿಯೋ ವೈರಲ್ ಆಗಿದ್ದರಿಂದ ಸಾರ್ವಜನಿಕರಲ್ಲಿ ಭಯಹುಟ್ಟಿಸಿದ ವಾತಾವರಣ ನಿರ್ಮಾಣವಾಗಿದ್ದು ಇದನ್ನರಿತ ಕೂಡ್ಲಿಗಿ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ ಸೇರಿದಂತೆ ಉಪವಿಭಾಗದ ಸಿಪಿಐ ಹಾಗೂ ಪಿಎಸ್ಐಗಳು ರಾತ್ರಿಪೂರ ಓಣಿ ಓಣಿಗಳಲ್ಲಿ ನಡೆದುಕೊಂಡು ರಾತ್ರಿಪೂರ ಗಸ್ತು ನಡೆಸಿದರು. ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾನಾಮಡುಗಿನಲ್ಲಿ ಎರಡು -ಮೂರು ಮನೆಗಳು ಕಳ್ಳತನವಾಗಿವೆ ಎನ್ನುವ ಸುದ್ದಿ ಹರಡಿತ್ತು ಆದರೆ ಇದರ ಕುರಿತಂತೆ ಯಾವುದೇ ಪ್ರಕರಣ ದಾಖಲಾಗಿರಲಿಲ್ಲ ಈ ಸುದ್ದಿಯ ಬೆನ್ನಲ್ಲೇ ಕೂಡ್ಲಿಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಮನೆಗಳ ಹತ್ತಿರ ಮುಖಕ್ಕೆ ಮುಸುಕು ಧರಿಸಿಕೊಂಡ ವ್ಯಕ್ತಿಗಳು ಸುತ್ತಾಡುತ್ತಿದ್ದಾರೆ ಎನ್ನುವ ಕೆಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಪಟ್ಟಣದಲ್ಲಿ ವಿಂಡ್ ಫ್ಯಾನ್ ಹಾಗೂ ಸೋಲಾರ್ ಕಂಪನಿಯಲ್ಲಿ ಕೆಲಸ ಮಾಡುವ ಅಂತಾರಾಜ್ಯ ಕೂಲಿ ಕಾರ್ಮಿಕರಿರಬಹುದು ಎಂದು ಪೊಲೀಸರು ಅಂದಾಜಿಸುವ ಮೂಲಕ ಕಳ್ಳ ಕಾಕರರ ಭಯ ಹೆಚ್ಚಾಗುತ್ತಿದ್ದಂತೆ ಕಂಡು ಬರುತ್ತಿರುವುದನ್ನ ಕಂಡ ಪೊಲೀಸರು ಕೂಡ್ಲಿಗಿ ಡಿವೈಎಸ್ಪಿ ಮಲ್ಲೇಶ ದೊಡ್ಡಮನಿ ನೇತೃತ್ವದಲ್ಲಿಕೂಡ್ಲಿಗಿ, ಕೊಟ್ಟೂರು ಹಾಗೂ ಹಗರಿಬೊಮ್ಮನಹಳ್ಳಿ ಸಿಪಿಐಗಳು ಮತ್ತು ಕೂಡ್ಲಿಗಿ, ಗುಡೇಕೋಟೆ, ಹೊಸಹಳ್ಳಿ, ಕೊಟ್ಟೂರು, ಹಗರಿಬೊಮ್ಮನಹಳ್ಳಿ ಹಾಗೂ ಮರಿಯಮ್ಮನಹಳ...

ಶಾಲೆ ಫೀಸ್‌ ಕಟ್ಟಿ ಓದಿಸಿದ್ದ ಶಿಕ್ಷಕನಿಗೆ ಹೊಸ ಕಾರು ಗಿಫ್ಟ್‌ ಕೊಟ್ಟ ಶಿಷ್ಯ! ಮೂಕವಿಸ್ಮಿತನಾದೆ ಎಂದ ವಸ್ತ್ರದ್ ಸರ್‌

Image
 ಹಾವೇರಿ ಜಿಲ್ಲೆಯ ಹಾನಗಲ್‌ನ ಕುಮಾರೇಶ್ವರ ಹೈಸ್ಕೂಲ್‌ನ ನಿವೃತ್ತ ಶಿಕ್ಷಕ ಸಿ.ಎಸ್. ವಸ್ತ್ರದ್ ಅವರಿಗೆ ಹಳೆಯ ವಿದ್ಯಾರ್ಥಿ ನವೀನ್ ಹೊಸ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ಬಾಲ್ಯದಲ್ಲಿ ತಂದೆಯನ್ನು ಕಳೆದುಕೊಂಡು ಬಡತನದಲ್ಲಿದ್ದ ನವೀನ್‌ಗೆ ವಸ್ತ್ರದ್ ಸರ್ ತಂದೆಯಂತೆ ಆಸರೆಯಾಗಿ ಶಿಕ್ಷಣ ಕೊಡಿಸಿದ್ದರು. ಇದೀಗ ಉನ್ನತ ಹುದ್ದೆಯಲ್ಲಿರುವ ನವೀನ್, ಗುರುವಿನ ಬೀಳ್ಕೊಡುಗೆ ಸಮಾರಂಭದಲ್ಲಿ ಕಾರು ನೀಡುವ ಮೂಲಕ ಭಾವನಾತ್ಮಕವಾಗಿ ಋಣ ಸಂದಾಯ ಮಾಡಿ ಆದರ್ಶ ಮೆರೆದಿದ್ದಾರೆ ಹಾವೇರಿ (ಹಾನಗಲ್): ಶಿಕ್ಷಕ ವೃತ್ತಿ ಕೇವಲ ನಾಲ್ಕು ಗೋಡೆಗಳ ನಡುವೆ ಪಾಠ ಹೇಳುವುದಕ್ಕಷ್ಟೇ ಸೀಮಿತವಲ್ಲ. ಅದು ನಿಸ್ವಾರ್ಥತೆಯಿಂದ ವಿದ್ಯಾರ್ಥಿಗಳ ಬದುಕನ್ನು ರೂಪಿಸುವ ತಪಸ್ಸು. ಹಾವೇರಿ ಜಿಲ್ಲೆಯ ಹಾನಗಲ್‌ನ ಕುಮಾರೇಶ್ವರ ಹೈಸ್ಕೂಲ್‌ನ ನಿವೃತ್ತ ಶಿಕ್ಷಕ ಸಿ.ಎಸ್. ವಸ್ತ್ರದ್ ಅವರ ಬೀಳ್ಕೊಡುಗೆ ಸಮಾರಂಭ ಈ ಮಾತಿಗೆ ಜೀವಂತ ಸಾಕ್ಷಿಯಾಯಿತು. ಕಣ್ಣೀರು ತರಿಸುವ ಹಿನ್ನೆಲೆ 2007ನೇ ಸಾಲಿನ ಎಸ್‌ಎಸ್‌ಎಲ್‌ಸಿ ಬ್ಯಾಚ್‌ನ ವಿದ್ಯಾರ್ಥಿ ನವೀನ್ ಹುಲಿಹಳ್ಳಿ ಅವರು ತಮ್ಮ ಗುರುವಿಗೆ ಕೃತಜ್ಞತೆಯ ಕಾಣಿಕೆಯಾಗಿ 'ಮಾರುತಿ ಸುಜುಕಿ ಸ್ವಿಫ್ಟ್' ಕಾರನ್ನು ಉಡುಗೊರೆಯಾಗಿ ನೀಡಿದರು. ಈ ಉಡುಗೊರೆಯ ಹಿಂದಿರುವ ಕಥೆ ಎಂಥವರ ಕಣ್ಣಲ್ಲೂ ನೀರು ತರಿಸುತ್ತದೆ. ಸದ್ಯ ಬೆಂಗಳೂರಿನ ಪ್ರತಿಷ್ಠಿತ ಎಂಎನ್‌ಸಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿರುವ ನವೀನ್, ಬಾಲ್ಯದಲ್ಲೇ ತಂದೆಯನ್ನು ಕಳೆದುಕೊಂಡು ಬ...

SHOCKING : ದಾವಣಗೆರೆಯಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್ ಶಂಕೆ ; 10 ಮಂದಿ ಯುವಕರು ಅರೆಸ್ಟ್ .!

Image
 ಕೂಲ್ ಡ್ರಿಂಕ್ಸ್‌ನಲ್ಲಿ ಮದ್ಯ ಬೆರೆಸಿ ಅತ್ಯಾಚಾರ, 10 ಮಂದಿ ಅರೆಸ್ಟ್ ದಾವಣಗೆರೆ: ಪತಿಯೊಂದಿಗೆ ಜಗಳವಾಡಿ ತವರಿಗೆ ತೆರಳುತ್ತಿದ್ದ ಮಹಿಳೆಯ ಮೇಲೆ ದುರುಳರು ಸಾಮೂಹಿಕ ಅತ್ಯಾಚಾರವೆಸಗಿದ (Gang Rape) ಘಟನೆ ದಾವಣಗೆರೆ (Davanagere) ಜಿಲ್ಲೆಯ ಚನ್ನಗಿರಿ (Channagiri) ತಾಲೂಕಿನ ಬಸವಾ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 41 ವರ್ಷದ ಮಹಿಳೆಯ ಮೇಲೆ ದುರುಳರು ಅತ್ಯಾಚಾರವೆಸಗಿದ್ದಾರೆ. ಜೂನ್ 3ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಇಂದು ದೂರು ದಾಖಲಿಸಲಾಗಿದೆ. ಮಹಿಳೆ ಪತಿ ಜೊತೆ ಜಗಳವಾಡಿ ತವರಿಗೆ ಹೊರಟ್ಟಿದ್ದರು. ಈ ವೇಳೆ ಹಂದಿ ಬೇಟೆಗೆ ತೆರಳಿದ್ದ ಯುವಕರು ಮಹಿಳೆಯನ್ನು ಗಮನಿಸಿ, ಸುಸ್ತಾಗಿದಿಯಾ ಕೂಲ್ ಡ್ರಿಂಕ್ಸ್ ಕುಡಿ ಅಕ್ಕ ಎಂದು ಕೂಲ್ ಡ್ರಿಂಕ್ಸ್ನಲ್ಲಿ ಮದ್ಯ ಬೆರೆಸಿ ಕುಡಿಸಿದ್ದರು. ಬಳಿಕ ತೋಟಕ್ಕೆ ಕರೆದುಕೊಂಡು ಹೋಗಿ ಹತ್ತು ಜನ ಯುವಕರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ರಾತ್ರಿಯಿಂದ ಮುಂಜಾನೆಯವರೆಗೂ ಯುವಕರ ಗುಂಪು ವಿಕೃತಿ ಮೆರೆದಿತ್ತು. ಬಳಿಕ ಬೆತ್ತಲೆ ಫೋಟೋ, ವೀಡಿಯೋ ಮಾಡಿಕೊಂಡು ಆರೋಪಿಗಳು ವಿಕೃತ ಸಂತೋಷಪಟ್ಟಿದ್ದರು. ಅಲ್ಲದೇ ಫೋಟೋ ಹಾಗೂ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಘಟನೆ ಬಳಿಕ ಗ್ರಾಮದಲ್ಲಿ ಗುಸುಗುಸು ಚರ್ಚೆ ಆರಂಭವಾಗಿ, ಪ್ರಕರಣ ಗಂಭೀರವಾಗುತ್ತಿದ್ದಂತೆ ಆರೋಪಿಗಳು ವೀಡಿಯೋ ಡಿಲೀಟ್ ಮಾಡಿದ್ದಾರೆ. ಇತ್ತ ಘಟನೆ ಸಂಬಂಧ ಸಂತ್ರಸ್ತೆ ಬಸವ...

ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸ್‌ಗೆ ಸಿಕ್ಕಿ ಬಿದ್ದ ಅಧಿಕಾರಿಗಳು

Image
 ವಿಜಯಪುರ ಜಿಲ್ಲೆಯ ಸಾಲೋಟಗಿಯಲ್ಲಿ ಲಂಚ ಪಡೆಯುತ್ತಿದ್ದಾಗಲೇ ಇಬ್ಬರು ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಅಧಿಕಾರಿಗಳು ಕೆಬಿಜೆಎನ್‌ಎಲ್ ಕೆನಾಲ್‌ನ 3,71,419 ರೂ. ಬಿಲ್ ಪಾವತಿಗಾಗಿ 18 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ. ಕೆಬಿಜೆಎನ್‌ಎಲ್ ಉಪವಿಭಾಗ ನಂಬರ್ ಒಂದರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಸೇವುಲಾಲ್ ಚವ್ಹಾಣ 10 ಸಾವಿರ ರೂ.ಗೆ ಹಾಗೂ ಇನ್ನೊಂದು ಉಪವಿಭಾಗದ ಕಿರಿಯ ಅಭಿಯಂತರ ಸಾತಲಿಂಗಪ್ಪ ರೂಡಗಿ 8 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ನಾನಾಸಾಹೇಬ್ ರೂಡಗಿ ದೂರು ನೀಡಿದ್ದರು. ದೂರು ಆಧರಿಸಿ ಕಾರ್ಯಪ್ರವೃತ್ತರಾದ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಇಬ್ಬರು ಲಂಚಕೋರ ಅಧಿಕಾರಿಗಳನ್ನು ಲಂಚದ ಹಣ ಸಮೇತ ಬಂಧಿಸಿದ್ದಾರೆ. ಸಂಬಂಧ ವಿಜಯಪುರ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ವಿಜಯನಗರ: ಬೀಗ ಹಾಕಿದ ಮನೆಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಅಂತಾರಾಜ್ಯ ಕಳ್ಳರ ಬಂಧನ; 6 ಲಕ್ಷ ಮೌಲ್ಯದ ಚಿನ್ನ ಜಪ್ತಿ

Image
 ಕೊಟ್ಟೂರು: ವಿಜಯನಗರ ಜಿಲ್ಲೆಯ ಕೊಟ್ಟೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೀಗ ಹಾಕಿದ ಮನೆಗಳನ್ನೇ ಗುರಿಯಾಗಿಸಿಕೊಂಡು ಸರಣಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಕಳ್ಳರ ತಂಡವನ್ನು ಕೊಟ್ಟೂರು ಪೊಲೀಸರು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕಾರ್ಯಾಚರಣೆಯ ವಿವರ ಆರೋಪಿಗಳಿಂದ ಅಂದಾಜು 6 ಲಕ್ಷ ರೂಪಾಯಿ ಮೌಲ್ಯದ ಒಟ್ಟು 50 ಗ್ರಾಂ ಚಿನ್ನದ ಆಭರಣಗಳು ಮತ್ತು 20 ಸಾವಿರ ರೂಪಾಯಿ ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳು ಬಂಧಿತರು ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಭಾಗ್ಯನಗರ ಗುಂತಕಲ್ಲು ಪಟ್ಟಣದವರಾಗಿದ್ದು, ಅವರ ವಿವರ ಹೀಗಿದೆ: ಶಿಕಾರಿ ಮದ್ದಲಟ್ಟಿ @ ಮದನ್ (30 ವರ್ಷ) ಗಣೇಶ (20 ವರ್ಷ) ಬಾಲಚಂದ್ರ (20 ವರ್ಷ) ಪಗಲಿ @ ಅಶೋಕ್ (30 ವರ್ಷ) ದಿನಾಂಕ: 21-05-2026 ರಂದು ಕೊಟ್ಟೂರು ಪಟ್ಟಣದ ರೇಣುಕಾ ಬಡಾವಣೆಯಲ್ಲಿ ಆರೋಪಿಗಳು ಕಳ್ಳತನ ನಡೆಸಿದ್ದರು. ತನಿಖಾ ತಂಡ ಈ ಯಶಸ್ವಿ ಕಾರ್ಯಾಚರಣೆಯನ್ನು ಕೂಡ್ಲಿಗಿ ಡಿ.ವೈ.ಎಸ್.ಪಿ ಶ್ರೀ ಮಲ್ಲೇಶ ದೊಡ್ಮನಿ ಅವರ ಮಾರ್ಗದರ್ಶನದಲ್ಲಿ, ಕೊಟ್ಟೂರು ವೃತ್ತದ ಸಿ.ಪಿ.ಐ ಶ್ರೀ ಡಿ.ದುರುಗಪ್ಪ ಅವರ ನೇತೃತ್ವದಲ್ಲಿ, ಪಿ.ಎಸ್.ಐ (ಕಾ&ಸು) ಶ್ರೀಮತಿ ಗೀತಾಂಜಲಿ.ಸಿಂಧೆ ಮತ್ತು ಕೊಟ್ಟೂರು ಪೊಲೀಸ್ ಠಾಣೆಯ ಸಿಬ್ಬಂದಿಗಳು ನಿರ್ವಹಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ತಂಡ...

ಇನ್ಮುಂದೆ ಎಲ್ಲಾ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ 10 ಗಂಟೆಯೊಳಗೆ ಕಚೇರಿಯಲ್ಲಿಬೇಕು: CM ಡಿಕೆಶಿ ಖಡಕ್ ಸೂಚನೆ

Image
 ಮುಖ್ಯಮಂತ್ರಿಗಳ ಸೂಚನೆ ಮೇರೆಗೆ, ಪ್ರತಿಯೊಬ್ಬ ಸರ್ಕಾರಿ ಅಧಿಕಾರಿ, ಸಿಬ್ಬಂದಿ ಇನ್ಮುಂದೆ ಬೆಳಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಗೆ ಹಾಜರಾಗಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಬೆಂಗಳೂರು: ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಮಾರನೇ ದಿನವೇ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ್ದು, ಇನ್ಮುಂದೆ ಎಲ್ಲಾ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಬೆಳಗ್ಗೆ 10 ಗಂಟೆಯೊಳಗೆ ಕಚೇರಿಯಲ್ಲಿಬೇಕು ಎಂದು ಖಡಕ್ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಸೂಚನೆ ಮೇರೆಗೆ, ಪ್ರತಿಯೊಬ್ಬ ಸರ್ಕಾರಿ ಅಧಿಕಾರಿ, ಸಿಬ್ಬಂದಿ ಇನ್ಮುಂದೆ ಬೆಳಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಗೆ ಹಾಜರಾಗಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ. ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕ ಆಡಳಿತ ತರುವ ಉದ್ದೇಶದೊಂದಿಗೆ ಬಯೋಮೆಟ್ರಿಕ್‌ ವ್ಯವಸ್ಥೆ ಬದಲಾಗಿ ಕೃತಕ ಬುದ್ಧಿಮತ್ತೆ(AI) ಮತ್ತು ಜಿಪಿಎಸ್‌ ಆಧರಿತ ಹಾಜರಾತಿಯನ್ನ ಕಡ್ಡಾಯಗೊಳಿಸಿದೆ. ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್‌ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ. ಆದೇಶದಲ್ಲಿ ಏನಿದೆ? ಮುಖ್ಯಮಂತ್ರಿಗಳು ಜೂನ್‌ 4 ರಂದು ನಡೆದ ಸಭೆಯಲ್ಲಿ, ರಾಜ್ಯ ಸರ್ಕಾರದ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂ...

ದಾವಣಗೆರೆಯಲ್ಲಿ ಶಂಕಿತ ಉಗ್ರನ ಬಂಧನ: ಉಗ್ರರ ಜೊತೆ ನಿರಂತರ ಸಂಪರ್ಕ, ಗುಪ್ತಚರ ಇಲಾಖೆ ಮಾಹಿತಿ

Image
 ದೇಶದಲ್ಲಿ ಭಯೋತ್ಪಾದಕ ಸಂಚು ರೂಪಿಸುತ್ತಿದ್ದ ದಾವಣಗೆರೆಯ ವ್ಯಕ್ತಿಯನ್ನು ತುಮಕೂರು ಪೊಲೀಸರು ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ನಿರಂತರವಾಗಿ ಉಗ್ರರ ಸಂಪರ್ಕದಲ್ಲಿದ್ದ, ಅಲ್ಲದೆ ದೇಶದಲ್ಲಿ ಸಂಚು ನಡೆಸಲು ತುಮಕೂರಿನ ಬಂಧಿತ ವ್ಯಕ್ತಿ, ಶಂಕಿತ ಉಗ್ರ ಅಲ್ಲಾ ಭಕ್ಷ್ ಜೊತೆಗೆ ಸಂಪರ್ಕದಲ್ಲಿದ್ದು, ಇದೀಗ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ: ಭಾರತದಲ್ಲಿ ವಿದ್ವಂಸಕ ಕೃತ್ಯ ನಡೆಸಲು ಸಜ್ಜಾಗಿದ್ದ ಶಂಕಿತ ಭಯೋತ್ಪಾದಕನೊಬ್ಬನನ್ನು ತುಮಕೂರು ಪೊಲೀಸರು ದಾವಣಗೆರೆಯ ರೈಲ್ವೆ ನಿಲ್ದಾಣದಲ್ಲಿ ಗುರುವಾರ ಬಂಧಿಸಿ ತಮಕೂರಿಗೆ ಕರೆದೊಯ್ದು ವಿಚಾರಣೆ ಆರಂಭಿಸಿದ್ದಾರೆ. ದಾವಣಗೆರೆಯ ಬಿಡಿ ಲೇಔಟ್‌ನ ಜಮೀರ್ ಖಾನ್ (22) ಬಂಧಿತ ಶಂಕಿತ ಉಗ್ರನಾಗಿದ್ದಾನೆ. ಈತ ಐಎಸ್‌ಎಸ್ ಫಂಡಿಂಗ್ ಮಾಡುತ್ತಿದ್ದ ಉಗ್ರರಾದ ಶಾಬಾಸ್ ಭುಟ್ಟಿ ಹಾಗೂ ರಾಣಾ ಉನೇನ್ ಜೊತೆ ನಿರಂತರ ಸಂಪರ್ಕದಲ್ಲಿದ್ದ. ಈ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. ಇದನ್ನಾಧರಿಸಿ ತುಮಕೂರು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ವಾಟ್ಸಾಪ್, ಇನ್ಸ್ಟಾಗ್ರಾಂ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ನಿರಂತರವಾಗಿ ಉಗ್ರರ ಸಂಪರ್ಕದಲ್ಲಿದ್ದ. ದೇಶದಲ್ಲಿ ಸಂಚು ನಡೆಸಲು ಭಾರತದ ಮುಸ್ಲಿಂ ಯುವಕರನ್ನು ಬಳಕೆ ಮಾಡಿಕೊಂಡು ಐಎಸ್‌ಎಸ್ ಭಯೋತ್ಪಾದಕ ಸಂಘಟನೆ ವಿಸ್ತರಿಸಲು ಸಂಚು ರೂಪಿಸಿದ್ದ. ಈತ ಹಾಗೂ ತಮಕೂರಿನಲ್ಲಿ ಬಂಧಿತನಾಗಿರುವ ಶಂಕಿತ ಉಗ್ರ ಅಲ್ಲಾಭಕ್ಷ್ ಗೆ ಉಗ್ರರು ಮುಂ...

ಕರ್ನಾಟಕದಲ್ಲಿ ಸದ್ದಿಲ್ಲದೆ ನಡೀತಿದೆಯಾ ಅಕ್ರಮ ಲೇಔಟ್ ದಂಧೆ? RERA ನಿಯಮ ಗಾಳಿಗೆ ತೂರಿದ ಬಿಲ್ಡರ್ಸ್; ಗ್ರಾಹಕರೇ ಎಚ್ಚರ!

Image
  ಬೆಂಗಳೂರು: ರಾಜ್ಯಾದ್ಯಂತ ಇತ್ತೀಚಿನ ದಿನಗಳಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ಗಗನಕ್ಕೇರಿದೆ. ಆದರೆ ಇದೇ ತರಾತುರಿಯಲ್ಲಿ ಸಾರ್ವಜನಿಕರನ್ನು ವಂಚಿಸಲು ಕೆಲವು ಬಿಲ್ಡರ್‌ಗಳು ಮತ್ತು ಪ್ರವರ್ತಕರು (Promoters) ಅಡ್ಡಹಾದಿ ಹಿಡಿದಿರುವುದು ಮಾಧ್ಯಮದ ತನಿಖೆಯಿಂದ ಬೆಳಕಿಗೆ ಬಂದಿದೆ. ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (RERA) ಕಡ್ಡಾಯವಾಗಿ ಜಾರಿಯಲ್ಲಿದ್ದರೂ, ರಾಜ್ಯದ ಹಲವು ಜಿಲ್ಲೆಗಳಲ್ಲಿ RERA ನಿಯಮಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಿ ಬಡಾವಣೆಗಳನ್ನು (Layouts) ನಿರ್ಮಿಸಲಾಗುತ್ತಿದೆ. RERA ಅರ್ಜಿ ತಿರಸ್ಕೃತಗೊಂಡರೂ ಸೈಟ್ ಮಾರಾಟ! ಯಾವುದೇ ಹೊಸ ಲೇಔಟ್ ಅಥವಾ ಅಪಾರ್ಟ್‌ಮೆಂಟ್ ನಿರ್ಮಾಣ ಮಾಡಬೇಕಾದರೆ RERA ಪ್ರಾಧಿಕಾರದಿಂದ ಅಧಿಕೃತ ನೋಂದಣಿ ಸಂಖ್ಯೆ (RERA Registration Number) ಪಡೆಯುವುದು ಕಾನೂನುಬದ್ಧವಾಗಿ ಕಡ್ಡಾಯವಾಗಿದೆ. ಆದರೆ ಕರ್ನಾಟಕದ ಕೆಲವು ಪ್ರಮುಖ ಬಿಲ್ಡರ್‌ಗಳು ಸಲ್ಲಿಸಿದ್ದ ಅರ್ಜಿಗಳನ್ನು تಾಂತ್ರಿಕ ಲೋಪದೋಷ ಅಥವಾ ಸೂಕ್ತ ದಾಖಲೆಗಳಿಲ್ಲದ ಕಾರಣಕ್ಕಾಗಿ RERA ಪ್ರಾಧಿಕಾರವು ಈಗಾಗಲೇ ತಿರಸ್ಕರಿಸಿದೆ (Rejected) . ಆದರೆ, ಈ ಕಹಿ ಸತ್ಯವನ್ನು ಸಾರ್ವಜನಿಕರಿಂದ ಮುಚ್ಚಿಟ್ಟು, "ನಮ್ಮದು ಪಕ್ಕಾ ಅಪ್ರೂವ್ಡ್ ಲೇಔಟ್" ಎಂದು ಸುಳ್ಳು ನುಡಿದು ಕೋಟ್ಯಂತರ ರೂಪಾಯಿಗಳಿಗೆ ಸೈಟ್‌ಗಳನ್ನು ಬುಕಿಂಗ್ ಮಾಡಿಕೊಳ್ಳಲಾಗುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ರೇರಾ ಬಗ್ಗೆ ಬಿಲ್ಡ...

KPME ಕಾಯ್ದೆ ಉಲ್ಲಂಘಿಸುವ ಕ್ಲಿನಿಕ್, ಆಸ್ಪತ್ರೆಗಳಿಗೆ ಗಂಡಾಂತರ; ನಿಯಮ ಮೀರಿದರೆ ಗರಿಷ್ಠ ₹5 ಲಕ್ಷ ದಂಡ ಹಾಗೂ 3 ವರ್ಷ ಜೈಲು ಶಿಕ್ಷೆ!

Image
  KPME ಕಾಯ್ದೆ ಉಲ್ಲಂಘಿಸುವ ಕ್ಲಿನಿಕ್, ಆಸ್ಪತ್ರೆಗಳಿಗೆ ಗಂಡಾಂತರ; ನಿಯಮ ಮೀರಿದರೆ ಗರಿಷ್ಠ ₹5 ಲಕ್ಷ ದಂಡ ಹಾಗೂ 3 ವರ್ಷ ಜೈಲು ಶಿಕ್ಷೆ! ರಾಜ್ಯಾದ್ಯಂತ ಇತ್ತೀಚಿನ ದಿನಗಳಲ್ಲಿ ಖಾಸಗಿ ಕ್ಲಿನಿಕ್‌ಗಳು, ಡಯಾಗ್ನೋಸ್ಟಿಕ್ ಸೆಂಟರ್‌ಗಳು ಹಾಗೂ ಆಸ್ಪತ್ರೆಗಳ ಹಾವಳಿ ಹೆಚ್ಚಾಗುತ್ತಿದೆ. ಆದರೆ, ಸಾರ್ವಜನಿಕರ ಜೀವದ ಜೊತೆ ಆಟವಾಡುವ ಇಂತಹ ವೈದ್ಯಕೀಯ ಸಂಸ್ಥೆಗಳು ಕಡ್ಡಾಯವಾಗಿ KPME (Karnataka Private Medical Establishments Act) ಕಾಯ್ದೆಯಡಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಒಂದು ವೇಳೆ ಈ ನಿಯಮವನ್ನು ಉಲ್ಲಂಘಿಸಿದರೆ ಕಾನೂನಿನ ಅಡಿಯಲ್ಲಿ ಅತ್ಯಂತ ಕಠಿಣ ಶಿಕ್ಷೆ ಮತ್ತು ಭಾರಿ ದಂಡ ವಿಧಿಸಲು ಕಾಯ್ದೆಯಲ್ಲಿ ಗಟ್ಟಿಯಾದ ಅವಕಾಶವಿದೆ. ಏನಿದು KPME ಕಾಯ್ದೆ? ಕರ್ನಾಟಕದಲ್ಲಿ ಸಾರ್ವಜನಿಕರಿಗೆ ಗುಣಮಟ್ಟದ ವೈದ್ಯಕೀಯ sevi ಸಿಗಬೇಕು ಮತ್ತು ಖಾಸಗಿ ಆಸ್ಪತ್ರೆಗಳ ಲೂಟಿಗೆ ಬ್ರೇಕ್ ಹಾಕಬೇಕು ಎಂಬ ಉದ್ದೇಶದಿಂದ ಸರ್ಕಾರ 'ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆ' (KPME) ಯನ್ನು ಜಾರಿಗೆ ತಂದಿದೆ. ರಾಜ್ಯದಲ್ಲಿ ಪ್ರಾಕ್ಟಿಸ್ ಮಾಡುವ ಪ್ರತಿಯೊಬ್ಬ ಖಾಸಗಿ ವೈದ್ಯರು, ಕ್ಲಿನಿಕ್, ನರ್ಸಿಂಗ್ ಹೋಮ್ ಅಥವಾ ಲ್ಯಾಬ್‌ಗಳು ಈ ಕಾಯ್ದೆಯಡಿ ಆರೋಗ್ಯ ಇಲಾಖೆಯಲ್ಲಿ ಕಡ್ಡಾಯವಾಗಿ ನೋಂದಣಿ (Registration) ಮಾಡಿಕೊಳ್ಳಬೇಕು ಮತ್ತು ಪ್ರತಿ ಐದು ವರ್ಷಕ್ಕೊಮ್ಮೆ ಅದನ್ನು ನವೀಕರಣ (Renewal) ಮಾಡಿಸುವುದು ಕಡ್ಡಾಯ .ಪ್ರಸ್ತುತ ಜಾರಿ...

ಕಾಮಗಾರಿ ನಡೆಸದೇ ಐದು ಕೋಟಿ ರೂಪಾಯಿ ಗುಳುಂ!: ಲೋಕಾಯುಕ್ತ ಪೊಲೀಸರ ತನಿಖೆಯಲ್ಲಿ ಬಯಲು

Image
 Lokayukta Case-ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ (ಕೆಆರ್‌ಐಡಿಎಲ್‌) 100 ಕೋಟಿ ರೂ.ಗಳಿಗೂ ಅಧಿಕ ಮೊತ್ತದ ಹಗರಣದ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಪೊಲೀಸರು, ಕಾಮಗಾರಿ ನಡೆಸದೆಯೇ ನಕಲಿ ದಾಖಲೆ ಸೃಷ್ಟಿಸಿ 5 ಕೋಟಿ ರೂ. ಅನುದಾನ ಬಿಡುಗಡೆ ಮಾಡಿರುವುದನ್ನು ಪತ್ತೆ ಹಚ್ಚಿದ್ದಾರೆ. ಪ್ರಕರಣದಲ್ಲಿ ಅಬ್ದುಲ್ ರಹೀಮ್ ಸೇರಿದಂತೆ ನಾಲ್ವರು ಅಧಿಕಾರಿಗಳನ್ನು ಆರೋಪಿಗಳನ್ನಾಗಿ ಪರಿಗಣಿಸಲಾಗಿದ್ದು, ಅಕ್ರಮದಲ್ಲಿ ಭಾಗಿಯಾದ ಗುತ್ತಿಗೆದಾರರಿಗೂ ನೋಟಿಸ್ ನೀಡಲಾಗಿದೆ. ಕಮಿಷನ್ ವ್ಯವಹಾರದ ಶಂಕೆಯಿದ್ದು, ತನಿಖೆ ಚುರುಕಾಗುತ್ತಿದ್ದಂತೆ ಗುತ್ತಿಗೆದಾರ ವೈ.ಜಿ. ನಾಗರಾಜು ನ್ಯಾಯಾಲಯದಿಂದ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ. ಬೆಂಗಳೂರು: ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ(ಕೆಆರ್‌ಐಡಿಎಲ್‌) ಕೆಲ ಎಂಜಿನಿಯರ್‌ಗಳು ಹಾಗೂ ಗುತ್ತಿಗೆದಾರರು ಶಾಮೀಲಾಗಿ ಲೂಟಿ ಮಾಡಿದ ಕೋಟ್ಯಾಂತರ ಹಗರಣದ ತನಿಖೆಯನ್ನು ಲೋಕಾಯುಕ್ತ ಪೊಲೀಸರು ಚುರುಕುಗೊಳಿಸಿದ್ದಾರೆ. ಈ ಬೆನ್ನಲ್ಲೇ ನಾಲ್ವರು ಎಂಜಿನಿಯರ್‌ಗಳು ನಕಲಿ ದಾಖಲೆ ಪಡೆದು ಐದು ಕೋಟಿ ರೂ.ಅನುದಾನ ಬಿಡುಗಡೆ ಮಾಡಿರುವುದನ್ನು ಪತ್ತೆ ಹಚ್ಚಿದ್ದಾರೆ. ಬೆಂಗಳೂರು ಉತ್ತರ ತಾಲೂಕು ಹಾಗೂ ಮಂಡ್ಯದ ಕೆಲ ಗ್ರಾಮಗಳಲ್ಲಿ ಕಾಮಗಾರಿಯನ್ನೇ ನಡೆಸದೆ ಅನುದಾನ ಬಿಡುಗಡೆ ಮಾಡಿದ್ದ ಅಕ್ರಮದಲ್ಲಿ ನಾಲ್ವರು ಅಧಿಕಾರಿಗಳನ್ನು ಆರೋಪಿಗಳನ್ನಾಗಿ ತನಿಖಾ ತಂಡ ಪರಿಗಣಿಸಿದೆ. ಕೆಆರ್‌ಐಡಿಎಲ್‌ ಹಿಂದಿನ ಎಕ್ಸಿಕ...

BIG NEWS: ರಾಜ್ಯ ಕಾಂಗ್ರೆಸ್ ನಲ್ಲಿ ಭಾರಿ ಚರ್ಚೆಗೆ ಕಾರಣವಾಯ್ತು ಜಮೀರ್ ಅಹ್ಮದ್ ಆಡಿಯೋ: ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ರಾ? ಸ್ಪಷ್ಟನೆ ನೀಡಿದ ‘ಕೈ’ ನಾಯಕ

Image
BIG NEWS: ರಾಜ್ಯ ಕಾಂಗ್ರೆಸ್ ನಲ್ಲಿ ಭಾರಿ ಚರ್ಚೆಗೆ ಕಾರಣವಾಯ್ತು ಜಮೀರ್ ಅಹ್ಮದ್ ಆಡಿಯೋ: ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ರಾ? ಸ್ಪಷ್ಟನೆ ನೀಡಿದ ‘ಕೈ’ ನಾಯಕ  ಬೆಂಗಳೂರು: ದಾವಣಗೆರೆ ಉಪಚುನಾವಣೆ ವೇಳೆ ಕಾಂಗ್ರೆಸ್ ನಾಯಕ ಜಮೀರ್ ಅಹಮದ್‌ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಇದೀಗ ಭಾರಿ ವೈರಲ್ ಆಗಿದ್ದು, ರಾಜ್ಯ ಕಾಂಗ್ರೆಸ್ ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ. ಜಮೀರ್ ಅಹ್ಮದ್ ದಾವಣಗೆರೆ ದಕ್ಷಿಣ ಉಪ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಆಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕಾಂಗ್ರೆಸ್ನಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ದಾವಣಗೆರೆಯ ಕಾಂಗ್ರೆಸ್ ಮುಖಂಡ ಸಿರಾಜ್ ಜೊತೆ ಜಮೀರ್ ಅಹಮ್ಮದ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಇದಾಗಿದ್ದು, ಆಡಿಯೋದಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಪಕ್ಷೇತರ ಅಭ್ಯರ್ಥಿಗೆ ಬೆಂಬಲಿಸಿ ಮಾತನಾಡಲಾಗಿದೆ. ಮುಸ್ಲಿಂ ವೋಟಿಂಗ್ ಕಡಿಮೆ ಇದೆ ಹೊರಗಡೆ ಬಂದ್ರೆ ಅವರನ್ನ ನಂಬೋಕಾಗಲ್ಲ ಕಾಂಗ್ರೆಸ್‌ಗೆ ವೋಟ್ ಹಾಕುತ್ತಾರೆ. ಒತ್ತಾಯ ಮಾಡಿ ಮನೆಯಿಂದ ಕರ್ಕೊಂಡು ಬರಬೇಡಿ. ಪಕ್ಷೇತರರಿಗೆ ಎಸ್‌ಡಿಪಿಐಗೆ ವೋಟ್ ಹಾಕಲಿ ಎಂದು ಜಮೀರ್ ಅಹಮ್ಮದ್ ಹೇಳಿದ್ದಾರೆ ಎನ್ನಲಾಗಿದೆ. ಈ ಆಡಿಯೋ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸುತ್ತಿದ್ದಂತೆಯೇ ಸ್ವತಃ ಜಮೀರ್ ಅಹಮ್ಮದ್ ಖಾನ್ ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿದ್ದು, ರಾಜ್ಯದ ಕೆಲವು ಮಾಧ...

ಲಂಚ ನೇರವಾಗಿ ಪಡೆಯದಿದ್ದರೂ ಸರ್ಕಾರಿ ನೌಕರ ಅಪರಾಧಿ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

Image
ಲಂಚ ನೇರವಾಗಿ ಸ್ವೀಕರಿಸದಿದ್ದರೂ ಸರ್ಕಾರಿ ನೌಕರ ಅಪರಾಧಿ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು! ಹೊಸದಿಲ್ಲಿ: ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಸರ್ಕಾರಿ ನೌಕರನೊಬ್ಬ ತಪ್ಪಿತಸ್ಥನೆನಿಸಿಕೊಳ್ಳಲು ಲಂಚದ ಹಣವನ್ನು ನೇರವಾಗಿ ತಾನೇ ಆಯಾ ವ್ಯಕ್ತಿಯಿಂದ ಸ್ವೀಕರಿಸಬೇಕೆಂದೇನೂ ಇಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ತನ್ನ ಕೈಕೆಳಗಿನ ಅಧೀನ ನೌಕರರ ಮೂಲಕ ಅಥವಾ ಮತ್ತೊಬ್ಬ ವ್ಯಕ್ತಿಯ ಪರವಾಗಿ ಲಂಚಕ್ಕೆ ಬೇಡಿಕೆ ಇಟ್ಟರೂ ಅಥವಾ ಲಂಚ ಪಡೆದರೂ ಅದು ಅಪರಾಧ ಮುಕ್ತವಾಗುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ (SI) ಆಗಿದ್ದ ಕೆ. ರಂಗಯ್ಯ ಅವರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ (FIR) ರದ್ದುಗೊಳಿಸಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಇದೀಗ ವಜಾಗೊಳಿಸಿದೆ. ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಬ್ರೇಕ್: ಸಬ್ ಇನ್ಸ್‌ಪೆಕ್ಟರ್ ರಂಗಯ್ಯ ಅವರು ನೇರವಾಗಿ ಲಂಚದ ಬೇಡಿಕೆ ಇಟ್ಟಿಲ್ಲ ಅಥವಾ ವೈಯಕ್ತಿಕವಾಗಿ ಲಂಚದ ಹಣವನ್ನು ಸ್ವೀಕರಿಸಿಲ್ಲ ಎಂಬ ಅಭಿಪ್ರಾಯದೊಂದಿಗೆ ಕರ್ನಾಟಕ ಹೈಕೋರ್ಟ್ ಜೂನ್ 2023 ರಲ್ಲಿ ಅವರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಅನ್ನು ರದ್ದುಗೊಳಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಕರ್ನಾಟಕ ಲೋಕಾಯುಕ್ತ ಪೊಲೀಸರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿ ಪರವಾಗಿ ವಕೀಲ ನಿಶಾಂತ್ ಪಾಟೀಲ್ ಅವರು ಪ್ರಬಲ ವಾದ ಮಂಡಿ...

30 ನಿವೇಶನಗಳಿಗೆ ನಕಲಿ ಇ-ಖಾತಾ ಮಾಡಿಕೊಟ್ಟ ಎಆರ್‌ಒ ಮಂಜುಳಾ

Image
 ಬೆಂಗಳೂರು, ಮೇ 29- ಅಕ್ರಮ ವಾಗಿ 50 ನಿವೇಶನಗಳಿಗೆ ಎ ಖಾತಾ ಮಾಡಿಕೊಟ್ಟಿರುವ ಆರೋಪ ಎದುರಿಸುತ್ತಿರುವ ಎಆರ್‌ಒ ಮಂಜುಳಾ ಅವರು ಮತ್ತೆ 30 ನಿವೇಶನಗಳಿಗೆ ಖಾತಾ ಮಾಡಿಕೊಟ್ಟಿರುವುದನ್ನು ಬಿಜೆಪಿ ಮುಖಂಡ ಎನ್‌.ಆರ್‌.ರಮೇಶ್‌ ಪತ್ತೆ ಹಚ್ಚಿದ್ದು ಕೂಡಲೇ ಅವರನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್‌ರಾವ್‌ ಹಾಗೂ ಪಶ್ಚಿಮ ನಗರ ಪಾಲಿಕೆ ಆಯುಕ್ತರಿಗೆ ದೂರು ನೀಡಿದ್ದಾರೆ. ಬೆಂಗಳೂರು ಉತ್ತರ ತಾಲ್ಲೂಕಿನ ಯಶವಂತಪುರ ಹೋಬಳಿಯ ಹೇರೋಹಳ್ಳಿ ಗ್ರಾಮದ ಸರ್ವೆ ನಂ.56/1ರಲ್ಲಿರುವ 4.20 ಎಕರೆ ಜಮೀನು ಮೂಲತಃ ದಿವಂಗತ ಗಂಗಯ್ಯ ಅವರ ಹೆಸರಿನಲ್ಲಿದ್ದು, ಬಳಿಕ ಅನುಮಾನಾಸ್ಪದವಾಗಿ ಗಿರಿಜಾಬಾಯಿ ಮತ್ತು ತೇಜಸ್ವಿನಿ ಹೆಸರಿಗೆ ಪಹಣಿ ಬದಲಾಗಿರುವ ಬಗ್ಗೆ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಅದು ವಿಚಾರಣೆಯಲ್ಲಿದೆ ಎಂದು ರಮೇಶ್‌ ತಿಳಿಸಿದ್ದಾರೆ. ಇದೇ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅನುಮೋದಿತ ನಕ್ಷೆ ಇಲ್ಲದೇ ವಿಕಾಸ್‌‍ ಇನ್ಪೋ ಬಿಲ್ಡರ್ಸ್‌ ಹೆಸರಿನಲ್ಲಿ ಅಶ್ವಥ್‌ ಎಂಬವರು ಅನಧಿಕೃತ ಬಡಾವಣೆ ನಿರ್ಮಾಣ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ಬಡಾವಣೆಯಲ್ಲಿನ 50ಕ್ಕೂ ಹೆಚ್ಚು ನಿವೇಶನಗಳಿಗೆ ನಿಯಮ ಉಲ್ಲಂಘಿಸಿ ಎ ಖಾತಾ ಹಾಗೂ ಇ ಖಾತಾಗಳನ್ನು ಮಾಡಿಕೊಡಲಾಗಿದೆ ಎಂದು ಈ ಹಿಂದೆ ಮಂಜುಳಾ ಅವರ ವಿರುದ್ಧ ರಮೇಶ್‌ ಆರೋಪಿಸಿದ್ದರು. ಪಹಣಿಯಲ್ಲಿ ಎಕರೆಗಳ ಲೆಕ್ಕದಲ್ಲಿ ಇರುವ ಜಮೀನಿಗೆ ಪ್ರತ್ಯೇಕ ನಿವೇಶನಗಳ ...

₹15 ಲಕ್ಷ ಲಂಚ ಸ್ವೀಕಾರ: ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಎಇಇ ಬಸವರಾಜಯ್ಯ

Image
 ಬೆಂಗಳೂರು: ಮಂಜೂರಾಗಿದ್ದಕ್ಕಿಂತ ಹೆಚ್ಚು ವಿದ್ಯುತ್ ಬಳಸಿದ ಪ್ರಕರಣವೊಂದರಲ್ಲಿ ಅಪಾರ್ಟ್‌ಮೆಂಟ್‌ಗೆ ವಿಧಿಸಲಾಗಿದ್ದ ದಂಡದ ಮೊತ್ತವನ್ನು ಕಡಿಮೆ ಮಾಡಲು ಭಾರಿ ಪ್ರಮಾಣದ ಲಂಚ ಸ್ವೀಕರಿಸುತ್ತಿದ್ದ ಬೆಸ್ಕಾಂ ಜಾಗೃತ ದಳದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬೆಸ್ಕಾಂ ಜಾಗೃತ ದಳದ ಎಇಇ ಬಿ.ಎಸ್. ಬಸವರಾಜಯ್ಯ (57) ಬಂಧಿತ ಅಧಿಕಾರಿ. ಪ್ರಕರಣದ ಹಿನ್ನೆಲೆ: ದೊಡ್ಡಬಳ್ಳಾಪುರ ನಿವಾಸಿಯಾದ ಅಂಬರೀಶ್ ವಿ. ಎಂಬುವವರು ರಾಜಾಜಿನಗರದ ಬೆಸ್ಕಾಂ ಜಾಗೃತ ದಳ ಠಾಣಾ ವ್ಯಾಪ್ತಿಯಲ್ಲಿ ಅಪಾರ್ಟ್‌ಮೆಂಟ್ ಒಂದನ್ನು ಹೊಂದಿದ್ದಾರೆ. ಈ ಅಪಾರ್ಟ್‌ಮೆಂಟ್‌ನಲ್ಲಿ ಮಂಜೂರಾಗಿದ್ದ ಪ್ರಮಾಣಕ್ಕಿಂತ ಹೆಚ್ಚಿನ ವಿದ್ಯುತ್ ಬಳಕೆ ಹಾಗೂ ಅಕ್ರಮ ವಿದ್ಯುತ್ ಬಳಕೆ ಪತ್ತೆಯಾದ ಹಿನ್ನೆಲೆಯಲ್ಲಿ ಬೆಸ್ಕಾಂ ಜಾಗೃತ ದಳವು ಪ್ರಕರಣ ದಾಖಲಿಸಿ, ಭಾರಿ ಮೊತ್ತದ ದಂಡ ವಿಧಿಸಿತ್ತು. ₹18 ಲಕ್ಷಕ್ಕೆ ಬೇಡಿಕೆ, ₹15 ಲಕ್ಷಕ್ಕೆ ಒಪ್ಪಂದ: ಅಪಾರ್ಟ್‌ಮೆಂಟ್‌ಗೆ ವಿಧಿಸಲಾಗಿದ್ದ ಈ ದಂಡದ ಮೊತ್ತವನ್ನು ಕಡಿಮೆ ಮಾಡಿಕೊಡಲು ಎಇಇ ಬಸವರಾಜಯ್ಯ ಅವರು ₹18 ಲಕ್ಷ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು. ಅಂತಿಮವಾಗಿ ₹15 ಲಕ್ಷ ಪಡೆಯಲು ಒಪ್ಪಿಕೊಂಡಿದ್ದರು. ಲಂಚ ನೀಡಲು ಇಷ್ಟವಿಲ್ಲದ ಅಂಬರೀಶ್ ಅವರು ಈ ಕುರಿತು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಲೋಕಾಯುಕ್ತ ದಾಳಿ, ರೆಡ್‌ಹ್ಯಾಂಡ್ ಬಂಧನ: ದೂರಿನ ಆಧಾರದ ಮೇಲೆ ಲೋಕಾಯುಕ್ತ ಎಸ್‌ಪಿ ಶಿವಪ...

ರಾಹುಲ್ ಗಾಂಧಿ ಮಾತು ಕೇಳಿ ಆಘಾತಗೊಂಡ ಸಿದ್ದರಾಮಯ್ಯ: ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಹೈಕಮಾಂಡ್ ಸೂಚನೆ!

Image
 ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ಭಾರಿ ಸಂಚಲನ ಸೃಷ್ಟಿಯಾಗಿದೆ. ರಾಜ್ಯ ಸಚಿವ ಸಂಪುಟ ಪುನರ್ ರಚನೆಗೆ ಹೈಕಮಾಂಡ್ ಒಪ್ಪಿಗೆ ಪಡೆಯಲು ನವದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರು ಬಿಗ್ ಶಾಕ್ ನೀಡಿದ್ದಾರೆ. ದೆಹಲಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ, "ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ" ಎಂದು ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ ಅವರಿಗೆ ನೇರ ನಿರ್ದೇಶನ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಿರೀಕ್ಷೆಯಿಲ್ಲದ ನಾಯಕನಿಗೆ ಆಘಾತ! ರಾಹುಲ್ ಗಾಂಧಿ ಅವರಿಂದ ಇಂತಹದೊಂದು ಕಡಕ್ ಆದೇಶ ಬರಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಂಡಿತಾ ನಿರೀಕ್ಷಿಸಿರಲಿಲ್ಲ ಎನ್ನಲಾಗಿದೆ. ದೇಶದಾದ್ಯಂತ ಜಾತಿ ಜನಗಣತಿ ಬೆಂಬಲಿಸಿ ಹೋರಾಟ ರೂಪಿಸುತ್ತಿರುವ ರಾಹುಲ್ ಗಾಂಧಿ ಅವರು, ರಾಜ್ಯದ ಹಿಂದುಳಿದ ವರ್ಗಗಳ ಪ್ರಭಾವಿ ನಾಯಕರಾಗಿರುವ ತಮಗೆ ಪೂರ್ಣ ಬೆಂಬಲ ನೀಡಲಿದ್ದಾರೆ ಎಂಬ ಭರವಸೆ ಸಿದ್ದರಾಮಯ್ಯ ಅವರಲ್ಲಿತ್ತು. ಆದರೆ, ರಾಹುಲ್ ಗಾಂಧಿ ಅವರ ಆಕಸ್ಮಿಕ ನಡೆ ಸಿದ್ದರಾಮಯ್ಯ ಅವರಿಗೆ ಭಾರಿ ಆಘಾತವನ್ನುಂಟು ಮಾಡಿದೆ. ರಾಜೀನಾಮೆಗೆ ರಾಹುಲ್ ನೀಡಿದ ಕಾರಣವೇನು? ಮೂಲಗಳ ಪ್ರಕಾರ, "ರಾಜ್ಯದಲ್ಲಿ ಜಾತಿ ಜನಗಣತಿ ವರದಿ ಬಹಿರಂಗಕ್ಕೆ ಸಿದ್ಧವಾಗಿದೆ. ಈ ವರದಿಯನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಲು ಇನ್ನು ಕೆಲವೇ ದಿನಗಳು ಬಾಕಿ ಇವೆ. ಮುಖ್ಯಮಂತ್ರಿಯಾಗಿ ನೀವು ...

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

Image
 ವಿವಿಧ ಸಮುದಾಯಗಳಿಗೆ ರಾಜಕೀಯ ಪ್ರತಿನಿಧಿತ್ವ ನೀಡುವ ಉದ್ದೇಶದಿಂದ ಕಾಂಗ್ರೆಸ್ ಹೈಕಮಾಂಡ್ ಈ ಮಹತ್ವದ ಹೆಜ್ಜೆ ಇಡಲು ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರಗೊಂಡಿರುವ ನಡುವೆ, ಹೊಸ ಸರ್ಕಾರದಲ್ಲಿ 3ರಿಂದ 4 ಉಪಮುಖ್ಯಮಂತ್ರಿ (ಡಿಸಿಎಂ) ಹುದ್ದೆಗಳನ್ನು ಸೃಷ್ಟಿಸುವ ಸಾಧ್ಯತೆ ಬಗ್ಗೆ ಕಾಂಗ್ರೆಸ್ ವಲಯದಲ್ಲಿ ಭಾರೀ ಚರ್ಚೆ ಆರಂಭವಾಗಿದೆ. ವಿವಿಧ ಸಮುದಾಯಗಳಿಗೆ ರಾಜಕೀಯ ಪ್ರತಿನಿಧಿತ್ವ ನೀಡುವ ಉದ್ದೇಶದಿಂದ ಕಾಂಗ್ರೆಸ್ ಹೈಕಮಾಂಡ್ ಈ ಮಹತ್ವದ ಹೆಜ್ಜೆ ಇಡಲು ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಉಪಮುಖ್ಯಮಂತ್ರಿ ಸ್ಥಾನಕ್ಕೆ ಗ್ರಾಮೀಣಾಭಿವೃದ್ಧಿ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಕೈಗಾರಿಕಾ ಸಚಿವ ಎಂಬಿ.ಪಾಟೀಲ್, ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಹೆಸರುಗಳು ಪ್ರಮುಖವಾಗಿ ಕೇಳಿಬರುತ್ತಿವೆ. 2028 ಚುನಾವಣೆಗೆ ಸಮುದಾಯ ಸಮೀಕರಣ? ಕಾಂಗ್ರೆಸ್ ಹೈಕಮಾಂಡ್ 2028ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ವಿವಿಧ ಸಮುದಾಯಗಳಿಗೆ ಸಮತೋಲನ ಸಾಧಿಸುವ ತಂತ್ರ ರೂಪಿಸುತ್ತಿದೆ ಎನ್ನಲಾಗಿದೆ. ದಲಿತ, ಲಿಂಗಾಯತ, ಮುಸ್ಲಿಂ ಹಾಗೂ ಕುರುಬ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡುವ ಉದ್ದೇಶದಿಂದ ಬಹು ಡಿಸಿಎಂ ಫಾರ್ಮುಲಾ ಬಳಕೆ ಮಾಡಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ.

ದಾವಣಗೆರೆ: ಕ್ರಿಪ್ಟೋ ಆಸೆ ತೋರಿಸಿ ಕೋಟಿ ಕೋಟಿ ಲೂಟಿ; ಅಂತಾರಾಜ್ಯ ವಂಚಕ ತಮಿಳುನಾಡಿನಲ್ಲಿ ಸೈಬರ್ ಕ್ರೈಂ ಪೊಲೀಸರ ಬಲೆಗೆ!

Image
  ದಾವಣಗೆರೆ: ಕ್ರಿಪ್ಟೋ ಆಸೆ ತೋರಿಸಿ ಕೋಟಿ ಕೋಟಿ ಲೂಟಿ; ಅಂತಾರಾಜ್ಯ ವಂಚಕ ತಮಿಳುನಾಡಿನಲ್ಲಿ ಸೈಬರ್ ಕ್ರೈಂ ಪೊಲೀಸರ ಬಲೆಗೆ! ದಾವಣಗೆರೆ: ದಾವಣಗೆರೆಯಲ್ಲಿ ದಿನಕ್ಕೆ 400 ರೂಪಾಯಿ ಲಾಭದ ಆಸೆ ತೋರಿಸಿ 13,000ಕ್ಕೂ ಹೆಚ್ಚು ಜನರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ್ದ ಅಂತಾರಾಜ್ಯ ಕ್ರಿಪ್ಟೋ ಗ್ಯಾಂಗ್‌ನ ಮಾಸ್ಟರ್‌ಮೈಂಡ್‌ನನ್ನು ಸೈಬರ್ ಕ್ರೈಂ ಪೊಲೀಸರು ತಮಿಳುನಾಡಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಅಂತಾರಾಜ್ಯ ಕ್ರಿಪ್ಟೋ ಗ್ಯಾಂಗ್‌ನ ಮುಖ್ಯಸ್ಥ ಚೆಲ್ಲಪಾಂಡಿ ಸುಬ್ರಹ್ಮಣ್ಯನ್ ಎಂದು ಗುರುತಿಸಲಾಗಿದೆ. ವಂಚನೆಯ ಜಾಲ ಹರಡಿದ್ದು ಹೇಗೆ? ಆರೋಪಿಗಳು ಸಾರ್ವಜನಿಕರನ್ನು ವಂಚಿಸಲು 'ನವಾಬಿಟ್' ( Navabit ) ಎಂಬ ನಕಲಿ ಅಪ್ಲಿಕೇಶನ್ (App) ಸೃಷ್ಟಿಸಿದ್ದರು. ಈ ಗ್ಯಾಂಗ್ ಪ್ರಮುಖವಾಗಿ ಮಧ್ಯಮ ವರ್ಗದ ಮಹಿಳೆಯರನ್ನೇ ಟಾರ್ಗೆಟ್ ಮಾಡುತ್ತಿತ್ತು. ದಿನನಿತ್ಯ ಆಕರ್ಷಕ ಲಾಭ ಸಿಗುತ್ತದೆ ಎಂದು ನಂಬಿಸಿ, ಯುಪಿಐ ( UPI ) ಮೂಲಕ ಮಹಿಳೆಯರಿಂದ ಕೋಟ್ಯಂತರ ರೂಪಾಯಿ ಹಣ ಹೂಡಿಕೆ ಮಾಡಿಸಿಕೊಂಡಿದ್ದರು. ನಂಬಿಸಿ ಆಪ್ ಮುಚ್ಚಿ ಪರಾರಿಯಾಗಿದ್ದ ಖದೀಮರು: ಆರಂಭದಲ್ಲಿ ಹೂಡಿಕೆದಾರರಿಗೆ ಸರಿಯಾಗಿ ಲಾಭದ ಹಣವನ್ನು ನೀಡಿ ನಂಬಿಕೆ ಗಳಿಸಿದ್ದರು. ಆದರೆ, ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿ ಹಣ ಸಂಗ್ರಹವಾಗುತ್ತಿದ್ದಂತೆ, ಆರೋಪಿಗಳು ಇದ್ದಕ್ಕಿದ್ದಂತೆ 'ನವಾಬಿಟ್' ಆಪ್ ಅನ್ನು ಸಂಪೂರ್ಣವಾಗಿ ಮುಚ್ಚಿ (Close ಮಾಡಿ) ಕೋ...

ಕೋಟ್ಟೂರು: ಖಾಸಗಿ ಶಿಕ್ಷಣ ಸಂಸ್ಥೆಗಳ 'ಡೊನೇಷನ್ ಹಾವಳಿ' ತಡೆಗಟ್ಟಲು ಸಿಎಂ ಸಿದ್ದರಾಮಯ್ಯಗೆ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಮನವಿ!

Image
  ಕೊಟ್ಟೂರು: ತಾಲೂಕಿನಾದ್ಯಂತ ಖಾಸಗಿ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ಡೊನೇಷನ್ ಹಾವಳಿ ಮಿತಿಮೀರಿದ್ದು, ಇದರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ 'ಪ್ರಗತಿಪರ ಸಂಘಟನೆಗಳ ಒಕ್ಕೂಟ' (ಕೊಟ್ಟೂರು ತಾಲೂಕು ಸಮಿತಿ) ವತಿಯಿಂದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೊಟ್ಟೂರು ತಹಶೀಲ್ದಾರರ ಮುಖಾಂತರ ಮನವಿ ಪತ್ರ ಸಲ್ಲಿಸಲಾಗಿದೆ. ಮನವಿ ಪತ್ರದ ಪ್ರಮುಖ ಅಂಶಗಳು: ಕಾನೂನುಬಾಹಿರ ವಸೂಲಾತಿ: ತಾಲೂಕಿನ ಕೆಲವು ಖಾಸಗಿ ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಪ್ರವೇಶಕ್ಕಾಗಿ (Admission) ಕಾನೂನುಬಾಹಿರವಾಗಿ 'ಡೊನೇಷನ್' ಹೆಸರಿನಲ್ಲಿ ಅಪಾರ ಪ್ರಮಾಣದ ಹಣ ವಸೂಲಿ ಮಾಡುತ್ತಿರುವುದು ಅತ್ಯಂತ ವಿಷಾದನೀಯ ಸಂಗತಿಯಾಗಿದೆ. ವ್ಯಾಪಾರೀಕರಣಗೊಂಡ ಶಿಕ್ಷಣ: ಪ್ರತಿಯೊಬ್ಬರ ಮೂಲಭೂತ ಹಕ್ಕಾಗಬೇಕಿದ್ದ ಶಿಕ್ಷಣ ಇಂದು ವ್ಯಾಪಾರ ವಸ್ತುವಾಗಿ ಮಾರ್ಪಟ್ಟಿರುವುದು ಜನಸಾಮಾನ್ಯರಲ್ಲಿ ಭೀತಿ ಹಾಗೂ ಆತಂಕ ಮೂಡಿಸಿದೆ. ಪೋಷಕರ ಕಷ್ಟಗಳು: ಬಡ ಹಾಗೂ ಮಧ್ಯಮ ವರ್ಗದ ಪೋಷಕರು ತಮ್ಮ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಸಾಲ ಮಾಡಿ, ಆಸ್ತಿಪಾಸ್ತಿ ಮಾರಾಟ ಮಾಡಿ ಕಡ್ಡಾಯವಾಗಿ ಡೊನೇಷನ್ ನೀಡಬೇಕಾದ ಅನಿವಾರ್ಯ ಪರಿಸ್ಥಿತಿಗೆ ತಳ್ಳಲ್ಪಟ್ಟಿದ್ದಾರೆ. ಪ್ರತಿಭಾವಂತರಿಗೆ ಅನ್ಯಾಯ: ಈ ಆರ್ಥಿಕ ಸಮಸ್ಯೆಯಿಂದಾಗಿ ತಾಲೂಕಿನ ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳು ಉತ್ತಮ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಒಕ್ಕೂಟದ ಆಗ್ರಹ: ...

ಧೂಡಾ ಬಜೆಟ್ ಮಂಡನೆ: 187 ಕೋಟಿ ರೂ. ಆದಾಯ, 1.02 ಕೋಟಿ ರೂ. ಉಳಿತಾಯದ ಆಯವ್ಯಯ!

Image
 ದಾವಣಗೆರೆ: ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ (ಧೂಡಾ) 2026-27ನೇ ಸಾಲಿನ ಆಯವ್ಯಯವನ್ನು ಪ್ರಾಧಿಕಾರದ ಅಧ್ಯಕ್ಷರಾದ ದಿನೇಶ್ ಕೆ. ಶೆಟ್ಟಿ ಅವರು ಅಧಿಕೃತವಾಗಿ ಮಂಡಿಸಿದ್ದಾರೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ನಗರಾಭಿವೃದ್ಧಿ ಮತ್ತು ವಿವಿಧ ಪ್ರಗತಿ ಕಾಮಗಾರಿಗಳಿಗೆ ಆದ್ಯತೆ ನೀಡಿ ಈ ಬಜೆಟ್ ರೂಪಿಸಲಾಗಿದೆ. ಬಜೆಟ್‌ನ ಮುಖ್ಯಾಂಶಗಳು: ಒಟ್ಟು ನಿರೀಕ್ಷಿತ ಆದಾಯ: ₹187 ಕೋಟಿ ಒಟ್ಟು ಅಂದಾಜು ವೆಚ್ಚ: ₹186 ಕೋಟಿ (ಸಾಮಾನ್ಯ ಆಡಳಿತದ ನಿಶ್ಚಿತ ವೆಚ್ಚಗಳು ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳು ಸೇರಿ) ಒಟ್ಟು ಉಳಿತಾಯ: ₹1.02 ಕೋಟಿ ಬಜೆಟ್ ಮಂಡಿಸಿ ಮಾತನಾಡಿದ ಅಧ್ಯಕ್ಷ ದಿನೇಶ್ ಶೆಟ್ಟಿ ಅವರು, ಪ್ರಾಧಿಕಾರವು ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ನಗರದ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಈ ಬಜೆಟ್ ಸಿದ್ಧಪಡಿಸಿದ್ದು, ₹1.02 ಕೋಟಿಗಳಷ್ಟು ಉಳಿತಾಯದ ಮುನ್ನೋಟ ಹೊಂದಿದೆ ಎಂದು ತಿಳಿಸಿದರು. ಗಣ್ಯರ ಉಪಸ್ಥಿತಿ: ವಿಡಿಯೊ ಕಾನ್ಫರೆನ್ಸ್ (ವಿಡಿಯೋ ಸಂವಾದ) ಮೂಲಕ ಸಭೆಯಲ್ಲಿ ಪಾಲ್ಗೊಂಡಿದ್ದ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಬಜೆಟ್ ಪ್ರಕ್ರಿಯೆಗೆ ಚಾಲನೆ ನೀಡಿದರು. ಸಭೆಯಲ್ಲಿ ಶಾಸಕರಾದ ಸಮರ್ಥ್ ಶಾಮನೂರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಡಾ. ಎಚ್.ಟಿ. ಶೇಖರ್, ಧೂಡಾ ಆಯುಕ್ತರಾದ ರೇಣುಕಾದೇವಿ ಹಾಗೂ ಪ್ರಾಧಿಕಾರದ ಸದಸ್ಯರುಗಳಾದ ವಾಣಿ ಬಕ್ಕೇಶ್, ತಕ್ಕಡಿ ಮಂಜುನಾಥ್, ಜಬ್ಬರ್ ಖಾ...

ಜನ ಆಶಾ ಸೌತ್ ನಿಧಿ ಲಿಮಿಟೆಡ್ ಚೇರ್ಮನ್ ಅಭಿಷೇಕ್ ಪಾಂಡ್ಯ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು!

Image
 ಹಗರಿಬೊಮ್ಮನಹಳ್ಳಿ: ಸಾಮಾಜಿಕ ಹಾಗೂ ಆರ್ಥಿಕ ವಲಯದಲ್ಲಿ ಜನಪರ ಸೇವೆಗಳ ಮೂಲಕ ಮನೆಮಾತಾಗಿರುವ ಪ್ರಮುಖ ಹಣಕಾಸು ಸಂಸ್ಥೆ 'ಜನ ಆಶಾ ಸೌತ್ ನಿಧಿ ಲಿಮಿಟೆಡ್ ಸ್ಮಾರ್ಟ್ ಬ್ಯಾಂಕಿಂಗ್' ಸಂಸ್ಥೆಯ ಗೌರವಾನ್ವಿತ ಚೇರ್ಮನ್ ಆದ ಅಭಿಷೇಕ್ ಪಾಂಡ್ಯ ಅವರಿಗೆ ಸಂಸ್ಥೆಯ ಅಧಿಕಾರಿಗಳು, ಸಿಬ್ಬಂದಿ ವರ್ಗ ಹಾಗೂ ಗಣ್ಯರು ಜನ್ಮದಿನದ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ. ಉದ್ಯೋಗದಾತರಾಗಿ ಸಂಸ್ಥೆಯ ಸಾಧನೆ: ಅಭಿಷೇಕ್ ಪಾಂಡ್ಯ ಅವರ ಸಮರ್ಥ ನಾಯಕತ್ವದಲ್ಲಿ ಜನ ಆಶಾ ಸೌತ್ ನಿಧಿ ಲಿಮಿಟೆಡ್ ಸಂಸ್ಥೆಯು ಕರ್ನಾಟಕ ರಾಜ್ಯದಾದ್ಯಂತ ಮತ್ತು ದೇಶದ ಇತರೆ 8 ರಾಜ್ಯಗಳಲ್ಲಿ ತನ್ನ ಶಾಖೆಗಳನ್ನು ವಿಸ್ತರಿಸಿ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಕೇವಲ ವ್ಯವಹಾರವಷ್ಟೇ ಅಲ್ಲದೆ, ಸಾಮಾಜಿಕ ಕಳಕಳಿಯೊಂದಿಗೆ ಸುಮಾರು 10 ಸಾವಿರಕ್ಕೂ ಅಧಿಕ ಕುಟುಂಬಗಳಿಗೆ ಉದ್ಯೋಗಾವಕಾಶವನ್ನು ಕಲ್ಪಿಸಿಕೊಡುವ ಮೂಲಕ ಬಡ ಕುಟುಂಬಗಳ ಆರ್ಥಿಕ ಪ್ರಗತಿಗೆ ಸಂಸ್ಥೆಯು ಆಸರೆಯಾಗಿದೆ. ಹಾರ್ದಿಕ ಶುಭಾಶಯ ಕೋರಿದ ಗಣ್ಯರು: ಅಭಿಷೇಕ್ ಪಾಂಡ್ಯ ಅವರ ಹುಟ್ಟುಹಬ್ಬದ ಈ ಶುಭ ಸಂದರ್ಭದಲ್ಲಿ ಸಂಸ್ಥೆಯ ಹಗರಿಬೊಮ್ಮನಹಳ್ಳಿ ಶಾಖೆಯ ಸೀನಿಯರ್ ಡೆವಲಪ್ಮೆಂಟ್ ಆಫೀಸರ್ ಆದ ಸಿ. ಜಿ. ವಸಂತ್ ಕುಮಾರ್ ಅವರು ಗೌರವಪೂರ್ವಕವಾಗಿ ಶುಭ ಹಾರೈಸಿದ್ದಾರೆ. ಅವರೊಂದಿಗೆ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಗಿರೀಶ್ ಆಲೂರ್, ಎಜಿಎಂ ಜಯಪ್ರಕಾಶ್, ಆರ್.ಎಂ. ಶ್ರೀನಿವಾಸ್ ಹಾಗೂ ಪಿಆರ್‌ಒ ಜಗದೀಶ್ ಸೇರಿದಂತೆ ಸಂಸ್ಥೆಯ ಆಡಳಿತ ಮ...
Image
 ಬೀದರ್: ಇಲ್ಲಿನ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ (KVAFSU) ನಕಲಿ ಬಿಲ್ ಸೃಷ್ಟಿಸಿ ಕೋಟ್ಯಂತರ ರೂಪಾಯಿ ಲೂಟಿ ಮಾಡಿರುವ ಬೃಹತ್ ಹಗರಣ ಬಯಲಾಗಿದ್ದು, ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಹಾಗೂ ನಿವೃತ್ತ ಹಣಕಾಸು ಅಧಿಕಾರಿ ಸೇರಿದಂತೆ ಆರು ಜನ ಆರೋಪಿಗಳನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಹಗರಣದ ಹಿನ್ನೆಲೆ ಏನು? 2017-18ನೇ ಸಾಲಿನಲ್ಲಿ ವಿಶ್ವವಿದ್ಯಾಲಯದಲ್ಲಿ ನಿಯಮಗಳನ್ನು ಗಾಳಿಗೆ ತೂರಿ, ಯಾವುದೇ ಕೆಲಸಗಳು ನಡೆಯದಿದ್ದರೂ ಸುಳ್ಳು ದಾಖಲೆ ಹಾಗೂ ನಕಲಿ ಬಿಲ್‌ಗಳನ್ನು ಸೃಷ್ಟಿಸಿ ಬರೋಬ್ಬರಿ ₹45 ಕೋಟಿಗೂ ಅಧಿಕ ಹಣವನ್ನು ದುರುಪಯೋಗಪಡಿಸಿಕೊಳ್ಳಲಾಗಿತ್ತು. ಈ ಅವಧಿಯಲ್ಲಿ ಎಚ್.ಡಿ. ನಾರಾಯಣಸ್ವಾಮಿ ಅವರು ಕುಲಪತಿಯಾಗಿ ಹಾಗೂ ಕೆ.ಎಲ್. ಸುರೇಶ್ ಅವರು ಪ್ರಭಾರ ಹಣಕಾಸು ನಿಯಂತ್ರಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಖಾಸಗಿ ಸಂಸ್ಥೆಯೊಂದಿಗೆ ಶಾಮೀಲು: ವಿಶ್ವವಿದ್ಯಾಲಯದ ಎಫ್.ಡಿ.ಎ. ಮೃತ್ಯುಂಜಯ ಹಿರೇಮಠ ಅವರು ಬೆಂಗಳೂರಿನ ಖಾಸಗಿ ಸಂಸ್ಥೆಯಾದ 'ಎಂಟರ್ ಪ್ರೈಸಸ್' ಮಾಲೀಕರಾದ ಬೊಪ್ಪಣ್ಣ, ಮಂಜುನಾಥ್ ಹಾಗೂ ರಾಮಗೊಂಡ ಅವರೊಂದಿಗೆ ಶಾಮೀಲಾಗಿ ಈ ಅಕ್ರಮ ಎಸಗಿದ್ದಾರೆ ಎಂದು ಲೋಕಾಯುಕ್ತ ಪೊಲೀಸ್ ಮೂಲಗಳು ತಿಳಿಸಿವೆ. ಸರ್ಕಾರದ ಸಾರ್ವಜನಿಕ ಹಣವನ್ನು ನಕಲಿ ಬಿಲ್‌ಗಳ ಮೂಲಕ ಈ ಖಾಸಗಿ ಸಂಸ್ಥೆಯ ಖಾತೆಗಳಿಗೆ ವರ್ಗಾವಣೆ ಮಾಡಲಾಗಿತ್ತು ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕೋರ್ಟ್...

ದಾವಣಗೆರೆ: ಬರ್ತ್‌ಡೇ ಗಲಾಟೆ ರಕ್ತಪಾತಕ್ಕೆ ತೇಲಿತು; ಕ್ಷುಲ್ಲಕ ಕಾರಣಕ್ಕೆ ಇಬ್ಬರಿಗೆ ಚಾಕು ಇರಿತ, ಯುವಕನ ಸ್ಥಿತಿ ಗಂಭೀರ!

Image
 ದಾವಣಗೆರೆ: ನಗರದ ವಿಜಯನಗರ ಬಡಾವಣೆಯಲ್ಲಿ ಭಾನುವಾರ ನಡೆದ ಹುಟ್ಟುಹಬ್ಬದ ಸಂಭ್ರಮವೊಂದು ಕ್ಷಣಾರ್ಧದಲ್ಲಿ ರಣರಂಗವಾಗಿ ಮಾರ್ಪಟ್ಟಿದ್ದು, ಎರಡು ಗುಂಪುಗಳ ನಡುವಿನ ಗಲಾಟೆ ತಾರಕಕ್ಕೇರಿ ಇಬ್ಬರಿಗೆ ಚಾಕು ಇರಿತವಾಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಗಲಾಟೆಗೆ ಕಾರಣವೇನು? ಮಾಹಿತಿಯ ಪ್ರಕಾರ, ವಿಜಯನಗರ ಬಡಾವಣೆಯಲ್ಲಿ ಸ್ನೇಹಿತರ ಹುಟ್ಟುಹಬ್ಬದ ಆಚರಣೆ ನಡೆಯುತ್ತಿತ್ತು. ಈ ವೇಳೆ "ಪರಸ್ಪರ ಗುರಾಯಿಸಿ ಕೀಟಲೆ ಮಾಡಿದ" ಎಂಬ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ಆರಂಭವಾಗಿದೆ. ಆರಂಭದಲ್ಲಿ ಸಣ್ಣದಾಗಿ ಶುರುವಾದ ಜಗಳ, ನಂತರ ಎರಡು ಕಡೆಯವರ ವಿಕೋಪಕ್ಕೆ ತಿರುಗಿದೆ. ರಕ್ತಪಾತದಲ್ಲಿ ಕೊನೆಗೊಂಡ ಜಗಳ: ಮಾತಿನ ಚಕಮಕಿ ತೀವ್ರ ಸ್ವರೂಪ ಪಡೆದುಕೊಂಡಾಗ, ಕೀಟಲೆ ಮಾಡಿದವನ ಕಡೆಯ ಪೋಷಕರು ಮತ್ತು ಬೆಂಬಲಿಗರು ಗಾಂಧಿನಗರದ ನಿವಾಸಿಯಾದ ಮನೋಜ್ (19) ಎಂಬ ಯುವಕನ ಮೇಲೆ ಏಕಾಏಕಿ ಚಾಕು ಇರಿದಿದ್ದಾರೆ. ಚಾಕು ಇರಿತದಿಂದಾಗಿ ಮನೋಜ್ ತೀವ್ರ ರಕ್ತಸ್ರಾವದಿಂದ ಗಂಭೀರವಾಗಿ ಗಾಯಗೊಂಡಿದ್ದು, ಸದ್ಯ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಇದಕ್ಕೆ ಪ್ರತಿಯಾಗಿ ರೊಚ್ಚಿಗೆದ್ದ ಮನೋಜ್ ಕಡೆಯವರು ಎದುರಾಳಿ ಗುಂಪಿನ ರಾಹುಲ್ ಎಂಬಾತನ ಮೇಲೆಯೂ ಚಾಕು ಪ್ರಹಾರ ನಡೆಸಿದ್ದಾರೆ. ಸದ್ಯ ರಾಹುಲ್‌ನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು: ವಿಷಯ ತಿಳಿಯುತ್ತಿದ್ದಂತೆ ಗಾಂಧಿನಗರ ಪೊಲೀಸ...